ಅಹಮದಾಬಾದ್: ನ್ಯೂ ಬ್ಯಾಟಿಂಗ್ ಸೆನ್ಸೇಷನಲ್ ಶುಭಮನ್ ಗಿಲ್ ಅವರು ಇದೀಗ ಐಪಿಎಲ್ನಲ್ಲಿ ವಿರಾಟ್ ಕೊಹ್ಲಿಯ ದಾಖಲೆಯೊಂದರ ಮೇಲೆ ಕಣ್ಣಿಟ್ಟಿದ್ದಾರೆ. ಸದ್ಯ 851 ರನ್ ಗಳಿಸಿರುವ ಗಿಲ್ ಅವರು ಚೆನ್ನೈ ವಿರುದ್ಧದ ಪಂದ್ಯದಲ್ಲಿ 122ರನ್ ಗಳಿಸಿದರೆ ವಿರಾಟ್ ಅವರ ಹೆಸರಿನಲ್ಲಿದ್ದ ದಾಖಲೆ ಪತನಗೊಳ್ಳಲಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ್ದ ಗಿಲ್ ಅವರು ಈ ಬಾರಿಯ ಐಪಿಎಲ್ನ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದರು. 730 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ. ಸದ್ಯ ಗಿಲ್ ಅವರು 851 ರನ್ ಬಾರಿಸಿದ್ದಾರೆ. ಆರ್ಸಿಬಿ ತಂಡ ಸೋತು ಹೊರ ಬಿದ್ದ ಕಾರಣ ಡು ಪ್ಲೆಸಿಸ್ಗೆ ಇನ್ನು ಗಿಲ್ ದಾಖಲೆ ಮುರಿಯುವ ಅವಕಾಶವಿಲ್ಲ.
ಕಳೆದ ನಾಲ್ಕು ಇನ್ನಿಂಗ್ಸ್ಗಳಲ್ಲಿ ಮೂರು ಶತಕ ಬಾರಿಸಿರುವ ಗಿಲ್ ಇದೀಗ ಹೊಸ ಮೈಲಿಗಲ್ಲು ಸ್ಥಾಪಿಸುವ ಸನಿಹದಲ್ಲಿದ್ದಾರೆ. 2016ರಲ್ಲಿ ವಿರಾಟ್ ಕೊಹ್ಲಿ ಅವರು ಗಳಿಸಿದ್ದ 973ರನ್ ಗಳ ದಾಖಲೆಯನ್ನು ಮುರಿಯಲು ಮುಂದಾಗಿದ್ದಾರೆ. ಇದಕ್ಕೆ ಗಿಲ್ ಅವರಿಗೆ ಬೇಕಿರುವುದು 122ರನ್ಗಳ ಗುರಿ. ಫೈನಲ್ ಪಂದ್ಯದಲ್ಲಿ ಶತಕದೊಂದಿ ಈ ಮೊತ್ತ ಪೇರಿಸಿದಲ್ಲಿ ಗಿಲ್ ಅವರು ಐಪಿಎಲ್ನ ಇತಿಹಾಸದ ಪುಟ ಸೇರಲಿದ್ದಾರೆ.
ಫೈನಲ್ ಪಂದ್ಯಕ್ಕೆ ಉಭಯ ತಂಡಗಳು
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ವೃದ್ಧಿಮಾನ್ ಸಹಾ, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್/ ಸಾಯಿ ಸುದರ್ಶನ್, ಮೊಹಮ್ಮದ್ ಶಮಿ, ಯಶ್ ದಯಾಳ್, ನೂರ್ ಅಹ್ಮದ್/ ಜೋಶುವಾ ಲಿಟಲ್, ಮೋಹಿತ್ ಶರ್ಮಾ.
ಇದನ್ನೂ ಓದಿ IPL 2023 : ತಮ್ಮ ದೇಹದಲ್ಲಿರುವ ಟ್ಯಾಟೂಗಳ ಅರ್ಥ ವಿವರಿಸಿದ ಸೂರ್ಯಕುಮಾರ್!
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು/ಅಜಿಂಕ್ಯ ರಹಾನೆ, ಮೊಯೀನ್ ಅಲಿ, ಶಿವಂ ದುಬೆ, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಮಥೀಶಾ ಪತಿರಾಣಾ, ಮಹೀಶ್ ತೀಕ್ಷಣ.