Site icon Vistara News

IPL 2024: ಡೆಲ್ಲಿ ತಂಡಕ್ಕೆ ಎಂಟ್ರಿ ಕೊಟ್ಟ ವಿಶ್ವ ದಾಖಲೆಯ ಶತಕ ವೀರ; ಎದುರಾಳಿಗಳಿಗೆ ನಡುಕ!

Jake Fraser-McGurk

ಬೆಂಗಳೂರು: ಐಪಿಎಲ್(IPL 2024)​ ಟೂರ್ನಿ ಆರಂಭಕ್ಕೆ ಕ್ಷಣಗಣನೆ ಶುರುವಾಗಿರುವಾಗಲೇ ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ತಂಡಕ್ಕೆ ಒಂದರ ಮೇಲೆ ಒಂದರಂತೆ ಆಘಾತ ಎದುರಾಗುತ್ತಲೇ ಇದೆ. ಬುಧವಾರವಷ್ಟೇ ಇಂಗ್ಲೆಂಡ್​ನ ಸ್ಟಾರ್​ ಬ್ಯಾಟರ್​ ಆಗಿರುವ ಹ್ಯಾರಿ ಬ್ರೂಕ್ (Harry Brook) ಐಪಿಎಲ್​ನಿಂದ ಹಿಂದೆ ಸರಿದಿದ್ದರು. ಇದೀಗ ದಕ್ಷಿಣ ಆಫ್ರಿಕಾದ ಬೌಲರ್​ ಲುಂಗಿ ಎನ್​ಗಿಡಿ(Lungi Ngidi) ಕೂಡ ಗಾಯದಿಂದಾಗಿ ಐಪಿಎಲ್​ ಆಡದಿರಲು ನಿರ್ಧರಿಸಿದ್ದಾರೆ.

ಲುಂಗಿ ಎನ್‌ಗಿಡಿ ಬದಲಿಗೆ ಆಲ್​ರೌಂಡರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಬದಲಿ ಆಟಗಾರನಾಗಿ ಮೂಲಬೆಲೆ 50 ಲಕ್ಷ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ತನ್ನ ತಂಡಕ್ಕೆ ಸೇರಿಸಿಕೊಂಡಿದೆ. ಆದರೆ, ಹ್ಯಾರಿ ಬ್ರೂಕ್ ಸ್ಥಾನಕ್ಕೆ ಇದುವರೆಗೂ ಯಾರು ಆಯ್ಕೆಯಾಗಿಲ್ಲ. ಆಸ್ಟ್ರೇಲಿಯಾದ ಆಟಗಾರ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಇತ್ತೀಚೆಗೆ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಸುದ್ದಿಯಾಗಿದ್ದರು. ಲಿಸ್ಟ್ ಎ ಪಂದ್ಯದಲ್ಲಿ ಕೇವಲ 29 ಎಸೆತದಲ್ಲಿ ಶತಕ ಬಾರಿಸಿ ಅತ್ಯಂತ ವೇಗದ ಶತಕದ ವಿಶ್ವದಾಖಲೆ ಬರೆದಿದ್ದರು. ಇದೀಗ ಡೆಲ್ಲಿ ಪಾಳಯ ಸೇರಿರುವ ಅವರು ಐಪಿಎಲ್​ನಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿಸುವ ಇರಾದೆಯಲ್ಲಿದ್ದಾರೆ.

ಇದನ್ನೂ ಓದಿ IPL 2024: ಐಪಿಎಲ್​ ಟೂರ್ನಿಯಲ್ಲಿ ಅತ್ಯಧಿಕ ವಿಕೆಟ್​ ಕಿತ್ತ ಟಾಪ್​ 5 ಬೌಲರ್​ಗಳು

ಮಾರ್ಚ್ 23 ರಂದು ಪಂಜಾಬ್ ಕಿಂಗ್ಸ್ ವಿರುದ್ಧ ಮೊಹಾಲಿಯಲ್ಲಿ ಪಂದ್ಯವನ್ನಾಡುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್​ ಐಪಿಎಲ್​ 2024ರ ಅಭಿಯಾನವನ್ನು ಪ್ರಾರಂಭಿಸಲಿದೆ. ನಾಯಕನಾಗಿರುವ ಪಂತ್​ ಅವರು ಬ್ಯಾಟಿಂಗ್​ ಜತೆಗೆ ವಿಕೆಟ್​ ಕೀಪಿಂಗ್ ಕೂಡ ಮಾಡಲಿದ್ದಾರೆ. ಅಜ್ಜಿ ನಿಧನರಾದ ಕಾರಣ ಹ್ಯಾರಿ ಬ್ರೂಕ್ ಐಪಿಎಲ್ 2024 ರಿಂದ ಹಿಂದೆ ಸರಿದಿರುವುದಾಗಿ ತಿಳಿಸಿದ್ದರು.

ಡೆಲ್ಲಿ ಕ್ಯಾಪಿಟಲ್ಸ್​ ಪರಿಷ್ಕೃತ ತಂಡ


ರಿಷಭ್ ಪಂತ್, ಪ್ರವೀಣ್ ದುಬೆ, ಡೇವಿಡ್ ವಾರ್ನರ್, ವಿಕ್ಕಿ ಒಸ್ತ್ವಾಲ್, ಪೃಥ್ವಿ ಶಾ, ಅನ್ರಿಚ್ ನಾರ್ಜೆ, ಅಭಿಷೇಕ್ ಪೊರೆಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಖಲೀಲ್ ಅಹ್ಮದ್, ಮಿಚೆಲ್ ಮಾರ್ಷ್, ಇಶಾಂತ್ ಶರ್ಮಾ, ಯಶ್ ಧುಲ್, ಮುಕೇಶ್ ಕುಮಾರ್, ಜೇಕ್ ಫ್ರಾಸರ್-ಎಂ, ಟ್ರಿಸ್ಟಾನ್ ಸ್ಟಬ್ಸ್, ರಿಕಿ ಭುಯಿ, ಕುಮಾರ್ ಕುಶಾಗ್ರಾ, ರಸಿಖ್ ದಾರ್, ಜೇ ರಿಚರ್ಡ್ಸನ್, ಸುಮಿತ್ ಕುಮಾರ್, ಶಾಯ್ ಹೋಪ್, ಸ್ವಸ್ತಿಕ್ ಚಿಕಾರಾ.

Exit mobile version