ಹೈದರಾಬಾದ್: ಬುಧವಾರ ರಾತ್ರಿ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್(Lucknow Super Giants) ವಿರುದ್ಧ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಸನ್ರೈಸರ್ಸ್ ಹೈದರಾಬಾದ್(Sunrisers Hyderabad) ತಂಡ ಪ್ಲೇ ಆಫ್ ಸನಿಹಕ್ಕೆ ಬಂದು ನಿಂತಿದೆ. ಜತೆಗೆ ಅಂಕಪಟ್ಟಿಯಲ್ಲಿಯೂ(IPL 2024 Points Table) ಪ್ರಗತಿ ಸಾಧಿಸಿ ಮೂರನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ. ಈ ಹಿಂದೆ ಮೂರನೇ ಸ್ಥಾನಿಯಾಗಿದ್ದ ಹಾಲಿ ಚಾಂಪಿಯನ್ ಚೆನ್ನೈ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
ಸದ್ಯ ಚೆನ್ನೈ, ಲಕ್ನೋ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು 12 ಅಂಕಗಳಿಸಿವೆ. ಹೀಗಾಗಿ ಈ ತಂಡಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಬಹುತೇಕ ಪ್ಲೇ ಆಫ್ ಪ್ರವೇಶಿಸುವುದು ಖಚಿತ. ಹೈದರಾಬಾದ್ಗೆ ಇನ್ನೊಂದು ಪಂದ್ಯ ಗೆದ್ದರೂ ಸಾಕು. ಇಂದು ನಡೆಯುವ ಪಂದ್ಯದಲ್ಲಿ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿವೆ. ಪ್ಲೇ ಆಫ್ ಕ್ಷೀಣ ಅವಕಾಶ ಹೊಂದಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.
ಅಂಕಪಟ್ಟಿ
ತಂಡ | ಪಂದ್ಯ | ಗೆಲುವು | ಸೋಲು | ಅಂಕ |
ಕೆಕೆಆರ್ | 11 | 8 | 3 | 16 (+1.453) |
ರಾಜಸ್ಥಾನ್ ರಾಯಲ್ಸ್ | 11 | 8 | 3 | 16 (+0.476) |
ಚೆನ್ನೈ | 11 | 6 | 5 | 14 (+0.700) |
ಹೈದರಾಬಾದ್ | 11 | 6 | 5 | 12 (-0.065) |
ಡೆಲ್ಲಿ | 12 | 6 | 6 | 12 (-0.316) |
ಲಕ್ನೋ | 11 | 6 | 5 | 12 (-0.371) |
ಆರ್ಸಿಬಿ | 11 | 4 | 7 | 8 (-0.049) |
ಪಂಜಾಬ್ | 10 | 4 | 6 | 8 (-0.062) |
ಮುಂಬೈ | 12 | 4 | 8 | 8 (-0.212) |
ಗುಜರಾತ್ | 11 | 4 | 7 | 8 (-1.320) |
ಲಕ್ನೋಗೆ ಸೋಲು
ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದು ಆಮೆ ಗತಿಯ ಬ್ಯಾಟಿಂಗ್ ನಡೆಸಿದ ಲಕ್ನೋ ಸೂಪರ್ ಜೈಂಟ್ಸ್ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ಗೆ 165 ರನ್ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್ ಯಾವುದೇ ವಿಕೆಟ್ ನಷ್ಟವಿಲ್ಲದೆ ಕೇವಲ 9.4 ಓವರ್ಗಳಲ್ಲಿ 167 ರನ್ ಬಾರಿಸಿ ಭರ್ಜರಿ 10 ವಿಕೆಟ್ ಅಂತರದ ಗೆಲುವು ಸಾಧಿಸಿತು.
ಇದನ್ನೂ ಓದಿ IPL 2024: ಐಪಿಎಲ್ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್ ದಾಖಲೆ ಪತನ
ಒಟ್ಟು 30 ಎಸೆತ ಎದುರಿಸಿದ ಹೆಡ್ 8 ಸೊಗಸಾದ ಸಿಕ್ಸರ್ ಮತ್ತು 8 ಬೌಂಡರಿ ನೆರವಿನಿಂದ ಅಜೇಯ 89 ರನ್ ಬಾರಿಸಿ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಇವರ ಜತೆಗಾರ ಅಭಿಷೇಕ್ ಶರ್ಮ ಕೂಡ ಬಿರುಸಿನ ಬ್ಯಾಟಿಂಗ್ ಮೂಲಕ ಅಜೇಯ 75 ರನ್ ಬಾರಿಸಿದರು. ಈ ಜೋಡಿಯ ಬ್ಯಾಟಿಂಗ್ ಆರ್ಭಟದಿಂದಾಗಿ ಪವರ್ ಪ್ಲೇ ಮುಕ್ತಾಯಕ್ಕೆ ತಂಡಕ್ಕೆ ವಿಕೆಟ್ ನಷ್ಟವಿಲ್ಲದೆ 107 ರನ್ ಹರಿದು ಬಂತು.