ಅಹಮದಾಬಾದ್: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಮುಂಬೈ ತಂಡ 62 ರನ್ಗಳಿಂದ ಸೋತು ಟೂರ್ನಿಯಿಂದ ಹೊರಬಿದ್ದಿತು. ಆದೆರ ಈ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ ಎದುರಾಳಿ ತಂಡದ ಆಟಗಾರ ಶುಭಮನ್ ಗಿಲ್ ಅವರನ್ನು ಮುಂಬೈ ತಂಡದ ನಾಯಕ ರೋಹಿತ್ ಶರ್ಮ ಅವರು ಹಾಡಿ ಹೊಗಳಿದ್ದಾರೆ.
ಪಂದ್ಯ ಮುಕ್ತಾಯಕ ಬಳಿಕ ಮತನಾಡಿದ ರೋಹಿತ್ ಶರ್ಮ ಅವರು, ಶುಭಮನ್ ಗಿಲ್ ಅವರು ಈ ಆವೃತ್ತಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದ್ದಾರೆ. ಅದರಲ್ಲೂ ಮಹತ್ವದ ಪಂದ್ಯದಲ್ಲಿ ಅವರು ಯಾವುದೇ ಆತಂಕಕ್ಕೆ ಒಳಗಾಗದೆ ಶತಕ ಬಾರಿಸಿದ್ದು ನಿಜಕ್ಕೂ ಮೆಚ್ಚಲೇ ಬೇಕು. ಅವರ ಈ ಪ್ರಚಂಡ ಫಾರ್ಮ್ ಲಂಡನ್ನಲ್ಲಿ ನಡೆಯುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಯೂ ಮುಂದುವರಿಯಲಿ ಎಂದು ನಾನು ಹಾರೈಸುತ್ತೇನೆ ಎಂದು ರೋಹಿತ್ ಹೇಳಿದರು.
ಮುಂಬೈ ವಿರುದ್ಧದ ಪಂದ್ಯದಲ್ಲಿ ಚುರುಕಿನ ಬ್ಯಾಟಿಂಗ್ ನಡೆಸಿದ ಗಿಲ್ ಕೇವಲ 49 ಎಸೆತಗಳಲ್ಲಿ ಶತಕ ಪೂರ್ತಿಗೊಳಿಸಿದರು. ಒಟ್ಟು 60 ಎಸೆತ ಎದುರಿಸಿದ ಬರೊಬ್ಬರಿ 10 ಸಿಕ್ಸರ್ ಮತ್ತು 7 ಬೌಂಡರಿ ನೆರವಿನಿಂದ 129 ರನ್ ಗಳಿಸಿದರು. ಇದು ಅವರು ಬಾರಿಸಿದ ಮೂರನೇ ಐಪಿಎಲ್ ಶತಕವಾಗಿದೆ.
ಇದನ್ನೂ ಓದಿ WTC Final 2023: ವಿಶ್ವ ಟೆಸ್ಟ್ಚಾಂಪಿಯನ್ಷಿಪ್ ಭಾರತ ಗೆದ್ದರೆ ಸಿಗುವ ಬಹುಮಾನ ಎಷ್ಟು? ಇಲ್ಲಿದೆ ಮಾಹಿತಿ
ಭಾರತ ಮತ್ತು ಆಸ್ಟ್ರೇಲಿಯಾ ವಿರುದ್ಧದ ಈ ಪ್ರಶಸ್ತಿ ಸಮರ ಜೂನ್ 7 ರಿಂದ 11ರವರೆಗೆ ಲಂಡನ್ನ ದಿ ಓವಲ್ ಮೈದಾನದಲ್ಲಿ ನಡೆಯಲಿದೆ. ಈಗಾಗಲೇ ವಿರಾಟ್ ಕೊಹ್ಲಿ, ಮೊಮೊಹಮ್ಮದ್ ಸಿರಾಜ್, ಇತರ ಐಪಿಎಲ್ ತಂಡಗಳ ಆಟಗಾರರಾದ ಆರ್. ಅಶ್ವಿನ್, ಅಕ್ಷರ್ ಟೇಲ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಜೈದೇವ್ ಉನಾದ್ಕತ್ ಅವರು ಮೊದಲ ಬ್ಯಾಚ್ನಲ್ಲಿ ಲಂಡನ್ ತಲುಪಿದ್ದು ಅಭ್ಯಾಸದಲ್ಲಿ ನಿರತರಾಗಿದ್ದಾರೆ. ಅಂತಿಮ ಬ್ಯಾಚ್ನಲ್ಲಿ ನಾಯಕ ರೋಹಿತ್ ಶರ್ಮ, ರವೀಂದ್ರ ಜಡೇಜ, ಇಶಾನ್ ಕಿಶನ್, ಶುಭಮನ್ ಗಿಲ್, ಮೊಹಮ್ಮದ್ ಶಮಿ, ಕೆ.ಎಸ್. ಭರತ್ ಮತ್ತು ಅಜಿಂಕ್ಯ ರಹಾನೆ ಐಪಿಎಲ್ ಫೈನಲ್ ಮುಗಿದ ತಕ್ಷಣವೇ ಲಂಡನ್ಗೆ ವಿಮಾನ ಏರಲಿದ್ದಾರೆ.
ಇದನ್ನೂ ಓದಿ IPL 2023: ಶತಕ ಬಾರಿಸಿ ಸೆಹವಾಗ್ ದಾಖಲೆ ಮುರಿದ ಶುಭಮನ್ ಗಿಲ್
ಫೈನಲ್ ಪಂದ್ಯಕ್ಕೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯ್ದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಸ್ಟ್ಯಾಂಡ್ ಬೈ ಆಟಗಾರರು: ಋತುರಾಜ್ ಗಾಯಕ್ವಾಡ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.