Site icon Vistara News

IPL 2023: ಕೆಕೆಆರ್​ ಮತ್ತು ಆರ್​ಸಿಬಿ ಪಂದ್ಯದ ಪಿಚ್​ ರಿಪೋರ್ಟ್​

IPL 2023: KKR vs RCB Match Pitch Report

IPL 2023: KKR vs RCB Match Pitch Report

ಕೋಲ್ಕೊತಾ: ಐಪಿಎಲ್​ನ ಗುರುವಾರದ ಮುಖಾಮುಖಿಯಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಕೋಲ್ಕತಾ ನೈಟ್​ ರೈಡರ್ಸ್​ ತಂಡಗಳು ಈಡನ್‌ ಗಾರ್ಡನ್ಸ್‌ ಸೆಣಸಾಟ ನಡೆಸಲಿವೆ. ಕೊರೊನಾದ 1,438 ದಿನಗಳ ಬಳಿಕ ಇಲ್ಲಿ ಪಂದ್ಯ ನಡೆಯುತ್ತಿದೆ. ಹೀಗಾಗಿ ಇಲ್ಲಿನ ಅಭಿಮಾನಿಗಳು ಈ ಪಂದ್ಯವನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಈ ಪಂದ್ಯದ ಪಿಚ್​ ರಿಪೋರ್ಟ್​ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.

ಪಿಚ್​ ರಿಪೋರ್ಟ್​

ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ.

2017ರಲ್ಲಿ ಕೆಕೆಆರ್​ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಕೇವಲ 49 ರನ್​ಗಳಿಗೆ ಆಲೌಟ್​ ಆಗಿತ್ತು. ಈ ವರೆಗೆ ಆರ್​ಸಿಬಿ ಮತ್ತು ಕೆಕೆಆರ್​ ಐಪಿಎಲ್​ನಲ್ಲಿ 30 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 14 ಗೆಲುವು ಕೆಕೆಆರ್​ 16 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್​ ಮುಂದಿದೆ. ಆದರೆ ಈ ಬಾರಿ ಕೆಕೆಆರ್​ ಪರ ಹೇಳಿಕೊಳ್ಳುವಂತಹ ಸ್ಟಾರ್​ ಆಟಗಾರರು ಕಾಣಿಸಿಕೊಂಡಿಲ್ಲ. ಆರ್​ಸಿಬಿ ಪರ ನಾಯಕ ಡು ಪ್ಲೆಸಿಸ್​, ವಿರಾಟ್ ಕೊಹ್ಲಿ ಪ್ರಚಂಡ ಬ್ಯಾಟಿಂಗ್​ ಫಾರ್ಮ್​ನಲ್ಲಿದ್ದಾರೆ.

ಇದನ್ನೂ ಓದಿ IPL 2023: ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಕೆಕೆಆರ್​

ಸಂಭಾವ್ಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್​ ಡು ಪ್ಲೆಸಿಸ್​ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಾಬಾಜ್ ಅಹ್ಮದ್​, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್​ ಶರ್ಮಾ, ಮಹಿಪಾಲ್ ಲೊಮ್ರೊರ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶದೀಪ್, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ಮಿಚೆಲ್ ಬ್ರೇಸ್‌ವೆಲ್.

ಕೋಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆ್ಯಂಡ್ರೆ ರಸೆಲ್, ಸುನೀಲ್ ನಾರಾಯಣ, ಶಾರ್ದೂಲ್ ಠಾಕೂರ್, ಲಾಕಿ ಫರ್ಗ್ಯುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್​ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಎನ್. ಜಗದೀಶನ್, ವೈಭವ್ ಅರೋರಾ, ಸುಯಶ್ ಶರ್ಮಾ. ಡೇವಿಡ್ ವೀಸ್, ಕುಲವಂತ್ ಖೆಜರೊಲಿಯಾ, ಲಿಟನ್ ದಾಸ್, ಮನ್​ದೀಪ್​ ಸಿಂಗ್.

Exit mobile version