IPL 2023 League Stage Stats Review IPL 2023 : ಐಪಿಎಲ್​ 16ನೇ ಆವೃತ್ತಿಯ ಲೀಗ್​ ಹಂತದ ಸಿಂಹಾವಲೋಕನ ಇಲ್ಲಿದೆ - Vistara News

ಕ್ರಿಕೆಟ್

IPL 2023 : ಐಪಿಎಲ್​ 16ನೇ ಆವೃತ್ತಿಯ ಲೀಗ್​ ಹಂತದ ಸಿಂಹಾವಲೋಕನ ಇಲ್ಲಿದೆ

ಗುಜರಾತ್​ ಟೈಟನ್ಸ್​ ಕ್ವಾಲಿಫರ್ 1ರಲ್ಲಿ ಸಿಎಸ್​ ವಿರುದ್ಧ ಆಡಲಿದ್ದು, ಎಲ್ಎಸ್​​ಜಿ ಎಲಿಮಿನೇಟರ್​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ.

VISTARANEWS.COM


on

IPL Records
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ : ಐಪಿಎಲ್​ 16ನೇ ಆವೃತ್ತಿಯ ಲೀಗ್​ ಹಂತದ ಪಂದ್ಯಗಳು ಮುಕ್ತಾಯಗೊಂಡಿವೆ. 70 ಪಂದ್ಯಗಳ ಬಳಿಕ ನಾಲ್ಕು ಅರ್ಹ ತಂಡಗಳಾದ ಗುಜರಾತ್ ಟೈಟನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ನಾಕೌಟ್ ಹಂತಕ್ಕೆ ಪ್ರವೇಶಿಸಿವೆ. ಈ ನಾಲ್ಕು ತಂಡಗಳಿನ್ನು ಪ್ರಶಸ್ತಿಗಾಗಿ ಸೆಣಸಾಡಲಿವೆ. ಮೊದಲ ಕ್ವಾಲಿಫೈಯರ್​ನಲ್ಲಿ ಚೆನ್ನೈ ಮತ್ತು ಗುಜರಾತ್​ ಆಡಲಿದ್ದು, ಮೊದಲ ಎಲಿಮಿನೇಟರ್​ನಲ್ಲಿ ಮುಂಬಯಿ ಮತ್ತು ಲಕ್ನೊ ಸೆಣಸಾಡಲಿವೆ. ಬಳಿಕ ಎರಡನೇ ಕ್ವಾಲಿಫೈಯರ್ ಹಾಗೂ ಫೈನಲ್​ ನಡೆಯಲಿದೆ.

ಐಪಿಎಲ್ 2023ನೇ ಆವೃತ್ತಿಯು ಅನೇಕ ದಾಖಲೆಗಳನ್ನು ಮುರಿದಿದೆ. ಒಂದೇ ಋತುವಿನಲ್ಲಿ ಅತಿ ಹೆಚ್ಚು ಶತಕಗಳಿಂದ ಹಿಡಿದು ಒಂದು ಋತುವಿನಲ್ಲಿ ದಾಖಲಾದ ಅತಿ ಹೆಚ್ಚು 200+ ಸ್ಕೋರ್​ಗಳು ಸೇರಿದಂತೆ ಹಲವು ದಾಖಲೆಗಳು ಸೃಷ್ಟಿಯಾಗಿವೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ಫಾಫ್ ಡು ಪ್ಲೆಸಿಸ್ 14 ಪಂದ್ಯಗಳಲ್ಲಿ 56.15ರ ಸರಾಸರಿಯಲ್ಲಿ 730 ರನ್ ಗಳಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಗುಜರಾತ್ ಟೈಟನ್ಸ್ ತಂಡದ ಆರಂಭಿಕ ಬ್ಯಾಟರ್​ ಶುಭಮನ್ ಗಿಲ್ 56.67ರ ಸರಾಸರಿಯಲ್ಲಿ 680 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. 53.25ರ ಸರಾಸರಿಯಲ್ಲಿ 639 ರನ್ ಗಳಿಸಿರುವ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ರಶೀದ್ ಖಾನ್ ಮತ್ತು ಮೊಹಮ್ಮದ್ ಶಮಿ 14 ಪಂದ್ಯಗಳಲ್ಲಿ 24 ವಿಕೆಟ್​ ಕಬಳಿಸಿ ಮೊದಲ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಶಮಿ 17.66 ಸರಾಸರಿ ಹೊಂದಿದ್ದರೆ, ರಶೀದ್ ಖಾನ್ 18.25 ಸರಾಸರಿ ಹೊಂದಿದ್ದಾರೆ. 2022ರ ಆವೃತ್ತಿಯ ಪರ್ಪಲ್ ಕ್ಯಾಪ್ ಹೊಂದಿರುವ ಯಜುವೇಂದ್ರ ಚಾಹಲ್ 14 ಪಂದ್ಯಗಳಲ್ಲಿ 21 ವಿಕೆಟ್​ ಉರುಳಿಸಿ ಎರಡನೇ ಸ್ಥಾನ ಪಡೆದಿದ್ದಾರೆ. ಪಿಯೂಷ್ ಚಾವ್ಲಾ, ವರುಣ್ ಚಕ್ರವರ್ತಿ ಮತ್ತು ತುಷಾರ್ ದೇಶಪಾಂಡೆ ತಲಾ 20 ವಿಕೆಟ್ ಉರುಳಿಸಿದ್ದಾರೆ.

ಐಪಿಎಲ್ 2023 ರಲ್ಲಿ ಸೃಷ್ಟಿಯಾದ ದಾಖಲೆಗಳ ಅಂಕಿಅಂಶಗಳು ಇಲ್ಲಿದೆ

  • 7263- ಐಪಿಎಲ್ ಇತಿಹಾಸದಲ್ಲಿ 7000 ರನ್ ಬಾರಿಸಿ ಮೊದಲ ಮತ್ತು ಏಕೈಕ ಆಟಗಾರ ಎಂಬ ಹೆಗ್ಗಳಿಕೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ.
  • 11- ಐಪಿಎಲ್ 2023ರಲ್ಲಿ ಒಟ್ಟು 11 ಶತಕಗಳು ದಾಖಲಾಗಿವೆ. ಇದು ಐಪಿಎಲ್ ಋತುವಿನಲ್ಲಿ ದಾಖಲಾದ ಅತಿ ಹೆಚ್ಚು ಶತಕಗಳು. ಐಪಿಎಲ್ 2022ರಲ್ಲಿ ಎಂಟು ಶತಕಗಳು ದಾಖಲಾಗಿದ್ದವು.
  • 04- ಮುಂಬೈ ಇಂಡಿಯನ್ಸ್ ತಂಡ ನಾಲ್ಕು ಬಾರಿ ಒಟ್ಟು 200 ಅಥವಾ ಅದಕ್ಕಿಂತ ಹೆಚ್ಚು ರನ್​ ಚೇಸ್ ಮಾಡಿದೆ. ಇದು ಐಪಿಎಲ್ ಋತುವಿನಲ್ಲಿ ಒಂದು ತಂಡವು ಅತಿ ಹೆಚ್ಚು 200 ಅಥವಾ ಅದಕ್ಕಿಂತ ಹೆಚ್ಚು ರನ್ ಬಾರಿಸಿದಂತಾಗಿದೆ.
  • 05- ಐಪಿಎಲ್ 2023ರಲ್ಲಿ ಆರ್​ಸಿಬಿ ಐದು ಬಾರಿ 200+ ಮೊತ್ತವನ್ನು ಬಾರಿಸಿದೆ. ಇದು ಒಂದೇ ಐಪಿಎಲ್ ಋತುವಿನಲ್ಲಿ ಯಾವುದೇ ತಂಡವು ಗಳಿಸಿದ ಅತಿ ಹೆಚ್ಚು ಮೊತ್ತವಾಗಿದೆ. ಪಂಜಾಬ್​ ಕಿಂಗ್ಸ್​ 2014 ರಲ್ಲಿ ನಾಲ್ಕು 200+ ರನ್​ ಹಾಗೂ ಆರ್​ಆರ್​ ಮತ್ತು ಕೆಕೆಆರ್ 2018 ರಲ್ಲಿ ನಾಲ್ಕು ಬಾರಿ 200+ ಮೊತ್ತವನ್ನು ಪೇರಿಸಿದ್ದವು.
  • 35- ಐಪಿಎಲ್ 2023 \ರಲ್ಲಿ 35 ಬಾರಿ 200 ಅಥವಾ ಅದಕ್ಕಿಂತ ಹೆಚ್ಚು ಸ್ಕೋರ್ ದಾಖಲಾಗಿದೆ. ಸೀಸನ್ 2022ರಲ್ಲಿ 18 ಬಾರಿ 200+ ಸ್ಕೋರ್​ಗಳು ದಾಖಲಾಗಿದ್ದವು.
  • 07- ಐಪಿಎಲ್​ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ಕ್ರಿಸ್ ಗೇಲ್ ಆರು ಶತಕಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.
  • 939- ಐಪಿಎಲ್ 2023 ರಲ್ಲಿ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಜತೆಯಾಟದಲ್ಲಿ 939 ರನ್ ಗಳಿಸಿದ್ದಾರೆ. 2016ರ ಐಪಿಎಲ್ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ- ಎಬಿ ಡಿ ವಿಲಿಯರ್ಸ್ ಜೋಡಿ 939 ರನ್ ಜೊತೆಯಾಟದ ದಾಖಲೆ ಬರೆದಿತ್ತು.
  • 1066- ಐಪಿಎಲ್ 2023 ರಲ್ಲಿ ಇದುವರೆಗೆ ಒಟ್ಟು 1066 ಸಿಕ್ಸರ್​​ಗಳು ದಾಖಲಾಗಿವೆ. ಇದು ಐಪಿಎಲ್​ ಋತುವಿನಲ್ಲಿ ದಾಖಲಾದ ಅತಿ ಹೆಚ್ಚು ಸಿಕ್ಸರ್​ಗಳ ದಾಖಲೆ. ಈ ಹಿಂದೆ 2022ರ ಋತುವಿನಲ್ಲಿ 1062 ಸಿಕ್ಸರ್​ಗಳನ್ನು ಬ್ಯಾಟರ್​​ಗಳು ಬಾರಿಸಿದ್ದರು.
  • 625- ಯಶಸ್ವಿ ಜೈಸ್ವಾಲ್ ಐಪಿಎಲ್ 2023ರಲ್ಲಿ ಒಟ್ಟು 625 ರನ್ ಗಳಿಸಿದ್ದಾರೆ. ಇದು ಐಪಿಎಲ್ ಋತುವಿನಲ್ಲಿ ಅಂತಾರಾಷ್ಟ್ರೀಯ ಪಂದ್ಯವಾಡದ ಆಟಗಾರನೊಬ್ಬ ದಾಖಲಿಸಿದ ಗರಿಷ್ಠ ರನ್​. 2008ರ ಐಪಿಎಲ್ನಲ್ಲಿ 616 ರನ್ ಗಳಿಸಿದ್ದರು.
  • 05- ರಾಜಸ್ಥಾನ್ ತಂಡದ ಜೋಸ್ ಬಟ್ಲರ್ ಐದು ಬಾರಿ ಶೂನ್ಯಕ್ಕೆ ಔಟಾಗಿ ಐಪಿಎಲ್​ ಸೀಸನ್ ಒಂದರಲ್ಲಿ ಅತಿ ಹೆಚ್ಚು ಬಾರಿ ಡಕ್​ಔಟ್ ಆದ ಕಳಪೆ ದಾಖಲೆ ಮಾಡಿದರು.
  • 17- ದಿನೇಶ್ ಕಾರ್ತಿಕ್ ಈಗ 17 ಬಾರಿ ಶೂನ್ಯಕ್ಕೆ ಔಟಾಗಿದ್ದಅರೆ. ಇದು ಐಪಿಎಲ್​ನಲ್ಲಿ ಯಾವುದೇ ಆಟಗಾರನ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಕಳಪೆ ದಾಖಲೆ. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ 16 ಸೊನ್ನೆಯೊಂದಿಗೆ 2ನೇ ಸ್ಥಾನದಲ್ಲಿದ್ದಾರೆ.
  • ಇದನ್ನೂ ಓದಿ ವ: IPL 2023 : ಐಪಿಎಲ್​ನ ಪ್ಲೇಆಫ್​ಗೇರಿದ ತಂಡಗಳು ಯಾವುವು, ಎಲ್ಲಿ ನಡೆಯುತ್ತವೆ ಪಂದ್ಯಗಳು?
  • 5022- ವಿರಾಟ್ ಕೊಹ್ಲಿ ನಂತರ ಒಂದೇ ಫ್ರಾಂಚೈಸಿಗಾಗಿ 5000 ರನ್ ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ಪರ 5000 ರನ್ ಪೂರೈಸಿದರು.
  • 187- ಯಜುವೇಂದ್ರ ಚಾಹಲ್ 187 ವಿಕೆಟ್ ಪಡೆದು ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
  • 13- ಯಶಸ್ವಿ ಜೈಸ್ವಾಲ್ ಕೆಕೆಆರ್ ವಿರುದ್ಧ 13 ಎಸೆತಗಳಲ್ಲಿ ಅರ್ಧ ಶತಕ ದಾಖಲಿಸಿದ್ದರು. ಇದು ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗದ ಅರ್ಧಶತಕ. ಕೆಎಲ್ ರಾಹುಲ್ ಮತ್ತು ಪ್ಯಾಟ್ ಕಮಿನ್ಸ್​ 14 ಎಸೆತಗಳ ದಾಖಲೆಯನ್ನು ಮುರಿದರು.
  • 02- ಮುಂಬೈ ಇಂಡಿಯನ್ಸ್ ಸತತ ಎರಡು ಋತುಗಳಲ್ಲಿ ಪಾಯಿಂಟ್ಸ್ ಟೇಬಲ್ಸ್​ನಲ್ಲಿ ಅಗ್ರಸ್ಥಾನ ಪಡೆದ ಎರಡನೇ ತಂಡ ಎಂಬ ಹೆಗ್ಗಳಿಕೆಗೆ ಗುಜರಾತ್​ ಪಾತ್ರವಾಯಿತು. ಐಪಿಎಲ್ 2019 ಮತ್ತು 2020ರಲ್ಲಿ ಮುಂಬೈ ಇಂಡಿಯನ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನದಲ್ಲಿತ್ತು. ಜಿಟಿ 2022 ಮತ್ತು 2023ರಲ್ಲಿ ಪಾಯಿಂಟ್ಸ್ ಎರಡು ಅಗ್ರಸ್ಥಾನ ಪಡೆದುಕೊಂಡಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

IPL 2024 Eliminator: ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

VISTARANEWS.COM


on

IPL 2024 Eliminato
Koo

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡದ ಎಲಿಮಿನೇಟರ್(IPL 2024 Eliminator)​ ಎದುರಾಳಿ ಯಾರೆಂದು ಫಿಕ್ಸ್​ ಆಗಿದೆ. ಇದರ ಬೆನ್ನಲ್ಲೇ ತಂಡಕ್ಕೆ ದೊಡ್ಡ ಆಘಾತವೊಂದು ಎದುರಾಗಿದೆ. ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ನಡೆಸುವ ಸಲುವಾಗಿ ಆಸ್ಟ್ರೇಲಿಯಾದ ಸ್ಟಾರ್​ ಆಲ್​ರೌಂಡರ್​ಗಳಾದ ಕ್ಯಾಮರೂನ್​ ಗ್ರೀನ್​ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಂಡ ತೊರೆಯಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಇಂಗ್ಲೆಂಡ್​ನ ಆಟಗಾರರು ಐಪಿಎಲ್​ ಪಂದ್ಯವಾವಳಿಯನ್ನು ಅರ್ಧಕ್ಕೆ ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ. ಇದೀಗ ಆಸ್ಟ್ರೇಲಿಯಾ ಸರದಿ ಎನ್ನಲಾಗಿದೆ. ಕೇವಲ ಆರ್​ಸಿಬಿ ಮಾತ್ರವಲ್ಲದೆ ಇತರ ತಂಡದ ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರರು ಕೂಡ ಐಪಿಎಲ್​ ತೊರೆಯಲಿದ್ದಾರೆ ಎಂದು ವರದಿಯಾಗಿದೆ. ಒಂದೊಮ್ಮೆ ಆಸೀಸ್​ ಆಟಗಾರರು ಐಪಿಎಲ್​ನಿಂದ ಹೊರಹೋದರೆ ಸನ್​ರೈಸರ್ಸ್​ ಮತ್ತು ಆರ್​ಸಿಬಿ ತಂಡಗಳಿಗೆ ದೊಡ್ಡ ಹೊಡೆತ ಬೀಳಲಿದೆ. ಏಕೆಂದರೆ ಈ 2 ತಂಡಗಳಲ್ಲಿಯೇ ತಲಾ 2 ಆಸೀಸ್​ ಆಟಗಾರರಿದ್ದಾರೆ.

ಟಿ20 ವಿಶ್ವಕಪ್​ ಟೂರ್ನಿಯ ಅಭ್ಯಾಸ ಪಂದ್ಯಗಳು ಮೇ 27ರಿಂದ ಆರಂಭಗೊಳ್ಳಲಿದೆ. ಆಸ್ಟ್ರೇಲಿಯಾ ತನ್ನ ಮೊದಲ ಅಭ್ಯಾಸ ಪಂದ್ಯವನ್ನು ನಮೀಬಿಯಾ ವಿರುದ್ಧ ಮೇ 29ಕ್ಕೆ ಆಡಲಿದೆ. ಮೂಲಗಳ ಪ್ರಕಾರ ಆಸ್ಟ್ರೇಲಿಯಾ ತಂಡ ಮೇ 21ರಂದು ಕೆರಿಬಿಯನ್​ ದ್ವೀಪಕ್ಕೆ ಪ್ರಯಾಣ ಬೆಳೆಸಲಿದೆ ಎಂದು ಹೇಳಲಾಗಿದೆ.

ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ


ಇಂದು ರಾತ್ರಿ ನಡೆಯಬೇಕಿದ್ದ ಐಪಿಎಲ್​ನ ಅಂತಿಮ ಲೀಗ್​ ಪಂದ್ಯವಾದ ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ನಡುವಣ ಪಂದ್ಯ ಮಳೆಯಿಂದ ರದ್ದುಗೊಂಡ ಕಾರಣ ರಾಜಸ್ಥಾನ್​ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿತು. ಹೀಗಾಗಿ ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್(Rajasthan Royals)​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಇದನ್ನೂ ಓದಿ IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

Continue Reading

ಕ್ರೀಡೆ

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

RR vs KKR: ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು.

VISTARANEWS.COM


on

RR vs KKR
Koo

ಗುವಾಹಟಿ: 17ನೇ ಆವೃತ್ತಿಯ ಐಪಿಎಲ್​ನ(IPL 2024) ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​(RR vs KKR) ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders)​ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಬೇಕಿತ್ತು. ಆದರೆ ಮಳೆಯಿಂದ ಒಂದೂ ಎಸೆತ ಕಾಣದೆ ಈ ಪಂದ್ಯ ರದ್ದಾದ ಕಾರಣ ಉಭಯ ತಂಡಗಳಿಗೂ ತಲಾ ಒಂದು ಅಂಕ ನೀಡಲಾಯಿತು.

10 ಗಂಟೆ ಸುಮಾರಿಗೆ ಮಳೆ ನಿಂತಿತು. ಮಳೆ ನಿಂತ ಕಾರಣ ಪಂದ್ಯವನ್ನು ಡಕ್​ವರ್ತ್​ ನಿಯಮದ ಪ್ರಕಾರ 7 ಓವರ್​ಗೆ ಸೀಮಿತಗೊಳಿಸಿ ಟಾಸ್​ ಕೂಡ ಹಾರಿಸಲಾಯಿತು. ಟಾಸ್​ ಗೆದ್ದು ಕೆಕೆಆರ್​ ಫೀಲ್ಡಿಂಗ್​ ಆಯ್ದುಕೊಂಡಿತು. ಇನ್ನೇನು ಆಟಗಾರರು ಮೈದಾನಕ್ಕೆ ಇಳಿಯಬೇಕು ಎನ್ನುವಷ್ಟರಲ್ಲಿ ಮಳೆ ಮತ್ತೆ ಆರಂಭಗೊಂಡಿತು. ಹೀಗಾಗಿ ಅಂಪೈರ್​ಗಳು ಕೊನೆಗೆ ಪಂದ್ಯವನ್ನು ರದ್ದು ಎಂದು ಘೋಷಣೆ ಮಾಡಿದರು.

ಕೆಕೆಆರ್​ ಮಣಿಸಿ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಿಯಾಗಿ ಕ್ವಾಲಿಫೈಯರ್​ ಪಂದ್ಯವನ್ನಾಡುವ ನಿರೀಕ್ಷೆಯಲ್ಲಿದ್ದ ರಾಜಸ್ಥಾನ್​ಗೆ(Rajasthan Royals)​ ಮಳೆ ತಣ್ಣೀರೆರಚಿತು. ಸನ್​ರೈಸರ್ಸ್​ ಹೈದರಾಬಾದ್​ 2ನೇ ತಂಡವಾಗಿ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಿತು. ರಾಜಸ್ಥಾನ್​ ಮತ್ತು ಹೈದರಾಬಾದ್ ಸಮಾನ 17 ಅಂಕ ಹೊಂದಿದರೂ ರನ್​ ರೇಟ್​ನಲ್ಲಿ ಮುಂದಿದ್ದ ಕಾರಣ ಈ ಲಾಭ ಕಮಿನ್ಸ್​ ಪಡೆಗೆ ಲಭಿಸಿತು. ಮಂಗಳವಾರ(ಮೇ 21) ನಡೆಯುವ ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಕಣಕ್ಕಿಳಿಯಲಿದೆ. ಈ ಪಂದ್ಯ ಅಹಮದಾಬಾದ್​ನಲ್ಲಿ ನಡೆಯಲಿದೆ.

ಆರ್​ಸಿಬಿ-ರಾಜಸ್ಥಾನ್​ ಮಧ್ಯೆ ಎಲಿಮಿನೇಟರ್​ ಪಂದ್ಯ


ಬುಧವಾರ ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ ಆಡಲಿದೆ. ಈ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಸತತವಾಗಿ 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ಆಫ್​ಗೆ ಲಗ್ಗೆಯಿಟ್ಟ ಆರ್​ಸಿಬಿಗೆ ಎಲಿಮಿನೇಟರ್​ ಪಂದ್ಯದಲ್ಲೂ ಲಕ್​ ಹೈ ಹಿಡಿಯುವುದೇ ಎಂದು ಕಾದು ನೋಡಬೇಕಿದೆ.

ಪಂಜಾಬ್​ ವಿರುದ್ಧ ಗೆದ್ದ ಹೈದರಾಬಾದ್​


ದಿನದ ಮೊದಲ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 4 ವಿಕೆಟ್​ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿತು. ಬ್ಯಾಟಿಂಗ್​ ಸ್ನೇಹಿಯಾದ ಉಪ್ಪಳದ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

Continue Reading

ಕ್ರೀಡೆ

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

SRH vs PBKS: ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

VISTARANEWS.COM


on

SRH vs PBKS
Koo

ಹೈದರಾಬಾದ್​: ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ತಂಡ ಐಪಿಎಲ್​(IPL 2024) ಆವೃತ್ತಿಯಲ್ಲಿ ಮತ್ತು ಟಿ20 ಸರಣಿಯಲ್ಲಿ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ಮೊದಲ ತಂಡ ಎಂಬ ದಾಖಲೆ ಬರೆದಿದೆ. ಈ ಮೂಲಕ ಆರ್​ಸಿಬಿ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದೆ. ಆರ್​ಸಿಬಿ ಈ ಆವೃತ್ತಿಯಲ್ಲಿ ಒಟ್ಟು 157 ಸಿಕ್ಸರ್​ ಬಾರಿಸಿ ಅಗ್ರಸ್ಥಾನ ಪಡೆದಿತ್ತು. ಆದರೆ, ಇದೀಗ ಹೈದರಾಬಾದ್​ 160 ಸಿಕ್ಸರ್​ ಬಾರಿಸುವ ಮೂಲಕ ದಾಖಲೆಯನ್ನು ತನ್ನ ಹೆಸರಿಗೆ ಬರೆದಿದೆ.

ಅತಿ ಹೆಚ್ಚು ಸಿಕ್ಸರ್​ ಬಾರಿಸಿದ 5 ತಂಡಗಳು


ಸನ್​ರೈಸರ್ಸ್​ ಹೈದರಾಬಾದ್​-160
ಸಿಕ್ಸರ್​, 2024

ಆರ್​ಸಿಬಿ-157 ಸಿಕ್ಸರ್​, 2024

ಚೆನ್ನೈ ಸೂಪರ್​ ಕಿಂಗ್ಸ್​-145 ಸಿಕ್ಸರ್​, 2018

ಸರ್ರೆ-144 (ಟಿ20 ಬ್ಲಾಸ್ಟ್​ 2013)

ಕೆಕೆಆರ್​-143 ಸಿಕ್ಸರ್​, 2019

ಆರ್​ಸಿಬಿ ಮತ್ತು ಹೈದರಾಬಾದ್(SRH vs PBKS)​ ತಂಡಗಳು ಪ್ಲೇ ಆಫ್​ ಪ್ರವೇಶಿಸಿದ ಕಾರಣ ತಮ್ಮ ತಂಡಗಳ ಸಿಕ್ಸರ್​ಗಳ ಸಂಖ್ಯೆ ಇನ್ನೂ ಹೆಚ್ಚಿಸುವ ಅವಕಾಶವಿದೆ. ಅಂತಿಮವಾಗಿ ಯಾರು ಹೆಚ್ಚು ಸಿಕ್ಸರ್​ ಬಾರಿಸುತ್ತಾರೋ ಅವರಿಗೆ ಅಗ್ರಸ್ಥಾನ ಸಿಗಲಿದೆ. ಈ ತಂಡ ಯಾವುದು ಎಂಬುದು ಸದ್ಯದ ಕುತೂಹಲ.

ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್​


ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಇದನ್ನೂ ಓದಿ SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಹೈದರಾಬಾದ್​ಗೆ 4 ವಿಕೆಟ್​ ಜಯ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading

ಕ್ರೀಡೆ

SRH vs PBKS: ಒಂದು ದಿನ ಕಳೆಯುವ ಮುನ್ನವೇ ಕೊಹ್ಲಿಯ ಸಿಕ್ಸರ್​ ದಾಖಲೆ ಮುರಿದ ಅಭಿಷೇಕ್

SRH vs PBKS: ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

VISTARANEWS.COM


on

SRH vs PBKS
Koo

ಹೈದರಾಬಾದ್: ವಿರಾಟ್​ ಕೊಹ್ಲಿ(Virat Kohli) ಅವರು ಶನಿವಾರ ಚೆನ್ನೈ ವಿರುದ್ಧದ ಪಂದ್ಯದಲ್ಲಿ 4 ಸಿಕ್ಸರ್​ ಬಾರಿಸುವ ಮೂಲಕ ಈ ಬಾರಿಯ ಐಪಿಎಲ್​ನಲ್ಲಿ(IPL 2024) ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರ ಎಂಬ ದಾಖಲೆ ಬರೆದಿದ್ದರು. ಆದರೆ ಈ ದಾಖಲೆ ಒಂದು ದಿನ ಕಳೆಯುವ ಮುನ್ನವೇ ಪತನಗೊಂಡಿದೆ. ಸನ್​ರೈಸರ್ಸ್ ಹೈದರಾಬಾದ್(SRH vs PBKS)​ ತಂಡದ ಯುವ ಆಟಗಾರ ಅಭಿಷೇಕ್​ ಶರ್ಮ(Abhishek Sharma) ಈ ದಾಖಲೆಯನ್ನು ಮರಿದಿದ್ದಾರೆ.

ಇಂದು(ಭಾನುವಾರ) ನಡೆದ ಐಪಿಎಲ್​ನ 69ನೇ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆಯನ್ನೇ ಸುರಿಸಿದ ಅಭಿಷೇಕ್​ ಬರೋಬ್ಬರಿ 6 ಸಿಕ್ಸರ್​ ಬಾರಿಸಿ ಮಿಂಚಿದರು. ಇದೇ ವೇಳೆ ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ವಿರಾಟ್​ ಕೊಹ್ಲಿ(37) ಅವರ ದಾಖಲೆಯನ್ನು ಹಿಂದಿಕ್ಕಿದರು. ಸದ್ಯ ಅಭಿಷೇಕ್​ 41* ಸಿಕ್ಸರ್​ ಬಾರಿಸಿದ ಸಾಧನೆ ಮಾಡಿದ್ದಾರೆ. ಆರ್​ಸಿಬಿ ಕೂಡ ಪ್ಲೇ ಆಫ್​ ಪ್ರವೇಶಿಸಿದ ಕಾರಣ ಕೊಹ್ಲಿಗೆ ಈ ದಾಖಲೆಯನ್ನು ಮುರಿಯುವ ಅವಕಾಶ ಇನ್ನೂ ಜೀವಂತವಿದೆ. ಒಟ್ಟಾರೆಯಾಗಿ ಉಭಯ ಆಟಗಾರರ ಮಧ್ಯೆ ಸಿಕ್ಸರ್​ ಪೈಪೋಟಿ ಏರ್ಪಟ್ಟಿದೆ.

ಈ ಬಾರಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಟಾಪ್​ 5 ಆಟಗಾರರು


ಅಭಿಷೇಕ್ ಶರ್ಮ-41 ಸಿಕ್ಸರ್​​

ವಿರಾಟ್​ ಕೊಹ್ಲಿ-37 ಸಿಕ್ಸರ್​

ನಿಕೋಲಸ್​ ಪೂರನ್​-36 ಸಿಕ್ಸರ್​

ಹೆನ್ರಿಚ್​ ಕ್ಲಾಸೆನ್​-33 ಸಿಕ್ಸರ್​

ಸುನೀಲ್​ ನರೈನ್​-32 ಸಿಕ್ಸರ್

ಇದನ್ನೂ ಓದಿ PBKS vs SRH: ಸೋಲಿನ ಮೂಲಕ ಅಭಿಯಾನ ಮುಗಿಸಿದ ಪಂಜಾಬ್​; ಹೈದರಾಬಾದ್​​ಗೆ 4 ವಿಕೆಟ್​ ಜಯ

ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 21 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದ ಅಭಿಷೇಕ್​ ಒಟ್ಟು 28 ಎಸೆತಗಳಿಂದ 66 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅವರ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 6 ಸಿಕ್ಸರ್​ ಮತ್ತು 5 ಬೌಂಡರಿ ಸಿಡಿಯಿತು.

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಪಂಜಾಬ್​ ಕಿಂಗ್ಸ್​ 5 ವಿಕೆಟ್​ಗೆ 214 ರನ್​ ಬಾರಿಸಿ ತನ್ನ ಆಯ್ಕೆಯನ್ನು ಸಮರ್ಥಿಸಿಕೊಂಡಿತು. ಆದರೆ ಈ ಮೊತ್ತ ಹೈದರಾಬಾದ್​ ತಂಡವನ್ನು ಕಟ್ಟಿ ಹಾಕಲು ಸಾಕಾಗಲಿಲ್ಲ. ಗುರಿ ಬೆನ್ನಟ್ಟಿದ ಸನ್​ರೈಸರ್ಸ್​ ಹೈದರಾಬಾದ್ 19.1​ ಓವರ್​ಗಳಲ್ಲಿ 6 ವಿಕೆಟ್​ ನಷ್ಟಕ್ಕೆ 215 ಬಾರಿಸಿ ತವರಿನಲ್ಲಿ ವಿಜಯ ಪತಾಕೆ ಹಾರಿಸಿತು. ಉಭಯ ತಂಡಗಳ ಜಿದ್ದಾಜಿದ್ದಿನ ಬ್ಯಾಟಿಂಗ್​ ಪರಾಕ್ರಮದಿಂದಾಗಿ ಈ ಪಂದ್ಯದಲ್ಲಿ ಒಟ್ಟು 429 ರನ್​ ದಾಖಲಾಯಿತು.

ಈಗಾಗಲೇ ಪ್ಲೇ ಆಫ್​ ಪ್ರವೇಶಿಸಿರುವ ಹೈದರಾಬಾದ್​ ಈ ಗೆಲುವಿನೊಂದಿಗೆ 17 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ. ರಾತ್ರಿ ನಡೆಯುವ ಪಂದ್ಯದಲ್ಲಿ ರಾಜಸ್ಥಾನ್​ ತಂಡ ಕೆಕೆಆರ್​ ವಿರುದ್ಧ ಗೆದ್ದರೆ ಹೈದರಾಬಾದ್​ ಮೂರನೇ ಸ್ಥಾನಕ್ಕೆ ಕುಸಿದು ಎಲಿಮಿನೇಟರ್​​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಆಡಲಿದೆ. ​ಎಲಿಮಿನೇಟರ್ ಪಂದ್ಯ ಬುಧವಾರ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

Continue Reading
Advertisement
actor Chetan Kumar Ahimsa
ಸಿನಿಮಾ25 mins ago

Actor Chetan Kumar Ahimsa: ಸಿಎಂ ಸಿದ್ದರಾಮಯ್ಯಗೆ “ಸೋಮಾರಿ” ಎಂದ ನಟ ಚೇತನ್!‌

Ebrahim Raisi
ವಿದೇಶ43 mins ago

Ebrahim Raisi: ಹೆಲಿಕಾಫ್ಟರ್‌ ಪತನದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮೃತ್ಯು; ವಿಧ್ವಂಸಕ ಕೃತ್ಯವೇ?

Viral News
ವೈರಲ್ ನ್ಯೂಸ್47 mins ago

Viral News: ಮೇಲಿಂದ ಬಿದ್ದು ಬದುಕುಳಿದಿದ್ದ ಮಗುವಿನ ತಾಯಿ ಸೂಸೈಡ್‌; ಸೋಶಿಯಲ್‌ ಮೀಡಿಯಾ ಕಮೆಂಟ್‌ನಿಂದಲೇ ಖಿನ್ನತೆಗೊಳಗಾಗಿದ್ಳಾ?

Actor Rajinikanth attends grandson Ved cricket themed birthday party
ಕಾಲಿವುಡ್48 mins ago

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Kamal Haasan Indian 2 to release on July 12
ಕಾಲಿವುಡ್1 hour ago

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

rain news charamadi ghat traffic jam
ಮಳೆ1 hour ago

Rain news: ಚಾರ್ಮಾಡಿ ಘಾಟಿಯಲ್ಲಿ ಮಳೆಗೆ ಸಿಲುಕಿಕೊಂಡ ನೂರಾರು ಪ್ರಯಾಣಿಕರು

CET Result
ಶಿಕ್ಷಣ2 hours ago

CET Result: ಅಧಿಕಾರಿಗಳ ಎಡವಟ್ಟಿನಿಂದ ವಿಳಂಬ; ಸಿಇಟಿ ಫಲಿತಾಂಶ ಯಾವಾಗ ಪ್ರಕಟವಾಗಬಹುದು?

Lok Sabha Election 2024 Akshay Kumar casts vote for the first time
ಬಾಲಿವುಡ್2 hours ago

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Ebrahim Raisi
ವಿದೇಶ2 hours ago

Ebrahim Raisi: ಇರಾನ್‌ ಅಧ್ಯಕ್ಷರಿದ್ದ ಹೆಲಿಕಾಪ್ಟರ್‌ ಪತ್ತೆ; ದುರ್ಘಟನಾ ಸ್ಥಳದ ವಿಡಿಯೋ ಲಭ್ಯ

Hair Conditioner
ಆರೋಗ್ಯ2 hours ago

Hair Conditioner: ರಾಸಾಯನಿಕ ಹೇರ್‌ ಕಂಡೀಷನರ್‌ ಬಿಡಿ; ಈ 5 ನೈಸರ್ಗಿಕ ಹೇರ್ ಕಂಡೀಷನರ್ ಬಳಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ20 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ21 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌