Site icon Vistara News

IPL 2024: ಸೌರವ್ ಗಂಗೂಲಿಯ ಐಪಿಎಲ್​ ದಾಖಲೆ ಮುರಿದ ಫಿಲ್​ ಸಾಲ್ಟ್​

IPL 2024

ಕೋಲತ್ತಾ: ಡೆಲ್ಲಿ ಕ್ಯಾಟಪಿಲ್ಸ್​ ವಿರುದ್ಧ ಪ್ರಚಂಡ ಬ್ಯಾಟಿಂಗ್​ ನಡೆಸಿ ಗಮನಸೆಳೆದ ಕೆಕೆಆರ್(​KKR vs DC) ತಂಡದ ಆರಂಭಿಕ ಆಟಗಾರ ಫಿಲ್​ ಸಾಲ್ಟ್(Phil Salt)​ ಅವರು ಮಾಜಿ ಆಟಗಾರ ದಾದಾ ಖ್ಯಾತಿಯ ಸೌರವ್ ಗಂಗೂಲಿಯ(Sourav Ganguly) ಐಪಿಎಲ್​(IPL 2024) ದಾಖಲೆಯೊಂದನ್ನು ಮುರಿದಿದ್ದಾರೆ.

ಫಿಲ್ ಸಾಲ್ಟ್​ ಅವರು ಅರ್ಧಶತಕ ಬಾರಿಸುವ ಮೂಲಕ ಐಪಿಎಲ್​ ಆವೃತ್ತಿಯೊಂದರಲ್ಲಿ ಕೆಕೆಆರ್​ ಪರ ಈಡನ್ ಗಾರ್ಡನ್ಸ್​ ಸ್ಟೇಡಿಯಂನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ಎಂಬ ದಾಖಲೆ ಬರೆದರು. ಈ ಮೂಲಕ ಸೌರವ್​ ಗಂಗೂಲಿಯ ದಾಖಲೆಯನ್ನು ಮುರಿದರು. ಗಂಗೂಲಿ 2010ರ ಆವೃತ್ತಿಯಲ್ಲಿ 7 ಇನಿಂಗ್ಸ್​ ಆಡಿ 331 ರನ್​ ಬಾರಿಸಿದ್ದರು. ಆದರೆ ಫಿಲ್​ ಸಾಲ್ಟ್​ ಕೇವಲ 6 ಇನಿಂಗ್ಸ್​ಗಳಿಂದ 344* ರನ್​ ಕಲೆಹಾಕುವ ಮೂಲಕ ಈ ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು. ಆ್ಯಂಡ್ರೆ ರಸೆಲ್​ ಮೂರನೇ ಸ್ಥಾನದಲ್ಲಿದ್ದಾರೆ. ರಸೆಲ್​ 2019ರಲ್ಲಿ 7 ಇನಿಂಗ್ಸ್​ ನಿಂದ 311 ರನ್​ ಬಾರಿಸಿದ್ದೆರು.

ಈಡನ್​ ಗಾರ್ಡನ್ಸ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಕೆಕೆಆರ್ ಆಟಗಾರರು


ಫಿಲ್​ ಸಾಲ್ಟ್​-344* ರನ್​, 6* ಇನಿಂಗ್ಸ್​

ಸೌರವ್​ ಗಂಗೂಲಿ-331 ರನ್​, 7 ಇನಿಂಗ್ಸ್​

ಆ್ಯಂಡ್ರೆ ರಸೆಲ್​- 311 ರನ್​, 7 ಇನಿಂಗ್ಸ್​

ಕ್ರಿಸ್​ ಲೀನ್​-303 ರನ್​, 9 ಇನಿಂಗ್ಸ್​

ಚೇಸಿಂಗ್​ ವೇಳೆ ಫಿಲ್​ ಸಾಲ್ಟ್​ 17 ರನ್​ ಗಳಿಸಿದ್ದ ವೇಳೆ ಖಲೀಲ್​ ಅಹ್ಮದ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಲಿಜಾಡ್ ವಿಲಿಯಮ್ಸ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದರು. ಇದರ ಸಂಪೂರ್ಣ ಲಾಭವೆತ್ತಿದ ಸಾಲ್ಟ್​ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ವಿಲಿಯಮ್ಸ್ ಕಳಪೆ ಫೀಲ್ಡಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಸರಿಯಾಗಿ ದಂಡಿಸಿಕೊಂಡರು. ಮೂರು ಓವರ್​ಗೆ 38 ರನ್​ ಹೊಡೆಸಿಕೊಂಡರು. ಸಾಲ್ಟ್​ 33 ಎಸೆತಗಳಿಂದ 68 ರನ್​ ಚಚ್ಚಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 5 ಸೊಗಸಾದ ಸಿಕ್ಸರ್​ ಮತ್ತು 7 ಬೌಂಡರಿ ಸಿಡಿಯಿತು.

 ಈಡನ್​ ಗಾರ್ಡನ್ಸ್​ನಲ್ಲಿ ಸೋಮವಾರ ರಾತ್ರಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಡೆಲ್ಲಿ​ ನಾಟಕೀಯ ಕುಸಿತ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 153 ರನ್​ ಬಾರಿಸಿತು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) 16.3​ ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 157 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಇದು ಕೆಕೆಆರ್​ಗೆ 9ನೇ ಪಂದ್ಯದಲ್ಲಿ ಒಲಿದ 6ನೇ ಗೆಲುವಾಗಿದೆ. ಸದ್ಯ 12 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ.

Exit mobile version