ಹೈದರಾಬಾದ್: 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ 4ನೇ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬೌಲಿಂಗ್ ಆಯ್ಕೆ ಮಾಡಿದೆ. ಎದುರಾಳಿ ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಆಹ್ವಾನ ಪಡೆದಿದೆ. ಏಡೆನ್ ಮಾರ್ಕ್ರಮ್ ಅವರ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾದ ವೇಗಿ ಭುವನೇಶ್ವರ್ ಕುಮಾರ್ ಅವರು ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇಂಗ್ಲೆಂಡ್ನ ಡೇಂಜರಸ್ ಬ್ಯಾಟರ್ ಹ್ಯಾರಿ ಬ್ರೂಕ್ ಅವರು ಈ ಪಂದ್ಯದ ಮೂಲಕ ಐಪಿಎಲ್ಗೆ ಪದಾರ್ಪಣೆ ಮಾಡಿದರು.
ಉಭಯ ತಂಡಗಳು ಇದುವರೆ ಐಪಿಎಲ್ನಲ್ಲಿ ಒಟ್ಟು 16 ಬಾರಿ ಮುಖಾಮುಖಿಯಾಗಿವೆ. ಸನ್‌ರೈಸರ್ಸ್ ಹೈದರಾಬಾದ್ 8 ಬಾರಿ ಗೆದ್ದಿದ್ದರೆ, ರಾಜಸ್ಥಾನ ರಾಯಲ್ಸ್ ಕೂಡ 8 ಬಾರಿ ಗೆಲುವು ಸಾಧಿಸಿದೆ. ಬಲಾಬಲದಲ್ಲಿ ಇತ್ತಂಡಗಳು ಸಮಾನವಾಗಿ ಕಾಣಿಸಿಕೊಂಡಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ರೋಚಕ ಹಣಾಹಣಿ ಎಂದು ನಿರೀಕ್ಷೆ ಮಾಡಬಹುದಾಗಿದೆ.
ಹೈದರಾಬಾದ್ನ ರಾಜೀವ್ ಗಾಂಧಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದುವರೆಗೆ 64 ಐಪಿಎಲ್ ಪಂದ್ಯಗಳು ನಡೆದಿದ್ದು, ಮೊದಲು ಬ್ಯಾಟಿಂಗ್ ಮಾಡಿದ ತಂಡ 27 ಪಂದ್ಯಗಳಲ್ಲಿ ಜಯ ಸಾಧಿಸಿದೆ. 37 ಬಾರಿ ಚೇಸಿಂಗ್ ಮಾಡುವ ತಂಡ ಗೆಲುವು ಸಾಧಿಸಿದೆ. ವೇಗದ ಬೌಲರ್ ಗಳಿಗೆ ಪಿಚ್ ಹೆಚ್ಚಿನ ನೆರವು ನೀಡಲಿದೆ.
ಸಂಭಾವ್ಯ ತಂಡಗಳು
ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಗ್ಲೆನ್ ಫಿಲಿಪ್ಸ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್(ನಾಯಕ), ಉಮ್ರಾನ್ ಮಲಿಕ್, ಫಜಲ್ಹಕ್ ಫಾರೂಕಿ, ಅಕೇಲ್ ಹೊಸೈನ್. ಇಂಪ್ಯಾಕ್ಟ್ ಪ್ಲೇಯರ್: ಟಿ ನಟರಾಜನ್, ಸಮರ್ಥ ವ್ಯಾಸ್, ಅನ್ಮೋಲ್‌ಪ್ರೀತ್ ಸಿಂಗ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜಾಸ್ ಬಟ್ಲರ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ತ ಪಡಿಕ್ಕಲ್, ಶಿಮ್ರಾನ್ ಹೆಟ್ಮೈರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಯಜುವೇಂದ್ರ ಚಹಾಲ್, ನವದೀಪ್ ಸೈನಿ, ಜೇಸನ್ ಹೋಲ್ಡರ್. ಇಂಪ್ಯಾಕ್ಟ್ ಪ್ಲೇಯರ್: ಸಂದೀಪ್ ಶರ್ಮಾ, ಕುಲದೀಪ್ ಸೇನ್, ಕುಲದೀಪ್ ಯಾದವ್, ಮುರುಗನ್ ಅಶ್ವಿನ್, ಕುನಾಲ್ ಸಿಂಗ್ ರಾಥೋರ್. ಕೆ.ಎಮ್ ಆಸೀಫ್.