ಅಹಮದಾಬಾದ್: ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ವಿರುದ್ಧ ಟಾಸ್ ಗೆದ್ದ ಮಾಜಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪಾಂಡ್ಯ ಪಡೆ ಮೊದಲು ಬ್ಯಾಟಿಂಗ್ ನಡೆಸಲಿದೆ.
ಮುಂಬೈ ಬ್ಯಾಟಿಂಗ್ ಬಲಿಷ್ಠವಾಗಿದ್ದರೂ ಬೌಲಿಂಗ್ ವಿಭಾಗಲ್ಲಿ ತೀರಾ ಕಳಪೆ ಮಟ್ಟದಿಂದ ಕೂಡಿದೆ. ಇದಕ್ಕೆ ಕಳೆದ ಪಂಜಾಬ್ ವಿರುದ್ಧದ ಪಂದ್ಯವೇ ಉತ್ತಮ ನಿದರ್ಶನ ಅಂತಿಮ 5 ಓವರ್ಗಳಲ್ಲಿ 90 ರನ್ ಬಿಟ್ಟುಕೊಟ್ಟಿದ್ದರು. ಹೀಗಾಗಿ ಈ ಪಂದ್ಯದಲ್ಲಿ ಉತ್ತಮ ಬೌಲಿಂಗ್ ತೋರ್ಪಡಿಸದಿದ್ದರೆ ತಂಡ ಮತ್ತೊಂದು ಸೋಲು ಕಂಡರು ಅಚ್ಚರಿಯಿಲ್ಲ. ಅತ್ತ ಗುಜರಾತ್ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಸಮರ್ಥವಾಗಿದೆ. ಡೇವಿಡ್ ಮಿಲ್ಲರ್, ಶುಭಮನ್ ಗಿಲ್, ನಾಯಕ ಪಾಂಡ್ಯ, ರಾಹುಲ್ ತೆವಾಟಿಯಾ ಬ್ಯಾಟಿಂಗ್ ಬಲವಾದರೆ, ರಶೀದ್ ಖಾನ್, ಮೊಹಮ್ಮದ್ ಶಮಿ, ಮೋಹಿತ್ ಶರ್ಮ ಬೌಲಿಂಗ್ನಲ್ಲಿ ಸಮರ್ಥರಿದ್ದಾರೆ.
ಪಿಚ್ ರಿಪೋರ್ಟ್
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ಪಿಚ್ ಹೆಚ್ಚಾಗಿ ಸ್ಪಿನ್ನರ್ಗಳಿಗೆ ನೆರವು ನೀಡಲಿದೆ. ಆದರೆ ಪಂದ್ಯ ಸಾಗುತ್ತಿದ್ದಂತೆ ಬ್ಯಾಟರ್ಗಳು ಇಲ್ಲಿ ಹಿಡಿತ ಸಾಧಿಸಬಹುದು. ಇಲ್ಲಿ ಈವರೆಗೆ ಒಟ್ಟು 22 ಐಪಿಎಲ್ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟ್ ಮಾಡಿದ ತಂಡ 8 ಬಾರಿ ಮೇಲುಗೈ ಸಾಧಿಸಿದೆ. ಚೇಸಿಂಗ್ನಲ್ಲಿ 14 ಬಾರಿ ಗೆಲುವು ಬಂದಿದೆ. ಉಭಯ ತಂಡಗಳು ಇದುವರೆಗೆ ಒಂದು ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಮುಂಬೈ ಗೆಲುವು ಸಾಧಿಸಿತ್ತು.
ಇದನ್ನೂ ಓದಿ IPL 2023: ಗುಜರಾತ್-ಮುಂಬೈ ಪಂದ್ಯದಲ್ಲಿ ಸಾರಾ ತೆಂಡೂಲ್ಕರ್ ಪ್ರಮುಖ ಹೈಲೆಟ್; ಕಾರಣ ಏನು?
ಸಂಭಾವ್ಯ ತಂಡಗಳು
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್, ರೋಹಿತ್ ಶರ್ಮಾ (ನಾಯಕ), ಕ್ಯಾಮರೂನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಜೋಫ್ರಾ ಆರ್ಚರ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್.
ಗುಜರಾತ್ ಟೈಟನ್ಸ್: ಶುಭಮನ್ ಗಿಲ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ಅಭಿನವ್ ಮನೋಹರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ನೂರ್ ಅಹ್ಮದ್, ಮೋಹಿತ್ ಶರ್ಮಾ.