Site icon Vistara News

IPL 2023: ಐಪಿಎಲ್​ ಟ್ರೋಫಿಯಲ್ಲಿ ಬರೆಯಲಾದ ಸಂಸ್ಕೃತ ಶ್ಲೋಕದ ಅರ್ಥವೇನು?

Yatra Pratibha Avsara Prapnotihi

ಅಹಮದಾಬಾದ್​: ಇನ್ನೇನು ಕೆಲ ಗಂಟೆಗಳಲ್ಲಿ 16ನೇ ಆವೃತ್ತಿಯ ಐಪಿಎಲ್​ನ ಫೈನಲ್ ಕಾದಾಟ ಆರಂಭವಾಗಲಿದೆ. ಈ ಸಮರದಲ್ಲಿ ಚೆನ್ನೈ ಮತ್ತು ಗುಜರಾತ್​ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಈ ಬಾರಿ ಯಾರು ಕಪ್ ಗೆಲ್ಲಲಿದ್ದಾರೆ ಎಂಬ ಕುತೂಹಲದ ಮಧ್ಯೆ ಟ್ರೋಫಿಯಲ್ಲಿ ಬರೆದಿರುವ ಸಂಸ್ಕೃತ ಶ್ಲೋಕದ ಅರ್ಥವೇನು ಎಂಬ ಮತ್ತೊಂದು ಕುತೂಹಲ ಮೂಡಿದೆ. ಇಲ್ಲಿದೆ ಮಾಹಿತಿ.

ಭಾರತ ತಂಡ 1983ರಲ್ಲಿ ಗೆದ್ದ ಏಕದಿನ ವಿಶ್ವ ಕಪ್ ಮೇಲೆ “ಯತ್ರಾ ಅವಸರ ಪ್ರಾಪ್ನೋತಿಹಿ”(Yatra Pratibha Avsara Prapnotihi) ಎಂದು ಸಂಸ್ಕೃತ ಶ್ಲೋಕವೊಂದನ್ನು ಬರೆಯಲಾಗಿದೆ. ಇದೇ ಶ್ಲೋಕವನ್ನು ಐಪಿಎಲ್​ ಟ್ರೋಫಿಯಲ್ಲಿಯೂ ಬರೆಯಲಾಗಿದೆ. ಇದರ ಅರ್ಥ ಎಲ್ಲಿ ಪ್ರತಿಭೆಗಳು ಇರುತ್ತಾರೋ ಅಲ್ಲಿ ಅವಕಾಶವೂ ಇರುತ್ತದೆ ಎಂದು. ಇದನ್ನೇ ಸ್ಫೂರ್ತಿಯನ್ನಾಗಿಟ್ಟುಕೊಂಡು ಐಪಿಎಲ್​ ಟ್ರೋಫಿಯ ಮೇಲೂ ಈ ಶ್ಲೋಕವನ್ನು ಕೆತ್ತಲಾಗಿದೆ. 1983ರಲ್ಲಿ ಭಾರತ ತಂಡ ಲಂಡನ್​ಗೆ ವಿಶ್ವ ಕಪ್​ ಆಡಲು ತೆರಳಿದಾಗ ಭಾರತ ತಂಡವನ್ನು ಅತ್ಯಂತ ಕೀಳು ಮಟ್ಟದಲ್ಲಿ ಅಪಮಾನ ಮಾಡಲಾಗಿತ್ತು. ಅದರಲ್ಲೂ ಇಂಗ್ಲೆಂಡ್​ ಮತ್ತು ಆಸ್ಟ್ರೇಲಿಯಾ ಮಾಧ್ಯಮಗಳು ಕೆಲ ಸವಾಲನ್ನು ಹಾಕಿದ್ದವು. ಸ್ವತಃ ಭಾರತೀಯರೀಗೂ ಕಪ್​ ಗೆಲ್ಲುವ ವಿಶ್ವಾಸವಿರಲಿಲ್ಲ. ಆದರೆ ಅಂದು ಕಪೀಲ್​ ದೇವ್​ ಪಡೆ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು.

ಇದನ್ನೂ ಓದಿ IPL 2023 : ಸಮಾರೋಪದಲ್ಲಿ ಏನೆಲ್ಲ ಕಾರ್ಯಕ್ರಮಗಳಿವೆ? ನೇರ ಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಈ ವಿಶ್ವ ಕಪ್​ ಮೇಲೆ “ಯತ್ರಾ ಅವಸರ ಪ್ರಾತ್ನೋತಿನಿ” ಎಂದು ಬರೆಯಲಾಗಿತ್ತು. ಇದನ್ನೇ ಪ್ರಸಿದ್ಧ ಐಪಿಎಲ್​ ಟ್ರೋಫಿಯಲ್ಲಿಯೂ ಬರೆಯಲಾಗಿದೆ. ಐಪಿಎಲ್​ ಎಂಬುದು ಸ್ಥಳೀಯ ಆಟಗಾರರ ಪ್ರತಿಭೆಯನ್ನು ಅನಾವರಣ ಅಡಿಸಲು ಇರುವಂತ ಉತ್ತಮ ವೇದಿಕೆಯಾಗಿದೆ. ಸದ್ಯ ಈ ಟೂರ್ನಿಯಿಂದ ಅದೆಷ್ಟೋ ಆಟಗಾರರು ಬೆಳಕಿಗೆ ಬಂದು ವಿಶ್ವದ ನಂ.1 ಆಟಗಾರರಾಗಿಯೂ ಮೆರೆದಿದ್ದಾರೆ. ಈ ಕಾರಣದಿಂದ ಟ್ರೋಫಿ ಮೇಲೆ ಬರೆದಿರುವ ಶ್ಲೋಕ ಅರ್ಥಪೂರ್ಣವಾಗಿದೆ.

Exit mobile version