ಮೊಹಾಲಿ: ಗುರುವಾರದ ಐಪಿಎಲ್ನ ಡಬಲ್ ಹೆಡರ್ನ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳಲ್ಲಿ ಯಾರು ಬಲಿಷ್ಠರು ಮತ್ತು ದಾಖಲೆ ಹೇಗಿದೆ ಎಂಬ ಮಾಹಿತಿ ಇಂತಿದೆ.
ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಇದುವರೆಗೆ ಐಪಿಎಲ್ನಲ್ಲಿ ಒಟ್ಟು 30 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್ಸಿಬಿ 13 ಪಂದ್ಯಗಳಲ್ಲಿ ಗೆದ್ದಿದ್ದರೆ, ಪಂಜಾಬ್ ಕಿಂಗ್ಸ್ ತಂಡ 17 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಪಂಜಾಬ್ ಮುಂದಿದೆ. ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿ ತಂಡ ಪಂಜಾಬ್ ವಿರುದ್ಧ ಮಾತ್ರವೇ ಇಷ್ಟು ಸಂಖ್ಯೆಯ ಸೋಲು ಕಂಡಿದೆ. ಇನ್ನು ಕಳೆದ ಆವೃತ್ತಿಯಲ್ಲಿ ಇತ್ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಇದರಲ್ಲಿ ಎರಡೂ ಪಂದ್ಯಗಳಲ್ಲಿಯೂ ಪಂಜಾಬ್ ಕಿಂಗ್ಸ್ ಗೆದ್ದು ಬೀಗಿತ್ತು.
ಆರ್ಸಿಬಿ ತಂಡದ ಟಾಪ್ ಆರ್ಡರ್ ಬ್ಯಾಟಿಂಗ್ ಓಕೆ. ಆದರೆ ಮಧ್ಯಕ ಕ್ರಮಾಂದಲ್ಲಿ ಯಾವ ಆಟಗಾರನು ತಂಡಕ್ಕೆ ಆಸರೆಯಾಗುತ್ತಿಲ್ಲ, ಜತೆಗೆ ಮೊಹಮ್ಮದ್ ಸಿರಾಜ್ ಹೊರತುಪಡಿಸಿ ಉಳಿದ ಎಲ್ಲ ಬೌಲರ್ಗಳು ದುಬಾರಿಯಾಗುತ್ತಿದ್ದಾರೆ. ಈ ಸಮಸ್ಯೆ ಬಗೆಹರಿಯದೇ ಹೋದರೆ ಆರ್ಸಿಬಿಗೆ ಗೆಲುವು ಕಷ್ಟಸಾಧ್ಯ. ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಬಲಿಷ್ಠವಾಗಿದೆ.
ಸಂಭಾವ್ಯ ತಂಡಗಳು
ಪಂಜಾಬ್ ಕಿಂಗ್: ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್(ನಾಯಕ), ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಸ್ಯಾಮ್ ಕರ್ರನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಅರ್ಶ್‌ದೀಪ್ ಸಿಂಗ್, ಸಿಕಂದರ್ ರಜಾ, ಕಗಿಸೋ ರಬಾಡ.
ಆರ್ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯೇಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ / ಮೈಕಲ್ ಬ್ರೆಸ್‌ವೆಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.