ಆಕ್ಲೆಂಡ್: 16ನೇ ಆವೃತ್ತಿಯ ಐಪಿಎಲ್(IPL 2023) ಟೂರ್ನಿಯ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಉದ್ಘಾಟನಾ ಪಂದ್ಯದಲ್ಲಿ ಮೊಣಕಾಲು ಗಾಯಕ್ಕೆ ತುತ್ತಾಗಿ ಟೂರ್ನಿಯಿಂದ ಹೊರಬಿದ್ದ ಗುಜರಾತ್ ಟೈಟಾನ್ಸ್(Gujarat Titans) ತಂಡದ ಆಟಗಾರ ಕೇನ್ ವಿಲಿಯಮ್ಸನ್(Kane Williamson) ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ತವರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಫೋಟೊವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ವಿಲಿಯಮ್ಸನ್ ಈ ಬಾರಿಯ ಐಪಿಎಲ್ ಆಡಲು ಸಾಧ್ಯವಾಗದ ಬಗ್ಗೆ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
“ಈ ಆವೃತ್ತಿಯ ಮುಂಬರುವ ಪಂದ್ಯಗಳಿಗೆ ನನ್ನ ಗುಜರಾತ್ ಟೈಟಾನ್ಸ್ ತಂಡಕ್ಕೆ ಶುಭ ಹಾರೈಕೆಗಳು. ನಾನು ನಿಮ್ಮೊಂದಿಗೆ ಆಡಲು ಸಾಧ್ಯವಾಗದೆ ಇರುವುದಕ್ಕೆ ಬೇಸರವಿದೆ. ನನ್ನನ್ನು ಬೆಂಬಲಿಸಿದ ಎಲ್ಲ ಅಭಿಮಾನಿಗಳಿಗೂ ಧನ್ಯವಾದಗಳು. ಆದಷ್ಟು ಬೇಗ ಗುಣಮುಖರಾಗಲು ಎದುರು ನೋಡುತ್ತಿದ್ದೇನೆ. ಧನ್ಯವಾದಗಳು” ಎಂದು ಕೇನ್ ವಿಲಿಯಮ್ಸನ್ ಶುಭ ಹಾರೈಸಿದ್ದಾರೆ. ಈ ವೀಡಿಯೊವನ್ನು ಗುಜರಾತ್ ಟೈಟಾನ್ಸ್ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.
ಇದನ್ನೂ ಓದಿ IPL 2023: ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದ ಪಿಚ್ ರಿಪೋರ್ಟ್
ಭಾನುವಾರ ಕೇನ್ ವಿಲಿಯಮ್ಸನ್ ಅವರ ಮೊಣಕಾಲು ಗಾಯ ಗಂಭೀರ ಸ್ವರೂಪದಿಂದ ಕೂಡಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರು ತಮ್ಮ ತವರು ನ್ಯೂಜಿಲ್ಯಾಂಡ್ಗೆ ತೆರಳಲಿದ್ದಾರೆ. ಅವರ ಬದಲು ತಂಡಕ್ಕೆ ಬದಲಿ ಆಟಗಾರನನ್ನು ಇನ್ನಷ್ಟೇ ಅಂತಿಮಗೊಳಿಸಬೇಕಿದೆ. ಈ ಕುರಿತು ಸೂಕ್ತ ಸಮಯದಲ್ಲಿ ಘೋಷಣೆ ಮಾಡಲಾಗುವುದು ಎಂದು ಪ್ರಾಂಚೈಸಿ ತಿಳಿಸಿತ್ತು. ಇದೀಗ ಕೇನ್ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಇದನ್ನೂ ಓದಿ IPL 2023: ಐಪಿಎಲ್ನಲ್ಲಿಯೂ ಸದ್ದು ಮಾಡಿದ ಕಾಂತಾರ
ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡದ ವಿರುದ್ಧ ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಕೇನ್ ವಿಲಿಯಮ್ಸನ್ ಗಾಯಕ್ಕೆ ಒಳಗಾಗಿದ್ದರು. ಋತುರಾಜ್ ಗಾಯಕ್ವಾಡ್ ಬಾರಿಸಿದ ಚೆಂಡನನ್ನು ಬೌಂಡರಿ ಗೆರೆಯ ಬಳಿ ತಡೆಯಲು ವಿಲಿಯಮ್ಸನ್ ಮೇಲಕ್ಕೆ ಜಿಗಿದಿದ್ದರು. ಚೆಂಡನ್ನು ತಡೆದು ಎದುರಾಳಿ ತಂಡ ಆರು ರನ್ಗಳು ಸಂಗ್ರಹಿಸದಂತೆ ನೋಡಿಕೊಂಡ ಹೊರತಾಗಿಯೂ ಅವರು ಕಳಕ್ಕೆ ಬೀಳುವಾಗ ಮಂಡಿಯೂರಿದ್ದರು. ಮಂಡಿ ಜೋರಾಗಿ ನೆಲಕ್ಕೆ ಅಪ್ಪಳಿಸಿದ ಅವರು ಗಂಭೀರ ಗಾಯಗೊಂಡಿದ್ದರು.