Site icon Vistara News

IPL 2024: ಗೋ ಗ್ರೀನ್‌ ಅಭಿಯಾನದ ಜೆರ್ಸಿ ಬಿಡುಗಡೆಗೊಳಿಸಿದ ಆರ್​ಸಿಬಿ

RCB Unveils Green Jersey

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಜೆಂಜರ್ಸ್​ ಬೆಂಗಳೂರು(RCB) ತಂಡದ ಗೋ ಗ್ರೀನ್‌ ಅಭಿಯಾನ ಈ ಐಪಿಎಲ್‌ನಲ್ಲೂ(IPL 2024) ಮುಂದುವರಿಯಲಿದೆ. ಸ್ವಚ್ಛ ಹಾಗೂ ಹಸಿರು ಪರಿಸರವೇ ಈ ಬಾರಿಯ ಪ್ರಮುಖ ಉದ್ದೇಶವಾಗಿದೆ. ತವರಿನ ಮೂರು ಪಂದ್ಯಗಳ ಪೈಕಿ ಒಂದು ಪಂದ್ಯದಲ್ಲಿ ಆರ್​ಸಿಬಿ ಹಸಿರು(RCB Green Jersey) ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ.

“ನಮ್ಮ ವಿಶೇಷ ಹಸಿರು ಜೆರ್ಸಿಗಳು ಶೇ.100ರಷ್ಟು ಮರುಬಳಕೆಯ ವಸ್ತುಗಳಿಂದ ಮಾಡಲ್ಪಟ್ಟಿದೆ. ಪರಿಸರ ಸಂರಕ್ಷಣೆಯ ಜಾಗೃತಿಗಾಗಿ ಈ ಬಾರಿ ಹಲವು ಯೋಜನೆಯನ್ನು ರೂಪಿಸಿದ್ದೇವೆ. ನಿಮ್ಮ ಬೆಂಬಲವು ಇದಕ್ಕೆ ಮುಖ್ಯ’ ಎಂದು ಆರ್​ಸಿಬಿ ಜೆರ್ಸಿ ಬಿಡುಗಡೆ ಕಾರ್ಯಕ್ರಮದಲ್ಲಿ ಹೇಳಿದೆ. ಈ ಜೆರ್ಸಿಯನ್ನು ಪಡೆಯಲು ಇಚ್ಚಿಸುವವರು ಆರ್​ಸಿಬಿ ವೆಬ್‌ಸೈಟ್ ಮತ್ತು ಅಪ್ಲಿಕೇಶನ್​ನಲ್ಲಿ ಆರ್ಡರ್​ ಮಾಡಿಕೊಳ್ಳಬಹುದು ಎಂದು ತಿಳಿಸಿದೆ.


2011 ರಿಂದ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆರ್​ಸಿಬಿ ತಮ್ಮ ‘ಗೋ ಗ್ರೀನ್’ ಅಭಿಯಾನದಲ್ಲಿ ತೊಡಗಿಕೊಂಡಿತ್ತು. ಇದೇ ಕಾರಣಕ್ಕೆ ಪ್ರತಿ ಆವೃತ್ತಿಯಲ್ಲಿಯೂ ಒಂದು ಪಂದ್ಯವನ್ನು ಹಸಿರು ಜೆರ್ಸಿಯಲ್ಲಿ ಆಡುತ್ತಿದೆ. ಆದರೆ 2021ರಲ್ಲಿ, ಹಸಿರು ಜರ್ಸಿಯಲ್ಲಿ ಆಡುವ ಬದಲು ತಂಡವು ಒಂದು ಪಂದ್ಯದಲ್ಲಿ ನೀಲಿ ಜರ್ಸಿಯಲ್ಲಿ ಆಡಿತ್ತು. ಇದಕ್ಕೆ ಕಾರಣ ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಂಚೂಣಿಯಲ್ಲಿರುವ ಕಾರ್ಮಿಕರಿಗೆ ಅವರ ತ್ಯಾಗ ಮತ್ತು ಕಠಿಣ ಪರಿಶ್ರಮಕ್ಕೆ ಗೌರವ ಸಲ್ಲಿಸಲು ಈ ನೀಲಿ ಜೆರ್ಸಿ ಧರಿಸಿ ಆಡಿತ್ತು.

ಇದನ್ನೂ ಓದಿ IPL 2024: ಲಕ್ನೋ ತಂಡದ ಡೇವಿಡ್ ವಿಲ್ಲಿ ಐಪಿಎಲ್​ ಆರಂಭಿಕ ಪಂದ್ಯಗಳಿಗೆ ಅಲಭ್ಯ

ಕಳೆದ ಬಾರಿ ರಾಜಸ್ಥಾನ್​ ವಿರುದ್ಧದ ಪಂದ್ಯದಲ್ಲಿ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಆಡಿತ್ತು. ಈ ಬಾರಿಯೂ ಆರ್​ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಈ ಬಾರಿಯ ಗ್ರೀನ್‌ ಜೆರ್ಸಿಯ ವಿನ್ಯಾಸದಲ್ಲಿ ತುಸು ಬದಲಾವಣೆ ಮಾಡಲಾಗಿದೆ. ಹಸಿರಿನ ಜತೆಗೆ ಕಡು ನೀಲಿ ಬಣ್ಣವನ್ನು ಸೇರಿಸಿಲಾಗಿದೆ. ಹಿಂದಿನ ಆವೃತ್ತಿಯಲ್ಲಿ ಹಸಿರು ಮತ್ತು ಕಪ್ಪು ಬಣ್ಣ ವಿಶ್ರಿತ ಜೆರ್ಸಿಯನ್ನು ಬಳಸಲಾಗಿತ್ತು.

ಮಾರ್ಚ್ 22ರಂದು ಲೀಗ್​ನ ಸಾಂಪ್ರದಾಯಿಕ ಬದ್ದ ಎದುರಾಳಿಗಳಾದ ಆರ್‌ಸಿಬಿ(Royal Challengers Bangalore) ಮತ್ತು ಸಿಎಸ್‌ಕೆ(rcb vs csk) ಮುಖಾಮುಖಿಯಾಗುವ ಮೂಲಕ ಟೂರ್ನಿಗೆ ಚಾಲನೆ ಸಿಗಲಿದೆ. ಈ ಪಂದ್ಯಕ್ಕೆ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂ ಅಣಿಯಾಗಿದೆ. ಪಂದ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ಉಭಯ ತಂಡಗಳ ಅಭಿಮಾನಿಗಳು ಕಾದು ಕುಳಿತಿದ್ದಾರೆ.

ಆರ್​ಸಿಬಿ ತಂಡ


ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್​ವೆಲ್​, ವಿರಾಟ್ ಕೊಹ್ಲಿ, ಕ್ಯಾಮರಾನ್ ಗ್ರೀನ್, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಾಶ್ ಪ್ರಭುದೇಸಾಯಿ, ವಿಲ್ ಜಾಕ್ಸ್, ಮಯಾಂಕ್ ದಾಗರ್, ಮಹಿಪಾಲ್ ಲೊಮ್ರೊರ್, ಕರಣ್ ಶರ್ಮಾ, ಮನೋಜ್ ಭಾಂಡಗೆ, ವೈಶಾಕ್ ವಿಜಯ್ ಕುಮಾರ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟಾಪ್ಲೆ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರ್ರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್.

Exit mobile version