ಬೆಂಗಳೂರು: ಶನಿವಾರ ನಡೆದ ಐಪಿಎಲ್ನ ಡಬಲ್ ಹೆಡರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ಮತ್ತು ರಾಜಸ್ಥಾನ್(Rajasthan Royals) ರಾಯಲ್ಸ್ ತಂಡಗಳು ಗೆಲುವು ಸಾಧಿಸಿದರೆ. ಲಕ್ನೋ ಸೂಪರ್ ಜೈಂಟ್ಸ್(Lucknow Super Giants ) ಮತ್ತು ಮುಂಬೈ ಇಂಡಿಯನ್ಸ್(Mumbai Indians) ಸೋಲು ಕಂಡಿತು. ಈ ಸೋಲು ಮತ್ತು ಗೆಲುವಿನಿಂದ ಅಂಕಪಟ್ಟಿಯಲ್ಲಿ(IPL 2024 Points Table) ಮಹತ್ವದ ಬದಲಾವಣೆ ಸಂಭವಿಸಿದೆ.
ಅಂಕಪಟ್ಟಿ
ತಂಡ | ಪಂದ್ಯ | ಗೆಲುವು | ಸೋಲು | ಅಂಕ |
ರಾಜಸ್ಥಾನ್ ರಾಯಲ್ಸ್ | 9 | 8 | 1 | 16 (+0.694) |
ಕೆಕೆಆರ್ | 8 | 5 | 3 | 10 (+0.972) |
ಹೈದರಾಬಾದ್ | 8 | 5 | 3 | 10 (+0.577) |
ಲಕ್ನೋ | 9 | 5 | 4 | 10 (+0.059) |
ಡೆಲ್ಲಿ | 10 | 5 | 5 | 10 (0.276) |
ಚೆನ್ನೈ | 8 | 4 | 4 | 8 (+0.415) |
ಗುಜರಾತ್ | 9 | 4 | 5 | 8 (-0.974) |
ಪಂಜಾಬ್ | 9 | 3 | 6 | 6 (-0.187) |
ಮುಂಬೈ | 9 | 3 | 6 | 6 (-0.261) |
ಆರ್ಸಿಬಿ | 9 | 2 | 7 | 4 (-0.721) |
ರಾಜಸ್ಥಾನ್ಗೆ 7 ವಿಕೆಟ್ ಗೆಲುವು
ಇಲ್ಲಿನ ಶ್ರೀ ಅಟಲ್ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೊ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ಗೆ 196 ರನ್ ಬಾರಿಸಿತು. ಗುರಿ ಬೆನ್ನಟ್ಟಿದ ರಾಜಸ್ಥಾನ್ 6 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ಗೆ 199 ರನ್ ಬಾರಿಸಿ ಭರ್ಜರಿಗೆ ಗೆಲುವು ತನ್ನದಾಗಿಸಿಕೊಂಡಿತು. ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ರಾಜಸ್ಥಾನ್ ತಂಡ ರನ್ ಗಳಿಸುತ್ತಲೇ ಸಾಗಿತು. ಯಶಸ್ವಿ ಜೈಸ್ವಾಲ್ 24 ರನ್ ಬಾರಿಸಿದರೆ ಜೋಸ್ ಬಟ್ಲರ್ 34 ರನ್ಗಳ ಕೊಡುಗೆ ಕೊಟ್ಟರು. ಆ ಬಳಿಕ ಬಂದ ಸಂಜು ಸ್ಯಾಮ್ಸನ್ ವಿಕೆಟ್ ಉರುಳದಂತೆ ನೋಡಿಕೊಂಡ ಜತೆಗೆ 33 ಎಸೆತಗಳಲ್ಲಿ 71 ರನ್ ಬಾರಿಸಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್ 14 ರನ್ಗೆ ಸೀಮಿತಗೊಂಡರು. ಆದರೆ ಐದನೇ ಕ್ರಮಾಂಕದಲ್ಲಿ ಆಡಿದ ಧ್ರುವ್ ಜುರೆಲ್ ಅಮೋಘ ಇನಿಂಗ್ಸ್ ಆಡಿದರು. ಅವರು 34 ಎಸೆತಕ್ಕೆ 52 ರನ್ ಕೊಡುಗೆ ಕೊಟ್ಟರು. ಇದು ಹಾಲಿ ಅವೃತ್ತಿಯಲ್ಲಿ ಅವರ ಮೊದಲ ಅರ್ಧ ಶತಕವಾಗಿದೆ.
ಇದನ್ನೂ ಓದಿ IPL 2024 : ಲಕ್ನೊ ವಿರುದ್ಧ ರಾಜಸ್ಥಾನ್ಗೆ 7 ವಿಕೆಟ್ ಭರ್ಜರಿ ಜಯ, ಪ್ಲೇಆಫ್ ಹೊಸ್ತಿಲಲ್ಲಿ ಸಂಜು ಬಳಗ
ಡೆಲ್ಲಿಗೆ 10 ರನ್ ಗೆಲುವು
ದಿನದ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 10 ರನ್ ಗೆಲುವು ಸಾಧಿಸಿತು. ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬಯಿ ತನ್ನೆಲ್ಲ ಓವರ್ಗಳು ಮುಕ್ತಾಯಗೊಂಡಾಗ 9 ವಿಕೆಟ್ ನಷ್ಟಕ್ಕೆ 247 ರನ್ ಬಾರಿಸಿ ಸೋಲೊಪ್ಪಿಕೊಂಡಿತು.