Site icon Vistara News

IPL 2023: ಐಪಿಎಲ್​ನಲ್ಲಿ ಹಲವು ದಾಖಲೆ ಮೇಲೆ ಕಣ್ಣಿಟ್ಟ ವಿರಾಟ್​ ಕೊಹ್ಲಿ

virat-kohli-overtakes-windies-explosive-batsman-kieran-pollard

virat-kohli-overtakes-windies-explosive-batsman-kieran-pollard

ಬೆಂಗಳೂರು: ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್​ ಕ್ರಿಕೆಟ್​ ಟೂರ್ನಿ(IPL 2023) ಆರಂಭಕ್ಕೆ ಇನ್ನು ಒಂದು ದಿನ ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಈ ಬಾರಿ ಯಾವ ತಂಡ ಕಪ್​ ಗೆಲ್ಲಬಹುದು ಎಂಬ ಲೆಕ್ಕಾಚಾರಗಳು ಆರಂಭವಾಗಿದೆ. ಅದರಲ್ಲೂ ಆರ್​ಸಿಬಿ ಅಭಿಮಾನಿಗಳು ಈ ಬಾರಿ ಪಕ್ಕಾ ಕಪ್ ನಮ್ದೇ ಎಂದು ಭವಿಷ್ಯ ನುಡಿಯಲಾರಂಭಿಸಿದ್ದಾರೆ. ಆರ್​ಸಿಬಿ(RCB) ತನ್ನ ಮೊದಲ ಪಂದ್ಯವನ್ನು ಏಪ್ರಿಲ್​ 2 ರಂದು ಮುಂಬೈ ಇಂಡಿಯನ್ಸ್​ ವಿರುದ್ಧ ಆಡುವ ಮೂಲಕ ಅಭಿಯಾನ ಆರಂಭಿಸಲಿದೆ. ಈ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ.

ಸದ್ಯ ಉತ್ತಮ ಬ್ಯಾಟಿಂಗ್​ ಫಾರ್ಮ್​ನಲ್ಲಿರುವ ವಿರಾಟ್​ ಕೊಹ್ಲಿ(virat kohli) ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಲೇ ಇದ್ದಾರೆ. ಇದೀಗ ಐಪಿಎಲ್​ನಲ್ಲಿಯೂ ಅವರು ಕೆಲ ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಇವು ಯಾವುದು ಎಂಬ ಮಾಹಿತಿ ಈ ಕೆಳಗಿನಂತಿದೆ.

ಅತಿ ಹೆಚ್ಚು ಶತಕ

ಐಪಿಎಲ್​ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆ ಯುನಿವರ್ಸ್​ ಬಾಸ್​ ಖ್ಯಾತಿಯ ಕ್ರಿಸ್​ ಗೇಲ್​ ಹೆಸರಿನಲ್ಲಿದೆ. ಅವರು 6 ಐಪಿಎಲ್ ಶತಕ ಬಾರಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಈ ದಾಖಲೆಯನ್ನು ಮುರಿಯುವ ಅವಕಾಶ ವಿರಾಟ್​ ಕೊಹ್ಲಿಗಿದೆ. ಸದ್ಯ ಕೊಹ್ಲಿ 5 ಶತಕ ಬಾರಿಸಿ ದ್ವಿತೀಯ ಸ್ಥಾನದಲ್ಲಿದ್ದಾರೆ. ಒಂದೊಮ್ಮೆ ಕೊಹ್ಲಿ ಈ ಆವೃತ್ತಿಯಲ್ಲಿ 2 ಶತಕ ಬಾರಿಸಿದರೆ ಗೇಲ್​ ದಾಖಲೆ ಮುರಿಯಲಿದ್ದಾರೆ. ಮೂರನೇ ಸ್ಥಾನದಲ್ಲಿ ಡೇವಿಡ್​ ವಾರ್ನರ್​ ಕಾಣಿಸಿಕೊಂಡಿದ್ದಾರೆ. ಅವರು 4 ಶತಕ ಬಾರಿಸಿದ್ದಾರೆ. ವಾರ್ನರ್​ಗೂ ಕೂಡ ಗೇಲ್​ ದಾಖಲೆ ಮುರಿಯುವ ಅವಕಾಶವಿದೆ.

ಕ್ಯಾಚ್​ ದಾಖಲೆ

ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ಇದುವರೆಗೂ 93 ಕ್ಯಾಚ್ ಪಡೆದಿದ್ದು. ಅತಿ ಹೆಚ್ಚು ಕ್ಯಾಚ್ ಪಡೆದ ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಮಾಜಿ ಆಟಗಾರ ಸುರೇಶ್ ರೈನಾ 109 ಕ್ಯಾಚ್ ಪಡೆದು ಅಗ್ರ ಸ್ಥಾನದಲ್ಲಿದ್ದರೆ. ಕೊಹ್ಲಿ ಈ ಆವೃತ್ತಿಯಲ್ಲಿ 7 ಕ್ಯಾಚ್​ ಪಡೆದರೆ 100 ಕ್ಯಾಚ್​ಗಳನ್ನು ಪೂರ್ಣಗೊಳಿಸಲಿದ್ದಾರೆ. ರೋಹಿತ್​ ಶರ್ಮ ಅವರು ಸದ್ಯ 97 ಕ್ಯಾಚ್‌ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ರೋಹಿತ್​ 3 ಕ್ಯಾಚ್​ ಪಡೆದರೆ ಅವರು ಕೂಡ 100ನೇ ಕ್ಯಾಚ್​ ಪೂರ್ಣಗೊಳಿಸಲಿದ್ದಾರೆ.

ಇದನ್ನೂ ಓದಿ IPL 2023: ಐಪಿಎಲ್​ ಪದಾರ್ಪಣೆ ನಿರೀಕ್ಷೆಯಲ್ಲಿ ಅರ್ಜುನ್​ ತೆಂಡೂಲ್ಕರ್​

7000 ಸಾವಿರ ರನ್

ಐಪಿಎಲ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 223 ಪಂದ್ಯಗಳಿಂದ 6624 ರನ್ ಸಿಡಿಸಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಈ ಆವೃತ್ತಿಯಲ್ಲಿ 376 ರನ್ ಸಿಡಿಸಿದರೆ 7 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಈಗಾಗಲೇ ಅವರು ಐಪಿಎಲ್ ಟೂರ್ನಿಯಲ್ಲಿ ವೇಗದ 6 ಸಾವಿರ ರನ್ ಪೂರೈಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ಹೊಂದಿದ್ದಾರೆ. ಅತಿ ಹೆಚ್ಚು ರನ್​ ಗಳಿಸಿದವರ ಪಟ್ಟಿಯಲ್ಲಿ ಶಿಖರ್ ಧವನ್​ಗೆ ಎರಡನೇ ಸ್ಥಾನ ಅವರು 6,243 ಬಾರಿಸಿದ್ದಾರೆ. ಈ ಬಾರಿ ಉತ್ತಮ ಬ್ಯಾಟಿಂಗ್​ ಪ್ರದರ್ಶಿಸಿದರೆ ಅವರಿಗೂ 7 ಸಾವಿರ ರನ್​ಗಳ ಸನಿಹಕ್ಕೆ ಬರುವ ಅವಕಾಶವಿದೆ.

Exit mobile version