ಜೈಪುರ: ಸದ್ಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ ದ್ವಿತೀಯ ಸ್ಥಾನಿ ಲಕ್ನೋ ಸೂಪರ್ಜೈಂಟ್ಸ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ಸೋತ ರಾಹುಲ್ ಪಡೆ ಬ್ಯಾಟಿಂಗ್ ಆಹ್ವಾನ ಪಡೆದಿದೆ. ಲಕ್ನೋ ತಂಡ ಈ ಪಂದ್ಯಕ್ಕೆ ಮಾರ್ಕ್ ವುಡ್ ಅವರನ್ನು ಕೈಬಿಟ್ಟು ನವೀನ್ ಉಲ್ ಹಕ್ ಅವರಿಗೆ ಅವಕಾಶ ನೀಡಿದೆ.
ಜೈಪುರದ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿಯೂ ರಾಜಸ್ಥಾನ್ ಗೆಲುವು ಸಾಧಿಸಿ ಅಗ್ರ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸುವ ಯೋಜನೆಯಲ್ಲಿದೆ. ಅತ್ತ ರಾಹುಲ್ ಪಡೆಯೂ ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳಲು ಯೋಚಿಸುತ್ತಿದೆ. ಹೀಗಾಗಿ ಉಭಯ ತಂಡಗಳ ಈ ಹೋರಾಟ ಅತ್ಯಂತ ರೋಚಕವಾಗಿ ಸಾಗುವ ನಿರೀಕ್ಷೆ ಇದೆ. ವಿಶೇಷ ಎಂದರೆ ಇಲ್ಲಿ ಮೂರು ವರ್ಷಗಳ ಬಳಿಕ ಐಪಿಎಲ್ ಪಂದ್ಯ ನಡೆಯುತ್ತಿದೆ.
ಉಭಯ ತಂಡಗಳು ಈವರೆಗೆ ಐಪಿಎಲ್ನಲ್ಲಿ ಎರಡು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇಲ್ಲಿ ಎರಡೂ ಪಂದ್ಯಗಳಲ್ಲಿಯೂ ರಾಜಸ್ಥಾನ ರಾಯಲ್ಸ್ ಗೆಲುವು ಸಾಧಿಸಿದೆ. ಈ ಬಾರಿಯೂ ರಾಜಸ್ಥಾನ್ ಬಲಿಷ್ಠವಾಗಿದೆ. ರಾಹುಲ್ ಪಡೆಯೂ ಕೆಲ ಬದಲಾವಣೆಯೊಂದಿಗೆ ಅನುಭವಿ ಆಟಗಾರರನ್ನು ಹೊಂದಿದೆ. 16ನೇ ಆವೃತ್ತಿಯಲ್ಲಿ ಇಷ್ಟರ ವರೆಗೆ ಆಡಿದ ಐದು ಪಂದ್ಯಗಳಲ್ಲಿ ಲಕ್ನೋ ಮೂರರಲ್ಲಿ ಜಯ ಸಾಧಿಸಿದೆ. ರಾಜಸ್ಥಾನ್ ಆಡಿದ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆದ್ದು ಅಗ್ರಸ್ಥಾನದಲ್ಲಿದೆ. ಇದೀಗ ಕಳೆದ ಬಾರಿಯ ಸೋಲಿಗೆ ಈ ಪಂದ್ಯದಲ್ಲಿ ರಾಹುಲ್ ಪಡೆ ಸೇಡು ತೀರಿಸಿಕೊಳ್ಳುವ ಬಯಕೆಯಲ್ಲಿದೆ.
ಸಂಭಾವ್ಯ ತಂಡ
ರಾಜಸ್ಥಾನ್ ರಾಯಲ್ಸ್: ಜಾಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೇರ್, ಧ್ರುವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಜೇಸನ್ ಹೋಲ್ಡರ್, ಸಂದೀಪ್ ಶರ್ಮಾ, ಯಜುವೇಂದ್ರ ಚಹಾಲ್. ಇಂಪ್ಯಾಕ್ಟ್ ಪ್ಲೇಯರ್ಸ್: ದೇವದತ್ತ ಪಡಿಕ್ಕಲ್, ಮುರುಗನ್ ಅಶ್ವಿನ್, ಡೊನಾವೊನ್ ಫೆರೇರಾ, ನವದೀಪ್ ಸೈನಿ, ಜೋ ರೂಟ್.
ಇದನ್ನೂ ಓದಿ IPL 2023: ಲಕ್ನೋ-ಚೆನ್ನೈ ಪಂದ್ಯದ ದಿನಾಂಕ ಬದಲು; ಕಾರಣ ಏನು?
ಲಕ್ನೋ ಸೂಪರ್ ಜೈಂಟ್ಸ್: ಕೆ.ಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬದೋನಿ, ಅವೇಶ್ ಖಾನ್, ಯುಧ್ವೀರ್ ಸಿಂಗ್ ಚರಕ್, ನವೀನ್ ಉಲ್ ಹಕ್, ರವಿ ಬಿಷ್ಣೋಯ್. ಇಂಪ್ಯಾಕ್ಟ್ ಪ್ಲೇಯರ್ಸ್: ಅಮಿತ್ ಮಿಶ್ರಾ, ಜಯ್ದೇವ್ ಉನಾದ್ಕತ್, ಕೃಷ್ಣಪ್ಪ ಗೌತಮ್, ಪ್ರೇರಕ್ ಮಂಕಡ್, ಡೇನಿಯಲ್ ಸ್ಯಾಮ್ಸ್.