Site icon Vistara News

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

IPL 2024

ಕೋಲ್ಕತಾ: ಇಲ್ಲಿನ ಈಡನ್ ಗಾರ್ಡನ್ಸ್​ನಲ್ಲಿ ಮೇ 11 ರಂದು ನಡೆದ ಐಪಿಎಲ್ 2024 ರ 60 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ 18 ರನ್​ಗಳ ಗೆಲುವು ಸಾಧಿಸಿದ ಸಂದರ್ಭದಲ್ಲಿ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಬ್ಯಾಟ್ಸ್ಮನ್ ರಮಣ್​ದೀಪ್​ ಸಿಂಗ್ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.20 ರ ಪ್ರಕಾರ ರಮಣ್​​ದೀಪ್​ ಲೆವೆಲ್ 1 ಅಪರಾಧವನ್ನು ಮಾಡಿದ್ದಾರೆ ಎಂದು ಸಾಬೀತಾಗಿದೆ. ಈ ಅಪರಾಧಕ್ಕಾಗಿ ಕೆಕೆಆರ್ ಬ್ಯಾಟರ್​ಗೆ ಪಂದ್ಯದ ಶುಲ್ಕದ ಶೇಕಡಾ 20 ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಹೇಳಿಕೆಯಲ್ಲಿ ದೃಢಪಡಿಸಿದೆ.

27 ವರ್ಷದ ಆಟಗಾರ ಅಪರಾಧ ಒಪ್ಪಿಕೊಂಡಿದ್ದಾರೆ. ಮ್ಯಾಚ್ ರೆಫರಿ ವಿಧಿಸಿದ ಶಿಕ್ಷೆಯನ್ನು ಸ್ವೀಕರಿಸಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಉಲ್ಲಂಘನೆಗಾಗಿ, ಮ್ಯಾಚ್ ರೆಫರಿ ತೆಗೆದುಕೊಂಡ ನಿರ್ಧಾರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಔಪಚಾರಿಕ ವಿಚಾರಣೆಯ ಅಗತ್ಯವಿಲ್ಲ.

ಎಷ್ಟು ದಂಡ


ಐಪಿಎಲ್​ನ ನೀತಿ ಸಂಹಿತೆಯ ಪ್ರಕಾರ, ಅನುಚ್ಛೇದ 2.20ರಲ್ಲಿ “ವಿಕೆಟ್​ಗಳಿಗೆ ಹೊಡೆಯುವುದು ಅಥವಾ ಒದೆಯುವುದು ಮತ್ತು ಉದ್ದೇಶಪೂರ್ವಕವಾಗಿ ಜಾಹೀರಾತು ಫಲಕಗಳು, ಬೌಂಡರಿ ಲೈನ್​, ಡ್ರೆಸ್ಸಿಂಗ್ ರೂಮ್ ಬಾಗಿಲುಗಳು, ಕನ್ನಡಿಗಳು, ಕಿಟಕಿಗಳಿಗೆ ಹಾನಿ ಉಂಟುಮಾಡುವ ಯಾವುದೇ ಕ್ರಮಗಳನ್ನು ಕೈಗೊಳ್ಳಬಹುದು. ಇತರ ಒಬ್ಬ ಆಟಗಾರನು ಹತಾಶೆಯಿಂದ ತನ್ನ ಬ್ಯಾಟ್ ಅನ್ನು ತೀವ್ರವಾಗಿ ತಿರುಗಿಸಿದಾಗ ಮತ್ತು ಜಾಹೀರಾತು ಫಲಕಗಳಿಗೆ ಹಾನಿಯನ್ನುಂಟುಮಾಡಿದಾಗ ಅದನ್ನು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಅಂತೆಯೇ ರಮಣ್​ದೀಪ್​ ಬೌಂಡಿ ಲೈನ್​ಗಳ ಮೇಲೆ ಹೊಡೆದಿದ್ದರು.

ಇದನ್ನೂ ಓದಿ: IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

ಕೆಕೆಆರ್ ಶನಿವಾರ ಮುಂಬೈ ಇಂಡಿಯನ್ಸ್ (ಎಂಐ) ವಿರುದ್ಧ 18 ರನ್ಗಳಿಂದ ಗೆಲ್ಲುವ ಮೂಲಕ ಐಪಿಎಲ್ 2024 ಪ್ಲೇಆಫ್​ಗೆ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಮಣ್ದೀಪ್ 8 ಎಸೆತಗಳಲ್ಲಿ ಅಜೇಯ 17 ರನ್ ಗಳಿಸಿ ಕೆಕೆಆರ್ ಗೆಲುವಿಗೆ ಕಾರಣರಾದರು.

ಐಪಿಎಲ್ 2024 ರಲ್ಲಿ ಕೆಕೆಆರ್ ಇದುವರೆಗೆ ಆಡಿದ 12 ಪಂದ್ಯಗಳಿಂದ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್ (ಆರ್ಆರ್) ಪ್ರಸ್ತುತ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ ಮತ್ತು ಈ ಋತುವಿನಲ್ಲಿಯೂ ಪ್ಲೇಆಫ್ ತಲುಪುವುದು ಖಚಿತವಾಗಿದೆ.

ಶ್ರೇಯಸ್ ಅಯ್ಯರ್ ಏನಂದರು?

ಈ ಋತುವಿನಲ್ಲಿ ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಕೆಕೆಆರ್ ಪಾತ್ರವಾದ ನಂತರ, ಅವರ ನಾಯಕ ಶ್ರೇಯಸ್ ಅಯ್ಯರ್ ಅವರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಯ್ಯರ್, “ನಾನು ಇದನ್ನು ಪಂದ್ಯಕ್ಕೆ ಮೊದಲು ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

Exit mobile version