ಬೆಂಗಳೂರು: 16ನೇ ಆವೃತ್ತಿಯ ಐಪಿಎಲ್ನಲ್ಲಿ(IPL 2023) ಗೆಲುವೇ ಕಾಣದ ಡೆಲ್ಲಿ ಕ್ಯಾಪಿಟಲ್ಸ್ ತಂಡ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದೆ. ಆರ್ಸಿಬಿ ಬ್ಯಾಟಿಂಗ್ ಆಹ್ವಾನ ಪಡೆದಿದೆ. ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುವ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ್ದಾಗಿದೆ. ಡೆಲ್ಲಿ ಇದುವರೆಗೂ ಖಾತೆ ತೆರೆದಿಲ್ಲ. ಆರ್ಸಿಬಿ ಸೋತರೆ ಹ್ಯಾಟ್ರಿಕ್ ಸೋಲಿಗೆ ತುತ್ತಾಗಲಿದೆ. ಆರ್ಸಿಬಿ ಪರ ವನಿಂದು ಹಸರಂಗ ಈ ಪಂದ್ಯದಲ್ಲಿ ಅವಕಾಶ ಪಡೆದರು.
ಪಿಚ್ ರಿಪೋರ್ಟ್
ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್ ಬ್ಯಾಟಿಂಗ್ಗೆ ಹೇಳಿ ಮಾಡಿಸಿದಂತೆ. ಇದು ಸಂಪೂರ್ಣ ಬ್ಯಾಟಿಂಗ್ ಸ್ನೇಹಿ ಪಿಚ್ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಲ್ಲಿ ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಬ್ಯಾಟರ್ಗಳು ಯಾವುದೇ ಒತ್ತಡವಿಲ್ಲದೆ ಬ್ಯಾಟ್ ಬೀಸಬಹುದಾಗಿದೆ. ಆದರೆ ಬೌಲರ್ಗಳು ಮಾತ್ರ ಶಕ್ತಿ ಮೀರಿ ಪ್ರಯತ್ನ ತೋರಬೇಕಿದೆ. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್ ಮಾಡಿ ಗೆಲುವು ಸಾಧಿಸಬಹುದು. ಇದಕ್ಕೆ ಕಳೆದ ಲಕ್ನೋ ವಿರುದ್ಧದ ಪಂದ್ಯವೇ ಸಾಕ್ಷಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇದುವರೆ ಐಪಿಎಲ್ನಲ್ಲಿ 27 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್ಸಿಬಿ 16 ಪಂದ್ಯಗಳನ್ನು ಗೆದ್ದರೆ, ಡೆಲ್ಲಿ 10 ಪಂದ್ಯಗಳಲ್ಲಿ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಾಣದೆ ಕೊನೆಗೊಂಡಿದೆ. ಕಳೆದ ಎರಡು ವರ್ಷಗಳಲ್ಲಿ ಡೆಲ್ಲಿ ವಿರುದ್ಧ ಆರ್ಸಿಬಿ ಆಡಿದ ಒಂದೂ ಪಂದ್ಯವನ್ನು ಸೋಲು ಕಂಡಿಲ್ಲ. ಹೀಗಾಗಿ ಈ ಪಂದ್ಯದ ಮೇಲು ಆರ್ಸಿಬಿ ಮೇಲೆ ನಿರೀಕ್ಷೆಯೊಂದನ್ನು ಮಾಡಬಹುದು.
ಇದನ್ನೂ ಓದಿ IPL 2023: ಟಾಸ್ ಸೋತ ಆರ್ಸಿಬಿಯಿಂದ ಮೊದಲು ಬ್ಯಾಟಿಂಗ್
ಸಂಭಾವ್ಯ ತಂಡಗಳು
ಡೆಲ್ಲಿ ಕ್ಯಾಪಿಟಲ್ಸ್: ಡೇವಿಡ್ ವಾರ್ನರ್ (ನಾಯಕ), ಮನೀಶ್ ಪಾಂಡೆ, ರಿಲೀ ರೊಸೊ, ರೋವ್ಮನ್ ಪೊವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಅನ್ರಿಚ್ ನೋರ್ಜೆ, ಖಲೀಲ್ ಅಹ್ಮದ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.
ಆರ್ಸಿಬಿ: ಆರ್ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯೇಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ / ಮೈಕಲ್ ಬ್ರೆಸ್‌ವೆಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.