ಜೈಪುರ: ರಾಜಸ್ಥಾನ್ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಆರ್ಸಿಬಿ ತಂಡದ ನಾಯಕ ಫಾಪ್ ಡು ಪ್ಲೆಸಿಸ್ ಮೊದಲು ಬ್ಯಾಟಿಂಗ್ ನಡೆಸಲಿದೆ. ರಾಜಸ್ಥಾನ್ ಬೌಲಿಂಗ್ ಆಹ್ವಾನ ಪಡೆದಿದೆ. ಸವಾಯ್ ಮಾನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಮುಖಾಮುಖಿಯಲ್ಲಿ ಗೆದ್ದರಷ್ಟೇ ಉಭಯ ತಂಡಗಳಿಗೂ ಪ್ಲೇ ಆಫ್ ರೇಸ್ನಲ್ಲಿ ಉಳಿಗಾಲ. ಹೀಗಾಗಿ ಈ ಪಂದ್ಯವನ್ನು ಹೈ ವೋಲ್ಟೆಜ್ ಎಂದು ನಿರೀಕ್ಷೆ ಮಾಡಬಹುದು.
ಆರ್ಸಿಬಿ ಈ ಪಂದ್ಯಕ್ಕೆ ಎರಡು ಬದಲಾವಣೆ ಮಾಡಿದೆ. ಜೋಶ್ ಹ್ಯಾಜಲ್‌ವುಡ್ ಬದಲಿಗೆ ವೇಯ್ನ್ ಪಾರ್ನಲ್ ಮತ್ತು ಹಸರಂಗ ಬದಲಿಗೆ ಬ್ರೇಸ್ವೆಲ್ಗೆ ಸ್ಥಾನ ನೀಡಲಾಗಿದೆ. ರಾಜಸ್ಥಾನ ತಂಡದಲ್ಲಿ ಟ್ರೆಂಟ್ ಬೌಲ್ಟ್ ಬದಲಿಗೆ ಆ್ಯಡಂ ಜಾಂಪಾ ಕಣಕ್ಕಿಳಿಯಲಿದ್ದಾರೆ.
ಆರಂಭಿಕ ಪಂದ್ಯದಲ್ಲಿ ಘಾತಕ ಬೌಲಿಂಗ್ ದಾಳಿ ನಡೆಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಮೊಹಮ್ಮದ್ ಸಿರಾಜ್ ಅವರು ಇತ್ತೀಚಿನ ಪಂದ್ಯಗಳಲ್ಲಿ ತೀರಾ ಕಳಪೆ ಮಟ್ಟದ ಬೌಲಿಂಗ್ ಪ್ರದರ್ಶನ ತೋರುತ್ತಿದ್ದಾರೆ. ವಿಕೆಟ್ ಕೀಳುವ ಬದಲು ಎದುರಾಳಿ ಬ್ಯಾಟರ್ಗಳನ್ನು ಕೆಣಕುವುದರಲ್ಲಿ ಮಾತ್ರ ಸೈ ಎನಿಸಿಕೊಂಡಿದ್ದಾರೆ. ಸಿರಾಜ್ ಬೌಲಿಂಗ್ ಬಗ್ಗೆ ಸ್ವತಃ ತಂಡದ ನಾಯಕ ಫಾಪ್ ಡು ಪ್ಲೆಸಿಸ್ ಅವರೇ ಕಳೆದ ಪಂದ್ಯದಲ್ಲಿ ಬಹಿರಂಗವಾಗಿ ಬೇಸರ ಹೊರಕಾಕಿದ್ದರು.
ರಾಜಸ್ಥಾನ್ ತಂಡ ಆರ್ಸಿಬಿಗೆ ಹೋಲಿಸಿದರೆ ಅತ್ಯಂತ ಬಲಿಷ್ಠವಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಸಮರ್ಥವಾಗಿದೆ. ಅದರಲ್ಲೂ ಕಳೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶನ ತೋರಿದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಅವರ ಬ್ಯಾಟಿಂಗ್ ಮೇಲೆ ಈ ಪಂದ್ಯದಲ್ಲಿಯೂ ಹೆಚ್ಚಿನ ನಿರೀಕ್ಷೆ ಇರಿಸಲಾಗಿದೆ. ಉಳಿದಂತೆ ನಾಯಕ ಸಂಜು ಸ್ಯಾಮ್ಸನ್, ಜಾಸ್ ಬಟ್ಲರ್ ಉತ್ತಮ ಬ್ಯಾಟಿಂಗ್ ಫಾರ್ಮ್ನಲ್ಲಿದ್ದಾರೆ.
ಸಂಭಾವ್ಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್, ವಿರಾಟ್ ಕೊಹ್ಲಿ(ನಾಯಕ), ಸುಯಶ್ ಪ್ರಭುದೇಸಾಯಿ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ಶಾಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೊರ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶದೀಪ್, ಹಿಮಾಂಶು ಶರ್ಮಾ, ಮಿಚೆಲ್ ಬ್ರೇಸ್‌ವೆಲ್, ವೈಶಾಖ್ ವಿಜಯ್ ಕುಮಾರ್.
ಇದನ್ನೂ ಓದಿ IPL 2023: ಪ್ರಭ್ಶಿಮ್ರಾನ್ ಶತಕ; ಸಚಿನ್ ಮೂರು ವರ್ಷಗಳ ಹಿಂದೆ ಹೇಳಿದ್ದ ಮಾತು ವೈರಲ್
ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ಜೋ ರೂಟ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೈಯರ್, ರವಿಚಂದ್ರನ್ ಅಶ್ವಿನ್, ಮುರುಗನ್ ಅಶ್ವಿನ್, ಸಂದೀಪ್ ಶರ್ಮಾ, ಕುಲ್ದೀಪ್ ಯಾದವ್, ಯಜ್ವೇಂದ್ರ ಚಹಲ್.