ನವದೆಹಲಿ: ಈ ಬಾರಿಯ ಐಪಿಎಲ್ನಲ್ಲಿ(IPL 2024) ಬಿರುಸಿನ ಬ್ಯಾಟಿಂಗ್ ಮೂಲಕ ಸಂಚಲನ ಮೂಡಿಸಿರುವ ಆಸ್ಟ್ರೇಲಿಯಾದ ಬ್ಯಾಟರ್, ಡೆಲ್ಲಿ(Delhi Capitals) ತಂಡದ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(Jake Fraser-McGurk) ಐಪಿಎಲ್ನಲ್ಲಿ ನೂತನ ದಾಖಲೆಯೊಂದನ್ನು ಬರೆದಿದ್ದಾರೆ. ರಾಜಸ್ಥಾನ್ ರಾಯಲ್ಸ್(Rajasthan Royals) ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತ್ಯಧಿಕ ಬಾರಿ ಐಪಿಎಲ್ ಅರ್ಧಶತಕ ಬಾರಿಸಿದ ದಾಖಲೆ ತಮ್ಮದಾಗಿಸಿಕೊಂಡರು.
ರಾಜಸ್ಥಾನ್ ರಾಯಲ್ಸ್ ಎದುರಿನ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ ಕೇವಲ 19 ಎಸೆತಗಳಿಂದ ಅರ್ಧತಕ ಬಾರಿಸುವ ಮೂಲಕ 20 ಎಸೆತಗಳಿಗಿಂತ ಕಡಿಮೆ ಎಸೆದ ಎದುರಿಸಿ ಅತ್ಯಧಿಕ ಐಪಿಎಲ್ ಅರ್ಧಶತಕ ಬಾರಿಸಿದ ದಾಖಲೆ ಬರೆದರು. 3 ಬಾರಿ ಮ್ಯಾಕ್‌ಗುರ್ಕ್ ಈ ಸಾಧನೆ ಮಾಡಿದ್ದಾರೆ. ಯಶಸ್ವಿ ಜೈಸ್ವಾಲ್ 2 ಬಾರಿ ಈ ಸಾಧನೆ ಮಾಡಿದ್ದಾರೆ. ಕಳೆದ ಮುಂಬೈ ಇಂಡಿಯನ್ಸ್ ಮತ್ತು ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮ್ಯಾಕ್‌ಗುರ್ಕ್ 15 ಎಸೆತಗಳಿಂದ ಅರ್ಧಶತಕ ಬಾರಿಸಿದ್ದರು.
20 ಎಸೆತಗಳಿಗಿಂತ ಕಡಿಮೆ ಎಸೆತ ಎದುರಿಸಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಆಟಗಾರರು
ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್- 3
ಯಶಸ್ವಿ ಜೈಸ್ವಾಲ್-2
ನಿಕೋಲಸ್ ಪೂರನ್-2
ಇಶಾನ್ ಕಿಶನ್-2
ಸುನೀಲ್ ನರೈನ್-2
ಕೈರನ್ ಪೊಲಾರ್ಡ್-2
ಟ್ರಾವಿಸ್ ಹೆಡ್-2
ಕೆ.ಎಲ್ ರಾಹುಲ್-2
ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ಗೆ 221 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ರಾಜಸ್ಥಾನ್ ತನ್ನ ಪಾಲಿನ ಓವರ್ಗಳು ಮುಕ್ತಾಯಗೊಂಡಾಗ 8 ವಿಕೆಟ್ಗೆ 201 ರನ್ ಬಾರಿಸಿ ಸೋಲೊಪ್ಪಿಕೊಂಡಿತು.
ಇದನ್ನೂ ಓದಿ IPL 2024: ಅಂಪೈರ್ ಜತೆ ವಾಗ್ವಾದ; ಸಂಜುಗೆ ಬಿತ್ತು ಭಾರೀ ದಂಡ
ಸಂಜು ಸ್ಯಾಮ್ಸನ್ ಕ್ರೀಸ್ನಲ್ಲಿರುವ ತನಕ ಪಂದ್ಯ ರಾಜಸ್ಥಾನ್ ಪರವಾಗಿತ್ತು. ಆದರೆ, ಸಂಜು ವಿಕೆಟ್ ಪತನದ ಬಳಿಕ ಏಕಾಏಕಿ ಕುಸಿತ ಕಂಡ ರಾಜಸ್ತಾನ್ ಸೋಲಿಗೆ ಸಿಲುಕಿತು. ಕುಲ್ದೀಪ್ ಯಾದವ್ 25 ರನ್ಗಳಗೆ ಪ್ರಮುಖ 2 ವಿಕೆಟ್ ಉರುಳಿಸುವ ಮೂಲಕ ಕೊನೇ ಹಂತದಲ್ಲಿ ಪಂದ್ಯಕ್ಕೆ ತಿರುವು ತಂದುಕೊಟ್ಟರು. ಸಂಜು 46 ಎಸೆತಕ್ಕೆ 86 ರನ್ ಬಾರಿಸಿ ಹೋಪ್ ಹಿಡಿದ ಸೂಪರ್ ಕ್ಯಾಚ್ಗೆ ವಿಕೆಟ್ ಕೈಚೆಲ್ಲಿದರು.