Site icon Vistara News

IPL 2024: 6 ಸೋಲು ಕಂಡರೂ ಆರ್​ಸಿಬಿಯ ಪ್ಲೇ ಆಫ್ ಆಸೆ ಇನ್ನೂ ಜೀವಂತ

IPL 2024

ಬೆಂಗಳೂರು: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ(IPL 2024) ಆರ್​ಸಿಬಿ(Royal Challengers Bengaluru) ತಂಡ ಕಪ್​ ಗೆಲ್ಲದಿದ್ದರೂ ಕೂಡ ಇಷ್ಟೊಂದು ಕಳಪೆ ಮಟ್ಟದ ಆಟವಾಡಿರಲಿಲ್ಲ. ಈ ಬಾರಿ ಆಡಿದ 7 ಪಂದ್ಯಗಳ ಪೈಕಿ ಕೇವಲ ಒಂದು ಪಂದ್ಯ ಮಾತ್ರ ಗೆಲುವು ಕಂಡಿದೆ. ದುರಾದೃಷ್ಟವಶಾತ್‌ ಈ ಬಾರಿ ತವರಿನಲ್ಲೇ ಅತ್ಯಧಿಕ ಪಂದ್ಯ ಸೋತ ಅವಮಾನಕ್ಕೆ ಸಿಲುಕಿದೆ.

ಟೂರ್ನಿ ಆರಂಭಕ್ಕೂ ಮುನ್ನ ವಿರಾಟ್​ ಕೊಹ್ಲಿ ಇದು ಆರ್​ಸಿಬಿಯ ಹೊಸ ಅಧ್ಯಾಯ ಎಂದು ಹೇಳುವು ಮೂಲಕ ಆರ್‌ಸಿಬಿ ಹವಾ ಸೃಷ್ಟಿಸಿತ್ತು. ಇದೀಗ ಸತತ ಸೋಲಿನಿಂದ ಸಾಮಾಜಿಕ ಜಾಲತಾಣದಲ್ಲಿ ಮುಗಿದು ಹೋದ ಅಧ್ಯಾಯ ಅಂತ ಅಭಿಮಾನಿಗಳು ವ್ಯಂಗ್ಯವಾಗಿ ಹೇಳತೊಡಗಿದ್ದಾರೆ. ಆರ್​ಸಿಬಿ ಮೇಲೆ ಸ್ವತಃ ಅಭಿಮಾನಿಗಳೇ ವಿಶ್ವಾಸ ಕಳೆದುಕೊಂಡಿದ್ದಾರೆ. ಕೊನೆಯ ಸ್ಥಾನದಲ್ಲಿದ್ದರೂ ಆರ್​ಸಿಬಿಗೆ ಇನ್ನೂ ಪ್ಲೇ ಆಫ್​ ಬಾಗಿಲು ತೆರೆದೇ ಇದೆ.

ಪ್ಲೇ ಆಫ್ ಆಸೆ ಜೀವಂತ

ಸದ್ಯದ ಪರಿಸ್ಥಿತಿಯಲ್ಲಿ ಆರ್‌ಸಿಬಿ ಪ್ಲೇ ಆಫ್ ಹಾದಿ ಸಂಪೂರ್ಣ ಮುಚ್ಚಿಲ್ಲ. ಆದರೆ, ಸತತವಾಗಿ ಗೆಲ್ಲಬೇಕಾದ ಒತ್ತಡ ತಂಡದ ಮೇಲಿದೆ. ಈಗಾಗಲೇ 7 ಪಂದ್ಯ ಆಡಿದ್ದು, 1 ಪಂದ್ಯ ಗೆದ್ದು, 6 ಪಂದ್ಯದಲ್ಲಿ ಸೋಲು ಕಂಡಿದೆ. 2 ಅಂಕ ಸಂಪಾದಿಸಿ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಆದರೆ, ಲೀಗ್‌ ಹಂತದಲ್ಲಿ ಇನ್ನೂ 7 ಪಂದ್ಯಗಳ ಬಾಕಿ ಇದೆ. ಹೀಗಾಗಿ ಉಳಿದ ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ ಮಾತ್ರ ಪ್ಲೇ ಆಫ್ ಅವಕಾಶ ಇದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಆರ್‌ಸಿಬಿ ಪ್ಲೇಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

ಇದನ್ನೂ ಓದಿ IPL 2024 Points Table: ಸೋಲಿನ ಮೂಲಕ ಕೊನೆಯ ಸ್ಥಾನದಲ್ಲೇ ಉಳಿದ ಆರ್​ಸಿಬಿ

ತಂಡದದಲ್ಲಿ ಸ್ಟಾರ್​ ಆಟಗಾರರಿದ್ದರೂ ಕೂಡ ಯಾರು ನಿರೀಕ್ಷಿತ ಪ್ರದರ್ಶನ ತೋರುತ್ತಿಲ್ಲ. ವಿರಾಟ್​ ಕೊಹ್ಲಿ, ದಿನೇಶ್​ ಕಾರ್ತಿಕ್​ ಮಾತ್ರ ತಂಡದ ನಂಬಿಕಸ್ಥ ಆಟಗಾರರಾಗಿದ್ದಾರೆ. ಆರ್​ಸಿಬಿ ಬ್ಯಾಟಿಂಗ್‌ನಲ್ಲಿ ಯಶಸ್ವಿಯಾದರೆ ಬೌಲಿಂಗ್‌ನಲ್ಲಿ ಎಡವುತ್ತಿದೆ. ಬೌಲಿಂಗ್‌ನಲ್ಲಿ ಯಶಸ್ವಿಯಾದರೆ, ಬ್ಯಾಟಿಂಗ್‌ನಲ್ಲಿ ಪಲ್ಟಿ ಹೊಡೆಯುತ್ತಿದೆ. ಬೌಲಿಂಗ್‌ ಪಡೆಯಂತೂ ಸಂಪೂರ್ಣ ಮೊನಚು ಕಳೆದುಕೊಂಡಿದೆ. ಇದು, ಸಹಜವಾಗಿ ಆರ್‌ಸಿಬಿಯನ್ನು ಸೋಲಿನ ಸುಳಿಗೆ ತಳ್ಳಿದೆ. ಒಟ್ಟಿನಲ್ಲಿ ಸಂಘಟನಾತ್ಮಕ ಹೋರಾಟವೇ ಬರುತ್ತಿಲ್ಲ. 

ಹೈದರಾಬಾದ್​ ವಿರುದ್ಧ ಸೋಲು


ಸೋಮವಾರ ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಆತಿಥೇಯ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಎಸ್​ಆರ್​ಎಚ್​ ತಂಡ ವಿಶ್ವ ದಾಖಲೆಯ 287 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಆರ್​ಸಿಬಿ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 262 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಆರ್​ಸಿಬಿ ಪರ ಒನ್​ ಮ್ಯಾನ್ ಆರ್ಮಿ ರೀತಿ ಹೋರಾಟ ಸಂಘಟಿಸಿದ ವಿಕೆಟ್​ ಕೀಪರ್ ಬ್ಯಾಟರ್​ ದಿನೇಶ್ ಕಾರ್ತಿಕ್​ 35 ಎಸೆತಗಳಲ್ಲಿ 83 ರನ್ ಬಾರಿಸಿದರು.

Exit mobile version