Site icon Vistara News

IPL 2024 Points Table: 3ನೇ ಗೆಲುವು ಸಾಧಿಸಿದ ಬಳಿಕ ಮುಂಬೈಗೆ ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ?

IPL 2024 Points Table

ಮುಲ್ಲಾನ್‌ಪುರ್‌: ಮಾಜಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​(Mumbai Indians) ತಂಡ ಗುರುವಾರ ರಾತ್ರಿ ನಡೆದ ಐಪಿಎಲ್​ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(Punjab Kings)​ ವಿರುದ್ಧ ರೋಚಕ 9 ರನ್​ಗಳ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ(IPL 2024 Points Table) ಪ್ರಗತಿ ಸಾಧಿಸಿದೆ. ಈ ಪಂದ್ಯಕ್ಕೂ ಮುನ್ನ 9ನೇ ಸ್ಥಾನದಲ್ಲಿದ್ದ ಮುಂಬೈ ಈ ಗೆಲುವಿನೊಂದಿಗೆ 7ನೇ ಸ್ಥಾನಕ್ಕೇರಿದೆ. ಸೋಲು ಕಂಡ ಪಂಜಾಬ್​ 9ನೇ ಸ್ಥಾನಕ್ಕೆ ಕುಸಿದಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​76112 (+0.677)
ಕೆಕೆಆರ್​​6428 (+1.399)
ಚೆನ್ನೈ ಸೂಪರ್​ ಕಿಂಗ್ಸ್​​6428 (+0.726)
ಹೈದರಾಬಾದ್​​6428(+0.502)
ಲಕ್ನೋ6336 (+0.038)
ಡೆಲ್ಲಿ ಕ್ಯಾಪಿಟಲ್ಸ್​​7346 (-0.074)
ಮುಂಬೈ​7346 (-0.133)
ಗುಜರಾತ್7346 (-1.303)
ಪಂಜಾಬ್​7254 (-0.251)
ಆರ್​ಸಿಬಿ7162 (-1.185)

ಪಂದ್ಯ ಗೆದ್ದ ಮುಂಬೈ


ಅಶುತೋಷ್​ ಶರ್ಮಾ (61 ರನ್​, 28 ಎಸೆತ, 2 ಫೋರ್​, 7 ಸಿಕ್ಸರ್​), ಶಶಾಂಕ್ ಸಿಂಗ್​ (25 ಎಸೆತ, 41 ರನ್​, 2 ಫೋರ್​, 3 ಸಿಕ್ಸರ್​ ಮಧ್ಯಮ ಕ್ರಮಾಂಕದಲ್ಲಿ ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಅಗ್ರ ಕ್ರಮಾಂಕದ ಬ್ಯಾಟರ್​ಗಳ ತೀವ್ರ ವೈಫಲ್ಯದ ಹಿನ್ನೆಲೆಯಲ್ಲಿ ಪಂಜಾಬ್ ಕಿಂಗ್ಸ್​ ತಂಡ ಐಪಿಎಲ್​ 2024ನೇ (IPL 2024) ಆವೃತ್ತಿಯಲ್ಲಿ ಮತ್ತೊಂದು ಸೋಲಿಗೆ ಒಳಗಾಯಿತು. ಮಹಾರಾಜಾ ಯಾದವೀಂದ್ರ ಸಿಂಗ್​ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಮುಂಬಯಿ ತಂಡ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್​ಗೆ 192 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಪಂಜಾಬ್​ 19.1 ಓವರ್​ಗಳಲ್ಲಿ 183 ರನ್​ಗೆ ಆಲ್​ಔಟ್​ ಆಗಿ ಕೇವಲ 9 ರನ್​ ಅಂತರದಿಂದ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

ಮೊದಲು ಬ್ಯಾಟ್ ಮಾಡಿದ ಮುಂಬಯಿ ಪರ ಸೂರ್ಯಕುಮಾರ್​ ಅರ್ಧ ಶತಕ (78 ರನ್​) ಬಾರಿಸಿದರು. ಆದರೆ ಅವರ ಸ್ಕೋರ್ ಹೆಚ್ಚು ವೇಗವಾಗಿರಲಿಲ್ಲ. ರೋಹಿತ್ ಶರ್ಮಾ 36 ರನ್ ಬಾರಿಸಿದರೆ ತಿಲಕ್ ವರ್ಮಾ 34 ರನ್​ ಗಳಿಸಿದರು. ಹಾರ್ದಿಕ್ ಪಾಂಡ್ಯ 10 ರನ್ ಗೆ ಸೀಮಿತಗೊಂಡರೆ ಟಿಮ್ ಡೇವಿಡ್​ 14 ರನ್ ಬಾರಿಸಿದರು. ಆರಂಭಿಕ ಆಟಗಾರ ಇಶಾನ್ ಕಿಶನ್​ 8 ರನ್ ಬಾರಿಸಿ ಮತ್ತೊಮ್ಮೆ ಬ್ಯಾಟಿಂಗ್ ವೈಫಲ್ಯ ಎದುರಿಸಿದರು.

Exit mobile version