ಧರ್ಮಶಾಲಾ: ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶೂನ್ಯ ಸುತ್ತಿದ ರಾಜಸ್ಥಾನ್ ತಂಡದ ಆಟಗಾರ ಜೋಸ್ ಬಟ್ಲರ್ ಅವರು ಕೆಟ್ಟ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದಿದ್ದಾರೆ. ಒಂದೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಅತ್ಯಧಿಕ ಶೂನ್ಯ ಸಂಪಾದನೆ ಮಾಡಿದ ಆಟಗಾರ ಎನಿಸಿಕೊಂಡಿದ್ದಾರೆ.
ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಮ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 187 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ತಂಡ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ 6 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿ ಗೆಲುವು ಸಾಧಿಸಿತು.
ಇದನ್ನೂ ಓದಿ IPL 2023: ಟಿಕೆಟ್ ಸಿಗದಕ್ಕೆ ಗರಂ; ರಾಹುಲ್ ದ್ರಾವಿಡ್ ಕಾರಿಗೆ ಅಡ್ಡ ಹಾಕಿದ ಆರ್‌ಸಿಬಿ ಫ್ಯಾನ್ಸ್
ಚೇಸಿಂಗ್ ವೇಳೆ ರಾಜಸ್ಥಾನ್ ತಂಡಕ್ಕೆ ಜೋಸ್ ಬಟ್ಲರ್ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಹಿನ್ನಡೆ ಉಂಟಾಯಿತು. ಇದೇ ವೇಳೆ ಬಟ್ಲರ್ ಅವರು ಕೆಟ್ಟ ದಾಖಲೆಗೆ ಒಳಗಾದರು. ಐಪಿಎಲ್ ಟೂರ್ನಿಯ ಒಂದೇ ಆವೃತ್ತಿಯಲ್ಲಿ 5ನೇ ಬಾರಿಗೆ ಶೂನ್ಯಕ್ಕೆ ಔಟಾದ ಆಟಗಾರ ಎಂಬ ಹಣೆಪಟ್ಟಿ ಕಟ್ಟಿಕೊಂಡರು. ಆರಂಭಿಕ ಹಂತದಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿ ಗಮನಸೆಳೆದಿದ್ದ ಬಟ್ಲರ್ ಅವರು ಅಂತಿಮ ಹಂತದಲ್ಲಿ ಮಂಕಾದರು. ಆಡಿದ ಪ್ರತಿ ಪಂದ್ಯದಲ್ಲಿ ಖಾತೆ ತರೆಯುವಲ್ಲಿ ವಿಫಲರಾದರು. ಕಳೆದ ಆವೃತ್ತಿಯಲ್ಲಿ ಪ್ರಚಂಡ ಬ್ಯಾಟಿಂಗ್ ನಡೆಸಿ ತಂಡವನ್ನು ಫೈನಲ್ಗೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ಇದನ್ನೂ ಓದಿ IPL 2023: ರಾಜಸ್ಥಾನ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಪಂಜಾಬ್; ಅಂಕಪಟ್ಟಿ ಹೇಗಿದೆ?
ಐಪಿಎಲ್ನ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಶೂನ್ಯ ಸುತ್ತಿದವರ ಪಟ್ಟಿಯಲ್ಲಿ ಹರ್ಷಲ್ ಗಿಫ್ಸ್(4), ಮನೀಷ್ ಪಾಂಡೆ(4), ಶಿಖರ್ ಧವನ್(4) ಮತ್ತು ನಿಕೋಲಸ್ ಪೂರನ್(4) ಕ್ರಮವಾಗಿ ಆ ಬಳಿಕ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಪಂಜಾಬ್ ವಿರುದ್ಧ ಗೆದ್ದ ರಾಜಸ್ಥಾನ್ ಪ್ಲೇ ಆಫ್ ರೇಸ್ನಲ್ಲಿ ಉಳಿದುಕೊಂಡಿತು. ಸದ್ಯ ರಾಜಸ್ಥಾನ್ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಆರ್‌ಸಿಬಿ ಮತ್ತು ಮುಂಬೈ ತಂಡಗಳು ಮುಂದಿನ ಪಂದ್ಯದಲ್ಲಿ ಸೋಲು ಕಂಡರೆ ಆಗ ರಾಜಸ್ಥಾನ್ ನಾಲ್ಕನೇ ತಂಡವಾಗಿ ಪ್ಲೇ ಆಫ್ ಪ್ರವೇಶ ಪಡೆಯಲಿದೆ.