ಪಾಟ್ನಾ: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಕ್ರಿಕೆಟಿಗರಾದ ರೋಹಿತ್ ಶರ್ಮ, ಹಾರ್ದಿಕ್ ಪಾಂಡ್ಯ ಮತ್ತು ನಟ ಆಮೀರ್ ಖಾನ್ ವಿರುದ್ಧ ಬಿಹಾರದ ಮುಜಾರ್ಪುರ್ ಮೂಲದ ಸಾಮಾಜಿಕ ಕಾರ್ಯಕರ್ತರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ದಾಖಲಿಸಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ಇವರು ಜೂಜಾಟಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಐಪಿಎಲ್ಗೆ ಸಂಬಂಧಿಸಿದ ವಿವಿಧ ಆನ್‌ಲೈನ್ ಆಟಗಳ ಮೂಲಕ ಈ ವ್ಯಕ್ತಿಗಳು ಜೂಜಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಜನರನ್ನು ಸಕ್ರಿಯವಾಗಿ ಪ್ರೋತ್ಸಾಹಿಸುತ್ತಿದ್ದಾರೆ ಎಂದು ಅರ್ಜಿದಾರರಾದ ತಮ್ಮನಾ ಹಶ್ಮಿ ಆರೋಪಿಸಿದ್ದಾರೆ.
ಇದನ್ನೂ ಓದಿ IPL 2023 : ನಾಯಕನಾಗಿದ್ದೂ ಆರ್ಆರ್ ತಂಡ ಪರ ಕಳಪೆ ದಾಖಲೆ ಬರೆದ ಸಂಜು ಸ್ಯಾಮ್ಸನ್
ಈ ಜಾಹಿರಾತಿನಲ್ಲಿ ದೂರಿನಲ್ಲಿ ಉಲ್ಲೇಖಿಸಲಾದ ವ್ಯಕ್ತಿಗಳು ಯುವಕರನ್ನು ಜೂಜಾಟಕ್ಕೆ ಆಕರ್ಷಿಸುವ ಮೂಲಕ ಅವರ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿದ್ದಾರೆ. ಇಂತಹ ಚಟುವಟಿಕೆಗಳು ಯುವಜನರ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಮುಖ್ಯ ಜ್ಯುಡೀಸಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದ್ದು, ಅದನ್ನು ಪರಿಶೀಲಿಸಿ ಹೆಚ್ಚಿನ ತನಿಖೆ ನಡೆಸುವ ನಿರೀಕ್ಷೆಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ವಿಚಾರಣೆ ಏಪ್ರಿಲ್ 22ರಂದು ನಡೆಯಲಿದೆ.
ಈಗಾಗಲೇ ಕೆಲ ಬೆಟ್ಟಿಂಗ್ ಆ್ಯಪ್ಗಳನ್ನು ಭಾರತದಲ್ಲಿ ಬ್ಯಾನ್ ಮಾಡಲಾಗಿದೆ. ಇದೀಗ ಈ ಆ್ಯಪ್ಗಳು ಕೂಡ ಮುಂದಿನ ದಿನಗಳಲ್ಲಿ ಬ್ಯಾನ್ ಆಗಲಿದೆಯಾ ಎಂದು ಕಾದು ನೋಡಬೇಕಿದೆ.