Site icon Vistara News

IPL 2023: ಮುಂಬೈ ಇಂಡಿಯನ್ಸ್‌ಗೆ ಆಘಾತ; ಐಪಿಎಲ್‌ನಿಂದ ಜಸ್‌ಪ್ರೀತ್‌ ಬುಮ್ರಾ ಔಟ್‌!

Jasprit Bumrah

ಮುಂಬಯಿ: ಬಹುನಿರೀಕ್ಷಿತ ಪುರುಷರ ೧೬ನೇ ಆವೃತ್ತಿಯ ಐಪಿಎಲ್‌ ಟೂರ್ನಿ(IPL 2023) ಆರಂಭಕ್ಕೆ ದಿನಗಣನೆ ಆರಂಭವಾಗಿದ್ದು, ಈಗಾಗಲೇ ಹಲವು ತಂಡಗಳು ಅಭ್ಯಾಸವನ್ನು ಆರಂಭಿಸಿದೆ. ಆದರೆ ೫ ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌(Mumbai Indians) ತಂಡಕ್ಕೆ ಆಘಾತವೊಂದು ಎದುರಾಗಿದೆ.

ಬೆನ್ನು ನೋವಿನ ಸಮಸ್ಯೆಯಿಂದ ಸಂಪೂರ್ಣವಾಗಿ ಚೇತರಿಕೆ ಕಾಣದ ಟೀಮ್‌ ಇಂಡಿಯಾದ ಪ್ರಧಾನ ವೇಗಿ ಜಸ್‌ಪ್ರೀತ್‌ ಬುಮ್ರಾ(Jasprit Bumrah) ಅವರು ಈ ಬಾರಿಯ ಐಪಿಎಲ್‌ ಟೂನಿಯಿಂದ ಹೊರಗುಳಿಯಲಿದ್ದಾರೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ. ಜತೆಗೆ ಒಂದೊಮ್ಮೆ ಭಾರತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಆಡಿದರೂ ಬುಮ್ರಾ ಈ ಪಂದ್ಯಕ್ಕೆ ಅನುಮಾನ ಎಂದು ವರದಿ ಮಾಡಿದೆ.

ಎನ್‌ಸಿಎಯಲ್ಲಿ ಪುನಶ್ಚೇತನ ಶಿಬಿರದಲ್ಲಿರುವ ಬುಮ್ರಾ ಸಂಪೂರ್ಣ ಫಿಟ್ ಆಗಲು ಇನ್ನೂ ಕೆಲವು ಸಮಯ ಬೇಕಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿರುವುದಾಗಿ ವರದಿ ಮಾಡಿದೆ. ಬುಮ್ರಾ ಈಗಾಗಲೇ ಆಸೀಸ್‌ ವಿರುದ್ಧದ ಟೆಸ್ಟ್‌ ಮತ್ತು ಏಕ ದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಹೀಗಾಗಿ ಅವರು ಐಪಿಎಲ್‌ನಿಂದಲೂ ದೂರ ಉಳಿಯಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಒಂದೊಮ್ಮ ಬುಮ್ರಾ ಐಪಿಎಲ್‌ ಆಡದಿದ್ದರೆ ಪ್ರಧಾನ ವೇಗಿಯನ್ನು ಕಳೆದುಕೊಂಡ ಮುಂಬೈ ತಂಡಕ್ಕೆ ಭಾರಿ ಹಿನ್ನಡೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ IPL 2023: ಐಪಿಎಲ್​ ಟೂರ್ನಿಗೆ ಅಭ್ಯಾಸ ಆರಂಭಿಸಿದ ಶಿಖರ್​ ಧವನ್​ ಬಳಗ

ಬುಮ್ರಾ ಕಳೆದ ವರ್ಷ ಸೆಪ್ಟೆಂಬರ್‌ 25ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದಾಗಿ ಟಿ20 ಪಂದ್ಯ ಆಡಿದ್ದರು. ಇದಾದ ಬಳಿಕ ಅವರು ಕ್ರಿಕೆಟ್‌ನಿಂದ ದೂರ ಉಳಿದಿದ್ದಾರೆ. ಸದ್ಯ ಅವರು ಏಷ್ಯಾ ಕಪ್‌ ಅಥವಾ ಇದಕ್ಕೂ ಮುನ್ನ ನಡೆಯುವ ಸರಣಿಯಲ್ಲಿ ಭಾರತ ಪರ ಆಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Exit mobile version