IPL 2024: ಐಪಿಎಲ್​ನ 17​ ಆವೃತ್ತಿಗಳನ್ನು ಆಡುವ ಆಟಗಾರರಿವರು! - Vistara News

ಕ್ರೀಡೆ

IPL 2024: ಐಪಿಎಲ್​ನ 17​ ಆವೃತ್ತಿಗಳನ್ನು ಆಡುವ ಆಟಗಾರರಿವರು!

ಐಪಿಎಲ್​ನ ಚೊಚ್ಚಲ ಆವೃತ್ತಿಯಿಂದ ಪ್ರಸಕ್ತ ಆವೃತ್ತಿಯ ತನಕ ಆಡುತ್ತಿರುವ ಆಟಗಾರರ ಮಾಹಿತಿ ಇಂತಿದೆ.

VISTARANEWS.COM


on

ms dhoni and virat kohli ipl
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ ಮಾರ್ಚ್​ 22ರಿಂದ ಚಾಲನೆ ಸಿಗಲಿದೆ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುವ ಉದ್ಘಾಟನ ಪಂದ್ಯದಲ್ಲಿ ಚೆನ್ನೈ ಮತ್ತು ಬೆಂಗಳೂರು ತಂಡಗಳು ಮುಖಾಮುಖಿಯಾಗುವ ಮೂಲಕ ಟೂರ್ನಿ ಆರಂಭಗೊಳ್ಳಲಿದೆ. ಇದೀಗ ಚೊಚ್ಚಲ ಆವೃತ್ತಿಯಿಂದ ಪ್ರಸಕ್ತ ಆವೃತ್ತಿಯ ತನಕ ಆಡುತ್ತಿರುವ ಆಟಗಾರರ ಮಾಹಿತಿ ಇಂತಿದೆ.

ವಿರಾಟ್ ಕೊಹ್ಲಿ


ಕಿಂಗ್​ ಖ್ಯಾತಿಯ ವಿರಾಟ್ ಕೊಹ್ಲಿ ಇದುವರೆಗಿನ ಎಲ್ಲ ಐಪಿಎಲ್ ಆವೃತ್ತಿಯಲ್ಲಿಯೂ ಆಡಿದ್ದಾರೆ. ಇದು ಕೂಡ ಒಂದೇ ತಂಡದ ಪರ ಎನ್ನುವುದು ಇತಿಹಾಸ. ಇವರನ್ನು ಹೊರತುಪಡಿಸಿ ಯಾವುದೇ ಆಟಗಾರನೂ ಒಂದೇ ತಂಡದ ಪರ ಇಷ್ಟು ವರ್ಷ ಆಡಿಲ್ಲ. ಆರ್​ಸಿಬಿ ಪರವೇ ಕೊಹ್ಲಿ ಆಡುತ್ತಿದ್ದಾರೆ. 16 ಆವೃತ್ತಿಗಳನ್ನು ಪೂರ್ತಿಗೊಳಿಸಿರುವ ಕೊಹ್ಲಿ ಐಪಿಎಲ್‌ನಲ್ಲಿ 7 ಸಾವಿರಕ್ಕೂ ಅಧಿಕ ರನ್ ಗಳಿಸಿದ್ದಾರೆ. ಈ ಬಾರಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರುವ ನಿರೀಕ್ಷೆ ಇದೆ.


ಮಹೇಂದ್ರ ಸಿಂಗ್​ ಧೋನಿ


5 ಟ್ರೋಫಿ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕ ಮಹೇಂದ್ರ ಸಿಂಗ್​ ಧೋನಿ ಅವರು ಕೂಡ 2008 ಚೊಚ್ಚಲ ಆವೃತ್ತಿಯಿಂದ 2024ರ ಐಪಿಎಲ್​ನಲ್ಲಿಯೂ ಆಡುತ್ತಿದ್ದಾರೆ. ಆದರೆ ಈ ಬಾರಿ ಅವರು ನಿವೃತ್ತಿ ಹೇಳಲಿದ್ದಾರೆ. ಕಳೆದ ವರ್ಷವೇ ಧೋನಿ ಐಪಿಎಲ್​ ವಿದಾಯ ಹೇಳಲು ಮುಂದಾಗಿದ್ದರು. ಆದರೆ, ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಒಂದು ವರ್ಷದ ಮಟ್ಟಿಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು.

MS Dhoni

ದಿನೇಶ್ ಕಾರ್ತಿಕ್


ಹಲವು ಪ್ರಾಂಚೈಸಿಗಳ ಪರ ಆಡಿರುವ ದಿನೇಶ್ ಕಾರ್ತಿಕ್ ಕೂಡ ಐಪಿಎಲ್​ನ ಎಲ್ಲ ಆವೃತ್ತಿಗಳಲ್ಲಿಯೂ ಆಡಿದ ಖ್ಯಾತಿ ಹೊಂದಿದ್ದಾರೆ. ಡೆಲ್ಲಿ ತಂಡದ ಪರ ಐಪಿಎಲ್​ ಪದಾರ್ಪಣೆ ಮಾಡಿದ ಅವರು ಬಳಿಕ ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್, ಕೆಕೆಆರ್​, ಗುಜರಾತ್ ಲಯನ್ಸ್ ಮತ್ತು ಆರ್​ಸಿಬಿ ಪರ ಆಡಿದ್ದಾರೆ. ಸದ್ಯ ಆರ್​ಸಿಬಿ ತಂಡದಲ್ಲಿರುವ ಅವರು ಈ ಬಾರಿಯ ಟೂರ್ನಿ ಬಳಿಕ ವಿದಾಯ ಹೇಳಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ IPL 2024: ಪ್ರತಿ ಸೀಸನ್​ನ ಐಪಿಎಲ್​ನಲ್ಲಿ ಅತಿ ಹೆಚ್ಚು ಹಣ ಪಡೆದ ಆಟಗಾರರು

Dinesh Karthik


ವೃದ್ಧಿಮನ್ ಸಹಾ


ಭಾರತ ಕ್ರಿಕೆಟ್​ ತಂಡದ ಹಿರಿಯ ಆಟಗಾರ ವಿಕೆಟ್ ಕೀಪರ್ ಕಮ್​ ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಕೂಡ ಇದುವರೆಗಿನ ಎಲ್ಲ ಆವೃತ್ತಿಯ ಐಪಿಎಲ್​ ಟೂರ್ನಿಗಳಲ್ಲಿ ಆಡಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಗುಜರಾತ್‌ ಟೈಟಾನ್ಸ್​ ಪರ ಟ್ರೋಫಿಯನ್ನು ಕೂಡ ಗೆದ್ದಿದ್ದಾರೆ. ಪಂಜಾಜಾ ಪರ ಆಡುವ ವೇಳೆ ಶತಕವನ್ನು ಕೂಡ ಬಾರಿಸಿ ಗಮನ ಸೆಳೆದಿದ್ದರು.


ಶಿಖರ್ ಧವನ್


ಗಬ್ಬರ್​ ಖ್ಯಾತಿಯ ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ನಾಯಕನಾಗಿರುವ ಶಿಖರ್ ಧವನ್ ಕೂಡ ಎಲ್ಲ ಆವೃತ್ತಿಯ ಐಪಿಎಲ್​ ಆಡಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್, ಡೆಕ್ಕನ್ ಚಾರ್ಜರ್ಸ್, ಸನ್ ರೈಸರ್ಸ್ ಹೈದರಾಬಾದ್ ಪರ ಆಡಿದ ಅನುಭವ ಹೊಂದಿದ್ದಾರೆ. ಇದುವರೆಗಿನ ಐಪಿಎಲ್​ ಪಂದ್ಯಗಳಿಂದ 6000 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ್ದಾರೆ.

ಇದನ್ನೂ ಓದಿ IPL 2024 : ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಬ್ಯಾಟರ್​​ಗಳು


ಮನೀಶ್‌ ಪಾಂಡೆ


ಐಪಿಎಲ್‌ನಲ್ಲಿ ಶತಕ ಸಿಡಿಸಿದ ಮೊದಲ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆ ಹೊಂದಿರುವ ಕರ್ನಾಟಕದ ಕ್ರಿಕೆಟಿಗ ಮನೀಶ್ ಪಾಂಡೆ ಅವರು ಕೂಡ ಇದುವರೆಗಿನ ಎಲ್ಲ ಐಪಿಎಲ್​ ಆವೃತ್ತಿಗಳಲ್ಲಿ ಆಡಿದ್ದಾರೆ. ಪ್ರಸ್ತುತ ಕೆಕೆಆರ್​ ತಂಡದ ಆಟಗಾರನಾಗಿದ್ದಾರೆ. ಪಾಂಡೆ 2008ರಲ್ಲಿ ಮುಂಬೈ ಇಂಡಿಯನ್ಸ್‌ ಪರ ಚೊಚ್ಚಲ ಐಪಿಎಲ್‌ ಪಂದ್ಯ ಆಡಿದ್ದರು. ಆದರೆ ಈ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿದ್ದರು.

ಇದನ್ನೂ ಓದಿ IPL 2024: ಅತಿ ಹೆಚ್ಚು ಐಪಿಎಲ್​ ಶತಕ ಬಾರಿಸಿದ ದಾಂಡಿಗರಿವರು!


ರೋಹಿತ್​ ಶರ್ಮ


ಐಪಿಎಲ್​ ಇತಿಹಾಸದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರಾದ, 5 ಟ್ರೋಫಿ ಗೆದ್ದ ನಾಯಕ ರೋಹಿತ್​ ಶರ್ಮ ಕೂಡ ಎಲ್ಲ ಆವೃತ್ತಿ ಐಪಿಎಲ್​ ಟೂರ್ನಿಯಲ್ಲಿ ಆಡಿದ್ದಾರೆ. 2008ರ ಚೊಚ್ಚಲ ಆವೃತ್ತಿಯಲ್ಲಿ ಡೆಕ್ಕನ್​ ಚಾರ್ಜಸ್​ ಪರ ಕಣಕ್ಕಿಳಿಯುವ ಮೂಲಕ ಅವರು ತಮ್ಮ ಐಪಿಎಲ್​ ಜರ್ನಿ ಆರಂಭಿಸಿದರು. ಐಪಿಎಲ್​ನಲ್ಲಿ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆಯೂ ಇವರ ಹೆಸರಿನಲ್ಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat Kohli: ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ ವಿರಾಟ್ ಕೊಹ್ಲಿ

Virat Kohli: 2012, 2017, 2018 ರಲ್ಲಿಯೂ ಕೊಹ್ಲಿ ಐಸಿಸಿ ವರ್ಷದ(ICC ODI Player Of The Year 2023) ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಭಾರತ ತಂಡದ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ(Virat Kohli) ಅವರು ಐಸಿಸಿ ವರ್ಷದ(ICC ODI Player Of The Year 2023) ಏಕದಿನ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಭಾನುವಾರ ಕೊಹ್ಲಿ ಈ ಪ್ರಶಸ್ತಿ ಸ್ವೀಕರಿಸಿದರು. ಈ ಮೂಲಕ ವೃತ್ತಿಜೀವನದಲ್ಲಿ ಮತ್ತೊಂದು ಬೃಹತ್ ಉತ್ತುಂಗಕ್ಕೆ ಏರಿದ್ದಾರೆ. ಟಿ20 ವಿಶ್ವಕಪ್​ ಆಡುವ ಸಲುವಾಗಿ ನ್ಯೂಯಾರ್ಕ್​ನಲ್ಲಿರು ಕೊಹ್ಲಿ ಈ ಪ್ರಶಸ್ತಿಯನ್ನು ಇಲ್ಲಿಯೇ ಸ್ವೀಕರಿಸಿದ್ದಾರೆ. ಇದರ ವಿಡಿಯೊವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. 2012, 2017, 2018 ರಲ್ಲಿಯೂ ಕೊಹ್ಲಿ ಈ ಪ್ರಶಸ್ತಿ ಪಡೆದಿದ್ದರು.

2022ರ ದ್ವಿತೀಯಾರ್ಧದಲ್ಲಿ ಮತ್ತೆ ಹಳೆಯ ಬ್ಯಾಟಿಂಗ್​ ಫಾರ್ಮ್​ಗೆ ಮರಳಿದ ವಿರಾಟ್​ ಕೊಹ್ಲಿ ಟೆಸ್ಟ್ ಮತ್ತು ಏಏಕದಿನ ಕ್ರಿಕೆಟ್​ನಲ್ಲಿ ರನ್​ಗಳ ಮಳೆಯನ್ನೇ ಸುರಿಸಿದ್ದರು. ಅಲ್ಲದೆ ಹಲವು ವಿಶ್ವ ದಾಖಲೆಯನ್ನು ಕೂಡ ತಮ್ಮ ಹೆಸೆರಿಗೆ ಬರೆದಿದ್ದರು. 2023ರಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್-ಗವಾಸ್ಕರ್ ಸರಣಿಯ ಅಂತಿಮ ಪಂದ್ಯದಲ್ಲಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊಹ್ಲಿ 186 ರನ್ ಸಿಡಿಸಿದ್ದರು. ಇದು 2019 ರ ನಂತರ ಅವರ ಮೊದಲ ಟೆಸ್ಟ್ ಶತಕವಾಗಿತ್ತು.

ಆಸೀಸ್​ ಬಳಿಕ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ನಲ್ಲಿ 121 ರನ್ ಗಳಿಸುವ ತಮ್ಮ ಶತಕದ ಸಂಖ್ಯೆಯನ್ನು ಮತ್ತೆ ಹೆಚ್ಚಿಸಿದರು. ಏಕದಿನ ಮಾದರಿಯಲ್ಲಿ ಹಲವಾರು ದಾಖಲೆಗಳನ್ನು ಪುಡಿಮಾಡಿ ಕಳೆದ ವರ್ಷ ಆರು ಶತಕಗಳನ್ನು ಬಾರಿಸಿದ್ದಾರೆ. ಜತೆಗೆ ಏಕದಿನ ಕ್ರಿಕೆಟ್​ನಲ್ಲಿ ಸಚಿನ್​ ಬಾರಿಸಿದ್ದ 49 ಶತಕದ ವಿಶ್ವ ದಾಖಲೆಯನ್ನು ಹಿಂದಿಕ್ಕಿ 50 ಶತಕ ಪೂರ್ತಿಗೊಳಿಸಿದ್ದರು. ವಿಶ್ವಕಪ್​ ಟೂರ್ನಿಯಲ್ಲೂ 765 ರನ್​ ಬಾರಿಸಿ ಟೂರ್ನಿಯಲ್ಲಿ ಅತ್ಯಧಿಕ ರನ್​ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು.

ಇದನ್ನೂ ಓದಿ Virat kohli : ಕಡೆಗಣಿಸುವ ಹೇಳಿಕೆ ನೀಡಿ ಕೊಹ್ಲಿಗೆ ಮತ್ತೆ ಅವಮಾನ ಮಾಡಿದ ಅಂಬಾಟಿ ರಾಯುಡು

35 ವರ್ಷದ ಕೊಹ್ಲಿ 2023 ರಲ್ಲಿ 27 ಏಕದಿನ ಪಂದ್ಯಗಳಿಂದ 24 ಇನ್ನಿಂಗ್ಸ್‌ಗಳಲ್ಲಿ ಆರು ಶತಕಗಳು ಮತ್ತು ಎಂಟು ಅರ್ಧಶತಕಗಳೊಂದಿಗೆ 72.47 ರ ಸರಾಸರಿ ಮತ್ತು 99.13 ರ ಸ್ಟ್ರೈಕ್ ರೇಟ್‌ನಲ್ಲಿ 1,377 ರನ್ ಗಳಿಸಿದ್ದಾರೆ. ಈ ಪೈಕಿ ಗರಿಷ್ಠ ಸ್ಕೋರ್ 166* ಆಗಿತ್ತು. ಏಷ್ಯಾ ಕಪ್ 2023 ರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ನಿರ್ಣಾಯಕ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ 94 ಎಸೆತಗಳಲ್ಲಿ ಅಜೇಯ 122* ರನ್ ಗಳಿಸಿದ್ದರು.

ಕಳೆದ ವರ್ಷ ತವರಿನಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ, ವಿರಾಟ್ 11 ಪಂದ್ಯಗಳಲ್ಲಿ 95.62 ಸರಾಸರಿಯಲ್ಲಿ 765 ರನ್‌ಗಳನ್ನು ಗಳಿಸಿದ್ದರು. ಇದರಲ್ಲಿ ಮೂರು ಶತಕಗಳು, ಆರು ಅರ್ಧ ಶತಕಗಳು ದಾಖಲಾಗಿತ್ತು. ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು. ಇದೀಗ ಟಿ20 ವಿಶ್ವಕಪ್​ ಆಡಲು ಸಜ್ಜಾಗಿದ್ದಾರೆ. ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್ 5ರಂದು ಐರ್ಲೆಂಡ್​ ವಿರುದ್ಧ ಆಡಲಿದೆ.

Continue Reading

ಕ್ರಿಕೆಟ್

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

IND vs PAK:ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು

VISTARANEWS.COM


on

IND vs PAK
Koo

ನ್ಯೂಯಾರ್ಕ್​: ಕ್ರಿಕೆಟ್​ ಅಭಿಮಾನಿಗಳು ಕಾದು ಕುಳಿತಿರುವ ಜೂನ್​ 9ರಂದು ನಡೆಯುವ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಟಿ20 ವಿಶ್ವಕಪ್​ನ(T20 World Cup 2024) ಹೈವೋಲ್ಟೇಜ್ ಪಂದ್ಯಕ್ಕೆ ಈ ಬಾರಿ ಪ್ರೇಕ್ಷಕರು ನಿರಾಸಕ್ತಿ ತೋರುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಇನ್ನೂ ಮಾರಾಟವಾಗಿಲ್ಲ. ಈ ಪಂದ್ಯದ ಟಿಕೆಟ್‌ಗಳು ಇನ್ನೂ ಐಸಿಸಿ ವೆಬ್​ಸೈಟ್​ನಲ್ಲಿ ಲಭ್ಯವಿದ್ದು, ಇನ್ನೂ ಕೂಡ ಮಾರಾಟವಾಗದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ.

ಭಾರತ ಮತ್ತು ಪಾಕ್​ ಪಂದ್ಯದ ಟಿಕೆಟ್​ ಸಿಗುವುದೇ ಒಂದು ಅದೃಷ್ಟ. ಮ್ಯಾಚ್​ನ ಟಿಕೆಟ್​ಗಳು ಘೋಷಣೆಯಾದ ಕ್ಷಣಾರ್ಧದಲ್ಲೇ ಮಾರಾಟವಾಗುತ್ತಿದ್ದವು. ಆದರೆ ಈ ಬಾರಿ ಯಾರಿಗೂ ಕೂಡ ಟಿಕೆಟ್​ ಕೊಳ್ಳಲು ಆಸಕ್ತಿಯೇ ಇಲ್ಲದಂತಾಗಿದೆ. ಇದಕ್ಕೆ ಕಾರಣ ಟಿಕೆಟ್​ ಬೆಲೆ ದುಬಾರಿಯಾಗಿರುವುದು. ಈ ಪಂದ್ಯಕ್ಕಾಗಿ ಐಸಿಸಿ ಮೂರು ಪ್ಯಾಕೇಜ್‌ಗಳಲ್ಲಿ ಟಿಕೆಟ್‌ಗಳನ್ನು ಇರಿಸಿದೆ. ಇದರಲ್ಲಿ ಡೈಮಂಡ್ ಕ್ಲಬ್, ಪ್ರೀಮಿಯಂ ಕ್ಲಬ್ ಲಾಂಜ್​​ ಮತ್ತು ಕಾರ್ನರ್ ಕ್ಲಬ್​​ಗಳನ್ನು ಒಳಗೊಂಡಿವೆ.

ಡೈಮಂಡ್ ಕ್ಲಬ್ ಟಿಕೆಟ್ ಬೆಲೆ 8.34 ಲಕ್ಷ ರೂ. ಈ ಟಿಕೆಟ್​ ಖರೀದಿಸುವ ಅಭಿಮಾನಿಗಳಿಗೆ ಅತ್ಯುತ್ತಮ ಸೌಲಭ್ಯಗಳು ಸಿಗುತ್ತವೆ. ಪ್ರೀಮಿಯಂ ಕ್ಲಬ್ ಲಾಂಜ್​ ಟಿಕೆಟ್ ಬೆಲೆ 2 ಲಕ್ಷ ರೂ, ಮತ್ತು ಕಾರ್ನರ್ ಕ್ಲಬ್ ಟಿಕೆಟ್ ಬೆಲೆ 2.29 ಲಕ್ಷ ರೂ. ಆಗಿದೆ. ಭಾರತ-ಪಾಕಿಸ್ತಾನ ಪಂದ್ಯದ ದೃಷ್ಟಿಯಿಂದ ಐಸಿಸಿ ಟಿಕೆಟ್ ಬೆಲೆಯನ್ನು ಇಷ್ಟು ದುಬಾರಿ ಇರಿಸಿದೆ. ಇದಲ್ಲದೆ ಪಂದ್ಯಕ್ಕೆ ಉಗ್ರರು ಬಾಂಬ್​ ಬೆದರಿಕೆ ಹಾಕಿದ್ದು ಕೂಡ ಅಭಿಮಾನಿಗಳ ಹಿಂದೇಟಿಗೆ ಕಾರಣವಾಗಿರಬಹುದು ಎಂದು ಹೇಳಲಾಗಿದೆ. ಹೆಚ್ಚಿನ ಟಿಕೆಟ್​ಗಳು ಖರೀದಿಯಾಗದಿದ್ದಲ್ಲಿ ಐಸಿಸಿ ಮತ್ತೆ ಪರಿಷ್ಕೃತ ಟಿಕೆಟ್​ ದರ ಹೊರಡಿಡುವ ಸಾಧ್ಯತೆ ಇದೆ.

ಇದನ್ನೂ ಓದಿ T20 World Cup 2024 : ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ಕ್ರಿಕೆಟಿಗರು ಈಗ ಎಲ್ಲಿದ್ದಾರೆ?

ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಣ ಪಂದ್ಯಕ್ಕೆ ಉಗ್ರರಿಂದ ದಾಳಿಯ ಬೆದರಿಕೆ ಬಂದಿರುವ ಕಾರಣ ಕ್ರೀಡಾಂಗಣದಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳಲಾಗಿದೆ. ಐಸಿಸ್-ಕೆ ಹೆಸರಿನ ಭಯೋತ್ಪಾದಕ ಸಂಘಟನೆಯು “ಲೋನ್ ವುಲ್ಫ್” ದಾಳಿ ನಡೆಸುವುದಾಗಿ ಘೋಷಿಸಿತ್ತು. ಹೀಗಾಗಿ ಪಂದ್ಯಕ್ಕೆ ಸುಧಾರಿತ ಕಣ್ಗಾವಲು ಏರ್ಪಡಿಸಲಾಗಿದೆ.

ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಹೊರವಲಯದಲ್ಲಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ಏರ್ಪಡಿಸಲಾಗಿದೆ ಎನ್ನಲಾಗಿದೆ.

ಟಿ20 ಮುಖಾಮುಖಿ

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರೀಡೆ

Taiwan Athletics Open: ತೈವಾನ್‌ ಓಪನ್​ನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿ.ಪಿ. ಮನು

Taiwan Athletics Open: ನಿತ್ಯ ರಾಮರಾಜ್ ಮಹಿಳೆಯರ 100 ಮೀಟರ್ ಹರ್ಡಲ್ಸ್‌ನಲ್ಲಿ 13.23 ಸೆಕೆಂಡ್‌ಗಳೊಂದಿಗೆ ಬೆಳ್ಳಿ ಗೆದ್ದರೆ, ಮಹಿಳಾ ಪೋಲ್ ವಾಲ್ಟ್ ರಾಷ್ಟ್ರೀಯ ದಾಖಲೆ ಹೊಂದಿರುವ ರೋಸಿ ಮೀನಾ ಪೌಲ್‌ರಾಜ್ (4.21 ಮೀ, 2022) 3.75 ಮೀಟರ್‌ಗಳೊಂದಿಗೆ ನಿರಾಶಾದಾಯಕ ಆರನೇ ಸ್ಥಾನ ಪಡೆದರು.

VISTARANEWS.COM


on

Taiwan Athletics Open
Koo

ತೈಪಿ (ತೈವಾನ್‌): ಕಳೆದ ತಿಂಗಳು ಭುವನೇಶ್ವರದಲ್ಲಿ ನಡೆದಿದ್ದ ಫೆಡರೇಷನ್ ಕಪ್‌ನಲ್ಲಿ ನೀರಜ್​ ಚೋಪ್ರಾಗೆ ತೀವ್ರ ಪೈಪೋಟಿ ನೀಡಿ ಬೆಳ್ಳಿ ಪದಕ ಗೆದ್ದಿದ ಕರ್ನಾಟಕದ ಡಿ.ಪಿ. ಮನು(DP Manu) ಅವರು “ತೈವಾನ್‌ ಓಪನ್‌’ ಕೂಟದಲ್ಲಿ(Taiwan Athletics Open) ಚಿನ್ನದ ಪದಕ(DP Manu bags gold) ಜಯಿಸಿದ್ದಾರೆ. ಅಂತಿಮ ಎಸೆತದಲ್ಲಿ 81.58 ಮೀಟರ್‌ಗಳ ಗರಿಷ್ಠ ದೂರ ದಾಖಲಿಸಿ ಈ ಸಾಧನೆ ತೋರಿದರು. ಆರಂಭಿಕ ಎಸೆತವನ್ನು 78.32 ಮೀ ಎಸೆತದ ಮನು ದ್ವಿತೀಯ ಎಸೆತದಲ್ಲಿ 76.80 ಮೀ, 3ನೇ ಎಸೆತದಲ್ಲಿ 80.59 ಮೀ., 5ನೇ ಎಸೆತದಲ್ಲಿ 81.52 ಮೀ. ದೂರ ದಾಖಲಿಸಿದರು.

ಚಿನ್ನ ಗೆದ್ದರೂ ಕೂಡ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಒಲಿಂಪಿಕ್ಸ್​ ಟಿಕೆಟ್​ ಪಡೆಯಬೇಕಿದ್ದರೆ 85.50 ಮೀ. ದೂರ ಎಸೆಯಬೇಕು. ಮನದಂಡವನ್ನು ಇನ್ನೂ ಕೂಡ ದಾಟದ ಕಾರಣ ಮನುಗೆ ಇನ್ನೂ ಪ್ಯಾರಿಸ್​ ಒಲಿಂಪಿಕ್ಸ್​ ಬಾಗಿಲು ತೆರೆದಿಲ್ಲ. ನೀರಜ್‌ ಚೋಪ್ರಾ ಮತ್ತು ಕಿಶೋರ್‌ ಜೇನಾ ಮಾತ್ರ ಜಾವೆಲಿನ್​ ವಿಭಾಗದಿಂದ ಒಲಿಂಪಿಕ್ಸ್​ ಅರ್ಹತೆ ಪೆಡೆದಿದ್ದಾರೆ.

ನಿತ್ಯ ರಾಮರಾಜ್ ಮಹಿಳೆಯರ 100 ಮೀಟರ್ ಹರ್ಡಲ್ಸ್‌ನಲ್ಲಿ 13.23 ಸೆಕೆಂಡ್‌ಗಳೊಂದಿಗೆ ಬೆಳ್ಳಿ ಗೆದ್ದರೆ, ಮಹಿಳಾ ಪೋಲ್ ವಾಲ್ಟ್ ರಾಷ್ಟ್ರೀಯ ದಾಖಲೆ ಹೊಂದಿರುವ ರೋಸಿ ಮೀನಾ ಪೌಲ್‌ರಾಜ್ (4.21 ಮೀ, 2022) 3.75 ಮೀಟರ್‌ಗಳೊಂದಿಗೆ ನಿರಾಶಾದಾಯಕ ಆರನೇ ಸ್ಥಾನ ಪಡೆದರು.

23 ವರ್ಷದ ಡಿ.ಪಿ. ಮನು ಅವರು ಹಾಸನ(D. P. Manu Hassan) ಜಿಲ್ಲೆ ಬೇಲೂರು ತಾಲೂಕು ಕುಪ್ಪಗೋಡು ಗ್ರಾಮದವರು. ತಂದೆ ಪ್ರಕಾಶ ಹಾಗೂ ತಾಯಿ ಸುಜಾತಾ. ಹೊಯ್ಸಳ ಶಾಲೆಯಲ್ಲಿ ಓದುವಾಗಲೇ ಭರ್ಜಿಯತ್ತ ಆಕರ್ಷಣೆ ಬೆಳೆಸಿಕೊಂಡ ಮನು ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಕಠಿಣ ತರಬೇತಿ ಪಡೆದರು. ಇದೇ ವೇಳೆ ಮನು ಅವರು ಅಂತಾರಾಜ್ಯ, ಜೂನಿಯರ್‌ ರಾಷ್ಟ್ರೀಯ ಕೂಟಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡರು. ಆಳ್ವಾಸ್‌ ಕಾಲೇಜಿನಲ್ಲಿ ಅವರು ಪಡೆದ ತರಬೇತಿ, ನೀಡಿದ ಪ್ರದರ್ಶನವು ಚಿಗುರು ಮೀಸೆ ಹುಡುಗನನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದಿದೆ.

ಕಳೆದ ವರ್ಷ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಮನು (84.14 ಮೀ.) 6ನೇ ಸ್ಥಾನ ಪಡೆದು ಭಾರೀ ಸಂಚಲನ ಮೂಡಿಸಿದ್ದರು. ಅಲ್ಲದೆ 2023ರಲ್ಲಿ ನಡೆದ ಏಶ್ಯನ್​ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಾಧನೆ ಮಾಡಿದ್ದರು. ಇಂದು ನಡೆದ ಫೆಡರೇಷನ್ ಕಪ್‌ನಲ್ಲಿ (82.06 ಮೀ) ಬೆಳ್ಳಿ ಗೆದ್ದಿದ್ದಾರೆ. ಮೂರನೇ ಸುತ್ತಿನ ವರೆಗೂ ಅಗ್ರಸ್ಥಾನ ಕಾಯ್ದುಕೊಂಡು ಅನುಭವಿ ನೀರಜ್​ಗೆ ಒಂದು ಕ್ಷಣ ಬೆವರಿಳಿಸುವಂತೆ ಮಾಡಿದ್ದು ನಿಜಕ್ಕೂ ಸಣ್ಣ ಮಾತಲ್ಲ.

ಕಾಶಿನಾಥ ನಾಯ್ಕ್ ಗರಡಿಯಲ್ಲಿ ಬೆಳೆದ ಪ್ರತಿಭೆ


ಮನು ಅವರು ಕಾಶಿನಾಥ ನಾಯ್ಕ್​ ಅವರ ಗರಡಿಯಲ್ಲಿ ಬೆಳೆದು ಬಂದ ಪ್ರತಿಭೆ. 2020ರಲ್ಲಿ ಡಿ.ಪಿ.ಮನು ಅವರಿಗೆ ಮಹತ್ವದ ತಿರುವು ಸಿಕ್ಕಿತು. ಅವರು ಪುಣೆಯಲ್ಲಿರುವ ಆರ್ಮಿ ಸ್ಪೋರ್ಟ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಹವಾಲ್ದಾರ್‌ ಕೆಲಸಕ್ಕೆ ಸೇರಿದರು. ಇದೇ ವೇಳೆ ಕಾಶಿನಾಥ ನಾಯ್ಕ್​ ಅವರ ಪರಿಚಯವಾಯಿತು. ಕಾಶಿನಾಥ ಅವರ ಬಳಿ ಸತತ ತರಬೇತಿ ಪಡೆದ ಮನು, 65 ಮೀಟರ್‌ ದೂರ ಭರ್ಜಿ ಎಸೆತದಿಂದ 80 ಮೀಟರ್‌ ದಾಟುವಂತಾದರು. ಇದೀಗ ವಿಶ್ವ ಚಾಂಪಿಯನ್​ ನೀರಜ್​ಗೆ ತೀವ್ರ ಪೈಪೋಟಿ ನೀಡುವಷ್ಟರ ಮಟ್ಟಿಗೆ ಬೆಳೆದು ನಿಂತಿದ್ದಾರೆ. ನೀರಜ್​ ಕೂಡ ಕಾಶಿನಾಥ ನಾಯ್ಕ್ ಮಾರ್ಗದರ್ಶನದಲ್ಲೇ ಬೆಳೆದು ಬಂದ ಪ್ರತಿಭೆಯಾಗಿದ್ದಾರೆ.

Continue Reading

ಕ್ರೀಡೆ

USA vs CAN: ಆರನ್ ಜೋನ್ಸ್ ಪ್ರಚಂಡ ಬ್ಯಾಟಿಂಗ್​; ಗೆಲುವಿನ ಶುಭಾರಂಭ ಕಂಡ ಅಮೆರಿಕ

USA vs CAN: ಭಾನುವಾರ ನಡೆದ ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿಕೆನಡಾ ವಿರುದ್ಧ ಅಮೆರಿಕ(USA vs CAN) 7 ವಿಕೆಟ್​ಗಳ ಗೆಲುವು ಸಾಧಿಸಿತು.

VISTARANEWS.COM


on

USA vs CAN
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್​ ಟೂರ್ನಿಯ(T20 World Cup 2024) ಉದ್ಘಾಟನ ಪಂದ್ಯದಲ್ಲಿ ಆತಿಥೇಯ ಅಮೆರಿಕ(USA vs CAN) ಗೆಲುವಿನ ಖಾತೆ ತೆರೆದಿದೆ. ಭಾನುವಾರ ನಡೆದ ಬೃಹತ್​ ಮೊತ್ತದ ಮೇಲಾಟದಲ್ಲಿ ಕೆನಡಾ ವಿರುದ್ಧ 7 ವಿಕೆಟ್​ಗಳ ಗೆಲುವು ಸಾಧಿಸಿ ಮೆರೆದಾಡಿದೆ. ಜತೆಗೆ ‘ಎ’ ಗುಂಪಿನಲ್ಲಿ ಅಂಕದ ಖಾತೆ ತೆರೆದಿದೆ.

ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

ಚೇಸಿಂಗ್​ ವೇಳೆ ಅಮೆರಿಕ ಆರಂಭಿಕ ಆಘಾತ ಎದುರಿಸಿತು. ತಂಡ ಖಾತೆ ತೆರೆಯುವ ಮುನ್ನವೇ ಸ್ಟೀವನ್ ಟೇಲರ್(0) ಶೂನ್ಯಕ್ಕೆ ವಿಕೆಟ್​ ಕೈಚೆಲ್ಲಿದರು. 42 ರನ್​ ಒಟ್ಟುಗೂಡುವಷ್ಟರಲ್ಲಿ ಮೊನಾಂಕ್ ಪಟೇಲ್(16) ವಿಕೆಟ್​ ಕೂಡ ಬಿತ್ತು. ಈ ವೇಳೆ ಜತೆಗೂಡಿದ ಆಂಡ್ರೀಸ್ ಗೌಸ್ ಮತ್ತು ಆರನ್ ಜೋನ್ಸ್ ಬಿರುಸಿನ ಬ್ಯಾಟಿಂಗ್​ ಮೂಲಕ ಅರ್ಧಶತಕ ಬಾರಿಸಿ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. ಉತ್ತಮ ಹಿಡಿತ ಸಾಧಿಸಿದ್ದ ಕೆನಡಾ ಬೌಲರ್​ಗಳು ಗೌಸ್ ಮತ್ತು ಜೋನ್ಸ್ ಬ್ಯಾಟಿಂಗ್​ ಆರ್ಭಟದ ಮುಂದೆ ಸಂಪೂರ್ಣ ಲಯ ಕಳೆದುಕೊಂಡರು.

ಉಭಯ ಆಟಗಾರರು ಸೇರಿಕೊಂಡು ಸಿಕ್ಸರ್​ ಮತ್ತು ಬೌಂಡರಿಗಳ ಸುರಿಮಳೆಗೈದರು. ಕಿಕ್ಕಿರಿದು ನೆರೆದ ತವರಿನ ವೀಕ್ಷಕರಿಗೆ ಭರಪೂರ ರಂಜನೆ ಲಭಿಸಿತು. ಈ ಜೋಡಿ ಮೂರನೇ ವಿಕೆಟ್​ಗೆ ಬರೋಬ್ಬರಿ 131 ರನ್​ಗಳ ಅಮೂಲ್ಯ ಜತೆಯಾಟ ನಡೆಸಿತು. ಆಂಡ್ರೀಸ್ ಗೌಸ್ 46 ಎಸೆತಗಳಿಂದ 7 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 65 ರನ್​ ಬಾರಿಸಿದರು. ವಿಸ್ಫೋಟಕ ಬ್ಯಾಟಿಂಗ್​ ನಡೆಸಿದ ಆರನ್ ಜೋನ್ಸ್ 40 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 4 ಬೌಂಡರಿ ಸಿಡಿಸಿ ಅಜೇಯ 94 ರನ್​ ಬಾರಿಸಿದರು. ಗೆಲುವಿಗೆ ನಾಲ್ಕು ರನ್​ ಬೇಕಿದ್ದಾಗ ಸಿಕ್ಸರ್​ ಬಡಿದಟ್ಟಿ ತಂಡಕ್ಕೆ ಗೆಲುವು ತಂದುಕೊಟ್ಟುರು. ನ್ಯೂಜಿಲ್ಯಾಂಡ್​ ತಂಡ ತೊರೆದು ಅಮೆರಿಕ ಪರ ಆಡುತ್ತಿರುವ ಕೋರಿ ಆ್ಯಂಡರ್ಸನ್​ ಅಜೇಯ 3 ರನ್​ ಬಾರಿಸಿದರು. ಬೌಲಿಂಗ್​ನಲ್ಲಿ ಒಂದು ವಿಕೆಟ್​ ಪಡೆದರು.

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಕೆನಡಾ ಪರ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕ ಬಾರಿಸಿ ಮಿಂಚಿದರು. ಉಳಿದಂತೆ ಶ್ರೇಯಸ್ ಮೊವ್ವ(32) ಆರಂಭಿಕ ಆಟಗಾರ ಆರನ್ ಜಾನ್ಸನ್(23) ರನ್​ ಬಾರಿಸಿದರು. ಬೃಹತ್​ ಮೊತ್ತ ಪೇರಿಸಿದರು ಕೂಡ ಬೌಲರ್​ಗಳಿಂದ ಸಂಘಟಿತ ಪ್ರದರ್ಶನ ಕಂಡು ಬಾರದ ಕಾರಣ ಪಂದ್ಯವನ್ನು ಕಳೆದುಕೊಂಡರು.

Continue Reading
Advertisement
Drowned in water
ಚಿಕ್ಕಬಳ್ಳಾಪುರ10 mins ago

Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

Virat Kohli
ಕ್ರೀಡೆ10 mins ago

Virat Kohli: ಐಸಿಸಿ ವರ್ಷದ ಏಕದಿನ ಆಟಗಾರ ಪ್ರಶಸ್ತಿ ಸ್ವೀಕರಿಸಿದ ವಿರಾಟ್ ಕೊಹ್ಲಿ

Exit Poll 2024
ದೇಶ17 mins ago

Exit poll 2024: ಮೂರು ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಸೀಟು 400 ದಾಟಲಿದೆ!

Karnataka Rain
ಮಳೆ39 mins ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Bhavani Revanna hide Not Present For SIT Questioning At Home
ಕರ್ನಾಟಕ42 mins ago

Bhavani Revanna: ಭವಾನಿ ರೇವಣ್ಣ ಕಣ್ಣಾಮುಚ್ಚಾಲೆ ಆಟ; ಎಸ್ ಐ ಟಿಗೆ ಅರೆಸ್ಟ್ ಮಾಡಿ ಜೈಲಿಗಟ್ಟುವ ಹಠ!

IND vs PAK
ಕ್ರಿಕೆಟ್49 mins ago

IND vs PAK: ಇಂಡೋ-ಪಾಕ್​ ಹೈವೋಲ್ಟೇಜ್​ ಟಿ20 ಪಂದ್ಯ ವೀಕ್ಷಿಸಲು ಅಭಿಮಾನಿಗಳ ಹಿಂದೇಟು; ಇನ್ನೂ ಮಾರಾಟವಾಗಿಲ್ಲ ಟಿಕೆಟ್​

Foeticide Case Foeticide another Case in Bagalkot
ಬಾಗಲಕೋಟೆ1 hour ago

Foeticide Case: ಬಾಗಲಕೋಟೆಯಲ್ಲಿ ಮತ್ತೊಂದು ಭ್ರೂಣ ಹತ್ಯೆ: ಗಾಢ ನಿದ್ರೆಯಲ್ಲಿದ್ದಾರಾ ಅಧಿಕಾರಿಗಳು?

Healthy Sandwich Spread
ಆರೋಗ್ಯ1 hour ago

Healthy Sandwich Spread: ಮನೆಯಲ್ಲೇ ಮಾಡಿ ಕಡಿಮೆ ಕ್ಯಾಲರಿಯ ಆರೋಗ್ಯಕರ ಸ್ಯಾಂಡ್‌ವಿಚ್‌ ಸ್ಪ್ರೆಡ್‌!

Taiwan Athletics Open
ಕ್ರೀಡೆ2 hours ago

Taiwan Athletics Open: ತೈವಾನ್‌ ಓಪನ್​ನಲ್ಲಿ ಚಿನ್ನ ಗೆದ್ದ ಕನ್ನಡಿಗ ಡಿ.ಪಿ. ಮನು

Assembly Election Results 2024:
ದೇಶ2 hours ago

Assembly Election Results 2024: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ, ಸಿಕ್ಕಿಂನಲ್ಲಿ ಕ್ಲೀನ್‌ ಸ್ವೀಪ್‌ನತ್ತ SKM

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ39 mins ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು19 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌