ಬೆಂಗಳೂರು: ಐಪಿಎಲ್ 2024 ರ (IPL 2024) 51 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯುತ್ತಿದೆ. ಮುಂಬೈ ಇಂಡಿಯನ್ಸ್ ತನ್ನ ಕೊನೆಯ ನಾಲ್ಕು ಪಂದ್ಯಗಳನ್ನು ತವರಿನಲ್ಲಿ ಆಡಿದೆ ಮತ್ತು ಅದರಲ್ಲಿ ಮೂರನ್ನು ಮಾತ್ರ ಗೆಲ್ಲಲು ಸಾಧ್ಯವಾಗಿದೆ. ತವರಿನ ಪರಿಸ್ಥಿತಿಯನ್ನು ಸದುಪಯೋಗಪಡಿಸಿಕೊಂಡು ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ ಮೂರು ಪಂದ್ಯಗಳ ಸೋಲಿನ ಸರಣಿಯನ್ನು ಕೊನೆಗೊಳಿಸುವ ವಿಶ್ವಾಸದಲ್ಲಿದೆ ಹಾರ್ದಿಕ್ ಪಾಂಡ್ಯ ಬಳಗ.
ಐದು ಬಾರಿಯ ಚಾಂಪಿಯನ್ಸ್ ಮುಂಬಯಿ ಇಂಡಿಯನ್ಸ್ ತವರು ಸ್ಟೇಡಿಯಮ್ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಅದ್ಭುತ ದಾಖಲೆಯನ್ನು ಹೊಂದಿದೆ. ವಾಂಖೆಡೆ ಸ್ಟೇಡಿಯಂನಲ್ಲಿ ಕೋಲ್ಕತಾ ವಿರುದ್ಧ ಮುಂಬೈ ಇಂಡಿಯನ್ಸ್ ಆಡಿದ 10 ಪಂದ್ಯಗಳಲ್ಲಿ 9ರಲ್ಲಿ ಗೆಲುವು ಸಾಧಿಸಿದೆ. ಪ್ರಸ್ತುತ ಮುಂಬೈನಲ್ಲಿ ಫಾರ್ಮ್ನಲ್ಲಿ ಇಲ್ಲ. ಆದರೂ ಗೆಲುವಿಗಾಗಿ ಪ್ರಯತ್ನಿಸಲಿದೆ.
ರೋಹಿತ್ ಶರ್ಮಾಗೆ ಇಲ್ಲ ಚಾನ್ಸ್
ಶುಕ್ರವಾರ (ಮೇ 3) ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ನಂತರ ಆತಿಥೇಯರು ಆಟಕ್ಕಾಗಿ ವಿಶೇಷ ಪ್ಲೇಯಿಂಗ್ ಇಲೆವೆನ್ ಅನ್ನು ಘೋಷಿಸಿದರು. ಅಂದರೆ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯಕ್ಕೆ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಹೆಸರು ಆಡುವ ಹನ್ನೊಂದರಲ್ಲಿ ಕಾಣೆಯಾಗಿತ್ತು. ಆದರೆ, ಅವರು ಇಂಪ್ಯಾಕ್ಟ್ ಪ್ಲೇಯರ್ ಆಗಿ ಆಡಿದರು. ಅವರು ಫೀಲ್ಡಿಂಗ್ಗೆ ಬರಲಿಲ್ಲ.
ಇದನ್ನೂ ಓದಿ: KL Rahul : ವಿಶ್ವ ಕಪ್ ತಂಡಕ್ಕೆ ಕೆ. ಎಲ್ ರಾಹುಲ್ ಬೇಡ ಅಂದಿದ್ದು ರೋಹಿತ್ ಶರ್ಮಾ; ಸ್ಫೋಟಕ ಮಾಹಿತಿ ಬಹಿರಂಗ
ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡುತ್ತಿರುವುದರಿಂದ, ಅನುಭವಿ ಬ್ಯಾಟರ್ ಮೈದಾನಕ್ಕೆ ಇಳಿಯಲಿಲ್ಲ. ಆದರೆ ಪಂದ್ಯದ ದ್ವಿತೀಯಾರ್ಧದಲ್ಲಿ ಬ್ಯಾಟಿಂಗ್ ಮಾಡಲು ಹೊರಬಂದರು. ಕಳೆದ ಮೂರು ಇನ್ನಿಂಗ್ಸ್ಗಳಲ್ಲಿ ರೋಹಿತ್ ಎರಡಂಕಿಯ ಗಡಿ ತಲುಪಲು ಸಾಧ್ಯವಾಗಿಲ್ಲ. ಹೀಗಾಗಿ ಮರಳಲು ಎದುರು ನೋಡುತ್ತಿದ್ದಾರೆ.
ನಾವು ಬೌಲಿಂಗ್ ಮಾಡುತ್ತೇವೆ. ಇದು ಯಾವಾಗಲೂ ಹೆಮ್ಮೆಗಾಗಿ ಆಡುವ ಪಂದ್ಯ. ನಮಗೆ ಸಾಕಷ್ಟು ಕಠಿಣವಾಗಿ ಕಾಣುತ್ತದೆ ಆದರೆ ಅದೇ ಸಮಯದಲ್ಲಿ, ನಾವು ಉತ್ತಮ ಕ್ರಿಕೆಟ್ ಆಡಲು ಬಯಸುತ್ತೇವೆ. ತವರಿಗೆ ಮರಳಲು ಸಂತೋಷವಾಗಿದೆ. ಉತ್ತಮ ಟ್ರ್ಯಾಕ್ನಂತೆ ಕಾಣುತ್ತದೆ. ಇದು ಹೊಸ ಪಿಚ್ ಆದ್ದರಿಂದ ಮೊದಲು ಬೌಲಿಂಗ್ ಮಾಡುವುದು ಒಳ್ಳೆಯದು ಎಂದು ಭಾವಿಸಿದೆ. ನಬಿ ಬದಲಿಗೆ ನಮನ್ ಧೀರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ,” ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.
ಪ್ಲೇಯಿಂಗ್ ಇಲೆವೆನ್ ಇಂತಿದೆ
ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ನೇಹಾಲ್ ವಧೇರಾ, ಹಾರ್ದಿಕ್ ಪಾಂಡ್ಯ (ಸಿ), ನಮನ್ ಧೀರ್, ಟಿಮ್ ಡೇವಿಡ್, ಜೆರಾಲ್ಡ್ ಕೊಟ್ಜೆ, ಪಿಯೂಷ್ ಚಾವ್ಲಾ, ಜಸ್ಪ್ರೀತ್ ಬುಮ್ರಾ, ನುವಾನ್ ತುಷಾರ.
ಕೋಲ್ಕತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣ್ದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ವರುಣ್ ಚಕ್ರವರ್ತಿ.