ಕೋಲ್ಕೊತಾ: ಕೆಕೆಆರ್ ವಿರುದ್ಧದ ಗುರುವಾರದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ್ ತಂಡದ ಸ್ಪಿನ್ನರ್ ಯಜುವೇಂದ್ರ ಚಹಲ್ ಅವರು ದಾಖಲೆಯೊಂದನ್ನು ಬರೆದಿದ್ದಾರೆ. ಐಪಿಎಲ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಕಿತ್ತ ಬೌಲರ್ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಕೋಲ್ಕೊತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆರಂಭಿಕ ಆಘಾತದ ಹೊರತಾಗಿಯೂ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ಗೆ 149 ರನ್ ಗಳಿಸಿದೆ. ಎದುರಾಳಿ ರಾಜಸ್ಥಾನ್ ಗೆಲುವಿಗೆ ಭರ್ತಿ 150 ರನ್ ಬಾರಿಸಬೇಕಿದೆ.
ಇದೇ ಪಂದ್ಯದಲ್ಲಿ ಮೊದಲು ಬೌಲಿಂಗ್ ಮಾಡಿದ ರಾಜಸ್ಥಾನ್ ಪರ ಚಹಲ್ ಅವರು ಕೆಕೆಆರ್ ನಾಯಕ ನಿತೀಶ್ ರಾಣಾ ಅವರ ವಿಕೆಟ್ ಕೀಳುತ್ತಿದ್ದಂತೆ ಐಪಿಎಲ್ ಕ್ರಿಕೆಟ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ ಎಂಬ ಹಿರಿಮೆಗೆ ಪಾತ್ರರಾದರು. ಈ ಪಂದ್ಯಕ್ಕೂ ಮುನ್ನ ಅವರು 183 ವಿಕೆಟ್ ಪಡೆದು ಲಸಿತ್ ಮಾಲಿಂಗ ಅವರೊಂದಿಗೆ ಜಂಟಿ ದಾಖಲೆ ಹೊಂದಿದ್ದರು. ಇದೀಗ ಚಹಲ್ ಅವರು ಈ ಪಂದ್ಯದಲ್ಲಿ 4 ವಿಕೆಟ್ ಪಡೆದು ಮಾಲಿಂಗರನ್ನು ಹಿಂದಿಕ್ಕಿ ಮೊದಲ ಸ್ಥಾನ ಪಡೆದರು. ಸದ್ಯ ಚಹಲ್ 187* ವಿಕೆಟ್ ಪಡೆದಿದ್ದಾರೆ. ಇದರ ಜತೆಗೆ ಪರ್ಪಲ್ ಕ್ಯಾಪ್ ಕೂಡ ಮುಡಿಗೇರಿಸಿಕೊಂಡರು.
ಇದನ್ನೂ ಓದಿ IPL 2023: ಚೆನ್ನೈ ತಂಡದ ಅಭಿಮಾನಿಗಳ ಬಗ್ಗೆ ಜಡೇಜಾ ನೀಡಿದ ಹೇಳಿಕೆಯೊಂದು ಭಾರಿ ಸಂಚಲನ ಸೃಷ್ಟಿಸಿದೆ
ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಪಟ್ಟಿಯಲ್ಲಿ ಪಿಯೂಷ್ ಚಾವ್ಲಾ(174*) ಮತ್ತು ಅಮೀತ್ ಮಿಶ್ರಾ(172*) ಕ್ರಮವಾಗಿ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದ್ದಾರೆ. ಉಭಯ ಆಟಗಾರರು ಐಪಿಎಲ್ ಆಡುತ್ತಿರುವುದರಿಂದ ಇವರಿಗೂ ಬ್ರಾವೊ ದಾಖಲೆ ಮುರಿಯುವ ಅವಕಾಶವಿದೆ.