IPL 2023: Lucknow Supergiants collapse to a modest total against Rajasthan IPL 2023: ರಾಜಸ್ಥಾನ್​ ವಿರುದ್ಧ ಸಾಧಾರಣ ಮೊತ್ತಕ್ಕೆ ಕುಸಿದ ಲಕ್ನೋ ಸೂಪರ್​ಜೈಂಟ್ಸ್​ - Vistara News IPL 2023: ರಾಜಸ್ಥಾನ್​ ವಿರುದ್ಧ ಸಾಧಾರಣ ಮೊತ್ತಕ್ಕೆ ಕುಸಿದ ಲಕ್ನೋ ಸೂಪರ್​ಜೈಂಟ್ಸ್​

ಕ್ರಿಕೆಟ್

IPL 2023: ರಾಜಸ್ಥಾನ್​ ವಿರುದ್ಧ ಸಾಧಾರಣ ಮೊತ್ತಕ್ಕೆ ಕುಸಿದ ಲಕ್ನೋ ಸೂಪರ್​ಜೈಂಟ್ಸ್​

ರಾಜಸ್ಥಾನ್​ ರಾಯಲ್ಸ್ ವಿರುದ್ಧ ಮೊದಲು ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ಜೈಂಟ್ಸ್​ 154 ರನ್ ಗಳಿಸಿ ಸವಾಲೊಡ್ಡಿದೆ.​

VISTARANEWS.COM


on

IPL 2023: Lucknow Supergiants collapse to a modest total against Rajasthan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ರಾಜಸ್ಥಾನ್​ ರಾಯಲ್ಸ್​ ತಂಡದ ಗುಣಮಟ್ಟದ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಲಕ್ನೋ ಸೂಪರ್​ಜೈಂಟ್ಸ್ ಸಾಧಾರಣ ಮೊತ್ತ ಕಲೆಹಾಕಿದೆ. ರಾಜಸ್ಥಾನ್​ ಪರ ಆರ್​.ಅಶ್ವಿನ್​ 23 ರನ್​ಗೆ 2 ವಿಕೆಟ್​ ಕಿತ್ತು ಮಿಂಚಿದರೆ, ಲಕ್ನೋ ಪರ ಕೈಲ್​ ಮೇಯರ್ಸ್​(51) ಅರ್ಧಶತಕ ಬಾರಿಸಿದರು.

ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಲಕ್ನೋ ಸೂಪರ್​ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 154 ರನ್​ ಗಳಿಸಿದೆ. ಎದುರಾಳಿ ರಾಜಸ್ಥಾನ್​ ಗೆಲುವಿಗೆ 155 ರನ್​ ಬಾರಿಸಬೇಕಿದೆ.

2 ಜೀವದಾನ ಪಡೆದ ರಾಹುಲ್

ಇನಿಂಗ್ಸ್​ ಆರಂಭಿಸಿದ ರಾಹುಲ್​ ಮತ್ತು ಕೈಲ್​ ಮೇಯರ್ಸ್​ ಆರಂಭದ 3 ಓವರ್​ ನಿಧಾನಗತಿಯಲ್ಲಿ ಬ್ಯಾಟ್​ ಬೀಸಿದರು. ಇದೇ ವೇಳೆ ರಾಹುಲ್​ ಅವರಿಗೆ 2 ಜೀವದಾನ ಲಭಿಸಿತು. ಒಂದು ಕ್ಯಾಚ್​ 6 ರನ್​ ಗಳಿಸಿದ್ದ ವೇಳೆ ಯಶಸ್ವಿ ಜೈಸ್ವಾಲ್​ ಬಿಟ್ಟರೆ ಮತ್ತೊಂದು ಕ್ಯಾಚ್​ ಜೇಸನ್​ ಹೋಲ್ಡರ್ ಕೈ ಚೆಲ್ಲಿದರು. ಇದೇ ವೇಳೆ ಮೇಯರ್ಸ್​ಗೂ ಒಂದು ಜೀವದಾನ ಸಿಕ್ಕಿತು. ರನೌಟ್​ ಮಾಡುವ ಬರದಲ್ಲಿ ಚೆಂಡು ಕೈ ಸೇರುವ ಮುನ್ನವೇ ಅಶ್ವಿನ್​ ಅವರು​ ವಿಕೆಟ್​ಗೆ ಕೈ ತಾಗಿಸಿ ಮೇಯರ್ಸ್​ ಅವರನ್ನು ರನೌಟ್​ ಸಂಕಟದಿಂದ ಪಾರು ಮಾಡಿದರು.​ ಇದರ ಲಾಭವೆತ್ತಿದ ಉಭಯ ಆಟಗಾರರು ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಮುಂದಾದರು.

ಬಿರುಸಿನ ಬ್ಯಾಟಿಂಗ್​ ನಡೆಸುತ್ತಿದ್ದ ನಾಯಕ ರಾಹುಲ್​ಗೆ ಕ್ಯಾಚ್​ ಬಿಟ್ಟು ಜೀವದಾನ ನೀಡಿದ ಹೋಲ್ಡರ್​ ​ತಮ್ಮ ಓವರ್​ನಲ್ಲಿ ಪೆವಿಲಿಯನ್​ ದಾರಿ ತೋರಿಸಿದರು. ಈ ಮೂಲಕ ರಾಜಸ್ಥಾನ್​ಗೆ ಆರಂಭಿಕ ಮುನ್ನಡೆ ತಂದು ಕೊಟ್ಟರು. ಜತೆಗೆ ತಮ್ಮ ತಪ್ಪಿಗೆ ಈ ವಿಕೆಟ್​ ಪಡೆಯುವ ಮೂಲಕ ನ್ಯಾಯ ಒದಗಿಸಿದರು. ರಾಹುಲ್​ 32 ಎಸೆತಗಳಿಂದ 39 ರನ್​ ಗಳಿಸಿದರು. ಇದರಲ್ಲಿ ಒಂದು ಸಿಕ್ಸರ್​ ಮತ್ತು 4 ಬೌಂಡರಿ ಸಿಡಿಯಿತು. ಮೊದಲ ವಿಕೆಟ್​​ಗೆ ರಾಹುಲ್​ ಮತ್ತು ಮೇಯರ್ಸ್​ 82 ರನ್​ ಒಟ್ಟುಗೂಡಿಸಿದರು. ಈ ವಿಕೆಟ್​ ಪತನದ ಬಳಿಕ ಬ್ಯಾಟಿಂಗ್​ ಭಡ್ತಿ ಪಡೆದು ಆಡಲಿಳಿದ ಆಯುಷ್‌ ಬದೋನಿ ರಿವರ್ಸ್​ ಸ್ವೀಪ್​ ಮಾಡುವ ಬರದಲ್ಲಿ ಎಡವಿ ಬೌಲ್ಟ್​ಗೆ ವಿಕೆಟ್​ ಒಪ್ಪಿಸಿದರು. ಅವರ ಗಳಿಕೆ ಕೇವಲ ಒಂದು ರನ್​.

ಬ್ಯಾಟಿಂಗ್​ ಮರೆತ ಹೂಡಾ

ಕಳೆದ ಆವೃತ್ತಿಯಲ್ಲಿ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸುದ್ದಿಯಾಗಿದ್ದ ಹಾರ್ಡ್​ ಹಿಟ್ಟರ್​ ದೀಪಕ್​ ಹೂಡಾ ಅವರು ಈ ಆವೃತ್ತಿಯಲ್ಲಿ ಬ್ಯಾಟಿಂಗ್​ ಮರೆತವರಂತೆ ಆಡುತ್ತಿದ್ದಾರೆ. ಆಡಿದ 6 ಪಂದ್ಯಗಳಲ್ಲಿಯೂ ಸಿಂಗಲ್​ ಡಿಜಿಟ್​ಗೆ ಔಟಾಗುವ ಮೂಲಕ ಘೋರ ವೈಫಲ್ಯ ಕಂಡರು. ಈ ಪಂದ್ಯದಲ್ಲಿ ಕ್ರೀಸ್​ಗಿಳಿದೊಡನೆ ಒಂದು ಬೌಂಡರಿ ಬಾರಿಸಿದ್ದನ್ನು ಕಂಡಾಗ ದೊಡ್ಡ ಇನಿಂಗ್ಸ್​ ಕಟ್ಟಬಹುದು ಎಂದು ನಿರೀಕ್ಷೆ ಮಾಡಲಾಯಿತು. ಆದರೆ ಮುಂದಿನ ಎಸೆತದಲ್ಲಿ ವಿಕೆಟ್​ ಒಪ್ಪಿಸಿ ಎಲ್ಲ ನಿರೀಕ್ಷೆಗಳನ್ನು ಹುಸಿಯಾಗಿಸಿದರು.

ಇದನ್ನೂ ಓದಿ IPL 2023: ವಿರಾಟ್ ಅಂಕಲ್, ವಮಿಕಾ ಜತೆ ಡೇಟಿಂಗ್ ಹೋಗಬಹುದಾ? ಪುಟ್ಟ ಹುಡುಗನ ಮೆಸೇಜ್‌ಗೆ ನೆಟ್ಟಿಗರ ಆಕ್ರೋಶ

ಮತ್ತೊಂದು ಬದಿಯಲ್ಲಿ ಸಿಡಿದು ನಿಂತಿದ್ದ ಕೈಲ್​ ಮೇಯರ್ಸ್​ ಕೂಡ ಅರ್ದಶತಕ ಬಾರಿಸಿ ಅಶ್ವಿನ್​ ಅವರ ಸ್ಪಿನ್​ ಮ್ಯಾಜಿಕ್​ಗೆ ಕ್ಲೀನ್​ ಬೌಲ್ಡ್​ ಆದರು. ಈ ವೇಳೆ ತಂಡ 104ಕ್ಕೆ 4 ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮೇಯರ್ಸ್​ ಅವರು ಮೂರು ಸಿಕ್ಸರ್​ ಮತ್ತು ನಾಲ್ಕು ಬೌಂಡರಿ ನೆರವಿನಿಂದ 51 ರನ್​ ಗಳಿಸಿದರು.

ಅಂತಿಮ ಮೂರು ಓವರ್​ಗಳ ಆಟದಲ್ಲಿ ನಿಕೋಲಸ್​ ಪೂರನ್​ ಮತ್ತು ಮಾರ್ಕಸ್​ ಸ್ಟೋಯಿನಿಸ್​ ಅವರು ಸಿಡಿದು ನಿಂತು ರಾಜಸ್ಥಾನ್​ ಬೌಲರ್​ಗಳಿಗೆ ಕಾಡಿದರು. ಇವರ ಈ ಹೋರಾಟದ ನೆರವಿನಿಂದ ತಂಡ ಸ್ಪರ್ಧಾತ್ಮಕ ಮೊತ್ತ ದಾಖಲಿಸಿತು. ಪೂರನ್​ 28 ರನ್​ಗಳಿಸಿದರೆ, ಸ್ಟೋಯಿನಿಸ್​ 21 ರನ್​ ಬಾರಿಸಿದರು. ಟ್ರೆಂಟ್​ ಬೌಲ್ಟ್​​ ಅವರು 4 ಓವರ್​ ಎಸೆದು ಒಂದು ಮೇಡನ್​ ಸಹಿತ ಕೇವಲ 16 ರನ್​ ನೀಡಿ ಒಂದು ವಿಕೆಟ್​ ಕಿತ್ತರು. ಸಂದೀಪ್​ ಶರ್ಮ ಒಂದು ವಿಕೆಟ್​ ಪಡೆದರೂ ಕೊಂಚ ದುಬಾರಿಯಾಗಿ ಕಂಡುಬಂದರು. ಅವರು 32 ರನ್​ ಬಿಟ್ಟುಕೊಟ್ಟರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

IPL 2024 POINTS TABLE: ಕೆಕೆಆರ್​ ಗೆಲುವು ಸಾಧಿಸಿ 14 ಅಂಕದೊಂದಿಗೆ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಸದ್ಯ 2ನೇ ಸ್ಥಾನದಲ್ಲಿರುವ ಕೆಕೆಆರ್​ಗೆ ಇನ್ನು 4 ಪಂದ್ಯಗಳು ಬಾಕಿ ಉಳಿದಿವೆ. ಈ ಪೈಕಿ ಕನಿಷ್ಠ 1 ಪಂದ್ಯ ಗೆದ್ದರೂ ಪ್ಲೇ ಆಫ್​ ಪ್ರವೇಶಿಸಬಹುದು. ಇಂದು ನಡೆಯುವ ಆರ್​ಸಿಬಿ ಮತ್ತು ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿವೆ.

VISTARANEWS.COM


on

IPL 2024 POINTS TABLE
Koo

ಮುಂಬಯಿ: ಶುಕ್ರವಾರ ರಾತ್ರಿ ನಡೆದ ಐಪಿಎಲ್(IPL 2024)​ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(Mumbai Indians)​ ತಂಡ ತವರಿನಲ್ಲೇ ಕೆಕೆಆರ್(Kolkata Knight Riders)​ ವಿರುದ್ಧ 24 ರನ್​​ ಅಂತರದ ಸೋಲು ಕಂಡಿತು. ಈ ಸೋಲಿನಿಂದ ಮುಂಬೈಯ ಪ್ಲೇ ಆಫ್​ ಆಸೆ ಬಹುತೇಕ ಕಮರಿ ಹೋಗಿದೆ. ಅಂಕಪಟ್ಟಿಯಲ್ಲಿ(IPL 2024 POINTS TABLE) 9ನೇ ಸ್ಥಾನದಲ್ಲಿರುವ ಹಾರ್ದಿಕ್​ ಪಡೆಗೆ ಇನ್ನು ಮೂರು ಪಂದ್ಯಗಳು ಮಾತ್ರ ಬಾಕಿ ಉಳಿದಿದೆ. ಈ ಪಂದ್ಯ ಗೆದ್ದರೂ ಕೂಡ ಯಾವುದೇ ಲಾಭವಿಲ್ಲ.

ಕೆಕೆಆರ್​ ಗೆಲುವು ಸಾಧಿಸಿ 14 ಅಂಕದೊಂದಿಗೆ ಪ್ಲೇ ಆಫ್​ ಸನಿಹಕ್ಕೆ ಬಂದು ನಿಂತಿದೆ. ಸದ್ಯ 2ನೇ ಸ್ಥಾನದಲ್ಲಿರುವ ಕೆಕೆಆರ್​ಗೆ ಇನ್ನು 4 ಪಂದ್ಯಗಳು ಬಾಕಿ ಉಳಿದಿವೆ. ಈ ಪೈಕಿ ಕನಿಷ್ಠ 1 ಪಂದ್ಯ ಗೆದ್ದರೂ ಪ್ಲೇ ಆಫ್​ ಪ್ರವೇಶಿಸಬಹುದು. ಇಂದು ನಡೆಯುವ ಆರ್​ಸಿಬಿ ಮತ್ತು ಗುಜರಾತ್​ ಟೈಟಾನ್ಸ್​ ಮುಖಾಮುಖಿಯಾಗಲಿವೆ. ಈ ಪಂದ್ಯ ಉಭಯ ತಂಡಗಳಿಗೂ ಪ್ಲೇ ಆಫ್​ ಪ್ರವೇಶದ ನಿಟ್ಟಿನಲ್ಲಿ ಮಹತ್ವದ್ದಾಗಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​107314 (+1.098)
ಲಕ್ನೋ​​106412 (+0.094)
ಹೈದರಾಬಾದ್​106512 (+0.072)
ಚೆನ್ನೈ​105510 (+0.627)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ11386 (-0.356)
ಆರ್​ಸಿಬಿ10376 (-0.415)

ತವರಿನಲ್ಲೇ ಸೋಲಿನ ಮುಖಭಂಗ

ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಶರಣಾಗಿ ಸೋಲೊಪ್ಪಿಕೊಂಡಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

ಇದನ್ನೂ ಓದಿ IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

ಬ್ಯಾಟಿಂಗ್​ ಪೂರಕವಾಗಿದ್ದ ಟ್ರ್ಯಾಕ್​ನಲ್ಲಿ ಟಾಸ್​ ಸೋತು ಬ್ಯಾಟಿಂಗ್​ ನಡೆಸಿದ ಕೆಕೆಆರ್​ 57 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ಈ ವೇಳೆ ವೆಂಕಟೇಶ್ ಅಯ್ಯರ್ ಹಾಗೂ ಹಾಲಿ ಆವೃತ್ತಿಯಲ್ಲಿ ಮೊದಲ ಅವಕಾಶ ಪಡೆದ ಮನೀಶ್ ಪಾಂಡೆ 42 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರಿಬ್ಬರ ನೆರವಿನಿಂದ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಲು ಕೆಕೆಆರ್​ಗೆ ಸಾಧ್ಯವಾಯಿತು. ಅಂಗ್​ಕ್ರಿಶ್​ ರಘುವಂಶಿ 13 ರನ್ ಬಾರಿಸಿ ಕೆಕೆಆರ್​ ಪರ ಎರಡಂಕಿ ಮೊತ್ತ ದಾಟಿದ ಎರಡನೇ ಆಟಗಾರ ಎನಿಸಿಕೊಂಡರು. ಉಳಿದವರೆಲ್ಲರೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

Continue Reading

ಕ್ರಿಕೆಟ್

RCB vs GT: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ; ಮೆಟ್ರೋ ಸೇವೆ ವಿಸ್ತರಣೆ

RCB vs GT: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ 2024 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ಮೇ 4 ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ. ಜತೆಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದಲೂ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ಇಂದು (ಮೇ​ 4) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಗುಜರಾತ್​ ಟೈಟಾನ್ಸ್(Gujarat Titans)​ ವಿರುದ್ಧ​ಕಣಕ್ಕಿಳಿಯಲು ಸಜ್ಜಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್ 2024 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ಮೇ 4 ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಿದೆ. ಜತೆಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದಲೂ ಹಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ.

ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ


ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆ.

ಸಾರ್ವಜನಿಕ ವಾಹನಗಳ ನಿಲುಗಡೆ ಸ್ಥಳಗಳು


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಮೆಟ್ರೋ ಸೇವೆ


ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಪೇಪರ್‌ ಟಿಕೆಟ್‌ ಮಾರಾಟ


ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading

ಕ್ರೀಡೆ

RCB vs GT: ಆರ್​ಸಿಬಿ ಅಭಿಮಾನಿಗಳಿಗೆ ಇಂದು ಶೇ.99ರಷ್ಟು ನಿರಾಸೆ ಖಚಿತ; ಪಂದ್ಯ ನಡೆಯುವುದೇ ಅನುಮಾನ

RCB vs GT: ಬೆಂಗಳೂರು (Bengaluru Rains) ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ 2 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಅದು ಕೂಡ ಸಂಜೆಯ ವೇಳೆಯಲ್ಲಿ. ಹೀಗಾಗಿ ಇಂದು ಕೂಡ ಮಳೆಯ ಸಾಧ್ಯತೆ ಅಧಿಕವಾಗಿದೆ.

VISTARANEWS.COM


on

RCB vs GT
Koo

ಬೆಂಗಳೂರು: ಪ್ಲೇ ಆಫ್​ ರೇಸ್​ನ ಕ್ಷೀಣ ಅವಕಾಶ ಹೊಂದಿರುವ ಆರ್​ಸಿಬಿ ಇಂದು ತವರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ(RCB vs GT) ಗುಜರಾತ್​ ಟೈಟಾನ್ಸ್​ ವಿರುದ್ಧ ಪಂದ್ಯವನ್ನಾಡಲಿದೆ. ಆದರೆ ಈ ಪಂದ್ಯ ನಡೆಯುವುದೇ ಅನುಮಾನ ಎನ್ನುವಂತಿದೆ. ಇದಕ್ಕೆ ಕಾರಣ ಮಳೆ ಭೀತಿ.

ಹೌದು, ಬೆಂಗಳೂರು (Bengaluru Rains) ಸೇರಿದಂತೆ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ 2 ದಿನಗಳಿಂದ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಅದು ಕೂಡ ಸಂಜೆಯ ವೇಳೆಯಲ್ಲಿ. ಹೀಗಾಗಿ ಇಂದು ಕೂಡ ಮಳೆಯ ಸಾಧ್ಯತೆ ಅಧಿಕವಾಗಿದೆ.

ಇನ್ನೂ ಇದೆ ಪ್ಲೇ ಆಫ್​ ಅವಕಾಶ


ಸದ್ಯ ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನಿಯಾಗಿದ್ದರೂ ಕೂಡ ಆರ್​ಸಿಬಿಯ(Royal Challengers Bengaluru) ಪ್ಲೇ ಆಫ್​ ಬಾಗಿಲು ಇನ್ನೂ ಮುಚ್ಚಿಲ್ಲ. ಇನ್ನೂ ಕೂಡ ಆರ್​ಸಿಬಿಯ ಪ್ಲೇ ಆಫ್​ ಆಸೆ ಜೀವಂತವಾಗಿಯೇ ಇದೆ.

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ಮತ್ತು ಪವಾಡವೊಂದು ನಡೆದರೆ ಆರ್​ಸಿಬಿಗೆ ಪ್ಲೇ ಆಫ್​ ಟಿಕೆಟ್​ ಸಿಗಲಿದೆ. ಈಗಾಗಲೇ 10 ಪಂದ್ಯ ಆಡಿದ್ದು, 3 ಪಂದ್ಯ ಗೆದ್ದು, 7 ಪಂದ್ಯದಲ್ಲಿ ಸೋಲು ಕಂಡಿದೆ. 6 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 4 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಜತೆಗೆ ತನಗಿಂತ ಮೇಲಿರುವ ತಂಡಗಳು ಸತತ ಸೋಲು ಕಂಡರೆ ಕನಿಷ್ಠ 4ನೇ ಸ್ಥಾನಿಯಾಗಿ ಪ್ಲೇ ಆಫ್ ಗೇರುವ ಸಣ್ಣ ಅವಕಾಶವೊಂದಿದೆ. ಉಳಿದ 4 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಆರ್​ಸಿಬಿ ತವರಿನಲ್ಲಿ ಆಡಲಿದೆ. ಒಂದು ಪಂದ್ಯ ಹಾಲಿ ಚಾಂಪಿಯನ್​ ಚೆನ್ನೈ ವಿರುದ್ಧ. ಇದು ಆರ್​ಸಿಬಿಗೆ ಕೊನೆಯ ಲೀಗ್​ ಪಂದ್ಯವಾಗಿರಲಿದೆ. ಮೇ 18ರಂದು ಈ ಪಂದ್ಯ ನಡೆಯಲಿದೆ. ಒಂದೊಮ್ಮೆ ಇಂದು ನಡೆಯುವ ಪಂದ್ಯದಲ್ಲಿ ಆರ್​ಸಿಬಿ ಸೋತರೆ, ಅಥವಾ ಪಂದ್ಯ ರದ್ದಾದರೆ ಅಧಿಕೃತವಾಗಿ ಟೂರ್ನಿಯಿಂದ ಹೊರಬೀಳಲಿದೆ.

ಇದನ್ನೂ ಓದಿ IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

ಪಿಚ್​ ರಿಪೋರ್ಟ್​


ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. ಇದುವರೆಗೆ ಇಲ್ಲಿ 92 ಐಪಿಎಲ್​ ಪಂದ್ಯಗಳು ನಡೆದಿದ್ದು, 49 ಬಾರಿ ಚೇಸಿಂಗ್​ ನಡೆಸಿದ ತಂಡ ಜಯಶಾಲಿಯಾಗಿದೆ. 39 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ. ಆದರೆ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಆರ್​ಸಿಬಿಗೆ ಪ್ಲೇ ಆಫ್​ಗೆ ಹೋಗಬೇಕಿದ್ದರೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಗುಜರಾತ್​ ಅಡಗಾಲಿಕ್ಕಿತ್ತು. ಶುಭಮನ್​ ಗಿಲ್​ ಶತಕ ಬಾರಿಸಿ ಆರ್​ಸಿಬಿಗೆ ಸೋಲಿನ ರುಚಿ ತೋರಿಸಿದ್ದರು.

ಗುಜರಾತ್​ ಆಡಿದ 10 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 8 ಅಂಕ ಗಳಿಸಿ 8ನೇ ಸ್ಥಾನದಲ್ಲಿದೆ. ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಉಳಿದ 4 ಪಂದ್ಯಗಳನ್ನು ಕೂಡ ಗೆಲ್ಲಬೇಕಿದೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾದ ಒತ್ತಡ ಶುಭಮನ್​ ಗಿಲ್​ ಪಡೆಯ ಮೇಲಿದೆ.

ಉಭಯ ತಂಡಗಳು


ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್​ ಕೀಪರ್​), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಗುಜರಾತ್​: ವೃದ್ಧಿಮಾನ್ ಸಹಾ (ವಿಕೆಟ್​ ಕೀಪರ್​), ಶುಭಮನ್​ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ.

Continue Reading

ಪ್ರಮುಖ ಸುದ್ದಿ

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

IPL 2024 : ಇಲ್ಲಿನ ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಆಲ್​ಔಟ್ ಆಗಿ ಸೋತಿತು.

VISTARANEWS.COM


on

Koo

ಮುಂಬಯಿ: ಐಪಿಎಲ್​ 202ನೇ ಆವೃತ್ತಿಯಲ್ಲಿ (IPL 2024) ತವರು ನೆಲದಲ್ಲಿ ಮತ್ತೊಂದು ಬಾರಿ ವಿಫಲ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್​ ತಂಡ ಕೆಕೆಆರ್​ ವಿರುದ್ಧ 24 ರನ್​ಗಳ ಸೋಲಿಗೆ ಒಳಗಾಯಿತು. ಇದು ಪಾಂಡ್ಯ ನೇತೃತ್ವದ ಮುಂಬೈಗೆ ಹಾಲಿ ಆವೃತ್ತಿಯ ಎದುರಾದ ಸತತ ನಾಲ್ಕನೇ ಹಾಗೂ ಒಟ್ಟು ಎಂಟನೇ ಸೋಲಾಗಿದೆ. ಇದರೊಂದಿಗೆ 11 ಪಂದ್ಯಗಳ ಮುಕ್ತಾಯದ ಬಳಿಕ ಒಟ್ಟು 6 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿ ಉಳಿದುಕೊಂಡಿದೆ. ಅತ್ತ ಕೆಕೆಆರ್ ತಂಡ 10 ಪಂದ್ಯಗಳಲ್ಲಿ 7 ಗೆಲುವಿನೊಂದಿಗೆ 14 ಅಂಕಗಳನ್ನು ಸಂಪಾದಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿತು.

ಇಲ್ಲಿನ ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಆಲ್​ಔಟ್ ಆಗಿ ಸೋತಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

ಬೌಲಿಂಗ್​ಗೆ ಪೂರಕವಾಗಿದ್ದ ಟ್ರ್ಯಾಕ್​ನಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 57 ರನ್​ಗಳಿಗೆ ಅಗ್ರ 5 ವಿಕೆಟ್ ನಷ್ಟ ಮಾಡಿಕೊಂಡಿತು. ಹೀಗಾಗಿ ಹಿನ್ನಡೆಗೆ ಒಳಗಾಯಿತು. ಆದರೆ, ವೆಂಕಟೇಶ್ ಅಯ್ಯರ್ ಹಾಗೂ ಹಾಲಿ ಆವೃತ್ತಿಯಲ್ಲಿ ಮೊದಲ ಅವಕಾಶ ಪಡೆದ ಮನೀಶ್ ಪಾಂಡೆ 42 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರಿಬ್ಬರ ನೆರವಿನಿಂದ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಲು ಕೆಕೆಆರ್​ಗೆ ಸಾಧ್ಯವಾಯಿತು. ಅಂಗ್​ಕ್ರಿಶ್​ ರಘುವಂಶಿ 13 ರನ್ ಬಾರಿಸಿ ಕೆಕೆಆರ್​ ಪರ ಎರಡಂಕಿ ಮೊತ್ತ ದಾಟಿದ ಎರಡನೇ ಆಟಗಾರ ಎನಿಸಿಕೊಂಡರು. ಉಳಿದವರೆಲ್ಲರೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

ಇದನ್ನೂ ಓದಿ: Rinku Singh : ಕೊಹ್ಲಿಯ ಬ್ಯಾಟ್​ನಲ್ಲಿ ರಿಂಕು ಚೆನ್ನಾಗಿ ಆಡುತ್ತಿಲ್ಲ; ನೆಟ್ಟಿಗರಿಂದ ಟ್ರೋಲ್​!

ಮುಂಬಯಿ ಬ್ಯಾಟಿಂಗ್ ವೈಫಲ್ಯ

ರನ್ ಚೇಸ್ ಆರಂಭಿಸಿದ ಮುಂಬೈ ತಂಡದ ಪರಿಸ್ಥಿತಿಯೂ ಭಿನ್ನವಾಗಿರಲಿಲ್ಲ. 70 ರನ್​ಗೆ 5 ವಿಕೆಟ್ ನಷ್ಟ ಮಾಡಿಕೊಂಡು ಸಂಕಷ್ಟಕ್ಕೆ ಬಿತ್ತು. ಇಶಾನ್ ಕಿಶನ್​ (13), ರೋಹಿತ್ ಶರ್ಮಾ (11), ನಮನ್ ಧಿರ್​ (11), ತಿಲಕ್​ ವರ್ಮಾ (4), ನೇಹಲ್​ ವದೇರಾ (6) ಹಾಗೂ ಹಾರ್ದಿಕ್ ಪಾಂಡ್ಯ (1) ಬಂದ ವೇಗದಲ್ಲೇ ಪೆವಿಲಿಯನ್​ಗೆ ವಾಪಸಾದರು. ಆದರೆ, ಮಧ್ಯಮ ಕ್ರಮಾಂಕದದಲ್ಲಿ ತಳವೂರಿ ನಿಂತ ಸೂರ್ಯಕುಮಾರ್ ಯಾದವ್​ 35 ಎಸೆತಕ್ಕೆ 56 ರನ್ ಬಾರಿಸಿ ಗೆಲುವಿನ ಭರವಸೆ ಮೂಡಿಸಿದರು. ಕೊನೆಯಲ್ಲಿ ಟಿಮ್​ ಡೇವಿಡ್​ 24 ರನ್ ಬಾರಿಸಿ ವಿಶ್ವಾಸ ತಂದರು. ಆದರೆ, ಇನಿಂಗ್ಸ್​ನಲ್ಲಿ ಕೆಕೆಆರ್​ ಬೌಲರ್​ಗಳು ಮೇಲುಗೈ ಸಾಧಿಸಿದರು. ವರುಣ್ ಚಕ್ರವರ್ತಿ, ಸುನಿಲ್ ನರೈನ್​ ಹಾಗೂ ಆ್ಯಂಡ್ರೆ ರಸೆಲ್​ ತಲಾ 2 ವಿಕೆಟ್ ಪಡೆದರು.

Continue Reading
Advertisement
hd revanna prajwal revanna case
ಪ್ರಮುಖ ಸುದ್ದಿ10 mins ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ13 mins ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

IPL 2024 POINTS TABLE
ಕ್ರೀಡೆ31 mins ago

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

prajwal revanna case hassan MP home
ಕ್ರೈಂ39 mins ago

Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Robbery Case
ಕ್ರೈಂ45 mins ago

Robbery Case: ಕಾರು ತಪಾಸಣೆ ನೆಪದಲ್ಲಿ ಸುಲಿಗೆ; ಪೊಲೀಸರ ವಿರುದ್ಧವೇ ಕೇಳಿ ಬಂತು ಗಂಭೀರ ಆರೋಪ

Food Cleaning Tips Kannada
ಲೈಫ್‌ಸ್ಟೈಲ್49 mins ago

Food Cleaning Tips Kannada: ಹಣ್ಣು, ತರಕಾರಿಗಳಿಂದ ರಾಸಾಯನಿಕ ಅಂಶ ಸ್ವಚ್ಛಗೊಳಿಸುವ 5 ವಿಧಾನಗಳಿವು

Viral Video
ವೈರಲ್ ನ್ಯೂಸ್58 mins ago

Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

Salaar Movie Fails To Get Expected TRP Star Suvarna
ಸಿನಿಮಾ1 hour ago

Salaar Movie: ಕಿರುತೆರೆಯಲ್ಲಿ ‘ಸಲಾರ್’ಗೆ ಕಡಿಮೆ ಟಿಆರ್‌ಪಿ: ಪ್ಲಾಪ್‌ ಆಗಲು ಕಾರಣವೇನು?

RCB vs GT
ಕ್ರಿಕೆಟ್1 hour ago

RCB vs GT: ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ; ಮೆಟ್ರೋ ಸೇವೆ ವಿಸ್ತರಣೆ

Ajay Devgn 'Shaitaan' to stream on OTT
ಒಟಿಟಿ1 hour ago

Ajay Devgn: ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗ್ತಾ ಇದೆ ಅಜಯ್‌ ದೇವಗನ್‌ ʻಶೈತಾನ್ʼ ಸಿನಿಮಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ18 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌