Site icon Vistara News

IPL 2023: ಆರ್​ಸಿಬಿಗೆ ಕೊಹ್ಲಿ ನಾಯಕ; ಟಾಸ್​ ಗೆದ್ದ ಪಂಜಾಬ್​ ತಂಡದಿಂದ ಬೌಲಿಂಗ್​ ಆಯ್ಕೆ

Punjab Kings vs Royal Challengers Bangalore

Punjab Kings vs Royal Challengers Bangalore

ಮೊಹಾಲಿ: ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುವ ಗುರುವಾರದ ಐಪಿಎಲ್​ನ ಡಬಲ್​ ಹೆಡರ್​ನ ಮೊದಲ​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದಿದೆ. ಟಾಸ್ ಗೆದ್ದ ಪಂಜಾಬ್​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ. ಫಾಫ್​ ಡು ಪ್ಲೆಸಿಸ್​ ಅವರು ಅಸೌಖ್ಯದ ಕಾರಣ ಈ ಪಂದ್ಯದಲ್ಲಿ ಫೀಲ್ಡಿಂಗ್​ ನಡೆಸುತ್ತಿಲ್ಲ. ಅವರ ಅನುಪಸ್ಥಿತಿಯಲ್ಲಿ ವಿರಾಟ್​ ಕೊಹ್ಲಿ ಅವರು ಆರ್​ಸಿಬಿ ತಂಡದ ನಾಯಕತ್ವ ವಹಿಸಿಕೊಂಡರು. ಆದರೆ ಇಂಪ್ಯಾಕ್ಟ್​ ಪ್ಲೇಯರ್ ಆಗಿ ಡು ಪ್ಲೆಸಿಸ್​ ಬ್ಯಾಟಿಂಗ್​ ನಡೆಸಲಿದ್ದಾರೆ.

ಆರ್​ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್​ಸಿಬಿ 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ತಂಡ 17 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಪಂಜಾಬ್​ ಮುಂದಿದೆ. ಐಪಿಎಲ್​ ಇತಿಹಾಸದಲ್ಲೇ ಆರ್​ಸಿಬಿ ತಂಡ ಪಂಜಾಬ್​ ವಿರುದ್ಧ ಮಾತ್ರವೇ ಇಷ್ಟು ಸಂಖ್ಯೆಯ ಸೋಲು ಕಂಡಿದೆ. ಇನ್ನು ಕಳೆದ ಆವೃತ್ತಿಯಲ್ಲಿ ಇತ್ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಇದರಲ್ಲಿ ಎರಡೂ ಪಂದ್ಯಗಳಲ್ಲಿಯೂ ಪಂಜಾಬ್ ಕಿಂಗ್ಸ್ ಗೆದ್ದು ಬೀಗಿತ್ತು.

ಸಂಭಾವ್ಯ ತಂಡಗಳು

ಪಂಜಾಬ್​ ಕಿಂಗ್​​: ಅಥರ್ವ ಥೈಡೆ, ಪ್ರಭಾಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಸ್ಯಾಮ್ ಕರ್ರನ್​, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಅರ್ಶ್‌ದೀಪ್ ಸಿಂಗ್, ಸಿಕಂದರ್ ರಜಾ, ಲಿಯಾಮ್​ ಲಿವಿಂಗ್​ಸ್ಟೋನ್​.

ಆರ್​ಸಿಬಿ: ವಿರಾಟ್ ಕೊಹ್ಲಿ,(ನಾಯಕ), ಫಾಫ್ ಡು ಪ್ಲೆಸಿಸ್​, ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯೇಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ / ಮೈಕಲ್ ಬ್ರೆಸ್‌ವೆಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

Exit mobile version