ಅಹಮದಾಬಾದ್: ಗುಜರಾತ್ ಟೈಟಾನ್ಸ್(Gujarat Titans) ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(Mumbai Indians) ತಂಡ ಸೋಲು ಕಂಡರೂ ಕೂಡ ವೇಗಿ ಜಸ್ಪ್ರೀತ್ ಬುಮ್ರಾ(Jasprit Bumrah) ಅವರು ಐಪಿಎಲ್ನಲ್ಲಿ(IPL 2024) ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಅತ್ಯಧಿಕ ಬಾರಿ 3 ಪ್ಲಸ್ ವಿಕೆಟ್ ಕಿತ್ತ ಮೊದಲ ಬೌಲರ್ ಎನಿಸಿಕೊಂಡಿದ್ದಾರೆ.
ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಘಾತಕ ಬೌಲಿಂಗ್ ಪ್ರದರ್ಶನ ತೋರಿದ ಬುಮ್ರಾ ಒಟ್ಟು ನಾಲ್ಕು ಓವರ್ ಬೌಲಿಂಗ್ ನಡೆಸಿ ಕೇವಲ 14 ರನ್ ವೆಚ್ಚದಲ್ಲಿ ಪ್ರಮುಖ ಮೂರು ವಿಕೆಟ್ ಕಿತ್ತು ಮಿಂಚಿದರು. ಈ ಮೂರು ವಿಕೆಟ್ಗಳೊಂದಿಗೆ ಐಪಿಎಲ್ ಇತಿಹಾಸದಲ್ಲೇ ಅತೀ ಹೆಚ್ಚು ಬಾರಿ 3+ ವಿಕೆಟ್ ಪಡೆದ ಬೌಲರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಮುಂಬೈ ತಂಡದ ಮಾಜಿ ಬೌಲರ್ ಲಸಿತ್ ಮಾಲಿಂಗ ಅವರ ಹೆಸರಿನಲ್ಲಿತ್ತು.
Just Bumrah Things 🤷♂️@Jaspritbumrah93 on target in his first over 👏#GT reach 47/1 after 6 overs
— IndianPremierLeague (@IPL) March 24, 2024
Watch the match LIVE on @JioCinema and @StarSportsIndia 💻📱
Match Updates ▶️ https://t.co/oPSjdbb1YT #TATAIPL | #GTvMI pic.twitter.com/Zt6vIEa0me
ಮಾಲಿಂಗ ಒಟ್ಟು 19 ಬಾರಿ 3+ ವಿಕೆಟ್ ಕಬಳಿಸಿದ್ದರು. ಇದೀಗ ಈ ದಾಖಲೆಯನ್ನು ಬುಮ್ರಾ ಮುರಿದಿದ್ದಾರೆ. ಸದ್ಯ 121* ಇನಿಂಗ್ಸ್ ಆಡಿರುವ ಬುಮ್ರಾ ಒಟ್ಟು 20 ಬಾರಿ 3+ ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಧಿಕ ಮೂರು ಅಥವಾ ಮೂರಕ್ಕಿಂತ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಬುಮ್ರಾ ಅವರು ವೃದ್ಧಿಮಾನ್ ಸಾಹಾ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಮೊದಲ ವಿಕೆಟ್ ಬೇಟೆಯಾಡಿದರು.
ಇದನ್ನೂ ಓದಿ IPL 2024: ರೋಹಿತ್ ಶರ್ಮಗೆ ಹಾರ್ದಿಕ್ ಆರ್ಡರ್; ನಾಯಿಗೆ ಹೋಲಿಸಿದ ಫ್ಯಾನ್ಸ್
ಗುಜರಾತ್ಗೆ 6 ರನ್ ಗೆಲುವು
ಭಾನುವಾರ ನಡೆದ ದ್ವಿತೀಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್(Mumbai Indians) ವಿರುದ್ಧ ಗುಜರಾತ್ ಟೈಟಾನ್ಸ್(Gujarat Titans) 6 ರನ್ಗಳ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಗುಜರಾತ್, ಜಸ್ಪ್ರೀತ್ ಬುಮ್ರಾ ಘಾತಕದಾಳಿಗೆ ತಡೆಯೊಡ್ಡುವಲ್ಲಿ ವಿಫಲವಾಗಿ 6 ವಿಕೆಟ್ಗೆ 168 ರನ್ಗಳ ಸಾಧಾರಣ ಮೊತ್ತ ಬಾರಿಸಿತು. ಜವಾಬಿತ್ತ ಮುಂಬೈ ಇಂಡಿಯನ್ಸ್(MI vs GT) ಭರ್ತಿ 20 ಓವರ್ ಆಡಿ 9 ವಿಕೆಟ್ ಕಳೆದುಕೊಂಡು 162 ರನ್ ಮಾತ್ರ ಗಳಿಸಿ ಸೋಲೊಪ್ಪಿಕೊಂಡಿತು. ಗುಜರಾತ್ ಗೆಲುವಿನೊಂದಿಗೆ ಹಾಲಿ ಆವೃತ್ತಿಯಲ್ಲಿ ನಡೆದ ಎಲ್ಲ 5 ಪಂದ್ಯಗಳಲ್ಲಿಯೂ ತವರಿನ ತಂಡವೇ ಗೆಲುವು ಸಾಧಿಸಿದಂತಾಯಿತು.