Site icon Vistara News

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

IPL 2024

ಮುಂಬಯಿ: ಮುಂಬೈ ಇಂಡಿಯನ್ಸ್(Mumbai Indians)​ ವಿರುದ್ಧ ಕೆಕೆಆರ್​ ನಿನ್ನೆ(ಶುಕ್ರವಾರ) ನಡೆದ ಪಂದ್ಯದಲ್ಲಿ ಗೆಲುವು 24 ರನ್​ಗಳ ಗೆಲುವು ಸಾಧಿಸಿತು. ಇದು ಕೆಕೆಆರ್​ಗೆ(Kolkata Knight Riders) ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಒಲಿದ ಗೆಲುವಾಗಿದೆ. ಕೆಕೆಆರ್​ ಇಲ್ಲಿ ಕೊನೆಯ ಬಾರಿಗೆ ಗೆದ್ದದ್ದು 2012ರಲ್ಲಿ. ಆ ಪಂದ್ಯದಲ್ಲಿ ಸುನೀಲ್​ ನಾರಾಯಣ್​ 3.1 ಓವರ್​ ಬೌಲಿಂಗ್​ ನಡೆಸಿ ಕೇವಲ 15 ರನ್​ಗೆ 4 ವಿಕೆಟ್​ ಕಿತ್ತು ಗೆಲುವಿನ ಹೀರೊ ಎನಿಸಿಕೊಂಡಿದ್ದರು. ಕೆಕೆಆರ್​ ಈ ಪಂದ್ಯವನ್ನು 32 ರನ್​ ಅಂತರದಿಂದ ಗೆದ್ದಿತ್ತು. ಕೆಕೆಆರ್​ ವಾಂಖೆಡೆಯಲ್ಲಿ ಇದುವರೆಗೆ 11 ಪಂದ್ಯ ಆಡಿ 2 ಗೆಲುವು ಸಾಧಿಸಿದೆ.

ಈ ಬಾರಿಯ ಐಪಿಎಲ್​ನಲ್ಲಿ(IPL 2024) ಮುಂಬೈ ತಂಡಕ್ಕೆ ಚೇಸಿಂಗ್​ ವೇಳೆ ಎದುರಾದ 5ನೇ ಸೋಲು ಇದಾಗಿದೆ. 6 ಪಂದ್ಯಗಳಲ್ಲಿ ಮುಂಬೈ ಚೇಸಿಂಗ್​ ನಡೆಸಿತ್ತು. ಗೆಲುವು ಸಾಧಿಸಿದ್ದು ಒಂದು ಬಾರಿ ಮಾತ್ರ. ಇದು ಆರ್​ಸಿಬಿ ವಿರುದ್ಧ. ಸದ್ಯ ಮುಂಬೈ ತಂಡದ ಪ್ಲೇ ಆಫ್​ ರೇಸ್​ ಬಹುತೇಕ ಅಂತ್ಯ ಕಂಡಿದೆ. 9ನೇ ಸ್ಥಾನದಲ್ಲಿರುವ ಮುಂಬೈಗೆ ಇನ್ನು ಮೂರು ಪಂದ್ಯ ಬಾಕಿ ಇದೆ. ಈ ಪಂದ್ಯ ಗೆದ್ದರೂ ಕೂಡ 12 ಅಂಕ ಆಗಲಿದೆ. ಪ್ಲೇ ಆಫ್​ಗೆ ಈ ಅಂಕ ಸಾಲದು. ಹೀಗಾಗಿ ತಂಡ ಟೂರ್ನಿಯಿಂದ ಹೊರಬಿದ್ದಿದೆ ಎಂದರೂ ತಪ್ಪಾಗಲಾರದು.

ವಾಖೆಂಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಆರ್​ 19.5 ಓವರ್​ಗಳಲ್ಲಿ 169 ರನ್​ಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ 18.5 ಓವರ್​​ 145 ರನ್​ಗಳಿಗೆ ಶರಣಾಗಿ ಸೋಲೊಪ್ಪಿಕೊಂಡಿತು. ಕೆಕೆಅರ್​ ಪರ ಬ್ಯಾಟಿಂಗ್​ನಲ್ಲಿ ವೆಂಕಟೇಶ್​ ಅಯ್ಯರ್​ (70) ಅರ್ಧ ಶತಕ ಬಾರಿಸಿ ಮಿಂಚಿದರೆ ಬೌಲಿಂಗ್​ನಲ್ಲಿ ಮಿಚೆಲ್ ಸ್ಟಾರ್ಕ್​ 4 ವಿಕೆಟ್ ತಮ್ಮದಾಗಿಸಿಕೊಂಡರು.

ಇದನ್ನೂ ಓದಿ IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

ಬ್ಯಾಟಿಂಗ್​ ಪೂರಕವಾಗಿದ್ದ ಟ್ರ್ಯಾಕ್​ನಲ್ಲಿ ಟಾಸ್​ ಸೋತು ಬ್ಯಾಟಿಂಗ್​ ನಡೆಸಿದ ಕೆಕೆಆರ್​ 57 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಸಿಲುಕಿತು. ಈ ವೇಳೆ ವೆಂಕಟೇಶ್ ಅಯ್ಯರ್ ಹಾಗೂ ಹಾಲಿ ಆವೃತ್ತಿಯಲ್ಲಿ ಮೊದಲ ಅವಕಾಶ ಪಡೆದ ಮನೀಶ್ ಪಾಂಡೆ 42 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಇವರಿಬ್ಬರ ನೆರವಿನಿಂದ ಸ್ಪರ್ಧಾತ್ಮಕ ಮೊತ್ತವನ್ನು ಪೇರಿಸಲು ಕೆಕೆಆರ್​ಗೆ ಸಾಧ್ಯವಾಯಿತು. ಅಂಗ್​ಕ್ರಿಶ್​ ರಘುವಂಶಿ 13 ರನ್ ಬಾರಿಸಿ ಕೆಕೆಆರ್​ ಪರ ಎರಡಂಕಿ ಮೊತ್ತ ದಾಟಿದ ಎರಡನೇ ಆಟಗಾರ ಎನಿಸಿಕೊಂಡರು. ಉಳಿದವರೆಲ್ಲರೂ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು.

Exit mobile version