ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(Royal Challengers Bangalore) ಮತ್ತು ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ವಿರುದ್ಧದ ಹೈ ವೋಲ್ಟೇಜ್ ಪಂದ್ಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಉಭಯ ತಂಡಗಳ ಈ ಹೋರಾಟ ಇಂದು(ಸೋಮವಾರ) ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯ ಆರಂಭಕ್ಕೂ ಮುನ್ನ ಖ್ಯಾತ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ(Aryavardhan Guruji) ಅವರು ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
“ಇವತ್ತು ನನ್ನ ಬೆಂಬಲ ಆರ್ಸಿಬಿ ತಂಡಕ್ಕೆ. ನನ್ನ ಪ್ರಕಾರ, ಇವತ್ತಿನ ಪಂದ್ಯದಲ್ಲಿ ವೆಯ್ನ್ ಪಾರ್ನೆಲ್ ಮೇಲೆ ತುಂಬಾ ಭರವಸೆ ಇಟ್ಟಿದ್ದೇನೆ. ಮ್ಯಾಕ್ಸ್‌ವೆಲ್ ಕೂಡ ಇಂದಿನ ಪಂದ್ಯದಲ್ಲಿ ತುಂಬಾ ಒಳ್ಳೆಯ ಆಟ ಆಡಬಹುದು. ಇಂದಿನ ಪಂದ್ಯ ಬಹಳ ಕುತೂಹಲ ಮೂಡಿಸಲಿದೆ. ಕೊನೆಯ ಓವರ್‌ವರೆಗೂ ಪಂದ್ಯ ಸಾಗಲಿದೆ” ಎಂದು ಆರ್ಯವರ್ಧನ್ ಗುರೂಜಿ ಅವರು ತಮ್ಮ ಫೇಸ್ಬುಕ್ನಲ್ಲಿ ಭವಿಷ್ಯ ನುಡಿದಿದ್ದಾರೆ. ಆರ್ಯವರ್ಧನ್ ಗುರೂಜಿ ಅವರ ಈ ಭವಿಷ್ಯದ ಫೋಸ್ಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಇದನ್ನೂ ಓದಿ IPL 2023: ಪೃಥ್ವಿ ಶಾಗೆ ಇನ್ನಷ್ಟು ಅವಕಾಶ ಕೊಡುತ್ತೇವೆ: ಶೇನ್ ವ್ಯಾಟ್ಸನ್
ಸದ್ಯ ಆರ್ಸಿಬಿ ನಾಲ್ಕು ಪಂದ್ಯಗಳನ್ನು ಆಡಿದ್ದು ಇದರಲ್ಲಿ ಎರಡು ಪಂದ್ಯಗಳನ್ನು ಗೆದ್ದಿದೆ. ಇದೀಗ ಐದನೇ ಪಂದ್ಯದಲ್ಲಿ ಎಂ.ಎಸ್. ಧೋನಿ ಸಾರಥ್ಯದ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಸವಾಲು ಎದುರಿಸಲಿದೆ. ಆರ್ಸಿಬಿ ವಿರುದ್ಧ ಧೋನಿ ಉತ್ತಮ ದಾಖಲೆ ಹೊಂದಿದ್ದಾರೆ. ಚಿನ್ನಸ್ವಾಮಿಯಲ್ಲೇ ಧೋನಿ ಈ ಹಿಂದೊಮ್ಮೆ ಆಡಿದ ಪಂದ್ಯವೊಂದರಲ್ಲಿ ಮೈದಾನದಿಂದ ಹೊರಕ್ಕೆ ಸಿಕ್ಸರ್ ಬಾರಿಸಿ ಮಿಂಚಿದ್ದರು. ಉಭಯ ತಂಡಗಳು ಇದುವರೆಗೆ ಐಪಿಎಲ್ನಲ್ಲಿ 30 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಚೆನ್ನೈ 19 ಪಂದ್ಯಗಳನ್ನು ಗೆದ್ದಿದೆ. ಆರ್ಸಿಬಿ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.
ಇದನ್ನೂ ಓದಿ IPL 2023: ತಮ್ಮನ ಐಪಿಎಲ್ ಪದಾರ್ಪಣೆಗೆ ಭಾವನಾತ್ಮಕ ಪೋಸ್ಟ್ ಹಾಕಿದ ಅಕ್ಕ ಸಾರಾ ತೆಂಡೂಲ್ಕರ್
ಸಂಭಾವ್ಯ ತಂಡಗಳು
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಹಮ್ಮದ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್/ ಮಹೀಶ್ ತೀಕ್ಷಣ, ಸಿಸಂಡ ಮಗಾಲ, ಎಂ.ಎಸ್ ಧೋನಿ(ನಾಯಕ), ಎಸ್ ಹಂಗರ್ಗೇಕರ್, ತುಷಾರ್ ದೇಶಪಾಂಡೆ.
ಆರ್ಸಿಬಿ: ಆರ್ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯೇಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ / ಮೈಕಲ್ ಬ್ರೆಸ್‌ವೆಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.