IPL 2023: ಟಾಸ್​ ಗೆದ್ದ ರಾಜಸ್ಥಾನ್​ ತಂಡದಿಂದ ಬೌಲಿಂಗ್​ ಆಯ್ಕೆ; ಪಂಜಾಬ್​ಗೆ ಬ್ಯಾಟಿಂಗ್​ ಆಹ್ವಾನ - Vistara News

ಕ್ರಿಕೆಟ್

IPL 2023: ಟಾಸ್​ ಗೆದ್ದ ರಾಜಸ್ಥಾನ್​ ತಂಡದಿಂದ ಬೌಲಿಂಗ್​ ಆಯ್ಕೆ; ಪಂಜಾಬ್​ಗೆ ಬ್ಯಾಟಿಂಗ್​ ಆಹ್ವಾನ

ಗುವಾಹಟಿಯ(Guwahati) ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ(Barsapara Cricket Stadium) ನಡೆಯುತ್ತಿರುವ ಮೊದಲ ಐಪಿಎಲ್‌ ಪಂದ್ಯವಾಗಿದೆ.

VISTARANEWS.COM


on

IPL 2023: Rajasthan team won the toss and chose to bowl; Invitation to bat for Punjab
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುವಾಹಟಿ: ಪಂಜಾಬ್​ ಕಿಂಗ್ಸ್​ ವಿರುದ್ಧದ ಐಪಿಎಲ್​ನ 8ನೇ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್​ ರಾಯಲ್ಸ್​ ತಂಡದ ನಾಯಕ ಸಂಜು ಸ್ಯಾಮ್ಸನ್​ ಬೌಲಿಂಗ್​ ಆಯ್ಕೆ ಮಾಡಿದ್ದಾರೆ.​ ಉಭಯ ತಂಡಗಳು ಆಡಿದ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿತ್ತು. ಆದರೆ ಈ ಪಂದ್ಯದಲ್ಲಿ ಒಂದು ತಂಡ ಸೋಲು ಕಾಣಲಿದೆ. ಈ ಮೂಲಕ ಟೂರ್ನಿಯಲ್ಲಿ ಮೊದಲ ಸೋಲು ಎದುರಿಸಲಿದೆ. ಆ ತಂಡ ಯಾವುದೆಂಬುವುದು ಈ ಪಂದ್ಯದ ತೀವ್ರ ಕೂತೂಹಲ. ಇದು ಗುವಾಹಟಿಯ(Guwahati) ಬರ್ಸಾಪರ ಕ್ರಿಕೆಟ್ ಸ್ಟೇಡಿಯಂನಲ್ಲಿ(Barsapara Cricket Stadium) ನಡೆಯುತ್ತಿರುವ ಮೊದಲ ಐಪಿಎಲ್‌ ಪಂದ್ಯವಾಗಿದೆ.

ಉಭಯ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದೆ. ಹೀಗಾಗಿ ಈ ಹೋರಾಟ ದೊಡ್ಡ ಮೊತ್ತಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಇದೆ. ರಾಯಲ್ಸ್ ತಂಡವು ಜಾಸ್​ ಬಟ್ಲರ್, ನಾಯಕ ಸಂಜು ಸ್ಯಾಮ್ಸನ್​, ಯಶಸ್ವಿ ಜೈಸ್ವಾಲ್ ಹೈದರಾಬಾದ್​ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ಮೂಲಕ ಗಮನ ಸೆಳೆದಿದ್ದರು. ಈ ಪಂದ್ಯದಲ್ಲಿಯೂ ಅವರ ಬ್ಯಾಟಿಂಗ್​ ಮೇಲೆ ತಂಡ ಹೆಚ್ಚಿನ ನಂಬಿಕೆ ಇರಿಸಿದೆ. ಬೌಲಿಂಗ್​ನಲ್ಲಿ ಅನುಭವಿ ಆರ್​. ಅಶ್ವಿನ್​ ಯಜುವೇಂದ್ರ ಚಹಲ್​​ ಮತ್ತು ಟ್ರೆಂಟ್ ಬೌಲ್ಟ್ ಅವರಂತಹ ವಿಕೆಟ್ ಟೇಕರ್ ಬೌಲರ್‌ಗಳ ಪಡೆಯೇ ಇದೆ. ಆದರೆ ಪಡಿಕ್ಕಲ್​ ಬ್ಯಾಟ್​ ಮಾತ್ರ ಸದ್ದು ಮಾಡುತ್ತಿಲ್ಲ.

ಶಿಖರ್​ ಧವನ್​ ಸಾರಥ್ಯದ ಪಂಜಾಬ್ ಕಿಂಗ್ಸ್ ಕೂಡ ಸಮರ್ಥವಾಗಿದೆ. ಭಾನುಕಾ ರಾಜಪಕ್ಸೆ, ಶಾರುಖ್ ಖಾನ್​ ಬ್ಯಾಟಿಂಗ್​ ವಿಭಾಗದ ಬಲವಾದರೆ, ಬೌಲಿಂಗ್​ನಲ್ಲಿ ಅರ್ಶ್​ದೀಪ್ ಸಿಂಗ್, ಇಂಗ್ಲೆಂಡ್​ನ ಸ್ಟಾರ್​ ಆಲ್​ರೌಂಡರ್​ ಸ್ಯಾಮ್​ ಕರನ್​​ ಕೂಡ ಉತ್ತಮ ಫಾರ್ಮ್​ನಲ್ಲಿದ್ದಾರೆ. ಇವರಿಗೆ ರಾಹುಲ್ ಚಹಾರ್ ಮತ್ತು ಸಿಕಂದರ್ ರಜಾ ಕೂಡ ಉತ್ತಮ ಸಾಥ್​ ನೀಡುತ್ತಿದ್ದಾರೆ.

ಇದನ್ನೂ ಓದಿ IPL 2023: ಗುಜರಾತ್ ಟೈಟಾನ್ಸ್ ಸೇರಿಕೊಂಡ ದಸುನ್ ಶನಕ

ಸಂಭಾವ್ಯ ತಂಡ

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜಾಸ್​ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ತ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆ.ಎಂ ಆಸಿಫ್, ಯಜುವೇಂದ್ರ ಚಹಲ್.

ಪಂಜಾಬ್ ಕಿಂಗ್ಸ್ : ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಸಿಕಂದರ್ ರಜಾ, ಸ್ಯಾಮ್ ಕರನ್​, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಹರ್, ಅರ್ಶ್​ದೀಪ್ ಸಿಂಗ್, ಕಗಿಸೊ ರಬಾಡ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

IND vs USA: ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್​ ಈ ಪಂದ್ಯದಲ್ಲಿ 4 ಓವರ್​ ಎಸೆದು ಕೇವಲ 9 ರನ್​ಗೆ 4 ವಿಕೆಟ್​ ಕಿತ್ತು ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಜತೆಗೆ ಟಿ20 ವಿಶ್ವಕಪ್​ನಲ್ಲಿ ಭಾರತ ಪರ ಶ್ರೇಷ್ಠ ಬೌಲಿಂಗ್​ ನಡೆಸಿದ ಆಟಗಾರ ಎನ್ನುವ ಹಿರಿಮೆಗೂ ಪಾತ್ರರಾದರು.

VISTARANEWS.COM


on

IND vs USA
Koo

ನ್ಯೂಯಾರ್ಕ್​: ಎಡಗೈ ವೇಗಿ ಅರ್ಶದೀಪ್​ ಸಿಂಗ್​(9ಕ್ಕೆ 4 ವಿಕೆಟ್​) ಅವರ ಘಾತಕ ಬೌಲಿಂಗ್​ ದಾಳಿ ಮತ್ತು ಸೂರ್ಯಕುಮಾರ್​ ಯಾದವ್(50*) ಹಾಗೂ ಶಿವಂ ದುಬೆ(31*) ಜೋಡಿ​ಯ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ಅಮೆರಿಕ(IND vs USA) ವಿರುದ್ಧ ಭಾರತ 7 ವಿಕೆಟ್​ಗಳ ಗೆಲುವು ಸಾಧಿಸಿದೆ. ಜತೆಗೆ ಈ ಗೆಲುವಿನೊಂದಿಗೆ ‘ಎ’ ವಿಭಾಗದಿಂದ ಮೊದಲ ತಂಡವಾಗಿ ಸೂಪರ್​-8 ಪ್ರವೇಶ ಪಡೆದಿದೆ.

ಇಲ್ಲಿನ ನಾಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಅಮೆರಿಕ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗೆ 110 ರನ್​ ಬಾರಿಸಿತು. ಜವಾಬಿತ್ತ ಭಾರತ ಈ ಸಣ್ಣ ಮೊತ್ತವನ್ನು 18.2 ಓವರ್​ ಎದುರಿಸಿ 3 ವಿಕೆಟ್​ ಕಳೆದುಕೊಂಡು 111 ರನ್​ ಬಾರಿಸಿ ಗೆಲುವಿನ ದಡ ಸೇರಿತು.

ಸೂರ್ಯ-ದುಬೆ ಆಸರೆ


ಚೇಸಿಂಗ್​ ವೇಳೆ ಭಾರತ ಕೂಡ ಅಮೆರಿಕದಂತೆ ಆರಂಭಿಕ ಆಘಾತ ಎದುರಿಸಿತು. ವಿರಾಟ್​ ಕೊಹ್ಲಿ(0) ಮತ್ತು ರೋಹಿತ್​ ಶರ್ಮ(3) ರನ್​ ಗಳಿಸಿ ವಿಕೆಟ್​ ಕೈಚೆಲ್ಲಿದರು. ಬಳಿಕ ಬಂದ ಪಂತ್​ ಕೂಡ ಬಡಬಡನೆ ಒಂದು ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ 18 ರನ್​ಗೆ ಆಟ ಮುಗಿಸಿದರು. ಪಾಕ್​ ಮೂಲದ ಅಲಿ ಖಾನ್​ ಎಸೆತಕ್ಕೆ ಕ್ಲೀನ್ ಬೌಲ್ಡ್​ ಆದರು. ಅಲ್ಪ ಮೊತ್ತಕ್ಕೆ ಮೂರು ವಿಕೆಟ್​ ಕಳೆದುಕೊಂಡ ಭಾರತ ಒಂದು ಹಂತದಲ್ಲಿ ಈ ಮೊತ್ತವನ್ನು ಬಾರಿಸಲು ಸಾಧ್ಯವೇ ಎಂಬ ಅನುಮಾನ ಕೂಡ ಕಾಡಲಾರಂಭಿಸಿತು. ಆದರೆ, ಹಾರ್ಡ್​ ಹಿಟ್ಟರ್ ಸೂರ್ಯಕುಮಾರ್​ ಯಾದವ್​ ಯಾವುದೇ ಅಪಾಯಕಾರಿ ಹೊಡೆತಗಳಿಗೆ ಮುಂದಾಗದೆ ಸಮಯೋಚಿತ ಬ್ಯಾಟಿಂಗ್​ ನಡೆಸಿ ತಂಡಕ್ಕೆ ನೆರವಾದರು. ಇವರಿಗೆ ಮತ್ತೊಂದು ತುದಿಯಲ್ಲಿ ಶಿವಂ ದುಬೆ ಕೂಡ ಉತ್ತಮ ಸಾಥ್​ ನೀಡಿದರು.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನಿರೀಕ್ಷಿತ ಬ್ಯಾಟಿಂಗ್​ ನಡೆಸಲು ವಿಫಲವಾಗಿದ್ದ ಸೂರ್ಯಕುಮಾರ್​ ಮತ್ತು ದುಬೆ ಈ ಪಂದ್ಯದಲ್ಲಿ ಉತ್ತಮ ಜತೆಯಾಟ ನಡೆಸುವ ಮೂಲಕ ಗಮನಸೆಳೆದರು. ಗೆಲುವಿಗೆ 20 ರನ್​ ಬೇಕಿದ್ದಾಗ ಸೂರ್ಯಕುಮಾರ್​ ತಮ್ಮ ಎಂದಿನ ಶೈಲಿಯಾದ ಸ್ಫೋಟಕ ಬ್ಯಾಟಿಂಗ್​ಗೆ ಒಗ್ಗಿಕೊಂಡರು. ಸತತ ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ ನೆರದಿದ್ದ ಪ್ರೇಕ್ಷರಕರಿಗೆ ಕೊನೆಯ ಕ್ಷಣದಲ್ಲಿ ಮನರಂಜನೆ ನೀಡಿದರು. ಜತೆಗೆ ಅರ್ಧಶತಕ ಬಾರಿಸಿ ಮಿಂಚಿದರು. ದುಬೆ ಮತ್ತು ಸೂರ್ಯ ಜೋಡಿ 4 ವಿಕೆಟ್​ಗೆ ಅಜೇಯ 72 ರನ್​ ಒಟ್ಟುಗೂಡಿಸಿತು. ಸೂರ್ಯಕುಮಾರ್​ 49 ಎಸೆತ ಎದುರಿಸಿ ತಲಾ 2 ಬೌಂಡರಿ ಮತ್ತು ಸಿಕ್ಸರ್​ ಬಾರಿಸಿ ಭರ್ತಿ 50 ರನ್​ ಗಳಿಸಿದರೆ, ದುಬೆ 35 ಎಸೆತಗಳಿಂದ 31 ರನ್​ ಬಾರಿಸಿದರು.

ಕೊಹ್ಲಿ ಮೊದಲ ಗೋಲ್ಡನ್​ ಡಕ್​


ಐರ್ಲೆಂಡ್​ ಮತ್ತು ಪಾಕಿಸ್ತಾನ ವಿರುದ್ಧ ಬ್ಯಾಟಿಂಗ್​ ವೈಫಲ್ಯ ಕಂಡಿದ್ದ ಕೊಹ್ಲಿ ಈ ಪಂದ್ಯದಲ್ಲಿ ಗೋಲ್ಡನ್​ ಡಕ್​ ಸಂಕಟ್ಟಕ್ಕೆ ಸಿಲುಕಿದರು. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಇದು ಕೊಹ್ಲಿಯ ಮೊದಲ ಗೋಲ್ಡನ್​ ಡಕ್​. ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ನಲ್ಲಿ ಶ್ರೇಷ್ಠ ಬ್ಯಾಟಿಂಗ್​ ಮೂಲಕ ಟೂರ್ನಿಯ ಗರಿಷ್ಠ ಸ್ಕೋರರ್​ ಆಗಿದ್ದ ಕೊಹ್ಲಿ ವಿಶ್ವಕಪ್​ ಟೂರ್ನಿಯಲ್ಲಿ ಎಡವುತ್ತಿರುವುದು ನಿಜಕ್ಕೂ ಅವರ ಅಭಿಮಾನಿಗಳಿಗೆ ಬೇಸರ ಉಂಟುಮಾಡಿದೆ.

ಪವರ್​ ಪ್ಲೇ ಬಳಿಕ ಚೇತರಿಕೆ ಕಂಡ ಅಮೆರಿಕ


ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಅಮೆರಿಕ ತಂಡ ಭಾರತದ ಬಿಗು ಬೌಲಿಂಗ್​ ದಾಳಿಗೆ ತತ್ತರಿಸಿತು. ಅರ್ಶದೀಪ್ ಸಿಂಗ್​ ಮೊದಲ ಎಸೆತದಲ್ಲೆ ವಿಕೆಟ್​ ಕೆಡವಿದರು. ಮುಂದಿನ ಓವರನಲ್ಲಿ ಮತ್ತೊಂದು ವಿಕೆಟ್​ ಬೇಟೆಯಾಡಿ ಅವಳಿ ಆಘಾತವಿಕ್ಕಿದರು. 3 ರನ್​ಗೆ 2 ವಿಕೆಟ್​ ಕಳೆದುಕೊಂಡ ಅಮೆರಿಕ ಪವರ್​ ಪ್ಲೇಯಲ್ಲಿ ಕೇವಲ 18 ರನ್​ ಮಾತ್ರ ಗಳಿಸಿತು. ಇದು ಟಿ20 ವಿಶ್ವಕಪ್​ ಟೂರ್ನಿಯ ಪವರ್​ ಪ್ಲೇಯಲ್ಲಿ ದಾಖಲಾದ ಕನಿಷ್ಠ ಮೊತ್ತದ 7ನೇ ನಿದರ್ಶನ. 2014ರಲ್ಲಿ ನಡೆದಿದ್ದ ಟೂರ್ನಿಯಲ್ಲಿ ಪಾಕಿಸ್ತಾನ ತಂಡ ವೆಸ್ಟ್​ ಇಂಡೀಸ್​ ವಿರುದ್ಧ 4 ವಿಕೆಟ್​ಗೆ 13 ರನ್​ ಗಳಿಸಿದ್ದು ಸದ್ಯ ಕನಿಷ್ಠ ಮೊತ್ತದ ದಾಖಲೆಯಾಗಿಯೇ ಉಳಿದಿದೆ.

ಇದನ್ನೂ ಓದಿ Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

ಪವರ್​ ಪ್ಲೇ ಬಳಿಕ ಚೇತರಿಕೆ ಕಂಡ ಅಮೆರಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತುಕೊಟ್ಟಿತು. ಅನುಭವಿ ಬೌಲರ್​ಗಳಾದ ಜಸ್​ಪ್ರೀತ್​ ಬುಮ್ರಾ ಮತ್ತು ಮೊಹಮ್ಮದ್​ ಸಿರಾಜ್​ ಅವರನ್ನು ಟಾರ್ಗೆಟ್​ ಮಾಡಿ ಸರಿಯಾಗಿ ದಂಡಿಸಿದರು. ಇಬ್ಬರು ನಾಲ್ಕು ಓವರ್​ ಎಸೆದು ತಲಾ 25 ರನ್​ ಬಿಟ್ಟುಕೊಟ್ಟು ವಿಕೆಟ್​ ಲೆಸ್​ ಎನಿಸಿಕೊಂಡರು. ಟೂರ್ನಿಯಲ್ಲಿ ಮೊದಲ ಬಾರಿಗೆ ಓವರ್​ ನಡೆಸಿದ ಶಿವಂ ದುಬೆ ಒಂದೇ ಓವರ್​ಗೆ 11 ರನ್​ ಚಚ್ಚಿಸಿಕೊಂಡರು. ಅಚ್ಚರಿ ಎಂದರೆ ಅನುಭವಿ ಮತ್ತು ಹಿರಿಯ ಸ್ಪಿನ್ನರ್​ ರವೀಂದ್ರ ಜಡೇಜಾಗೆ ಈ ಪಂದ್ಯದಲ್ಲಿ ಓವರ್​ ನೀಡಲೇ ಇಲ್ಲ. ಹಾರ್ದಿಕ್​ ಪಾಂಡ್ಯ ನಾಲ್ಕು ಓವರ್​ ಎಸೆದು ಒಂದು ಮೇಡನ್​ ಸಹಿತ 14 ರನ್​ ವೆಚ್ಚದಲ್ಲಿ 2 ವಿಕೆಟ್​ ಕಿತ್ತರು.

ಸ್ಟೀವನ್ ಟೇಲರ್(24) ಮತ್ತು ಎನ್. ಆರ್ ಕುಮಾರ್(27) ರನ್​ ಬಾರಿಸಿ ತಂಡದ ಪರ ಅತ್ಯಧಿಕ ರನ್​ ಕಲೆ ಹಾಕಿದ ಬ್ಯಾಟರ್​ ಎನಿಸಿಕೊಂಡರು. ನ್ಯೂಜಿಲ್ಯಾಂಡ್​ನ ಮಾಜಿ ಆಟಗಾರ ಕೋರಿ ಆ್ಯಂಡರ್ಸನ್​ ತಲಾ 1 ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ 15 ರನ್​ಗೆ ಆಟಮುಗಿಸಿದರು. ಪಂದ್ಯಕ್ಕೂ ಮುನ್ನ ಭಾರತ ವಿರುದ್ಧ ಸ್ಫೋಟಕ ಬ್ಯಾಟಿಂಗ್​ ನಡೆಸುವುದಾಗಿ ಹೇಳಿದ್ದ ನಾಯಕ ಆ್ಯರೋನ್​ ಜೋನ್ಸ್​ ಬರೋಬ್ಬರಿ 22 ಎಸೆತ ಎದುರಿಸಿ ಕೇವಲ 11 ರನ್​ ಗಳಿಸಿ ವಿಫಲರಾದರು.

ಅರ್ಶದೀಪ್​ ಜೀವನಶ್ರೇಷ್ಠ ಬೌಲಿಂಗ್​


ಎಡಗೈ ವೇಗಿ ಅರ್ಶ​ದೀಪ್​ ಸಿಂಗ್​ ಈ ಪಂದ್ಯದಲ್ಲಿ 4 ಓವರ್​ ಎಸೆದು ಕೇವಲ 9 ರನ್​ಗೆ 4 ವಿಕೆಟ್​ ಕಿತ್ತು ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಜತೆಗೆ ಟಿ20 ವಿಶ್ವಕಪ್​ನಲ್ಲಿ ಭಾರತ ಪರ ಶ್ರೇಷ್ಠ ಬೌಲಿಂಗ್​ ನಡೆಸಿದ ಆಟಗಾರ ಎನ್ನುವ ಹಿರಿಮೆಗೂ ಪಾತ್ರರಾದರು. ಇದಕ್ಕೂ ಮುನ್ನ ಈ ದಾಖಲೆ ಅಶ್ವಿನ್​ ಹೆಸರಿನಲ್ಲಿತ್ತು. ಅಶ್ವಿನ್​ ಅವರು 2014ರ ಟೂರ್ನಿಯಲ್ಲಿ 11ರನ್​ಗೆ 4 ವಿಕೆಟ್​ ಕೆಡವಿದ್ದರು.

Continue Reading

ಕ್ರೀಡೆ

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Virat Kohli: ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಖ್ಯಾತಿ ಹೊಂದಿರುವ ಟೀಮ್​ ಇಂಡಿಯಾದ ವಿರಾಟ್​ ಕೊಹ್ಲಿ(Virat Kohli) ವಿಶ್ವಕಪ್​ ಟೂರ್ನಿಯಲ್ಲಿ(T20 World Cup) ಇದೇ ಮೊದಲ ಬಾರಿಗೆ ಗೋಲ್ಡನ್​ ಡಕ್(VIRAT KOHLI DUCK)​ ಆದ ಕೆಟ್ಟ ದಾಖಲೆಯನ್ನು ಬರೆದಿದ್ದಾರೆ. ಇದು ಮಾತ್ರವಲ್ಲದೆ ಈ ಬಾರಿಯ ಟೂರ್ನಿಯಲ್ಲಿ ಸಂಪೂರ್ಣ ಬ್ಯಾಟಿಂಗ್​ ವೈಫಲ್ಯ ಕಂಡಿದ್ದಾರೆ.

ಕಳೆದ ತಿಂಗಳು ಮುಕ್ತಾಯ ಕಂಡಿದ್ದ ಐಪಿಎಲ್​ ಟೂರ್ನಿಯಲ್ಲಿ 700ಕ್ಕೂ ಅಧಿಕ ರನ್​ ಗಳಿಸಿ ಟೂರ್ನಿಯಲ್ಲೇ ಗರಿಷ್ಠ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದ ಕೊಹ್ಲಿಯ ಮೇಲೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿಯೂ ಭಾರೀ ನಿರೀಕ್ಷೆ ಇಡಲಾಗಿತ್ತು. ಆದರೆ ಕೊಹ್ಲಿ ಕಳಪೆ ಬ್ಯಾಟಿಂಗ್​ ಮೂಲಕ ಈ ನಿರೀಕ್ಷೆಯನ್ನು ಹುಸಿಗೊಳಿಸಿದ್ದಾರೆ. 1, 4,0 ಇದು ಕೊಹ್ಲಿಯ ಈ ಬಾರಿಯ ಸ್ಕೋರ್​ ಆಗಿದೆ.

ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಾಗಿಲ್ಲ ಹೀಗಾಗಿ ಅವರನ್ನು ಆಯ್ಕೆ ಮಾಡುವುದು ಅನುಮಾನ ಎನ್ನಲಾಗಿತ್ತು. ಆದರೆ, ಸ್ಟಾರ್​ ಆಟಗಾರನನ್ನು ಕೈ ಬಿಟ್ಟರೆ ಬಿಸಿಸಿಐ ವಿರುದ್ಧ ಭಾರೀ ಟೀಕೆ ಮತ್ತು ವಿರೋಧ ವ್ಯಕ್ತವಾಗುವುದು ಎನ್ನುವ ನಿಟ್ಟಿನಲ್ಲಿ ಅವರಿಗೆ ಅವಕಾಶ ನೀಡಲಾಗಿತ್ತು. ಅಂದು ಊಹೆ ಮಾಡಿದಂತೆ ಇದೀಗ ಕೊಹ್ಲಿ ನಿಧಾನಗತಿಯ ಪಿಚ್​ನಲ್ಲಿ ರನ್​ ಗಳಿಸಲು ಪರದಾಡುತ್ತಿದ್ದಾರೆ.

ಇದನ್ನೂ ಓದಿ ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರನ್ನು ಎಂದಿನಂತೆ ದ್ವಿತೀಯ ಕ್ರಮಾಂಕದಲ್ಲಿಯೇ ಆಡಿಸುವುದು ಸೋಕ್ತ ಎನ್ನುವಂತಿದೆ.

ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ


ನೂತನ ಟಿ20 ಶ್ರೇಯಾಂಕದಲ್ಲಿ(ICC T20 Rankings) ಭಾರತ ತಂಡ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಆದರೆ, ಭಾರತದ ಬದ್ಧ ಎದುರಾಳಿ ಪಾಕಿಸ್ತಾನ 7ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಇಂಗ್ಲೆಂಡ್​ ವಿರುದ್ಧದ ಟಿ20 ಸರಣಿ ಸೋಲು ಮತ್ತು ಪ್ರಸ್ತುತ ಸಾಗುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದೇ ಪಾಕ್​ ತಂಡದ ಶ್ರೇಯಾಂಕ ಕುಸಿತಕ್ಕೆ ಕಾರಣ.

ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್​ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್​ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್​ 241 ರೇಟಿಂಗ್​ ಅಂಕ ಹೊಂದಿದೆ.

Continue Reading

ಕ್ರೀಡೆ

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

ICC T20 Rankings: ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್​ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್​ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್​ 241 ರೇಟಿಂಗ್​ ಅಂಕ ಹೊಂದಿದೆ.

VISTARANEWS.COM


on

ICC T20 Rankings
Koo

ದುಬೈ: ನೂತನ ಟಿ20 ಶ್ರೇಯಾಂಕದಲ್ಲಿ(ICC T20 Rankings) ಭಾರತ ತಂಡ ಮೊದಲ ಸ್ಥಾನದಲ್ಲೇ ಮುಂದುವರಿದಿದೆ. ಆದರೆ, ಭಾರತದ ಬದ್ಧ ಎದುರಾಳಿ ಪಾಕಿಸ್ತಾನ 7ನೇ ಸ್ಥಾನಕ್ಕೆ ಕುಸಿದಿದೆ. ಕಳೆದ ಇಂಗ್ಲೆಂಡ್​ ವಿರುದ್ಧದ ಟಿ20 ಸರಣಿ ಸೋಲು ಮತ್ತು ಪ್ರಸ್ತುತ ಸಾಗುತ್ತಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿದ್ದೇ ಪಾಕ್​ ತಂಡದ ಶ್ರೇಯಾಂಕ ಕುಸಿತಕ್ಕೆ ಕಾರಣ.

ಭಾರತ ಇದುವರೆಗೆ 49 ಪಂದ್ಯ ಆಡಿ 265 ರೇಟಿಂಗ್​ ಅಂಕದೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 259 ರೇಟಿಂಗ್​ ಅಂದೊಂದಿಗೆ ದ್ವಿತೀಯ ಸ್ಥಾನಿಯಾಗಿದೆ. ಇಂಗ್ಲೆಂಡ್​ ಮತ್ತು ವೆಸ್ಟ್​ ಇಂಡೀಸ್​ ಕ್ರಮವಾಗಿ 3 ಮತ್ತು ನಾಲ್ಕನೇ ಸ್ಥಾನಿಯಾಗಿದೆ. 7ನೇ ಸ್ಥಾನಿಯಾಗಿರುವ ಪಾಕ್​ 241 ರೇಟಿಂಗ್​ ಅಂಕ ಹೊಂದಿದೆ.

ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಪಾಕ್​ ಆಡಿದ ಮೂರು ಪಂದ್ಯಗಳಲ್ಲಿ ಕೇವಲ 2 ಪಂದ್ಯ ಮಾತ್ರ ಗೆದ್ದಿದೆ. ಅಮೆರಿಕ ಮತ್ತು ಭಾರತ ಇನ್ನುಳಿದ ಪಂದ್ಯದಲ್ಲಿ ಗೆದ್ದರೆ ಪಾಕ್​ ಟೂರ್ನಿಯಿಂದ ಹೊರಬೀಳಲಿದೆ. ಟೂರ್ನಿಗೂ ಮುನ್ನ ಮಿಲಿಟರಿ ಪಡೆಯೊಂದಿಗೆ ಫಿಟ್​ನೆಸ್​ ತರಬೇತಿ ಪಡೆದು ಬಂದರೂ ಕೂಡ ಪಾಕ್​ ತಂಡದ ಕಳಪೆ ಪ್ರದರ್ಶನ ಮಾತ್ರ ಬದಲಾಗಲಿಲ್ಲ.

ಅಗ್ರ ಶ್ರೇಯಾಂಕ ಪಟ್ಟಿಯ 10 ತಂಡಗಳು

ತಂಡರೇಟಿಂಗ್​ ಅಂಕ
ಭಾರತ265
ಆಸ್ಟ್ರೇಲಿಯಾ258
ಇಂಗ್ಲೆಂಡ್​254
ವೆಸ್ಟ್​ ಇಂಡೀಸ್​253
ನ್ಯೂಜಿಲ್ಯಾಂಡ್​248
ದಕ್ಷಿಣ ಆಫ್ರಿಕಾ247
ಪಾಕಿಸ್ತಾನ241
ಶ್ರೀಲಂಕಾ230
ಬಾಂಗ್ಲಾದೇಶ226
ಅಫಘಾನಿಸ್ತಾನ220

ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಸೂರ್ಯಕುಮಾರ್​ ಯಾದವ್​ 837 ರೇಟಿಂಗ್​ ಅಂಕದೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇಂಗ್ಲೆಂಡ್​ನ ಫಿಲ್​ ಸಾಲ್ಟ್​(800) 2ನೇ ಸ್ಥಾನಿಯಾಗಿದ್ದಾರೆ. ಮೂರನೇ ಸ್ಥಾನದಲ್ಲಿ ಬಾಬರ್​ ಅಜಂ(756) ಮತ್ತು 4ನೇ ಸ್ಥಾನಿಯಾಗಿ ಮೊಹಮ್ಮದ್​ ರಿಜ್ವಾನ್​(752) ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ IND vs PAK: ಟ್ರ್ಯಾಕ್ಟರ್ ಮಾರಿ ಭಾರತ-ಪಾಕ್​ ಪಂದ್ಯ ವೀಕ್ಷಿಸಿ ಕಣ್ಣೀರು ಹಾಕಿದ ಅಭಿಮಾನಿ

ಪಾಕ್​ ಆಟಗಾರನಿಗೆ ‘ನಾಲಾಯಕ್’ ಎಂದ ಹರ್ಭಜನ್​ ಸಿಂಗ್

ಮುಂಬಯಿ: ಭಾರತ ಮತ್ತು ಪಾಕ್​(IND vs PAK) ಪಂದ್ಯದ ವೇಳೆ ಸಿಕ್ಖ್ ಸಮುದಾಯವನ್ನು ಅವಹೇಳನ ಮಾಡುವ ರೀತಿಯಲ್ಲಿ ಜನಾಂಗೀಯ ನಿಂದನೆ ಮಾಡಿ ಬಳಿಕ ಕ್ಷಮೆಯಾಚಿಸಿದ್ದ ಪಾಕಿಸ್ತಾನದ ಮಾಜಿ ಆಟಗಾರ ಕಮ್ರಾನ್​ ಅಕ್ಮಲ್(Kamran Akmal) ವಿರುದ್ಧ ಹರ್ಭಜನ್​ ಸಿಂಗ್(Harbhajan Singh) ಮತ್ತೆ ಕಿಡಿ ಕಾರಿದ್ದಾರೆ. ನಿನೋಬ್ಬ ನಾಲಾಯಕ್(Nalaayak)​ ಎಂದು ಹೇಳಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಎಎನ್​ಐ ಜತೆಗಿನ ಸಂದರ್ಶನದಲ್ಲಿ ಮಾತನಾಡುವ ವೇಳೆ ಹರ್ಭಜನ್​ ಸಿಂಗ್ ಅವರು ಕಮ್ರಾನ್​ ಅಕ್ಮಲ್​ ಒಬ್ಬ ನಾಲಾಯಕ್​, ಈತನಿಂದ ಮಾತ್ರ ಈ ರೀತಿಯ ಹೇಳಿಕೆ ನೀಡಲು ಸಾಧ್ಯ ಎಂದು ತೀಕ್ಷ್ಣ ಮಾತುಗಳಿಂದ ಜಾಡಿಸಿದ್ದಾರೆ.

ಇದಕ್ಕೂ ಮುನ್ನ ಹರ್ಭಜನ್​ ಸಿಂಗ್​ ಅವರು ಟ್ವೀಟ್​ ಮಾಡಿ ಅಕ್ಮಲ್​ ವಿರುದ್ಧ ಆಕ್ರೋಶ ಹೊರಹಾಕಿದ್ದರು. ನಿಮ್ಮ ಕೊಳಕು ಬಾಯಿ ತೆರೆಯುವ ಮೊದಲು ನೀವು ಸಿಖ್ಖರ ಇತಿಹಾಸವನ್ನು ಮೊದಲು ತಿಳಿದುಕೊಳ್ಳಬೇಕು. ನಾವು ಸಿಖ್ಖರು ನಿಮ್ಮ ತಾಯಂದಿರು ಮತ್ತು ಸಹೋದರಿಯರನ್ನು ಆಕ್ರಮಣಕಾರರು ಅಪಹರಿಸಿದಾಗ ಅವರನ್ನು ರಕ್ಷಿಸಿದ್ದೇವೆ. ನಿಮಗೆ ನಾಚಿಕೆಯಾಗಬೇಕು… ಸ್ವಲ್ಪ ಕೃತಜ್ಞತೆ ಇರಲಿ” ಎಂದು ಬರೆದುಕೊಂಡಿದ್ದರು.

Continue Reading

ಕ್ರೀಡೆ

IPL 2025: ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯ ಏರಿಕೆ; ಕಪ್​ ಗೆಲ್ಲದಿದ್ದರೂ ಆರ್​ಸಿಬಿ ಪ್ರಾಬಲ್ಯ

IPL 2025: ಕನ್ನಡಿಗ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ತಂಡ 760 ಕೋಟಿ ರೂ. ಬ್ರಾಂಡ್​ ಮೌಲ್ಯದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಮುಂದಿನ ಆವೃತ್ತಿಯಲ್ಲಿ ರಾಹುಲ್​ ಅವರು ಆರ್​ಸಿಬಿ ತಂಡದ ಪರ ಆಡಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬಂದಿದೆ.

VISTARANEWS.COM


on

IPL 2025
Koo

ಮುಂಬಯಿ: ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ಗೆ(IPL 2025) ಈಗಾಗಲೇ ಸಿದ್ಧತೆಗಳು ಆರಂಭವಾಗಿದೆ. ಆಟಗಾರರ ಮೆಗಾ ಹರಾಜು ಡಿಸೆಂಬರ್​ನಲ್ಲಿ ನಡೆಯುವ ಸಾಧ್ಯತೆ ಇದೆ. ಇದರ ಬೆನ್ನಲ್ಲೇ ಐಪಿಎಲ್​ನ ಬ್ರಾಂಡ್​ ಮೌಲ್ಯದ(IPL brand value) ವರದಿ ಹೊರಬಿದ್ದಿದೆ. ಈ ಬಾರಿ ಎಲ್ಲ ತಂಡಗಳ ಬ್ರಾಂಡ್ ಮೌಲ್ಯದಲ್ಲಿ(IPL teams brand valuation) ಭಾರಿ ಏರಿಕೆ ಕಂಡಿದೆ.

ಐಪಿಎಲ್​ನ ಯಶಸ್ವಿ ತಂಡಗಳಲ್ಲಿ ಒಂದಾದ ಐದು ಬಾರಿಯ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​​(CSK) ಗರಿಷ್ಠ ಮೌಲ್ಯ ಹೊಂದಿರುವ ತಂಡವಾಗಿ ಕಾಣಿಸಿಕೊಂಡಿದೆ. 1,930 ಕೋಟಿ ರೂ. ಬ್ರಾಂಡ್​ ಮೌಲ್ಯ ಹೊಂದಿದೆ. ಇದಕ್ಕೂ ಮುನ್ನ 675 ಕೋಟಿ ರೂ. (81 ದಶಲಕ್ಷ ಡಾಲರ್​) ಬ್ರಾಂಡ್​ ಮೌಲ್ಯದೊಂದಿಗೆ ದ್ವಿತೀಯ ಸ್ಥಾನಿಯಾಗಿತ್ತು. ಮುಂಬೈ ಇಂಡಿಯನ್ಸ್​ ತಂಡ 725 ಕೋಟಿ ರೂ.ಬ್ರಾಂಡ್​ ಮೌಲ್ಯದೊಂದಿಗೆ ಅಗ್ರಸ್ಥಾನ ಪಡೆದಿತ್ತು. ಪ್ರಸ್ತುತ 1,704 ಕೋಟಿ ರೂ. ನೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

ಆರ್​ಸಿಬಿಗೆ 2ನೇ ಸ್ಥಾನ

ಕನ್ನಡಿಗರ ನೆಚ್ಚಿನ ತಂಡವಾದ, ಅತ್ಯಧಿಕ ಅಭಿಮಾನಿ ಬಳಗವನ್ನು ಹೊಂದಿರುವ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತಂಡ ಇದುವರೆ ಕಪ್​ ಗೆಲ್ಲದಿದ್ದರೂ ಬ್ರಾಂಡ್​ ಮೌಲ್ಯದಲ್ಲಿ ತನ್ನ ಖ್ಯಾತಿಯನ್ನು ಬಿಟ್ಟುಕೊಟ್ಟಿಲ್ಲ. ಆರ್​ಸಿಬಿ ತಂಡ ಕಳೆದ ಬಾರಿ 582 ಕೋಟಿ ರೂ. (69.8 ದಶಲಕ್ಷ ಡಾಲರ್​) ಬ್ರಾಂಡ್​ ಮೌಲ್ಯದೊಂದಿಗೆ 4ನೇ ಸ್ಥಾನದಲ್ಲಿತ್ತು. ಇದೀಗ ನೂತನ ಪಟ್ಟಿಯಲ್ಲಿ 1,896 ಕೋಟಿ ರೂ. ಮೌಲ್ಯದೊಂದಿಗೆ 2ನೇ ಸ್ಥಾನಿಯಾಗಿದೆ. ಈ ಬಾರಿ ತಂಡ ಎಲಿಮಿನೇಟರ್​ ಹಂತದ ತನಕ ಆಡಿತ್ತು.

ಇದನ್ನೂ ಓದಿ IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

ಹಾಲಿ ಚಾಂಪಿಯನ್​ ಕೆಕೆಆರ್​ ತಂಡ ಈ ಪಟ್ಟಿಯಲ್ಲಿ ಮೂರನೇ ಸ್ಥಾನಿಯಾಗಿದೆ. ತಂಡದ ಬ್ರಾಂಡ್​ ಮೌಲ್ಯ 1,805 ಕೋಟಿ ರೂ. ಆಗಿದೆ. ಇದಕ್ಕೂ ಮುನ್ನ 655 ಕೋಟಿ ರೂ.ಗಳೊಂದಿಗೆ ಮೂರನೇ ಸ್ಥಾನದಲ್ಲೇ ಕಾಣಿಸಿಕೊಂಡಿತ್ತು. ಕನ್ನಡಿಗ ಕೆ.ಎಲ್​ ರಾಹುಲ್​ ಸಾರಥ್ಯದ ಲಕ್ನೋ ಸೂಪರ್​ ಜೈಂಟ್ಸ್​ ತಂಡ 760 ಕೋಟಿ ರೂ. ಬ್ರಾಂಡ್​ ಮೌಲ್ಯದೊಂದಿಗೆ ಕೊನೆಯ ಸ್ಥಾನಿಯಾಗಿದೆ. ಮುಂದಿನ ಆವೃತ್ತಿಯಲ್ಲಿ ರಾಹುಲ್​ ಅವರು ಆರ್​ಸಿಬಿ ತಂಡದ ಪರ ಆಡಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬಂದಿದೆ. ಕೆಲ ಮೂಲಗಳ ಪ್ರಕಾರ ರಾಹುಲ್​ಗೆ ಈಗಾಗಲೇ ಆರ್​ಸಿಬಿ ಫ್ರಾಂಚೈಸಿ ತಂಡ ಸೇರುವಂತೆ ಆಫರ್​ ಕೂಡ ಕೊಟ್ಟಿದೆ ಎಂದು ವರದಿಯಾಗಿದೆ. ಅದು ಕೂಡ ನಾಯಕನಾಗಿ ಎನ್ನಲಾಗಿದೆ.

ಐಪಿಎಲ್​ ತಂಡಗಳ ಬ್ರಾಂಡ್​ ಮೌಲ್ಯ


ಚೆನ್ನೈ ಸೂಪರ್​ಕಿಂಗ್ಸ್​: 1,930 ಕೋಟಿ ರೂ.

ರಾಯಲ್​ ಚಾಲೆಂಜರ್ಸ್​​ ಬೆಂಗಳೂರು: 1,896 ಕೋಟಿ ರೂ.

ಕೋಲ್ಕತಾ ನೈಟ್​ರೈಡರ್ಸ್​: 1,805 ಕೋಟಿ ರೂ.

ಮುಂಬೈ ಇಂಡಿಯನ್ಸ್​: 1,704 ಕೋಟಿ ರೂ.

ರಾಜಸ್ಥಾನ್​ ರಾಯಲ್ಸ್​: 1,111 ಕೋಟಿ ರೂ.

ಸನ್​ರೈಸರ್ಸ್​ ಹೈದರಾಬಾದ್​: 1,103 ಕೋಟಿ ರೂ.

ಡೆಲ್ಲಿ ಕ್ಯಾಪಿಟಲ್ಸ್​: 1,094 ಕೋಟಿ ರೂ.

ಗುಜರಾತ್​ ಟೈಟಾನ್ಸ್​: 1,036 ಕೋಟಿ ರೂ.

ಪಂಜಾಬ್​ ಕಿಂಗ್ಸ್​: 844 ಕೋಟಿ ರೂ.

ಲಕ್ನೋ ಸೂಪರ್​ಜೈಂಟ್ಸ್​: 760 ಕೋಟಿ ರೂ.

Continue Reading
Advertisement
Alcohal
ಪ್ರಮುಖ ಸುದ್ದಿ2 mins ago

ಒಂದೇ ವರ್ಷದೊಳಗೆ 3ನೇ ಬಾರಿ ಮದ್ಯದ ದರ ಏರಿಕೆ? ಉಚಿತ ಯೋಜನೆಗೆ ಹಣ ಹೊಂದಿಸುವ ಕಸರತ್ತು

Dina Bhavishya
ಪ್ರಮುಖ ಸುದ್ದಿ2 mins ago

Dina Bhavishya: ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ!

Hassan Ali
ದೇಶ5 hours ago

Hassan Ali: ರಿಯಾಸಿ ಉಗ್ರರ ದಾಳಿ ಖಂಡಿಸಿದ ಪಾಕ್‌ ಕ್ರಿಕೆಟಿಗ ಹಸನ್‌ ಅಲಿ; ಆಲ್‌ ಐಸ್‌ ಆನ್‌ ವೈಷ್ಣೋದೇವಿ ಎಂದಿದ್ದೇಕೆ?

IND vs USA
ಪ್ರಮುಖ ಸುದ್ದಿ5 hours ago

IND vs USA: ಅರ್ಶದೀಪ್​ ಮಾರಕ ದಾಳಿಗೆ ಪತರುಗುಟ್ಟಿದ ಅಮೆರಿಕ; ಟೀಮ್​ ಇಂಡಿಯಾ ಸೂಪರ್​-8 ಪ್ರವೇಶ

disqualification for hanawala Gram Panchayat Vice President and Cancellation of membership ordered
ಕರ್ನಾಟಕ6 hours ago

Koppala News: ಹಣವಾಳ ಗ್ರಾ.ಪಂ ಉಪಾಧ್ಯಕ್ಷೆಗೆ ಅನರ್ಹತೆಯ ಶಿಕ್ಷೆ; ಸದಸ್ಯತ್ವ ರದ್ದುಗೊಳಿಸಿ ಆದೇಶ

Court Order
ದೇಶ6 hours ago

ಬಾಲಕಿಯ ಒಳ ವಸ್ತ್ರ ಕಳಚಿ ಬೆತ್ತಲೆಗೊಳಿಸುವುದು ಅತ್ಯಾಚಾರ ಯತ್ನವಲ್ಲ ಎಂದ ಹೈಕೋರ್ಟ್! ನಿಮ್ಮ ಅಭಿಪ್ರಾಯವೇನು?

Virat Kohli
ಕ್ರೀಡೆ7 hours ago

Virat Kohli: ಟಿ20 ವಿಶ್ವಕಪ್​ನಲ್ಲಿ ಮೊದಲ ಗೋಲ್ಡನ್​ ಡಕ್ ಸಂಕಟಕ್ಕೆ ಸಿಲುಕಿದ ವಿರಾಟ್​ ಕೊಹ್ಲಿ

Mumbai
ಪ್ರಮುಖ ಸುದ್ದಿ7 hours ago

300 ಕೋಟಿ ರೂ. ಆಸ್ತಿಗಾಗಿ 1 ಕೋಟಿ ರೂ. ಸುಪಾರಿ ಕೊಟ್ಟು ಮಾವನನ್ನೇ ಕೊಲ್ಲಿಸಿದ ದುಷ್ಟ ಸೊಸೆ!

ICC T20 Rankings
ಕ್ರೀಡೆ8 hours ago

ICC T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಟೀಮ್​ ಇಂಡಿಯಾ; ಕುಸಿತ ಕಂಡ ಪಾಕ್

Rain News
ಪ್ರಮುಖ ಸುದ್ದಿ8 hours ago

Rain News: ವಿಜಯನಗರ, ಕೊಪ್ಪಳ ಜಿಲ್ಲೆಯಲ್ಲಿ ಮಳೆ ಆರ್ಭಟ; ಕೆರೆಯಂತಾದ ರಸ್ತೆಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ5 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ5 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌