ಮುಂಬಯಿ: ಕೋಲ್ಕತಾ ನೈಟ್ ರೇಡರ್ಸ್ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ನಡೆಸುವ ನಿರ್ಧಾರ ಕೈಗೊಂಡಿದೆ. ಈ ಪಂದ್ಯದಲ್ಲಿ ಖಾಯಂ ನಾಯಕ ರೋಹಿತ್ ಶರ್ಮ ಅವರು ಹೊರಗುಳಿದ ಕಾರಣ ಮುಂಬೈ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ.
ಟೀಮ್ ಇಂಡಿಯಾದ ಮಾಜಿ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಈ ಪಂದ್ಯದ ಮೂಲಕ ಐಪಿಎಲ್ಗೆ ಪದಾರ್ಪಣೆ ಮಾಡಿದರು.
ಮೊದಲೆರಡು ಪಂದ್ಯಗಳನ್ನು ಸೋತು, 3ನೇ ಪ್ರಯತ್ನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಕಂಡಿರುವ ಮುಂಬೈ ಈ ಪಂದ್ಯದಲ್ಲಿಯೂ ಗೆಲ್ಲುವ ಯೋಜನೆ ಹಾಕಿಕೊಂಡಿದೆ. ಮುಂಬೈಗೆ ಇದು ತವರಿನ ಪಂದ್ಯವಾದ ಕಾರಣ ಇದರ ಲಾಭವೂ ಇರಲಿದೆ. ಆದರೆ ಚೆನ್ನೈ ವಿರುದ್ಧ ತವರಿನಲ್ಲಿಯೇ ನಡೆದ ಪಂದ್ಯದಲ್ಲಿ ರೋಹಿತ್ ಪಡೆ ಸೋಲು ಕಂಡಿರುವುದನ್ನು ಮರೆಯುವಂತಿಲ್ಲ.
ಕೋಲ್ಕತಾ ನೈಟ್ ರೇಡರ್ಸ್ ಪ್ರಬಲವಾದ ಬ್ಯಾಟಿಂಗ್ ಸರದಿಯನ್ನು ಹೊಂದಿರುವ ತಂಡ. ಆದ್ದರಿಂದ ಈ ತಂಡವನ್ನು ಕಟ್ಟಿಹಾಕಲು ದೊಡ್ಡ ಮೊತ್ತವೇ ಬೇಕಿದೆ. ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ರಿಂಕು ಸಿಂಗ್ ಪಂದ್ಯದ ಗತಿಯನ್ನೇ ಬದಲಿಸಬಲ್ಲ ಅಪಾಯಕಾರಿ ಬ್ಯಾಟರ್ಗಳಾಗಿದ್ದಾರೆ. ಬೌಲಿಂಗ್ನಲ್ಲಿ ಸುನೀಲ್ ನಾರಾಯಣ್, ವರುಣ್ ಚಕ್ರವರ್ತಿ, ಸುಯಶ್ ಶರ್ಮಾ ಕೂಡ ಉತ್ತಮ ಲಯದಲ್ಲಿದ್ದಾರೆ.
ಪಿಚ್ ರಿಪೋರ್ಟ್
ಮುಂಬೈಯ ವಾಂಖೆಡೆ ಕ್ರೀಡಾಂಗಣವು ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಇಲ್ಲಿ ನಡೆದ ಐಪಿಎಲ್ನ ಬಹುತೇಕ ಪಂದ್ಯಗಳು ಹೈಸ್ಕೋರಿಂಗ್ ಆಗಿದೆ. 2017ರಲ್ಲಿ ಮುಂಬೈ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ 235 ರನ್ ಬಾರಿಸಿತ್ತು. ಇದು ಇಲ್ಲಿ ದಾಖಲಾದ ಅತ್ಯಧಿಕ ಮೊತ್ತವಾಗಿದೆ. ಇನ್ನು ಚೇಸಿಂಗ್ ನಡೆಸಿದ ತಂಡಗಳೇ ಹೆಚ್ಚು ಬಾರಿ ಮೇಲುಗೈ ಸಾಧಿಸಿದೆ.
ಕೊಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆ್ಯಂಡ್ರೆ ರಸೆಲ್, ಸುನಿಲ್ ನಾರಾಯಣ್, ಶಾರ್ದೂಲ್ ಠಾಕೂರ್, ಸುಯಶ್ ಶರ್ಮಾ, ಲಾಕಿ ಫರ್ಗ್ಯುಸನ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ.
ಇದನ್ನೂ ಓದಿ IPL 2023: ಕಳೆದ ಬಾರಿಯ ಫೈನಲಿಸ್ಟ್ಗಳ ಮಧ್ಯೆ ಹೈ ವೋಲ್ಟೇಜ್ ಪಂದ್ಯ
ಮಂಬೈ ಇಂಡಿಯನ್ಸ್: ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೋಫ್ರಾ ಆರ್ಚರ್, ಅರ್ಷದ್ ಖಾನ್. ಅರ್ಜುನ್ ತೆಂಡೂಲ್ಕರ್