ಮೊಹಾಲಿ: 16ನೇ ಆವೃತ್ತಿಯ ಐಪಿಎಲ್(IPL 2023) ಟೂರ್ನಿಗಾಗಿ ಈಗಾಗಲೇ ಎಲ್ಲ ತಂಡಗಳು ಭರ್ಜರಿ ತಯಾರಿ ಆರಂಭಿಸಿವೆ. ಟೂರ್ನಿಯ ವೇಳಾಪಟ್ಟಿಯೂ ಪ್ರಕಟಗೊಂಡಿದ್ದು, ಮಾರ್ಚ್ 31 ರಿಂದ ಆರಂಭವಾಗಿ ಮೇ 21 ರ ವರೆಗೆ ಲೀಗ್ ಪಂದ್ಯಗಳು ನಡೆಯಲಿದೆ. ಟೂರ್ನಿ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಪಂಜಾಬ್ ಕಿಂಗ್ಸ್(punjab kings) ತಂಡ ಅಭ್ಯಾಸ ಆರಂಭಿಸಿದೆ.
ಪಂಜಾಬ್ ಕಿಂಗ್ಸ್ ತಂಡದ ಆಟಗಾರರೊಂದಿಗೆ ಮೊಹಾಲಿಯಲ್ಲಿ ಭರ್ಜರಿ ತಾಲೀಮು ನಡೆಸುತ್ತಿರುವ ಫೋಟೊಗಳನ್ನು ಶಿಖರ್ ಧವನ್(shikhar dhawan) ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಹಿಂದೆ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿದ್ದ ಮಯಾಂಕ್ ಅಗರ್ವಾಲ್ ಅವರನ್ನು ತಂಡದಿಂದ ಕೈಬಿಟ್ಟ ಬಳಿಕ ಶಿಖರ್ ಧವನ್ ಅವರನ್ನು ತಂಡಕ್ಕೆ ನಾಯಕನಾಗಿ ಆಗಿ ನೇಮಕ ಮಾಡಲಾಗಿದೆ. ತರಬೇತಿ ಶಿಬಿರದಲ್ಲಿ ಧವನ್ ಜತೆ ತಂಡದ ಸ್ಥಳೀಯ ಆಟಗಾರರು ಸಹ ಭಾಗವಹಿಸಿದ್ದರು. ಈ ಬಾರಿಯ ಐಪಿಎಲ್‌ಗೆ ಪಂಜಾಬ್ ಕಿಂಗ್ಸ್‌ನಲ್ಲಿ ಹಲವು ಯುವ ಆಟಗಾರರು ಸ್ಥಾನ ಪಡೆದಿದ್ದು, ಕರ್ನಾಟಕದ ವಿದ್ವತ್ ಕಾವೇರಪ್ಪ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.
ಇದನ್ನೂ ಓದಿ IPL 2023: ಹಾಲಿ ಚಾಂಪಿಯನ್ ಗುಜರಾತ್ ತಂಡಕ್ಕೆ ಹಿನ್ನಡೆ; ಸ್ಟಾರ್ ಆಟಗಾರ ಟೂರ್ನಿಯಿಂದ ಔಟ್
ಸದ್ಯ ಟೀಮ್ ಇಂಡಿಯಾದ ಮೂರು ಮಾದರಿಯ ಕ್ರಿಕೆಟ್ನಲ್ಲಿಯೂ ಅವಕಾಶ ವಂಚಿತನಾಗಿರುವ ಶಿಖರ್ ಧವನ್ ಐಪಿಎಲ್ನಲ್ಲಿ ಮಿಂಚುವ ಮೂಲಕ ಮತ್ತೆ ಭಾರತ ತಂಡಕ್ಕೆ ಕಮ್ ಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದಾರೆ.