ಅಹಮದಾಬಾದ್: ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್(Gujarat Titans) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್(Kolkata Knight Riders) ತಂಡಗಳು ಭಾನುವಾರದ ಐಪಿಎಲ್ನ(IPL 2023) ಡಬಲ್ ಹೆಡರ್ನ ಮೊದಲ ಪಂದ್ಯಗಳಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ ಮತ್ತು ಬೌಲಿಂಗ್ಗೆ ಸಮಾನವಾಗಿ ಸಹಕಾರಿಸಲಿದೆ. ಆರಂಭದಲ್ಲಿ ಬೌಲಿಂಗ್ಗೆ ನೆರವಾದರೆ ಆ ಬಳಿಕ ನಿಧಾನವಾಗಿ ಬ್ಯಾಟಿಂಗ್ ಸ್ನೇಹಿಯಾಗಲಿದೆ. ಹೀಗಾಗಿ ಟಾಸ್ ಗೆದ್ದ ತಂಡ ಚೇಸಿಂಗ್ ನಡೆಸುವ ಸಾಧ್ಯತೆ ಅಧಿಕವಾಗಿದೆ. ಉಭಯ ತಂಡಗಳು ಐಪಿಎಲ್‌ನಲ್ಲಿ ಇದುವರೆಗೂ ಕೇವಲ ಒಂದು ಬಾರಿ ಮಾತ್ರ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಗೆಲುವು ಸಾಧಿಸಿದೆ.
ಇದೇ ಮೈದಾನದಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ತಂಡ ಚೆನ್ನೈ ವಿರುದ್ಧ 5 ವಿಕೆಟ್‌ಗಳಿಂದ ಗೆಲುವು ದಾಖಲಿಸಿತ್ತು. ಬಳಿಕ ಡೆಲ್ಲಿ ವಿರುದ್ಧ 6 ವಿಕೆಟ್ ಜಯ ಸಾಧಿಸಿತ್ತು. ಎರಡೂ ಚೇಸಿಂಗ್ ಪಂದ್ಯಗಳಾಗಿದ್ದವು. ಇದೀಗ ಮೂರನೇ ಪಂದ್ಯದಲ್ಲಿಯೂ ಹಾರ್ದಿಕ್ ಪಾಂಡ್ಯ ಪಡೆ ಗೆಲುವು ದಾಖಲಿಸುವ ಯೋಜನೆಯಲ್ಲಿದೆ.
ಇದನ್ನೂ ಓದಿ IPL 2023: ಒಂದೇ ಪಂದ್ಯದಲ್ಲಿ ಹಲವು ದಾಖಲೆ ಬರೆದ ಅಜಿಂಕ್ಯ ರಹಾನೆ
ಸಂಭಾವ್ಯ ತಂಡ
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಜೋಶುವಾ ಲಿಟಲ್, ಯಶ್ ದಯಾಳ್.
ಕೋಲ್ಕತ್ತಾ ನೈಟ್ ರೈಡರ್ಸ್: ಮನ್ದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನಾರಾಯಣ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.