ಹೈದರಾಬಾದ್: ಸತತ ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಮುಂಬೈ ಇಂಡಿಯನ್ಸ್ ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದಿದೆ. ಅಸೌಖ್ಯದ ಕಾರಣ ಕಳೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೇವಲ ಇಂಪ್ಯಾಕ್ಟ್ ಆಟಗಾರನಾಗಿ ಕಣಕ್ಕಿಳಿದಿದ್ದ ರೋಹಿತ್ ಶರ್ಮ ಈ ಪಂದ್ಯಕ್ಕೆ ಆಗಮಿಸಿ ಮತ್ತೆ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ತಂಡ ಮುನ್ನಡೆಸಿದ್ದರು.
ರಾಜೀವ್ ಗಾಂಧಿ ಕ್ರೀಡಾಂಗಣ ಸಾಮಾನ್ಯವಾಗಿ ಬ್ಯಾಟಿಂಗ್ಗೆ ನೆರವಾಗುತ್ತದೆ. ವೇಗಿಗಳಿಗಿಂತ ಇಲ್ಲಿ ಸ್ಪಿನ್ ಹೆಚ್ಚು ಪರಿಣಾಮಕಾರಿಯಾಗಿದೆ. ಕಳೆದ ಪಂದ್ಯದಲ್ಲಿ ಮಯಾಂಕ್ ಮಾರ್ಕಂಡೆ ಪಂಜಾಬ್ ವಿರುದ್ಧ 4 ವಿಕೆಟ್ ಪಡೆದಿದ್ದು ಇದಕ್ಕೆ ಉತ್ತಮ ನಿದರ್ಶನ. ಹೀಗಾಗಿ ಉಭಯ ತಂಡಗಳು ಸ್ಪಿನ್ಗೆ ಹೆಚ್ಚಿನ ಆದ್ಯತೆ ನೀಡಬಹುದು.
ಸನ್ರೈಸರ್ಸ್ ಹೈದರಾಬಾದ್ ತಂಡದಕ್ಕೆ ಸ್ಫೋಟಕ ಬ್ಯಾಟರ್ ಹ್ಯಾರಿ ಬ್ರೂಕ್ ಆತ್ಮವಿಶ್ವಾಸ ತುಂಬಿದ್ದಾರೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಅವರು ಸಿಡಿಸಿದ ಶತಕವೇ ಇದಕ್ಕೆ ಸಾಕ್ಷಿ. ಸದ್ಯ ಈ ಪಂದ್ಯದಲ್ಲಿಯೂ ತಂಡ ಅವರ ಮೇಲೆ ಹೆಚ್ಚಿನ ಭರವಸೆ ಇರಿಸಿದೆ. ಇವರ ಜತೆಗೆ ನಾಯಕ ಮಾರ್ಕ್ರಮ್, ಕ್ಲಾಸೆನ್ ಕೂಡ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಅತ್ತ ಮುಂಬೈಯಲ್ಲಿ ಸತತ ಬ್ಯಾಟಿಂಗ್ ವೈಫಲ್ಯದಿಂದ ಬಳಲುತ್ತಿದ್ದ ಸೂರ್ಯಕುಮಾರ್ ಯಾದವ್ ಅವರು ಸದ್ಯ ಫಾರ್ಮ್ಗೆ ಮರಳಿದ್ದಾರೆ. ಜತೆಗೆ ಇಶಾನ್ ಕಿಶನ್, ಕ್ಯಾಮರೂನ್ ಗ್ರೀನ್ ಮತ್ತು ತಿಲಕ್ ವರ್ಮ ಕೂಡ ಅಪಾಯಕಾರಿ ಬ್ಯಾಟರ್ಗಳಾಗಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ದೊಡ್ಡ ಮೊತ್ತವನ್ನು ನಿರೀಕ್ಷೆ ಮಾಡಬಹುದು.
ಇದನ್ನೂ ಓದಿ IPL 2023: ಚೆನ್ನೈ ವಿರುದ್ಧ ಸಿಡಿಸಿದ ಶತಕದ ಹಿಂದಿರುವ ನೋವನ್ನು ಹಂಚಿಕೊಂಡ ಸೆಹವಾಗ್
ಸಂಭಾವ್ಯ ತಂಡ
ಸನ್ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಮ್ (ನಾಯಕ), ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಾಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್.
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಟಿಮ್ ಡೇವಿಡ್, ನೆಹಾಲ್ ವಧೇರಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಡುವಾನ್ ಜಾನ್ಸೆನ್, ರಿಲೇ ಮೆರೆಡಿತ್.