ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ರನ್ಗಳ ಅಂತರದಿಂದ ಸೋಲು ಕಂಡಿದೆ. ಈ ಸೋಲಿಗೆ ಟೀಮ್ ಇಂಡಿಯಾದ ಮಾಜಿ ವೇಗಿ ಜಹೀರ್ ಖಾನ್ ಅವರು ಪ್ರಮುಖ ಕಾರಣವನ್ನು ತಿಳಿಸಿದ್ದಾರೆ.
ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಚೆನ್ನೈ ಸೂಪರ್ ಕಿಂಗ್ಸ್ ತಂಡ 6 ವಿಕೆಟಿಗೆ 226 ರನ್ ಪೇರಿಸಿತು. ಬೃಹತ್ ಮೊತ್ತವನ್ನು ದಿಟ್ಟ ರೀತಿಯಲ್ಲೇ ಬೆನ್ನಟ್ಟಿದ ಆರ್‌ಸಿಬಿ 8 ವಿಕೆಟಿಗೆ 218 ರನ್ ಮಾಡಿ ಸಣ್ಣ ಅಂತರದ ಸೋಲ ಕಂಡಿತು. ತಂಡದ ಈ ಸೋಲಿಗೆ ದಿನೇಶ್ ಕಾರ್ತಿಕ್ ಅವರ ಬ್ಯಾಟಿಂಗ್ ವೈಫಲ್ಯವೇ ಕಾರಣ ಎಂದು ಜಹೀರ್ ಖಾನ್ ಹೇಳಿದ್ದಾರೆ.
ಜಿಯೋ ಸಿನಿಮಾ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಮಾತನಾಡಿದ ಜಹೀರ್ ಖಾನ್, ವಿರಾಟ್ ಕೊಹ್ಲಿ (6) ಮತ್ತು ಮಹಿಪಾಲ್ ಲೊಮ್ರೊರ್ (0) ಅವರನ್ನು ಆರಂಭದಲ್ಲೇ ಕಳೆದುಕೊಂಡು ಆರ್‌ಸಿಬಿ ಸಂಕಷ್ಟಕ್ಕೆ ಸಿಲುಕಿತು. ಆದರೆ ನಾಯಕ ಫಾ ಡು ಪ್ಲೆಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಆಧಾರವಾದರು. ಚೆನ್ನೈಯ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ ಚಿನ್ನಸ್ವಾಮಿಯಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಸುರಿಮಳೆಗೈದರು. ಜತೆಗೆ ಆಕರ್ಷಕ ಅರ್ಧಶತವನ್ನು ಬಾರಿಸಿ ಮಿಂಚಿದರು. ಇವರಿಬ್ಬರೇ ಸೇರಿಕೊಂಡು ಪಂದ್ಯವನ್ನು ಗೆಲ್ಲಿಸುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಈ ವಿಕೆಟ್ ಪತನದ ಬಳಿಕ ಆಡಲಿಳಿದ ಯಾವುದೇ ಬ್ಯಾಟರ್ ಜವಾಬ್ದಾರಿಯು ಬ್ಯಾಟಿಂಗ್ ನಡೆಸಲಿಲ್ಲ. ಇದು ಸೋಲಿಗೆ ಪ್ರಮುಖ ಕಾರಣ ಎಂದು ಜಹೀರ್ ಹೇಳಿದರು.
ಇದನ್ನೂ ಓದಿ IPL 2023: ಪಂದ್ಯದ ವೇಳೆ ತಾಳ್ಮೆ ಕಳೆದುಕೊಂಡ ಮಹೇಂದ್ರ ಸಿಂಗ್ ಧೋನಿ; ವಿಡಿಯೊ ವೈರಲ್
ಡು ಪ್ಲೆಸಿಸ್ ಮತ್ತು ಮ್ಯಾಕ್ಸ್‌ವೆಲ್ ವಿಕೆಟ್ ಪತನಗೊಂಡರು ಆರ್ಸಿಬಿಗೆ ಗೆಲ್ಲಬಹುದಾಗಿತ್ತು. ಏಕೆಂದರೆ ಓವರ್ಗೆ 7 ರಿಂದ ಎಂಟು ರನ್ ಗಳಿಸುವ ಸವಾಲು ಮಾತ್ರ ಇತ್ತು. ಆದರೆ ದಿನೇಶ್ ಕಾರ್ತಿಕ್ ಅವರು ಅವಸರದ ಆಟಕ್ಕೆ ಮುಂದಾದದ್ದು ಪಂದ್ಯದ ಸೋಲಿಗೆ ಪ್ರಮುಖ ಕಾರಣ. ಅವರು ಈ ಹಿಂದಿನ ಫಿನಿಷರ್ ಪಾತ್ರವನ್ನು ವಹಿಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾಗುತ್ತಿದ್ದಾರೆ. ಜತೆಗೆ ಆರ್ಸಿ ತಂಡದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಕೊರತೆ ಎದ್ದು ಕಾಣುತ್ತಿದೆ ಎಂದು ಜಹೀರ್ ಅಭಿಪ್ರಾಯಪಟ್ಟರು.