ಮುಂಬಯಿ: ಗುರುವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್(PBKS vs MI) ವಿರುದ್ಧ ಮುಂಬೈ ಇಂಡಿಯನ್ಸ್ 9 ರನ್ಗಳ ರೋಚಕ ಗೆಲುವು ಸಾಧಿಸಿತು. ಆದರೆ, ಈ ಪಂದ್ಯದಲ್ಲಿ (IPL 2024) ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದ ಕಾರಣಕ್ಕೆ ಮುಂಬೈ ನಾಯಕ ಹಾರ್ದಿಕ್ ಪಾಂಡ್ಯ(Hardik Pandya) ಅವರಿಗೆ ಬಿಸಿಸಿಐ 12 ಲಕ್ಷ ರೂ. ದಂಡ ವಿಧಿಸಿದೆ.
“ಕನಿಷ್ಠ ಓವರ್ ರೇಟ್ ಅಪರಾಧಗಳಿಗೆ ಸಂಬಂಧಿಸಿದಂತೆ ಐಪಿಎಲ್ ನೀತಿ ಸಂಹಿತೆಯ ಅಡಿಯಲ್ಲಿ ಇದು ಅವರ ತಂಡದ ಮೊದಲ ಅಪರಾಧವಾಗಿರುವುದರಿಂದ, ಪಾಂಡ್ಯ ಅವರಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ” ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಐಪಿಎಲ್ನ ಕೋಡ್ ಆಫ್ ಕಂಡಕ್ಟ್ನ ಮೊದಲ ಅಪರಾಧವಾದ ಕಾರಣ ಪಾಂಡ್ಯಗೆ 12 ಲಕ್ಷ ದಂಡ ವಿಧಿಸಲಾಗಿದೆ. ಇದೇ ತಪ್ಪು ಮತ್ತೆ ಮುಂದುವರಿದರೆ 24 ಲಕ್ಷ ದಂಡ ಬರೆ ಬೀಳಲಿದೆ. ಹೀಗಾಗಿ ಪಾಂಡ್ಯ ಮುಂದಿನ ಪಂದ್ಯದಲ್ಲಿ ಎಚ್ಚರಿಕೆಯಿಂದ ಆಡಬೇಲಿದೆ. ಬೆನ್ನು ನೋವಿನಿಂದ ಚೇತರಿಕೆಂಡು ಐಪಿಎಲ್ ಆಡಲಿಳಿದ ಪಾಂಡ್ಯ ಇದುವರೆಗೆ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಬ್ಯಾಟಿಂಗ್ ಮತ್ತು ಬೌಲಿಂಗ್ನಲ್ಲಿ ಘೋರ ವೈಫಲ್ಯ ಕಂಡಿದ್ದಾರೆ. ಇದೇ ಪ್ರದರ್ಶನ ಮುಂದಿನ ಪಂದ್ಯದಲ್ಲಿಯೂ ಕಂಡುಬಂದರೆ ಅವರಿಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಡ್ಡಿಯಿಲ್ಲ.
🚨 HARDIK PANDYA FINED 12 LAKHS FOR MAINTAINING SLOW OVERRATE. 🚨 pic.twitter.com/vWtURo8VEW
— Mufaddal Vohra (@mufaddal_vohra) April 19, 2024
ಇದನ್ನೂ ಓದಿ IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್ ಶರ್ಮ
ಸ್ಲೋ ಓವರ್ ರೇಟ್ ನಿಯಮದ ಪ್ರಕಾರ ಮೊದಲ ತಪ್ಪಿಗೆ ನಾಯಕನನ್ನು ದೋಷಿಯನ್ನಾಗಿ ಮಾಡಲಾಗುತ್ತದೆ. ಮೊದಲ ಬಾರಿಯ ತಪ್ಪಿಗೆ 12 ಲಕ್ಷ ರೂ. ದಂಡ ಹಾಕಲಾಗುತ್ತದೆ. ಇದು ಪುನರಾವರ್ತನೆಯಾದಲ್ಲಿ 24 ಲಕ್ಷ ರೂ. ದಂಡ ನಿಗದಿ ಮಾಡಲಾಗಿದೆ. ಅಲ್ಲದೆ ತಂಡದ ಇತರೆ ಆಟಗಾರರು ಪಂದ್ಯದ ಶುಲ್ಕದ ಶೇ.25 ರಷ್ಟು ಮೊತ್ತವನ್ನು ದಂಡವಾಗಿ ನೀಡಬೇಕು. ಒಂದೊಮ್ಮೆ ಮೂರನೇ ಬಾರಿ ಮತ್ತೆ ಇದೇ ತಪ್ಪು ಮರುಕಳಿಸಿದರೆ ಆಗ ನಾಯಕ ಒಂದು ಪಂದ್ಯದ ನಿಷೇಧಕ್ಕೆ ಗುರಿಯಾಗಲಿದ್ದಾರೆ.
ಪಂದ್ಯ ಗೆದ್ದ ಮುಂಬಯಿ
ಮಹಾರಾಜಾ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್ 19.1 ಓವರ್ಗಳಲ್ಲಿ 183 ರನ್ಗೆ ಆಲ್ಔಟ್ ಆಗಿ ಕೇವಲ 9 ರನ್ ಅಂತರದಿಂದ ಸೋಲೊಪ್ಪಿಕೊಂಡಿತು. ಗೆಲುವು ಸಾಧಿಸಿದ ಮುಂಬೈ ಅಂಕಪಟ್ಟಿಯಲ್ಲಿ(IPL 2024 Points Table) ಪ್ರಗತಿ ಸಾಧಿಸಿದೆ. ಈ ಪಂದ್ಯಕ್ಕೂ ಮುನ್ನ 9ನೇ ಸ್ಥಾನದಲ್ಲಿದ್ದ ಮುಂಬೈ ಈ ಗೆಲುವಿನೊಂದಿಗೆ 7ನೇ ಸ್ಥಾನಕ್ಕೇರಿದೆ. ಸೋಲು ಕಂಡ ಪಂಜಾಬ್ 9ನೇ ಸ್ಥಾನಕ್ಕೆ ಕುಸಿದಿದೆ.