Site icon Vistara News

IPL 2023: ಮುಂಬೈ ಇಂಡಿಯನ್ಸ್​ ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ಪಂದ್ಯದ ಪಿಚ್​ ರಿಪೋರ್ಟ್​

IPL 2023: Mumbai Indians vs Chennai Super Kings Match Pitch Report

IPL 2023: Mumbai Indians vs Chennai Super Kings Match Pitch Report

ಮುಂಬಯಿ: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ದೊಡ್ಡ ಮೊತ್ತ ಪೇರಿಸಿದರೂ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್(Mumbai Indians)​ ದ್ವಿತೀಯ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ತಂಡವನ್ನು ಎದುರಿಸಲಿದೆ. ತವರಿನಲ್ಲಿ ನಡೆಯುವ ಈ ಪಂದ್ಯದಲ್ಲಿ ರೋಹಿತ್​ ಪಡೆ ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಈ ಪಂದ್ಯದ ಪಿಚ್​ ರಿಪೋರ್ಟ್​ ಮತ್ತು ಸಂಭಾವ್ಯ ತಂಡಗಳ ಮಾಹಿತಿ ಇಂತಿದೆ.

ಪಿಚ್​ ರಿಪೋರ್ಟ್​

ಮುಂಬೈಯ ವಾಂಖೆಡೆ ಕ್ರೀಡಾಂಗಣವು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಇಲ್ಲಿ ನಡೆದ ಐಪಿಎಲ್​ನ ಬಹುತೇಕ ಪಂದ್ಯಗಳು ಹೈಸ್ಕೋರಿಂಗ್ ಆಗಿದೆ. 2017ರಲ್ಲಿ ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ 235 ರನ್​ ಬಾರಿಸಿತ್ತು. ಇದು ಇಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿದೆ. ಇನ್ನು ಚೇಸಿಂಗ್​ ನಡೆಸಿದ ತಂಡಗಳೇ ಹೆಚ್ಚು ಬಾರಿ ಮೇಲುಗೈ ಸಾಧಿಸಿದೆ. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು.

ಬಲಾಬಲದ ಲೆಕ್ಕಾಚಾರದಲ್ಲಿ ರೋಹಿತ್​ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್​ ತಂಡ ಮುಂದಿದೆ. ಚೆನ್ನೈ ಮತ್ತು ಮುಂಬೈ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ ಒಟ್ಟು 34 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈ ಇಂಡಿಯನ್ಸ್ 20 ಪಂದ್ಯಗಳನ್ನು ಗೆದ್ದಿದೆ, ಚೆನ್ನೈ ಸೂಪರ್ ಕಿಂಗ್ಸ್ 14 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ.

ಸಂಭಾವ್ಯ ತಂಡಗಳು

ಚೆನ್ನೈ ಸೂಪರ್​ ಕಿಂಗ್ಸ್​: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯಿನ್ ಅಲಿ, ಬೆನ್ ಸ್ಟೋಕ್ಸ್, ಅಂಬಾಟಿ ರಾಯುಡು, ರವೀಂದ್ರ ಜಡೇಜಾ, ಎಂ.ಎಸ್ ಧೋನಿ (ನಾಯಕ), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಆರ್‌. ಹಂಗರ್ಗೇಕರ್

ಮಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್.

Exit mobile version