ಕೋಲ್ಕೊತಾ: ಮುಂಬೈ ಇಂಡಿಯನ್ಸ್ ವಿರುದ್ಧ ತವರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಬೀಗಿದ್ದ ಕನ್ನಡಿಗರ ನೆಚ್ಚಿನ ತಂಡವಾದ ಆರ್ಸಿಬಿ(Royal Challengers Bangalore) ಗುರುವಾರ ಕೋಲ್ಕತಾ ನೈಟ್ ರೈಡರ್(kkr) ವಿರುದ್ಧ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಆದರೆ ಈ ಪಂದ್ಯದಲ್ಲಿ ರೀಸ್ ಟಾಪ್ಲಿ(Reece Topley) ಅವರು ಆಡುವುದು ಅನುಮಾನ ಎನ್ನಲಾಗಿದೆ.
ಮುಂಬೈ ಇಂಡಿಯನ್ಸ್ ವಿರುದ್ಧ ಕಳೆದ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಫೀಲ್ಡಿಂಗ್ ನಡೆಸುತ್ತಿದ್ದ ಟಾಪ್ಲಿ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಎರಡು ಓವರ್ ಮಾಡಿದ್ದ ಅವರು ಆ ಬಳಿಕ ಪಂದ್ಯದಿಂದ ಹೊರಗುಳಿದಿದ್ದರು. ಸದ್ಯ ಅವರ ಗಾಯ ಗಂಭೀರ ಸ್ವರೂಪದಿಂದ ಕೂಡಿಲ್ಲ. ಆದರೆ ಮುಂಜಾಗ್ರತ ಕ್ರಮವಾಗಿ ಅವರನ್ನು ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಆಡಿಸುವುದಿಲ್ಲ ಎಂದು ತಂಡದ ಮೂಲವೊಂದು ತಿಳಿಸಿದೆ.
ಈಗಾಗಲೇ ರಜತ್ ಪಾಟೀದಾರ್ ಅವರು ಪಾದದ ನೋವಿನಿಂದ ಟೂರ್ನಿಯಿಂದ ಹೊಎಬಿದ್ದಿದ್ದಾರೆ. ಈ ಮಧ್ಯೆ ಇದೀಗ ರೀಸ್ ಟಾಪ್ಲಿ ಕೂಡ ಗಾಯದಿಂದ ಬಳಲುತ್ತಿರುವುದು ತಂಡಕ್ಕೆ ಚಿಂತೆಗೀಡು ಮಾಡಿದೆ.
ರಜತ್ ಪಾಟೀದಾರ್ ಆರ್ಸಿಬಿಯ ಮಧ್ಯಮ ಕ್ರಮಾಂಕದ ಬ್ಯಾಟ್ ಬಲ ಎನಿಸಿಕೊಂಡಿದ್ದರು. ಆದರೆ, ಟೂರ್ನಿ ಆರಂಭಕ್ಕೆ ಮೊದಲೇ ಪಾದದ ನೋವಿಗೆ ಒಳಗಾಗಿದ್ದ ಅವರು ಆರಂಭಿಕ ಪಂದ್ಯದಲ್ಲಿ ಪಾಲ್ಗೊಂಡಿರಲಿಲ್ಲ. ಇದೀಗ ಪೂರ್ತಿ ಟೂರ್ನಿಯಿಂದ ಹೊರಕ್ಕೆ ನಡೆಯುವಂತಾಗಿದೆ. ಆರ್ಸಿಬಿ ಫ್ರಾಂಚೈಸಿ ಮಂಗಳವಾರ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಆದರೆ, ಅವರ ಜಾಗಕ್ಕೆ ಯಾವ ಆಟಗಾರ ಆಯ್ಕೆಯಾಗುತ್ತಾರೆ ಎಂಬುದನ್ನು ತಿಳಿಸಿಲ್ಲ.
ದುರದೃಷ್ಟವಶಾತ್ ರಜತ್ಪಾಟೀದಾದ್ ಐಪಿಎಲ್ 2023ನೇ ಆವೃತ್ತಿಯಿಂದ ಹೊರಕ್ಕೆ ಉಳಿದಿದ್ದಾರೆ. ಅವರಿಗೆ ಆಗಿರುವ ಪಾದದ ನೋವು ಇನ್ನೂ ಕಡಿಮೆಯಾಗಿಲ್ಲ. ಅವರು ವೇಗವಾಗಿ ಗುಣಮುಖರಾಗಲಿ ಎಂದು ನಾನು ಬಯಸುತ್ತೇವೆ ಹಾಗೂ ಈ ಪ್ರಕ್ರಿಯೆಯಲ್ಲಿ ನಮ್ಮ ಬೆಂಬಲ ಅವರಿಗೆ ಇದೆ. ಕೋಚ್ಗಳು ಹಾಗೂ ಮ್ಯಾನೇಜ್ಮೆಂಟ್ ಅವರ ಜಾಗಕ್ಕೆ ಇನ್ನೊಬ್ಬ ಆಟಗಾರನ್ನು ಹೆಸರಿಸದೇ ಇರಲು ನಿರ್ಧರಿಸಿದ್ದೇವೆ, ಎಂದು ಆರ್ಸಿಬಿ ಮಂಗಳವಾರ ಹೇಳಿತ್ತು.
ಇದನ್ನೂ ಓದಿ IPL 2023: ಪಂಜಾಬ್ ಕಿಂಗ್ಸ್ಗೆ ರಾಜಸ್ಥಾನ್ ರಾಯಲ್ಸ್ ಸವಾಲು
ಆರ್ಸಿಬಿ ತಂಡ: ಫಾಪ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್, ಅನೂಜ್ ರಾವತ್, ಫಿನ್ ಅಲೆನ್, ಜೋಶ್ ಹ್ಯಾಝಲ್ವುಡ್, ಮೊಹಮ್ಮದ್ ಸಿರಾಜ್, ಕರ್ಣ್ ಶರ್ಮಾ, ಸಿದ್ಧಾರ್ಥ್ ಕೌಲ್, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ರಜನ್ ಕುಮಾರ್, ಅವಿನಾಶ್ ಸಿಂಗ್, ಗ್ಲೆನ್ ಮ್ಯಾಕ್ಸ್ವೆಲ್, ವನಿಂದು ಹಸರಂಗ, ಮಹಿಪಾಲ್ ಲೋಮ್ರರ್, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಸುಯಶ್ ಪ್ರಭುದೇಸಾಯಿ, ಮನೋಜ್ ಭಾಂಡಗೆ, ಸೋನು ಯಾದವ್, ಮೈಕೆಲ್ ಬ್ರೇಸ್ವೆಲ್.