Site icon Vistara News

IPL 2024: ಚೆನ್ನೈಗೆ ಆಘಾತ; ತಂಡ ತೊರೆದು ತವರಿಗೆ ಪ್ರಯಾಣಿಸಿದ ಸ್ಟಾರ್​ ವೇಗಿ

IPL 2024

ಚೆನ್ನೈ: ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(CSK)​ ತಂಡಕ್ಕೆ ಶುಕ್ರವಾರ ನಡೆಯುವ ಸನ್​ರೈಸರ್ಸ್ ಹೈದರಾಬಾದ್(SRH)​ ವಿರುದ್ಧದ ಪಂದ್ಯಕ್ಕೂ ಮುನ್ನ ಆಘಾತವೊಂದು ಎದುರಾಗಿದೆ. ತಂಡದ ಸ್ಟಾರ್​ ವೇಗಿ ಆಗಿರುವ ಬಾಂಗ್ಲಾದೇಶದ ಮುಸ್ತಫಿಜುರ್ ರೆಹಮಾನ್(Mustafizur Rahman) ದಿಢೀರ್​ ತಂಡ ತೊರೆದು ತವರಿಗೆ ಮರಳಿದ್ದಾರೆ. ಹೀಗಾಗಿ ಅವರು ಈ ಪಂದ್ಯಕ್ಕೆ ಅಲಭ್ಯರಾಗುವ ಸಾಧ್ಯತೆ ಇದೆ.

ಇದೇ ಜೂನ್ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್​ಗಾಗಿ(T20 World Cup 2024) ​ವೀಸಾ ಪಡೆಯುವ ಸಂಬಂಧಿಸಿದ ಕೆಲಸಕ್ಕಾಗಿ ರೆಹಮಾನ್ ತಮ್ಮ ತವರು ಬಾಂಗ್ಲಾದೇಶಕ್ಕೆ ಮರಳಿದ್ದಾರೆ. ವೀಸಾ ಪಡೆದ ಬಳಿಕ ಮತ್ತೆ ಚೆನ್ನೈ ತಂಡ ಸೇರಲಿದ್ದಾರೆ. ಆದರೆ ಅವರ ಆಗಮನದ ಸ್ಪಷ್ಟ ದಿನಾಂಕ ಇನ್ನಷ್ಟೇ ತಿಳಿಯಬೇಕಿದೆ. ಮೂಲಗಳ ಪ್ರಕಾರ ಏಪ್ರಿಲ್ 14 ರೊಳಗೆ ಹಿಂತಿರುಗಲಿದ್ದಾರೆ ಎನ್ನಲಾಗಿದೆ.

ಈ ಬಾರಿಯ ಐಪಿಎಲ್​(IPL 2024) ಟೂರ್ನಿಯಲ್ಲಿ ಮುಸ್ತಫಿಜುರ್ ಒಟ್ಟು ಆಡಿದ ಮೂರು ಪಂದ್ಯಗಳ ಪೈಕಿ 7 ವಿಕೆಟ್ ಕಬಳಿಸಿ ಅತ್ಯಧಿಕ ವಿಕೆಟ್​ ಟೇಕರ್​ ಬೌಲರ್​ಗಳ ಪಟ್ಟಿಯಲ್ಲಿ ಸದ್ಯ ಅಗ್ರಸ್ಥಾನ ಪಡೆದಿದ್ದಾರೆ. ಮುಂದಿನ ಕೆಲ ಪಂದ್ಯಕ್ಕೆ ಅಲಭ್ಯರಾಗಿರುವ ಕಾರಣ ಅವರ ವಿಕೆಟ್​ ಬೇಟೆಗೆ ಹಿನ್ನಡೆಯಾಗಿ ಪರಿಣಮಿಸಲಿದೆ. ಸದ್ಯ ಚೆನ್ನೈ ಆಡಿದ ಮೂರು ಪಂದ್ಯಗಳಲ್ಲಿ 2 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 4 ಅಂಕದೊಂದಿಗೆ ಮೂರನೇ ಸ್ಥಾನಿಯಾಗಿದೆ. ಕಳೆದ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಸೋಲು ಕಂಡಿತ್ತು.

ಇದನ್ನೂ ಓದಿ IPL 2024: ಮಯಾಂಕ್ ಬೆಂಕಿ ಎಸೆತಕ್ಕೆ ಚಿಲ್ಲಿಯಾದ ‘ಗ್ರೀನ್’​; ವಿಡಿಯೊ ವೈರಲ್​

ಟಿ20 ವಿಶ್ವಕಪ್​ ಟೂರ್ನಿ ಯಾವಾಗ ಆರಂಭ?


ಟಿ20 ವಿಶ್ವಕಪ್​ ಟೂರ್ನಿ ಜೂನ್​ 1ರಿಂದ ಆರಂಭಗೊಂಡು 29ರ ತನಕ ನಡೆಯಲಿದೆ. ಒಟ್ಟು 55 ಪಂದ್ಯಗಳು ಇರಲಿದ್ದು 20 ತಂಡಗಳು ಕಣಕ್ಕಿಳಿಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ

ಮೊದಲ ಸುತ್ತಿನ ಇತರ ಪಂದ್ಯಗಳು

ದಿನಾಂಕಪಂದ್ಯಸ್ಥಳ
ಜೂನ್ 3ಶ್ರೀಲಂಕಾ-ದಕ್ಷಿಣ ಆಫ್ರಿಕಾನ್ಯೂಯಾರ್ಕ್
ಜೂನ್​ 7ನ್ಯೂಜಿಲ್ಯಾಂಡ್​-ಅಫಘಾನಿಸ್ತಾನಗಯಾನ
ಜೂನ್​ 7 ಶ್ರೀಲಂಕಾ-ಬಾಂಗ್ಲಾದೇಶಡಲ್ಲಾಸ್
ಜೂನ್​ 8ಆಸ್ಟ್ರೇಲಿಯಾ-ಇಂಗ್ಲೆಂಡ್ಬಾರ್ಬಡೋಸ್​
ಜೂನ್​ 10ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶನ್ಯೂಯಾರ್ಕ್
ಜೂನ್​ 12ವೆಸ್ಟ್​ ಇಂಡೀಸ್​-ನ್ಯೂಜಿಲ್ಯಾಂಡ್ನ್ಯೂಯಾರ್ಕ್
ಜೂನ್​ 15ಆಸ್ಟ್ರೇಲಿಯಾ-ಸ್ಕಾಟ್ಲೆಂಡ್ಸೇಂಟ್​ ಲೂಸಿಯಾ
ಜೂನ್​ 17ವೆಸ್ಟ್​ ಇಂಡೀಸ್​-ಅಫಘಾನಿಸ್ತಾನಸೇಂಟ್​ ಲೂಸಿಯಾ

ನಾಕೌಟ್​ ಪಂದ್ಯಗಳ ವೇಳಾಪಟ್ಟಿ

ದಿನಾಂಕಪಂದ್ಯಸ್ಥಳ
ಜೂನ್​ 26 ಮೊದಲ ಸೆಮಿಫೈನಲ್ಗಯಾನ
ಜೂನ್​ 27ದ್ವಿತೀಯ ಸೆಮಿಫೈನಲ್ಟ್ರಿನಿಡಾಡ್
ಜೂನ್​ 29ಫೈನಲ್ಬಾರ್ಬಡೋಸ್
Exit mobile version