Site icon Vistara News

IPL 2023: ಐಪಿಎಲ್​ನಲ್ಲಿ ನೂತನ ಮೈಲುಗಲ್ಲು ತಲುಪಿದ ಸೂರ್ಯಕುಮಾರ್​

Wankhede Stadium At Mumbai

ಮುಂಬಯಿ: ಮಂಗಳವಾರ ನಡೆದ ಐಪಿಎಲ್(IPL 2023)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್​ ತಂಡ ಆರು ವಿಕೆಟ್​ಗಳಿಂದ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಮುಂಬೈ ಮೂರನೇ ಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್​ ಪ್ರದರ್ಶಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ಸೂರ್ಯಕುಮಾರ್​ ಯಾದವ್​ ಅವರು ಐಪಿಎಲ್​ ಕ್ರಿಕೆಟ್​ನಲ್ಲಿ ನೂತನ ಮೈಲುಗಲ್ಲೊಂದನ್ನು ತಲುಪಿದ್ದಾರೆ.

ವಾಂಖೇಡೆ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಆರ್‌ಸಿಬಿ 6 ವಿಕೆಟಿಗೆ 199 ರನ್‌ ಪೇರಿಸಿ ಸವಾಲೊಡ್ಡಿತು, ಜವಾಬಿತ್ತ ಮುಂಬೈ ಇಂಡಿಯನ್ಸ್​ ತಂಡವು 16.3 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟದಲ್ಲಿ ಜಯ ಸಾಧಿಸಿತಲ್ಲದೇ ಮೊದಲ ಮುಖಾಮುಖೀಯಲ್ಲಿ 8 ವಿಕೆಟ್‌ಗಳ ಸೋಲಿಗೆ ಸೇಡು ತೀರಿಸಿಕೊಂಡಿತು.

ಚೇಸಿಂಗ್​ ವೇಳೆ ಸಿಡಿಲಬ್ಬರದ ಬ್ಯಾಟಿಂಗ್​ ನಡೆಸಿದ ಟಿ20 ಕ್ರಿಕೆಟ್​ನ ನಂ.1 ಬ್ಯಾಟರ್​ ಸೂರ್ಯಕುಮಾರ್​ ಯಾದವ್​ ಆರ್​ಸಿಬಿ ಬೌಲರ್​ಗಳ ಮೇಲೆರಗಿ ವಾಂಖೇಡೆ ಅಂಗಳದಲ್ಲಿ ಸಿಕ್ಸರ್​ ಮತ್ತು ಬೌಂಡರಿಗಳ ಸುರಿಮಳೆಯನ್ನೇ ಸುರಿಸಿದರು. ನಟರಾಜ ಭಂಗಿಯ ಶೈಲಿಯಲ್ಲಿ ಬ್ಯಾಟ್​ ಬೀಸಿದ ಅವರು ಕೇವಲ 35 ಎಸೆತಗಳಲ್ಲಿ ಬರೋಬ್ಬರಿ 6 ಸಿಕ್ಸರ್​ ಮತ್ತು 7 ಬೌಂಡರಿ ನೆರವಿನಿಂದ 83 ರನ್​ ಬಾರಿಸಿದರು. ಈ ಬ್ಯಾಟಿಂಗ್​ ಅಬ್ಬರದ ಮಧ್ಯೆ ಸೂರ್ಯಕುಮಾರ್​ ಯಾದವ್​ ಅವರು ಐಪಿಎಲ್​ನಲ್ಲಿ ಮೂರು ಸಾವಿರ ರನ್​ ಪೂರೈಸಿದ ಸಾಧನೆ ಮಾಡಿದರು.

ಇದನ್ನೂ ಓದಿ IPL 2023 : ಮುಂಬಯಿ ಇಂಡಿಯನ್ಸ್​ ವಿರುದ್ಧ ಆರ್​ಸಿಬಿ ಸೋತ ಬಳಿಕ ಐಪಿಎಲ್ ಅಂಕಪಟ್ಟಿ ಹೇಗಿದೆ?

ಐಪಿಎಲ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಪಟ್ಟಿಯಲ್ಲಿ ಆರ್​ಸಿಬಿ ತಂಡದ ವಿರಾಟ್​ ಕೊಹ್ಲಿ ಅವರು ಮೊದಲ ಸ್ಥಾನದಲ್ಲಿದ್ದಾರೆ ಕೊಹ್ಲಿ 7 ಸಾವಿರಕ್ಕಿಂತಲೂ ಅಧಿಕ ಮೊತ್ತ ದಾಖಲಿಸಿದ್ದಾರೆ. ಆ ಬಳಿಕದ ಸ್ಥಾನದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶಿಖರ್ ಧವನ್‌ ಮತ್ತು ಮೂರನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಡೇವಿಡ್ ವಾರ್ನರ್ ಕಾಣಿಸಿಕೊಂಡಿದ್ದಾರೆ.

Exit mobile version