IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ - Vistara News

ಕ್ರೀಡೆ

IPL 2024: ದುಬಾರಿ ರನ್​ ನೀಡಿ ಐಪಿಎಲ್​ನಲ್ಲಿ ಅನಗತ್ಯ ದಾಖಲೆ ಬರೆದ ಮೋಹಿತ್​ ಶರ್ಮ

IPL 2024: ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ವಿರುದ್ಧದ ಪಂದ್ಯದಲ್ಲಿ ದುಬಾರಿಯಾಗಿ ಕಂಡು ಬಂದ ಮೋಹಿತ್​ ಶರ್ಮ 4 ಓವರ್​ಗೆ ಬರೋಬ್ಬರಿ 73 ರನ್​ ಬಿಟ್ಟುಕೊಟ್ಟರು. ಈ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲೇ ಅತ್ಯಧಿಕ ರನ್​ ಬಿಟ್ಟುಕೊಟ್ಟ ಮೊದಲ ಬೌಲರ್​ ಎನ್ನುವ ಹಣೆಪಟ್ಟಿ ಕಟ್ಟಿಕೊಂಡರು.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗುಜರಾತ್​ ಟೈಟಾನ್ಸ್​( ತಂಡದ ಮಧ್ಯಮ ಕ್ರಮಾಂಕದ ವೇಗಿ ಮೋಹಿತ್​ ಶರ್ಮ(Mohit Sharma) ಅವರು ಐಪಿಎಲ್​ನಲ್ಲಿ(IPL 2024) ಅತಿ ಹೆಚ್ಚು ರನ್​ ಬಿಟ್ಟುಕೊಟ್ಟ ಆಟಗಾರ ಎಂಬ ಅನಗತ್ಯ ದಾಖಲೆಯೊಂದನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಈ ಮೂಲಕ ಬಾಸಿಲ್ ಥಾಂಪಿ ದಾಖಲೆಯನ್ನು ಮುರಿದಿದ್ದಾರೆ.

​ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ವಿರುದ್ಧದ ಪಂದ್ಯದಲ್ಲಿ ದುಬಾರಿಯಾಗಿ ಕಂಡು ಬಂದ ಮೋಹಿತ್​ ಶರ್ಮ 4 ಓವರ್​ಗೆ ಬರೋಬ್ಬರಿ 73 ರನ್​ ಬಿಟ್ಟುಕೊಟ್ಟರು. ಈ ಮೂಲಕ ಐಪಿಎಲ್​ನ ಇದುವರೆಗಿನ ಇತಿಹಾಸದಲ್ಲೇ ಅತ್ಯಧಿಕ ರನ್​ ಬಿಟ್ಟುಕೊಟ್ಟ ಮೊದಲ ಬೌಲರ್​ ಎನ್ನುವ ಹಣೆಪಟ್ಟಿ ಕಟ್ಟಿಕೊಂಡರು. ಅಂತಿಮ ಓವರ್​ನಲ್ಲಿ ರಿಷಭ್​ ಪಂತ್​ ಅವರು 4 ಸಿಕ್ಸರ್​ ಮತ್ತು ಒಂದು ಬೌಂಡರಿ ಬಾರಿಸಿ ಒಟ್ಟು 31 ರನ್​ ಚಚ್ಚಿದರು.

ದುಬಾರಿ ರನ್​ ನೀಡಿದ ಆಟಗಾರರು


ಮೋಹಿತ್​ ಶರ್ಮ-73 ರನ್​. ಡೆಲ್ಲಿ ವಿರುದ್ಧ (2024)

ಬಾಸಿಲ್ ಥಾಂಪಿ-70 ರನ್​. ಆರ್​ಸಿಬಿ ವಿರುದ್ಧ (2018)

ಯಶ್​ ದಯಾಳ್​-69 ರನ್​. ಕೆಕೆಆರ್​ ವಿರುದ್ಧ (2023)

ರೀಸ್‌ ಟೋಪ್ಲೆ-68 ರನ್​. ಹೈದರಾಬಾದ್​ ವಿರುದ್ಧ (2024)

ಇದನ್ನೂ ಓದಿ IPL 2024 Points Table: ಡೆಲ್ಲಿ ಗೆಲುವಿನ ಬಳಿಕ ಅಂಕಪಟ್ಟಿಯಲ್ಲಿ ಮಹತ್ವದ ಬದಲಾವಣೆ

ಗುಜರಾತ್​ಗೆ 4 ರನ್​ ವಿರೋಚಿತ ಸೋಲು


ಇಲ್ಲಿನ ಅರುಣ್​ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್​ ರಿಷಭ್​ ಪಂತ್​(88*) ಮತ್ತು ಅಕ್ಷರ್​ ಪಟೇಲ್​(66) ಅವರ ಸಮಯೋಚಿತ ಬ್ಯಾಟಿಂಗ್​ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 224 ರನ್​ ಪೇರಿಸಿತು. ಜವಾಬಿತ್ತ ಗುಜರಾತ್ ದಿಟ್ಟ ಹೋರಾಟ ನಡೆಸಿದರೂ 8 ವಿಕೆಟ್​ಗೆ 220 ರನ್​ ಬಾರಿಸಿ ಸಣ್ಣ ಅಂತರದಿಂದ ​ಸೋಲೊಪ್ಪಿಕೊಂಡಿತು.

ಚೇಸಿಂಗ್​ ವೇಳೆ ಡೇವಿಡ್​ ಮಿಲ್ಲರ್​ ಅರ್ಧಶತಕ ಬಾರಿಸುವ ಮೂಲಕ ಒಂದು ಹಂತದಲ್ಲಿ ಗುಜರಾತ್​ ಪಾಳಯದಲ್ಲಿ ಗೆಲುವಿನ ಆಸೆ ಚಿಗುರೊಡೆಯುವಂತೆ ಮಾಡಿದರು. ಆದರೆ ಉಳಿದ ಆಟಗಾರರಿಂದ ಉತ್ತಮ ಸಾಥ್​ ಸಿಗದ ಕಾರಣ ದೊಡ್ಡ ಹೊಡೆತಗಳಿಗೆ ಕೈ ಹಾಕಿ ರಾಸಿಖ್ ಸಲಾಂ ಅವರಿಗೆ ಕ್ಯಾಚ್​ ನೀಡಿ ವಿಕೆಟ್​ ಕೈಚೆಲ್ಲಿದರು. ಈ ವಿಕೆಟ್​ ಪತನದ ಬಳಿಕ ರಶೀದ್​ ಖಾನ್​ ಮತ್ತು ಸಾಯಿ ಕಿಶೋರ್​ ಸಿಡಿದು ನಿಂತರು. ಅಂತಿಮ ಓವರ್​ನಲ್ಲಿ ಗೆಲುವಿಗೆ 19 ರನ್​ ತೆಗೆಯುವ ಸವಾಲಿನಲ್ಲಿ ರಶೀದ್​ ಅವರು ಮುಕೇಶ್​ ಕುಮಾರ್​ಗೆ ಸತತ 2 ಬೌಂಡರಿ ಮತ್ತು ಒಂದು ಸಿಕ್ಸರ್​ ಬಾರಿಸಿ ಪಂದ್ಯವನ್ನು ರೋಚಕ ಹಂತಕ್ಕೆ ತಂದು ನಿಲ್ಲಿಸಿದರು. ಅಂತಿಮ ಎಸೆತದಲ್ಲಿ ಗೆಲುವಿಗೆ 5 ರನ್​ ಬೇಕಿದ್ದಾಗ ಇದನ್ನು ಬಾರಿಸುವಲ್ಲಿ ರಶೀದ್​ ಎಡವಿದರು. ಡೆಲ್ಲಿ ರೋಚಕ 4 ರನ್​ಗಳ ಗೆಲುವು ಸಾಧಿಸಿತು. ಅಂತಿಮ ಓವರ್​ನಲ್ಲಿ ಮೋಹಿತ್​ ಶರ್ಮ ಕನಿಷ್ಠ ಒಂದು ಬಾಲ್​ ಕಂಟ್ರೋಲ್​ ಮಾಡುತ್ತಿದ್ದರೂ ಕೂಡ ಗುಜರಾತ್​ ಗೆಲ್ಲುವು ಕಾಣುವ ಸಾಧ್ಯತೆ ಇತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Paris Olympic: 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

VISTARANEWS.COM


on

Paris Olympic
Koo

ಪ್ಯಾರಿಸ್​: ಒಲಿಂಪಿಕ್ಸ್​(Paris Olympic) ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ ಮಾಡಿದ್ದ ಭಾರತೀಯ ಕ್ರಿಡಾಭಿಮಾನಿಗಳಿಗೆ ಮೊದಲ ದಿನವೇ ನಿರಾಸೆಯಾಗಿದೆ. ಇಂದು(ಶನಿವಾರ) ನಡೆದ 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಭಾರತ ಸೋಲು ಕಂಡು ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಆದರೆ ರೋಯಿಂಗ್​ನಲ್ಲಿ ಬಾಲರಾಜ್ ಪನ್ವಾರ್(Balraj Panwar) ಹೀಟ್ಸ್​ನಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ರೆಪೆಚೇಜ್ ರೌಂಡ್​ಗೆ ಅರ್ಹತೆ ಪಡೆದಿದ್ದಾರೆ. ಈ ಪಂದ್ಯ ನಾಳೆ(ಭಾನುವಾ) ನಡೆಯಲಿದೆ.

ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಜೋಡಿ 12ನೇ ಸ್ಥಾನ ಪಡೆದರೆ, ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಜೋಡಿ 6ನೇ ಸ್ಥಾನ ಪಡೆಯಿತು. ಈ ಜೋಡಿ ಒಟ್ಟು 628.7 ಅಂಕಗಳಿಸಿದರೆ, ಸಂದೀಪ್​ ಸಿಂಗ್​-ಇಲವೆನಿಲ್ ಜೋಡಿ 626.3 ಅಂಕ ಗಳಿಸಿತು. ಇದರೊಂದಿಗೆ 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್​ನಲ್ಲಿ ಕಣಕ್ಕಿಳಿದ್ದ ಬಾಲರಾಜ್ ಪನ್ವಾರ್ ಕೊನೆಯ ಹಂತದ ಸುತ್ತಿನವರೆಗೂ ಮೂರನೇ ಸ್ಥಾನ ಕಾಯ್ದುಕೊಂಡಿದ್ದರು. ಆದರೆ ಫಿನಿಶಿಂಗ್​ ಹಂತದ ವೇಳೆ ಹಿನ್ನಡೆ ಅನುಭವಿಸಿ ಅಂತಿಮವಾಗಿ 07:07.11 ನಿಮಿಷದಲ್ಲಿ ಹೀಟ್ಸ್ ಪೂರ್ಣಗೊಳಿಸಿ ನಾಲ್ಕನೇ ಸ್ಥಾನ ಪಡೆದರು.

 

ಇಂದು ನಡೆಯುವ ಪುರುಷರ ಸಿಂಗಲ್ಸ್‌ ಟೆಬಲ್​ ಟೆನಿಸ್​ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ, ಈ ಬಾರಿಯ ಪದಕ ಭರಸೆಯ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಮಣಿಕಾ ಬಾತ್ರಾ ಅವರು ಗ್ರೇಟ್‌ ಬ್ರಿಟನ್‌ನ ಅನಾ ಹರ್ಸೆ ವಿರುದ್ಧ ಸೆಣಸಾಟ ನಡೆಸಲಿದ್ದಾರೆ. ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಬಾತ್ರ ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್​ ತಪ್ಪನ್ನು ಇಲ್ಲಿ ಮರುಕಳಿಸಲ್ಲ ಎಂದು ಹೇಳುವ ಮೂಲಕ ಪದಕ ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 32ರ ಘಟ್ಟದದ ಪಂದ್ಯದಲ್ಲಿ ಸೋಲು ಕಂಡಿದ್ದರು.

ಪುರುಷರ ತಂಡ ವಿಭಾಗದಲ್ಲಿ ಶರತ್ ಕಮಲ್, ದೇಸಾಯಿ ಮತ್ತು ಮಾನವ್ ಠಕ್ಕರ್ ಕಣಕ್ಕಿಳಿದರೆ, ಮಹಿಳೆಯರ ತಂಡದಲ್ಲಿ ಮಣಿಕಾ, ಶ್ರೀಜಾ ಅಕುಲಾ ಹಾಗೂ ಕರ್ನಾಟಕದ ಅರ್ಚನಾ ಕಾಮತ್ ಸ್ಪರ್ಧಿಸಲಿದ್ದಾರೆ. ಜಿ. ಸತ್ಯನ್, ಐಹಿಕಾ ಮುಖರ್ಜಿ ಮೀಸಲು ಆಟಗಾರರಾಗಿದ್ದಾರೆ. ಶರತ್ ಕಮಲ್ ಅವರಿಗೆ ಇದು ಬಹುತೇಕ ಕೊನಯ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಹೀಗಾಗಿ ಅವರು ಐತಿಹಾಸಿಕ ಪದಕ ಗೆದ್ದು ತಮ್ಮ ಕ್ರೀಡಾ ವೃತ್ತಿ ಜೀವನನ್ನು ಸ್ಮರಣೀಯಗೊಳಿಸಲಿ ಎನ್ನುವುದು ಭಾರತೀಯರ ಹಾರೈಕೆ.

Continue Reading

ಕ್ರೀಡೆ

Paris Olympics: ಶುಭಾರಂಭದ ನಿರೀಕ್ಷೆಯಲ್ಲಿ ಪುರುಷರ ಹಾಕಿ ತಂಡ; ಕಿವೀಸ್​ ಎದುರಾಳಿ

Paris Olympics: ಈ ಬಾರಿಯ 16 ಸದಸ್ಯರ ತಂಡದಲ್ಲಿ 11 ಮಂದಿ ಆಟಗಾರರು ಟೋಕಿಯೊ ಒಲಿಂಪಿಕ್ಸ್​ ಆಡಿದ ಆಟಗಾರರಾಗಿದ್ದಾರೆ. ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರಿಗೆ ಇದು ಕೊನೆಯ ಒಲಿಂಪಿಕ್ಸ್​ ಕೂಟವಾಗಿದೆ. ಈಗಾಗಲೇ ಅವರು ತಮ್ಮ ನಿವೃತ್ತಿಯನ್ನು ಕೂಡ ಘೋಷಿಸಿದ್ದಾರೆ.

VISTARANEWS.COM


on

Paris Olympics
Koo

ಪ್ಯಾರಿಸ್​: ಟೋಕಿಯೊ ಒಲಿಂಪಿಕ್ಸ್​(Paris Olympics) ಕಂಚಿನ ಪದಕ ವಿಜೇತ ಭಾರತ ಪುರುಷರ ಹಾಕಿ ತಂಡ(Hockey India) ಇಂದು ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ತನ್ನ ಅಭಿಯಾನ ಆರಂಭಿಸಲಿದೆ. ಎದುರಾಳಿ ನ್ಯೂಜಿಲ್ಯಾಂಡ್(hockey india vs new zealand)​. ಇತ್ತಂಡಗಳ ಈ ಪಂದ್ಯ ರಾತ್ರಿ 9ಗಂಟೆಗೆ ಆರಂಭವಾಗಲಿದೆ. ಟೋಕಿಯೊದಲ್ಲಿ ಪದಕ ಗೆಲ್ಲುವ ಮೂಲಕ 41 ವರ್ಷಗಳ ಬಳಿಕ ಪದಕದ ಬರ ನೀಗಿಸಿದ್ದ ಭಾರತ ತಂಡ ಈ ಬಾರಿ ಚಿನ್ನಕ್ಕೆ ಕೊರಳೊಡ್ಡುವಂತಾಗಲಿ ಎನ್ನುವುದು ಭಾರತೀಯರ ಹಾರೈಕೆ. ಪುರುಷರ ಹಾಕಿಯಲ್ಲಿ 8 ಬಾರಿ ಸ್ವರ್ಣ ಗೆದ್ದ ಏಕೈಕ ತಂಡವೆಂಬ ಹೆಗ್ಗಳಿಕೆ ಭಾರತ ಉಳಿಸಿಕೊಂಡಿದೆ.

ಭಾರತ ತಂಡ ಹಾಲಿ ಚಾಂಪಿಯನ್‌ ಬೆಲ್ಜಿಯಂ, ಆಸ್ಟ್ರೇಲಿಯಾ, ಅರ್ಜೆಂಟೀನಾ, ನ್ಯೂಜಿಲ್ಯಾಂಡ್​ ಹಾಗೂ ಐರ್ಲೆಂಡ್‌ ಜತೆ ‘ಬಿ’ ಗುಂಪಿನಲ್ಲಿದೆ. ನ್ಯೂಜಿಲ್ಯಾಂಡ್​ ಪಂದ್ಯದ ಬಳಿಕ ಭಾರತ ಜುಲೈ 29ರಂದು ಅರ್ಜೆಂಟೀನಾ, 30ರಂದು ಐರ್ಲೆಂಡ್‌, ಆಗಸ್ಟ್ 1ರಂದು ಬೆಲ್ಜಿಯಂ, ಆಗಸ್ಟ್​ 2ರಂದು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಕ್ವಾರ್ಟರ್‌ಫೈನಲ್ ಪಂದ್ಯಗಳು ಆಗಸ್ಟ್​ 4ರಂದು ಮತ್ತು ಸೆಮಿಫೈನಲ್ ಪಂದ್ಯಗಳು ಆಗಸ್ಟ್​ 6 ರಂದು ನಡೆಯಲಿವೆ. ಕಂಚಿನ ಪದಕದ ಮತ್ತು ಫೈನಲ್ ಪಂದ್ಯ ಆಗಸ್ಟ್​ 8ರಂದು ನಡೆಯಲಿವೆ.

ಈ ಬಾರಿಯ 16 ಸದಸ್ಯರ ತಂಡದಲ್ಲಿ 11 ಮಂದಿ ಆಟಗಾರರು ಟೋಕಿಯೊ ಒಲಿಂಪಿಕ್ಸ್​ ಆಡಿದ ಆಟಗಾರರಾಗಿದ್ದಾರೆ. ಗೋಲ್ ಕೀಪರ್ ಪಿಆರ್ ಶ್ರೀಜೇಶ್ (PR Sreejesh) ಅವರಿಗೆ ಇದು ಕೊನೆಯ ಒಲಿಂಪಿಕ್ಸ್​ ಕೂಟವಾಗಿದೆ. ಈಗಾಗಲೇ ಅವರು ತಮ್ಮ ನಿವೃತ್ತಿಯನ್ನು ಕೂಡ ಘೋಷಿಸಿದ್ದಾರೆ.

ತಂಡ


ಗೋಲ್‌ಕೀಪರ್‌: ಪಿ.ಆರ್‌. ಶ್ರೀಜೇಶ್‌

ಡಿಫೆಂಡರ್‌ಗಳು: ಜರ್ಮನ್‌ಪ್ರೀತ್ ಸಿಂಗ್, ಅಮಿತ್ ರೊಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಸುಮಿತ್, ಸಂಜಯ್

ಮಿಡ್‌ಫೀಲ್ಡರ್‌ಗಳು: ರಾಜ್‌ಕುಮಾರ್ ಪಾಲ್, ಶಮ್‌ಶೇರ್‌ ಸಿಂಗ್, ಮನ್‌ಪ್ರೀತ್ ಸಿಂಗ್, ಹಾರ್ದಿಕ್ ಸಿಂಗ್, ವಿವೇಕ್ ಸಾಗರ್ ಪ್ರಸಾದ್.

ಫಾರ್ವರ್ಡ್‌: ಅಭಿಷೇಕ್, ಸುಖಜೀತ್ ಸಿಂಗ್, ಲಲಿತ್ ಕುಮಾರ್ ಉಪಾಧ್ಯಾಯ, ಮನ್‌ದೀಪ್ ಸಿಂಗ್, ಗುರ್ಜಂತ್ ಸಿಂಗ್

ಬದಲಿ ಆಟಗಾರರು: ನೀಲಕಂಠ ಶರ್ಮಾ, ಜುಗರಾಜ್ ಸಿಂಗ್, ಕೃಷ್ಣ ಬಹದ್ದೂರ್ ಪಾಠಕ್.

ಇದನ್ನೂ ಓದಿ Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

ಅರ್ಹತೆ ಪಡೆಯದ ಮಹಿಳಾ ತಂಡ

ಟೋಕಿಯೊ ಒಲಿಂಪಿಕ್ಸ್​ನಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತೀಯ ಮಹಿಳಾ ಹಾಕಿ ತಂಡವು ಮುಂದಿನ ಪ್ಯಾರಿಸ್ ಒಲಿಂಪಿಕ್ಸ್​​ಗೆ ಅರ್ಹತೆಯನ್ನೇ ಪಡೆಯದಿರುವುದು ವಿಪರ್ಯಾಸ. 2012ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಮಹಿಳಾ ಹಾಕಿ ತಂಡ ಒಲಿಂಪಿಕ್ಸ್​ನಲ್ಲಿ ಅವಕಾಶ ಪಡೆಯಲು ವಿಫಲಗೊಂಡಿದೆ.

1980ರ ಮಾಸ್ಕೋದಲ್ಲಿ ಮಹಿಳಾ ಹಾಕಿ ಸೇರ್ಪಡೆಯಾದ ಬಳಿಕ ಭಾರತ ಮಹಿಳಾ ತಂಡ ಒಲಿಂಪಿಕ್ಸ್​ನಲ್ಲಿ ಕೇವಲ ಮೂರು ಬಾರಿ ಆಡಿದೆ. ಮೊದಲ ನಾಲ್ಕು ಆವೃತ್ತಿಯಲ್ಲಿ ಅರ್ಹತೆ ಪಡೆಯದ ಭಾರತ ರಿಯೋ 2016ರಲ್ಲಿ ಅವಕಾಶ ಗಿಟ್ಟಿಸಿತು. ಆ ಸಮಯದಲ್ಲಿ 12ನೇ ಸ್ಥಾನ ಪಡೆದುಕೊಂಡಿತ್ತು. ನಂತರ ಟೋಕಿಯೊ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿತ್ತು.

Continue Reading

ಕ್ರೀಡೆ

Paris Olympics: ಶರತ್ ಕಮಲ್​ಗೆ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ಎದುರಾಳಿ

Paris Olympics: ಪುರುಷರ ಸಿಂಗಲ್ಸ್‌ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

VISTARANEWS.COM


on

PARIS OLYMPICS
Koo

ಪ್ಯಾರಿಸ್​: ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 7 ಚಿನ್ನದ ಪದಕಗಳನ್ನು ಗೆದ್ದಿರುವ ಶರತ್‌ ಕಮಲ್‌ ನಾಯಕತ್ವದ ಟೇಬಲ್ ಟೆನಿಸ್ ತಂಡವು ಶನಿವಾರ ತನ್ನ ಒಲಿಂಪಿಕ್ಸ್​(Paris Olympics) ಅಭಿಯಾನ ಆರಂಭಿಸಲಿದೆ. ನಿನ್ನೆ(ಶುಕ್ರವಾರ) ನಡೆದಿದ್ದ ಒಲಿಂಪಿಕ್ಸ್​(Paris 2024 Olympics) ಉದ್ಘಾಟನ ಸಮಾರಂಭದಲ್ಲಿ ಶರತ್​ ಕಮಲ್‌(Sharath Kamal) ಭಾರತದ ಧ್ವಜಧಾರಿಯಾಗಿ ಕಾಣಿಸಿಕೊಂಡಿದ್ದರು. ಮರು ದಿನವೇ ಸ್ಪರ್ಧೆಗೆ ಇಳಿಯಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ, ಈ ಬಾರಿಯ ಪದಕ ಭರಸೆಯ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಮಣಿಕಾ ಬಾತ್ರಾ ಅವರು ಗ್ರೇಟ್‌ ಬ್ರಿಟನ್‌ನ ಅನಾ ಹರ್ಸೆ ವಿರುದ್ಧ ಸೆಣಸಾಟ ನಡೆಸಲಿದ್ದಾರೆ. ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಬಾತ್ರ ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್​ ತಪ್ಪನ್ನು ಇಲ್ಲಿ ಮರುಕಳಿಸಲ್ಲ ಎಂದು ಹೇಳುವ ಮೂಲಕ ಪದಕ ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 32ರ ಘಟ್ಟದದ ಪಂದ್ಯದಲ್ಲಿ ಸೋಲು ಕಂಡಿದ್ದರು.

ಇದನ್ನೂ ಓದಿ Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

ಟೇಬಲ್ ಟೆನಿಸ್​


ಪುರುಷರ ಸಿಂಗಲ್ಸ್: ಶರತ್ ಕಮಲ್, ಹರ್ಮೀತ್ ದೇಸಾಯಿ

ಮಹಿಳೆಯರ ಸಿಂಗಲ್ಸ್: ಮಾಣಿಕಾ ಬಾತ್ರಾ, ಶ್ರೀಜಾ ಅಕುಲಾ. (ಸಂಜೆ 6:30 ರಿಂದ)

ಪುರುಷರ ತಂಡ ವಿಭಾಗದಲ್ಲಿ ಶರತ್ ಕಮಲ್, ದೇಸಾಯಿ ಮತ್ತು ಮಾನವ್ ಠಕ್ಕರ್ ಕಣಕ್ಕಿಳಿದರೆ, ಮಹಿಳೆಯರ ತಂಡದಲ್ಲಿ ಮಣಿಕಾ, ಶ್ರೀಜಾ ಅಕುಲಾ ಹಾಗೂ ಕರ್ನಾಟಕದ ಅರ್ಚನಾ ಕಾಮತ್ ಸ್ಪರ್ಧಿಸಲಿದ್ದಾರೆ. ಜಿ. ಸತ್ಯನ್, ಐಹಿಕಾ ಮುಖರ್ಜಿ ಮೀಸಲು ಆಟಗಾರರಾಗಿದ್ದಾರೆ. ಶರತ್ ಕಮಲ್ ಅವರಿಗೆ ಇದು ಬಹುತೇಕ ಕೊನಯ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಹೀಗಾಗಿ ಅವರು ಐತಿಹಾಸಿಕ ಪದಕ ಗೆದ್ದು ತಮ್ಮ ಕ್ರೀಡಾ ವೃತ್ತಿ ಜೀವನನ್ನು ಸ್ಮರಣೀಯಗೊಳಿಸಲಿ ಎನ್ನುವುದು ಭಾರತೀಯರ ಹಾರೈಕೆ.

ಶೂಟಿಂಗ್​ನಲ್ಲಿ ಭಾರತ ಇಂದು ಒಂದು ಪದಕ್ಕೆ ಸ್ಪರ್ಧಿಸಲಿದ್ದು, ಪದಕ ಗೆಲ್ಲುವ ನಿರೀಕ್ಷೆಯೊಂದನ್ನು ಇಡಲಾಗಿದೆ. 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಮತ್ತು ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಕಣಕ್ಕಿಳಿಯಲಿದ್ದಾರೆ. ಗೆದ್ದರೆ, ಶೂಟಿಂಗ್​ ವಿಭಾಗದಲ್ಲಿ 12 ವರ್ಷಗಳ ಪದಕ ಬರ ನೀಗಲಿದೆ. ಶೂಟಿಂಗ್​ ಸ್ಪರ್ಧೆ ಪ್ಯಾರಿಸ್​ನಿಂದ 272 ಕಿಲೋಮೀಟರ್​ ದೂರದಲ್ಲಿರುವ ಚಟೌರೊಕ್ಸ್​ನಲ್ಲಿ ನಡೆಯಲಿದೆ.

ಶೂಟಿಂಗ್

10 ಮೀ ಏರ್ ರೈಫಲ್ ಮಿಶ್ರ ತಂಡ ಅರ್ಹತೆ: ಸಂದೀಪ್ ಸಿಂಗ್, ಅರ್ಜುನ್ ಬಾಬುತಾ, ಎಲವೆನಿಲ್ ವಲರಿವನ್, ರಮಿತಾ ಜಿಂದಾಲ್. ಮಧ್ಯಾಹ್ನ 12:30

10ಮೀ ಏರ್ ಪಿಸ್ತೂಲ್ ಪುರುಷರ ಅರ್ಹತೆ: ಸರಬ್ಜೋತ್ ಸಿಂಗ್, ಅರ್ಜುನ್ ಚೀಮಾ. (ಮಧ್ಯಾಹ್ನ 2 ಗಂಟೆ)

10ಮೀ ಏರ್ ರೈಫಲ್ ಮಿಶ್ರ ತಂಡ ಪದಕ ಸುತ್ತುಗಳು: (ಅರ್ಹತೆ ಪಡೆದರೆ) ಮಧ್ಯಾಹ್ನ 2 ಗಂಟೆ

10 ಮೀ ಏರ್ ಪಿಸ್ತೂಲ್ ಮಹಿಳೆಯರ ಅರ್ಹತೆ ಸುತ್ತು: ರಿದಮ್ ಸಾಂಗ್ವಾನ್, ಮನು ಭಾಕರ್. (ಸಂಜೆ 4 ಗಂಟೆಯಿಂದ)

Continue Reading

ಕ್ರೀಡೆ

Paris Olympics: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಮೊದಲ ಡೋಪಿಂಗ್‌ ಪ್ರಕರಣ ಪತ್ತೆ; ಜೂಡೊಪಟು ತಾತ್ಕಾಲಿಕ ಅಮಾನತು

Paris Olympics: ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಬಂದಿದ್ದ ಇರಾಕ್‌ ಪುರುಷರ ತಂಡದ ಜೂಡೊಪಟು ಸಜ್ಜದ್‌ ಸೆಹೆನ್ (Sajjad Sehen) ಡೋಪಿಂಗ್‌ ಪರೀಕ್ಷೆಯಲ್ಲಿ ಸಿಕ್ಕಿ ಬಿದಿದ್ದು ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ

VISTARANEWS.COM


on

Paris Olympics
Koo

ಪ್ಯಾರಿಸ್‌: ಪ್ಯಾರಿಸ್​ನಲ್ಲಿ ನಡೆಯುತ್ತಿರುವ 33ನೇ ಬೇಸಗೆ ಒಲಿಂಪಿಕ್ಸ್‌(Paris Olympics) ಟೂರ್ನಿಯ ಉದ್ಘಾಟನಾ ಸಮಾರಂಭ ನಿನ್ನೆ(ಶುಕ್ರವಾರ) ಅದ್ಧೂರಿಯಾಗಿ ನಡೆದಿತ್ತು. ಇಂದಿನಿಂದ ಪದಕ ಸ್ಪರ್ಧೆಗಳು ಆರಂಭಗೊಳ್ಳಲಿದೆ. ಈ ಮಧ್ಯೆ ಮೊದಲ ಡೋಪಿಂಗ್‌ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಬಂದಿದ್ದ ಇರಾಕ್‌ ಪುರುಷರ ತಂಡದ ಜೂಡೊಪಟು ಸಜ್ಜದ್‌ ಸೆಹೆನ್ (Sajjad Sehen) ಡೋಪಿಂಗ್‌ ಪರೀಕ್ಷೆಯಲ್ಲಿ ಸಿಕ್ಕಿ ಬಿದ್ದ ಆಟಗಾರ. ಅವರಿಂದ ಪಡೆದ ಮಾದರಿಯಲ್ಲಿ ಎರಡು ಅನಬಾಲಿಕ್ ಸ್ಟಿರಾಯಿಡ್‌ಗಳ ಅಂಶ ಪತ್ತೆಯಾಗಿದೆ ಎಂದು ಅಂತರರಾಷ್ಟ್ರೀಯ ಟೆಸ್ಟಿಂಗ್ ಏಜನ್ಸಿ (ಐಟಿಐ) ತಿಳಿಸಿದೆ. 28 ವರ್ಷದ ಸಜ್ಜದ್‌ ಸೆಹೆನ್ ಅವರಿಂದ ಕಳೆದ ಮಂಗಳವಾರ ಸ್ಯಾಂಪಲ್ ಪಡೆಯಲಾಗಿತ್ತು.

ರಿಪೋರ್ಟ್​ನಲ್ಲಿ ಮೆಟಾಂಡಿನೊನ್ ಮತ್ತು ಬೊಲ್ಡೆನೊನ್ ಅಂಶಗಳು ಕಂಡುಬಂದಿವೆ. ಸದ್ಯ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಇದರಿಂದ ಅವರು ಸ್ಪರ್ಧೆ, ತರಬೇತಿ, ಕೋಚಿಂಗ್ ಅಥವಾ ಒಲಿಂಪಿಕ್ಸ್‌ ಕ್ರೀಡೆಗಳ ಯಾವುದೇ ಚಟುವಟಿಕೆಯಲ್ಲಿ ಭಾಗವಹಿಸುವಂತಿಲ್ಲ. ಅವರು ಮುಂದಿನ ಮಂಗಳವಾರ ಉಜ್ಬೇಕಿಸ್ತಾನ ಸ್ಪರ್ಧಿಯ ವಿರುದ್ಧ 81 ಕೆ.ಜಿ ವಿಭಾಗದಲ್ಲಿ ಕಣಕ್ಕಿಳಿಯಬೇಕಿತ್ತು. ಒಂದೊಮ್ಮೆ ಅವರ ಮತ್ತೊಂದು ಪರೀಕ್ಷೆಯಲ್ಲಿಯೂ ಉದ್ದೀಪನ ಮದ್ದು ಸೇವನೆ ಮಾಡಿದ್ದು ದೃಢವಾದರೆ ಅವರ ಒಲಿಂಪಿಕ್ಸ್​ ಕನಸು ಭಗ್ನಗೊಳ್ಳಲಿದೆ. ಕಾಲಿ ಕೈಯಲ್ಲಿ ಅವರು ತವರಿಗೆ ಮರಳಬೇಕಾಗುತ್ತದೆ. ಅಲ್ಲದೆ ಕೆಲ ವರ್ಷಗಳ ನಿಷೇಧ ಶಿಕ್ಷೆಗೆ ಗುರಿಯಾಗಬೇಕಾಗಿದೆ.

ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಕ್ರೀಡಾ ಸ್ಫರ್ಧೆಗಳು; ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ

ಎಲ್ಲ ಕ್ರೀಡೆಗಳಲ್ಲಿರುವಂತೆ ಒಲಿಂಪಿಕ್ಸ್‌ಗಳಲ್ಲಿಯೂ ಉದ್ದೀಪನ ಪರೀಕ್ಷೆ ಕಟ್ಟುನಿಟ್ಟಾಗಿ ನಡೆಯುತ್ತದೆ. ಒಲಿಂಪಿಕ್ಸ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಮಾದಕ ದ್ರವ್ಯ ಸೇವನೆ ಪ್ರಕರಣ ಬೆಳಕಿಗೆ ಬಂದದ್ದು 1968ರ ಮೆಕ್ಸಿಕೊ ಗೇಮ್ಸ್‌ನಲ್ಲಿ. ಬಿಯರ್‌ ಕುಡಿದಿದ್ದಕ್ಕಾಗಿ ಸ್ವೀಡನ್‌ ಆ್ಯತ್ಲೀಟ್‌ ಹನ್ಸ್‌-ಗುನ್ನಾರ್‌ ಲಿಲಿಜೆನ್‌ವಾಲ್‌ ನಿಷೇಧ ಶಿಕ್ಷೆ ಅನುಭವಿಸಬೇಕಾಯಿತು! ಇದಕ್ಕಾಗಿ ಅವರು ಗೆದ್ದಿದ್ದ ಕಂಚಿನ ಪದಕವನ್ನೂ ವಾಪಸ್‌ ಪಡೆಯಲಾಗಿತ್ತು.

ಒಲಿಂಪಿಕ್‌ ನಡೆಯುವ ಮುನ್ನವೇ ಕ್ರೀಡಾಪಟುಗಳು ತಮ್ಮ ರಕ್ತ ಹಾಗೂ ಮೂತ್ರವನ್ನು ಪರೀಕ್ಷೆಗೆ ನೀಡಬೇಕಾಗುತ್ತದೆ. ಇದಾದ ಬಳಿಕ ಕೂಟದಲ್ಲಿ ನಿರ್ದಿಷ್ಟ ಆಟ ಅಥವಾ ಸ್ಪರ್ಧೆಯಲ್ಲಿ ಮೊದಲ ಐದು ಸ್ಥಾನ ಪಡೆದವರ ರಕ್ತ ಹಾಗೂ ಮೂತ್ರವನ್ನು ತಕ್ಷಣವೇ ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಿಕೊಡಲಾಗುತ್ತದೆ. ಸ್ಪರ್ಧೆ ನಡೆಯುವ ಸ್ಥಳಗಳಲ್ಲೇ ಪದೇ ಪದೇ ಇಂಥ ಪರೀಕ್ಷೆಗಳನ್ನು ನಡೆಸಬಹುದಾಗಿದೆ.

ಪ್ರತಿ ಅಥ್ಲೀಟ್‌ನಿಂದ ಎರಡು ‘ಸ್ಯಾಂಪಲ್‌’ಗಳನ್ನು ತೆಗೆದುಕೊಳ್ಳುತ್ತಾರೆ. ಮೊದಲ ‘ಸ್ಯಾಂಪಲ್‌’ನಲ್ಲಿ ನಿಷೇಧಿತ ಮದ್ದು ಸೇವಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅಥ್ಲೀಟ್‌ಗಳು ಎರಡನೇ ಸ್ಯಾಂಪಲ್‌ ಅನ್ನೂ ಪರೀಕ್ಷಿಸುವಂತೆ ಮನವಿ ಮಾಡಿಕೊಳ್ಳಬಹುದು. ರಕ್ತ ಅಥವಾ ಮೂತ್ರದ ‘ಸ್ಯಾಂಪಲ್‌’ಗಳನ್ನು (ನಮೂನೆಗಳನ್ನು) ಶೈತ್ಯಾಗಾರದಲ್ಲಿ ಸಂಗ್ರಹಿಸಿಟ್ಟು, ಎಂಟು ಹತ್ತು ವರ್ಷಗಳ ನಂತರ ಕೂಡ ಪರೀಕ್ಷಿಸಬಹುದಾಗಿದೆ.

Continue Reading
Advertisement
karnataka high court
ಪ್ರಮುಖ ಸುದ್ದಿ24 mins ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ34 mins ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ37 mins ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ46 mins ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ59 mins ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ1 hour ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Shiva Rajkumar played the dupe for saikumar in film
ಸ್ಯಾಂಡಲ್ ವುಡ್1 hour ago

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Paris Olympic
ಕ್ರೀಡೆ1 hour ago

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Electric shock
ಮೈಸೂರು1 hour ago

Electric shock : ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದವನಿಗೆ ಕರೆಂಟ್‌ ಶಾಕ್‌; ಕ್ಷಣಾರ್ಧದಲ್ಲಿ ಹಾರಿಹೋಯ್ತು ಪ್ರಾಣ

Mamata Banerjee
ದೇಶ1 hour ago

Mamata Banerjee: ಮಾತನಾಡಲು 5 ನಿಮಿಷ ಮಾತ್ರ ಅವಕಾಶ ನೀಡಿದರು: ನೀತಿ ಆಯೋಗದ ಸಭೆಯಿಂದ ಹೊರ ಬಂದ ಮಮತಾ ಬ್ಯಾನರ್ಜಿ ಕಿಡಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ59 mins ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ20 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ21 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ22 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ23 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌