Site icon Vistara News

IPL 2024 Points Table: ರೋಚಕ 1 ರನ್ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಹೈದರಾಬಾದ್​

IPL 2024 Points Table

ಹೈದರಾಬಾದ್​: ಅತ್ಯಂತ ರೋಚಕವಾಗಿ ಸಾಗಿದ, ಕ್ರಿಕೆಟ್​ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸುವಂತೆ ಮಾಡಿದ ಸನ್​ರೈಸರ್ಸ್​ ಹೈದರಾಬಾದ್​ ಮತ್ತು ರಾಜಸ್ಥಾನ್​ ರಾಯಲ್ಸ್​ ನಡುವಿನ ಪಂದ್ಯದಲ್ಲಿ ಕೊನೆಗೂ ಹೈದರಾಬಾದ್​ ರೋಚಕ 1 ರನ್​ ಅಂತರದ ಗೆಲುವು ಸಾಧಿಸಿ ಮೆರೆದಾಡಿತು. ಈ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ(IPL 2024 Points Table) 4ನೇ ಸ್ಥಾನಕ್ಕೇರಿತು.

ಹೈದರಾಬಾದ್​ ಗೆಲುವಿನಿಂದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ 1 ಸ್ಥಾನಗಳ ಕುಸಿತ ಕಂಡಿತು. ಇಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಮತ್ತು ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ. ಮುಂಬೈ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಕೆಕೆಆರ್​ ಗೆದ್ದರೆ 14 ಅಂಕದೊಂದಿಗೆ 2ನೇ ಸ್ಥಾನದಲ್ಲೇ ಮುಂದುವರಿಯಲಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​96312 (+1.096)
ಲಕ್ನೋ​​106412 (+0.094)
ಹೈದರಾಬಾದ್​106512 (+0.072)
ಚೆನ್ನೈ​105510 (+0.627)
ಡೆಲ್ಲಿ115610 (-0.442)
ಪಂಜಾಬ್​10488 (-0.062)
ಗುಜರಾತ್​10468 (-1.113)
ಮುಂಬೈ10376 (-0.272)
ಆರ್​ಸಿಬಿ10376 (-0.415)

ರಾಜೀವ್​ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡು ನಿಗದಿತ 20 ಓವರ್​ಗಳಲ್ಲಿ 3 ವಿಕೆಟ್​ಗೆ 201 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ರಾಜಸ್ಥಾನ್ ತಂಡ ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 7 ವಿಕೆಟ್​ಗೆ 200 ರನ್ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಓವರ್​ನಲ್ಲಿ ರಾಯಲ್ಸ್ ತಂಡಕ್ಕೆ 13 ರನ್​ಗಳು ಬೇಕಾಗಿತ್ತು. ಪೊವೆಲ್​ ನಿಖರವಾಗಿ ರನ್​ ಗಳಿಸಿ ತಂಡವನ್ನು ಗೆಲುವಿನ ಹೊಸ್ತಿಲಲ್ಲಿ ತಂದು ನಿಲ್ಲಿಸಿದ್ದರು. ಆದರೆ, ಭುವನೇಶ್ವರ್ ಕುಮಾರ್​ ಲೊ ಪುಲ್​ಟಾಸ್​ ಹಾಕುವ ಮೂಲಕ ಪೊವೆಲ್ ಅವರನ್ನು ಎಲ್​ಬಿಡಬ್ಲ್ಯು ಬಲೆಗೆ ಕೆಡವಿದರು.

ಇದನ್ನೂ ಓದಿ IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

ಮೊದಲು ಬ್ಯಾಟಿಂಗ್​ ನಡೆಸಿದ ಎಸ್​ಆರ್​​ಎಚ್​ ತಂಡ ಅಭಿಶೇಕ್​ ಶರ್ಮಾ ಅವರನ್ನು 12 ರನ್​ಗೆ ಕಳೆದುಕೊಂಡಿತು. ಈ ವೇಳೆ ತಂಡದ ಮೊತ್ತ 25 ಆಗಿತ್ತು. ನಂತರ ಬಂದ ಅನ್ಮೋಲ್ ಪ್ರೀತ್ ಸಿಂಗ್​ 5 ರನ್​ಗೆ ಔಟಾಗಿ ನಿರಾಸೆ ಮೂಡಿಸಿದರು. ಆ ಬಳಿಕ ಜತೆಯಾದ ನಿತೀಶ್​ ಕುಮಾರ್ ರೆಡ್ಡಿ ಅರಂಭಿಕ ಬ್ಯಾಟರ್​ ಟ್ರಾವಿಸ್​ ಹೆಡ್​ ಜತೆ ಉತ್ತಮವಾಗಿ ಬ್ಯಾಟ್ ಬೀಸಿದರು. ಅವರಿಬ್ಬರೂ ನಾಲ್ಕನೇ ವಿಕೆಟ್​ಗೆ 96 ರನ್ ಜತೆಯಾಟ ನೀಡಿದರು. ಹೆಡ್​ 58 ರನ್ ಬಾರಿಸಿದರೆ ನಿತೀಶ್​ 76 ರನ್ ಬಾರಿಸಿ ಅಜೇಯವಾಗಿ ಉಳಿದರು. ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್​ 19 ಎಸೆತಕ್ಕೆ 42 ರನ್​ ಬಾರಿಸುವ ಮೂಲಕ ತಂಡದ ಮೊತ್ತವನ್ನು 200 ರ ಗಡಿ ದಾಟಿಸಲು ನೆರವಾದರು.

Exit mobile version