Site icon Vistara News

IPL 2024: ಈ ಲೆಕ್ಕಾಚಾರದಲ್ಲಿ ಇಂದು ಆರ್​ಸಿಬಿಗೆ ಗೆಲುವು ಖಚಿತ!

Southern Derby showdown tonight! - A season opener like no other

ಬೆಂಗಳೂರು: ಪ್ರಸಕ್ತ ಸಾಗುತ್ತಿರುವ 17ನೇ ಆವೃತ್ತಿಯ ಐಪಿಎಲ್(IPL 2024)​ ಟೂರ್ನಿಯಲ್ಲಿ 5 ಪಂದ್ಯಗಳು ಮುಕ್ತಾಯ ಕಂಡಿದೆ. ಎಲ್ಲ ತಂಡಗಳು ಕೂಡ ಮೊದಲ ಸುತ್ತಿನ ಪಂದ್ಯವನ್ನು ಆಡಿವೆ. ಅಚ್ಚರಿ ಎಂದರೆ ಇದುವರೆಗೆ ನಡೆದ ಎಲ್ಲ ಐದು ಪಂದ್ಯಗಳಲ್ಲಿಯೂ ತವರಿನ ತಂಡವೇ ಗೆದ್ದು ಬೀಗಿದೆ. ಈ ಲೆಕ್ಕಾಚಾರದಲ್ಲಿ ಇಂದು ಆರ್​ಸಿಬಿ(Royal Challengers Bengaluru) ಕೂಡ ಗೆಲುವು ಸಾಧಿಸುವ ಸಾಧ್ಯತೆ ಇದೆ.

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವ ಆರ್​ಸಿಬಿ(RCB vs PBKS) ಇಂದು ತವರಿನ ಚಿನ್ನಸ್ವಾಮಿ(Chinnaswamy) ಸ್ಟೇಡಿಯಂನಲ್ಲಿ ನಡೆಯುವ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್​(Punjab Kings) ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಪಿಚ್​ ರಿಪೋರ್ಟ್​

ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್​ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತೆ. ಇದು​ ಸಂಪೂರ್ಣ ಬ್ಯಾಟಿಂಗ್​​ ಸ್ನೇಹಿ ಪಿಚ್​ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಲ್ಲಿ ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಬ್ಯಾಟರ್​ಗಳು ಯಾವುದೇ ಒತ್ತಡವಿಲ್ಲದೆ ಬ್ಯಾಟ್​ ಬೀಸಬಹುದಾಗಿದೆ. ಆದರೆ ಬೌಲರ್​ಗಳು ಮಾತ್ರ ಶಕ್ತಿ ಮೀರಿ ಪ್ರಯತ್ನ ತೋರಬೇಕಿದೆ. ಎಷ್ಟೇ ದೊಡ್ಡ ಮೊತ್ತವನ್ನು ಬಾರಿಸಿದರೂ ಇಲ್ಲಿ ಚೇಸ್​ ಮಾಡಿ ಗೆಲುವು ಸಾಧಿಸಿಬಹುದು. ಹೀಗಾಗಿ ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚು. ರಾಜ್ಯದ ಕೆಲವೆಡೆ ಮಳೆಯಾಗಿದ್ದರೂ ಕೂಡ ಬೆಂಗಳೂರಿನಲ್ಲಿ ಯಾವುದೇ ಮಳೆಯ ಭೀತಿ ಇಲ್ಲ. ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಇದನ್ನೂ ಓದಿ IPL 2024 Points Table: ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ತಂಡ ಯಾವುದು?

ಮುಖಾಮುಖಿ


ಪಂಜಾಬ್(Punjab Kings)​ ಮತ್ತು ಆರ್​ಸಿಬಿ(RCB) ಇದುವರೆಗಿನ ಐಪಿಎಲ್​ ಟೂರ್ನಿಯಲ್ಲಿ(RCB vs PBKS Head to Head) ಒಟ್ಟು 31 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಪಂಜಾಬ್​ 17 ಪಂದ್ಯಗಳನ್ನು ಗೆದ್ದರೆ, ಆರ್​ಸಿಬಿ 14 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಆರ್​ಸಿಬಿ ತನ್ನ ತವರಿನಲ್ಲಿ ಪಂಜಾಬ್​ ವಿರುದ್ಧ 11 ಪಂದ್ಯಗಳನ್ನು ಆಡಿ 6ರಲ್ಲಿ ಗೆಲುವು ಕಂಡಿದೆ. ಪಂಜಾಬ್​ ಚಿನ್ನಸ್ವಾಮಿಯಲ್ಲಿ 5 ಪಂದ್ಯಗಳನ್ನು ಗೆದ್ದಿದೆ.

ಸಂಭಾವ್ಯ ತಂಡಗಳು

ಪಂಜಾಬ್​: ಶಿಖರ್ ಧವನ್ (ನಾಯಕ), ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್​ ಕೀಪರ್​), ಶಶಾಂಕ್ ಸಿಂಗ್, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಹಾರ್, ಅರ್ಶ್‌ದೀಪ್ ಸಿಂಗ್.

ಆರ್​ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್ (ವಿಕೆಟ್​ ಕೀಪರ್​), ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.

Exit mobile version