Site icon Vistara News

IPL 2024: ಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ಜೇಕ್ ಫ್ರೇಸರ್-ಮೆಕ್‌ಗುರ್ಕ್

IPL 2024

ಲಕ್ನೋ: ಲಕ್ನೋ ಸೂಪರ್​ ಜೈಂಟ್ಸ್​(Lucknow Super Giants) ವಿರುದ್ಧದ ಪಂದ್ಯದಲ್ಲಿ ಪ್ರಚಂಡ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ಐಪಿಎಲ್​ನಲ್ಲಿ(IPL 2024) ಸಂಚಲನ ಮೂಡಿಸಿದ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ತಮ್ಮ ಪದಾರ್ಪಣ ಪಂದ್ಯದಲ್ಲೇ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಲಕ್ನೋ ವಿರುದ್ಧದ ಪಂದ್ಯದಲ್ಲಿ 5 ಸಿಕ್ಸರ್​ ಮತ್ತು 2 ಬೌಂಡರಿ ನೆರವಿನಿಂದ 55 ರನ್​ ಬಾರಿಸಿದ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಐಪಿಎಲ್ ಡೆಲ್ಲಿ(Delhi Capitals) ಪರ​ ಪದಾರ್ಪಣ ಪಂದ್ಯದಲ್ಲಿ ಅತ್ಯಧಿಕ ರನ್​ ಗಳಿಸಿದ 2ನೇ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾದರು. ದಾಖಲೆ ಮಾಜಿ ಆಟಗಾರ ಗೌತಮ್​ ಗಂಭೀರ್​ ಹೆಸರಿನಲ್ಲಿದೆ. 2008ರಲ್ಲಿ ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಅಜೇಯ 58 ರನ್​ ಬಾರಿಸಿದ್ದರು.

ಲುಂಗಿ ಎನ್‌ಗಿಡಿ ಬದಲಿಗೆ ಆಲ್​ರೌಂಡರ್ ಜೇಕ್ ಫ್ರೇಸರ್-ಮೆಕ್‌ಗುರ್ಕ್(Jake Fraser-McGurk) ಅವರನ್ನು ಬದಲಿ ಆಟಗಾರನಾಗಿ ಮೂಲಬೆಲೆ 50 ಲಕ್ಷ ರೂ.ಗೆ ಡೆಲ್ಲಿ ಕ್ಯಾಪಿಟಲ್ಸ್ ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು. ಆಸ್ಟ್ರೇಲಿಯಾದ ಆಟಗಾರ ಜೇಕ್ ಫ್ರೇಸರ್-ಮೆಕ್‌ಗುರ್ಕ್ ಇತ್ತೀಚೆಗೆ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಸುದ್ದಿಯಾಗಿದ್ದರು. ಲಿಸ್ಟ್ ಎ ಪಂದ್ಯದಲ್ಲಿ ಕೇವಲ 29 ಎಸೆತದಲ್ಲಿ ಶತಕ ಬಾರಿಸಿ ಅತ್ಯಂತ ವೇಗದ ಶತಕದ ವಿಶ್ವದಾಖಲೆ ಬರೆದಿದ್ದರು.

ಡೆಲ್ಲಿ ಪರ ಪದಾರ್ಪಣ ಪಂದ್ಯದಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರರು


ಗೌತಮ್​ ಗಂಭೀರ್​-58*

ಜೇಕ್ ಫ್ರೇಸರ್-ಮೆಕ್‌ಗುರ್ಕ್-55

ಸ್ಯಾಮ್​ ಬಿಲ್ಲಿಂಗ್ಸ್​-54

ಪಾಲ್‌ ಕಾಲಿಂಗ್‌ವುಡ್‌-53

ಶಿಖರ್​ ಧವನ್​-52*

ಜೇಕ್ ಫ್ರೇಸರ್-ಮೆಕ್‌ಗುರ್ಕ್ ಪದಾರ್ಪಣ ಪಂದ್ಯದ ಮೂರನೇ ಕ್ರಮಾಂಕದಲ್ಲಿ ಅತ್ಯಧಿಕ ರನ್​ ಗಳಿಸಿದ ಸಾಧಕರ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ. ಮೊದಲ ಸ್ಥಾನದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮಾಜಿ ಆಟಗಾರ ಮೈಕಲ್ ಹಸ್ಸಿ ಕಾಣಿಸಿಕೊಂಡಿದ್ದಾರೆ. ಹಸ್ಸಿ ತಮ್ಮ ಪದಾರ್ಪಣ ಪಂದ್ಯದಲ್ಲಿ ಅಜೇಯ 116 ರನ್​ ಬಾರಿಸಿದ್ದರು.

ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಡೆಲ್ಲಿ


ಸತತ ಸೋಲಿನಿಂದ ಕಂಗೆಟ್ಟಿದ್ದ ರಿಷಭ್​ ಪಂತ್​ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ತಂಡ ಕೊನೆಗೂ ಗೆಲುವಿನ ಹಳಿ ಏರಿದೆ. ಶುಕ್ರವಾರದ ಪಂದ್ಯದಲ್ಲಿ(IPL 2024) ಲಕ್ನೋ ಸೂಪರ್​ಜೈಂಟ್ಸ್(Lucknow Super Giants)​ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿ ಅಂಕಪಟ್ಟಿಯಲ್ಲಿ(IPL 2024 Points Table) ಒಂದು ಸ್ಥಾನ ಮೇಲೇರಿದೆ. ಡೆಲ್ಲಿ ಗೆಲುವಿನಿಂದಾಗಿ ಆರ್​ಸಿಬಿ ಕೊನೆಯ ಸ್ಥಾನ ಪಡೆಯುವಂತಾಗಿದೆ. ಮೂರನೇ ಸ್ಥಾನಿಯಾಗಿದ್ದ ಲಕ್ನೋ ಸೋಲಿನಿಂದ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ನಾಲ್ಕನೇ ಸ್ಥಾನದಲ್ಲಿದ್ದ ಚೆನ್ನೈ ಮೂರನೇ ಸ್ಥಾನಕ್ಕೇರಿದೆ.

ಇದನ್ನೂ ಓದಿ IPL 2024 : ಆನ್​ಫೀಲ್ಡ್​ ಅಂಪೈರ್​ ಜತೆ ವಾಗ್ವಾದ ನಡೆಸಿದ ರಿಷಭ್ ಪಂತ್​; ಏನಾಯಿತು ಅವರಿಗೆ?

ಇಲ್ಲಿನ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಕ್ನೊ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 167 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಡೆಲ್ಲಿ ತಂಡ ಇನ್ನೂ 11 ಎಸೆತಗಳು ಬಾಕಿ ಇರುವಂತೆಯೇ 4 ವಿಕೆಟ್​ಗೆ 170 ರನ್ ಬಾರಿಸಿ ಗೆಲುವು ಸಾಧಿಸಿತು. ಈ ಮೂಲಕ ತವರಿನ ತಂಡಕ್ಕೆ ಸೋಲುಣಿಸಿ ಗೆಲುವಿನ ಹಳಿಗೆ ಮರಳಿತು.

Exit mobile version