ಮುಂಬಯಿ: ಕಳೆದ ಎರಡು ಆವೃತ್ತಿಗಳಲ್ಲಿಯೂ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್(Sachin Tendulkar) ಅವರ ಪುತ್ರ ಅರ್ಜುನ್ ತೆಂಡೂಲ್ಕರ್(Arjun Tendulkar) ಕೊನೆಗೂ ಐಪಿಎಲ್ ಬಾಗಿಲು ತೆರೆದಿದೆ.
ಕೋಲ್ಕತಾ ನೈಟ್ ರೇಡರ್ಸ್ ವಿರುದ್ಧದ ಭಾನುವಾರದ ಪಂದ್ಯದಲ್ಲಿ ಮುಂಬೈ ಪರ ಕಣಕ್ಕಿಳಿಯುವ ಮೂಲಕ ಅರ್ಜುನ್ ತೆಂಡೂಲ್ಕರ್ ಅವರು ಐಪಿಎಲ್ಗೆ ಪದಾರ್ಪಣೆ ಮಾಡಿದರು. ರೋಹಿತ್ ಶರ್ಮ ಅವರು ಕ್ಯಾಪ್ ನೀಡಿ ತಂಡಕ್ಕೆ ಬರಮಾಡಿಕೊಂಡರು. ತಮ್ಮನ ಚೊಚ್ಚಲ ಪಂದ್ಯವನ್ನು ವೀಕ್ಷಿಸಲು ಅಕ್ಕ ಸಾರಾ ತೆಂಡೂಲ್ಕರ್ ಕೂಡ ಉಪಸ್ಥಿತರಿದ್ದರು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ತಂಡದ ಖಾಯಂ ನಾಯಕ ರೋಹಿತ್ ಶರ್ಮ ಅವರು ಅಸೌಖ್ಯದಿಂದಾಗಿ ಪಂದ್ಯದಿಂದ ಹೊರಗುಳಿದರು. ಅವರ ಬದಲು ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸಲಿದ್ದಾರೆ.
ರಣಜಿ ಟ್ರೋಫಿ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಅರ್ಜುನ್ ತೆಂಡೂಲ್ಕರ್ಗೆ ಈ ಬಾರಿ ಐಪಿಎಲ್‌ನಲ್ಲಿ ಮುಂಬೈ ತಂಡದ ಪರ ಆಡುವ ಅವಕಾಶ ನೀಡಲಾಯಿತು. ಆರಂಭಿಕ ಪಂದ್ಯದಲ್ಲಿಯೇ ಅವರನ್ನು ಕಣಕ್ಕಿಳಿಸುವ ಯೋಜನೆ ಮಾಡಲಾಗಿತ್ತು. ಆದರೆ ಅವರು ಸ್ನಾಯು ಸೆಳೆತದ ನೋವಿನಿಂದ ಬಳಲುತ್ತಿದ್ದಾರೆ ಎಂದು ತಂಡದ ಕೋಚ್ ಮಾಹಿತಿ ನೀಡಿದ್ದರು. ಇದೀಗ ಕೆಕೆಆರ್ ಪರ ಆಡುವ ಮೂಲಕ ಎರಡು ವರ್ಷಗಳ ಕಾಯುವಿಕೆ ಕೊನೆಗೊಂಡಿದೆ.
ಇದನ್ನೂ ಓದಿ IPL 2023: ಕಳೆದ ಬಾರಿಯ ಫೈನಲಿಸ್ಟ್ಗಳ ಮಧ್ಯೆ ಹೈ ವೋಲ್ಟೇಜ್ ಪಂದ್ಯ
ಕಳೆದ ಆವೃತ್ತಿಯ ರಣಜಿ ಟ್ರೋಫಿಯಲ್ಲಿ ಅರ್ಜುನ್ ತೆಂಡೂಲ್ಕರ್ ಗೋವಾ ಪರ ಪದಾರ್ಪಣ ಪಂದ್ಯದಲ್ಲೇ ಶತಕ ಬಾರಿಸುವ ಮೂಲಕ ತಂದೆ ಸಚಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದರು. ಇದುವರೆಗೆ 7 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ ಅವರು 12 ವಿಕೆಟ್‌ಗಳ ಜತೆಗೆ 233 ರನ್ ಗಳಿಸಿದ್ದಾರೆ.
ಕಳೆದ ವರ್ಷ ಮೆಗಾ ಹರಾಜಿನಲ್ಲಿ 30 ಲಕ್ಷಕ್ಕೆ ಬಿಡ್ ಮಾಡುವ ಮೂಲಕ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ರೀಟೈನ್ ಮಾಡಿತ್ತು. ಈ ಹಿಂದೆ 2021ರಲ್ಲಿ ಮುಂಬೈ ತಂಡವು ಅವರನ್ನು 20 ಲಕ್ಷ ರೂ. ಮೂಲ ಬೆಲೆಗೆ ಖರೀದಿಸಿತ್ತು. ವಿಶೇಷ ಎಂದರೆ ತಮ್ಮ ಪದಾಪರ್ಣ ಪಂದ್ಯದಲ್ಲಿಯೇ ಮೊದಲ ಓವರ್ ಎಸೆದು ಗಮನಸೆಳೆದರು.