IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ - Vistara News

ಕ್ರೀಡೆ

IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ

IPL 2024: ಇಂಪ್ಯಾಕ್ಟ್ ಪ್ಲೇಯರ್ ಸೇರ್ಪಡೆಯಿಂದ ಆಟಕ್ಕೆ ಹೊಸತನ ಬಂದಂತಾದರೂ ಈ ನಿಯಮವು ಕೆಲವು ಮಿತಿಗಳನ್ನು ಹೊಂದಿದೆ. 10 ಓವರ್‌ ಗಳಿಗಿಂತ ಕಡಿಮೆಯಿರುವ ಆಟದಲ್ಲಿ (ಮಳೆ ಸೇರಿದಂತೆ ಹಲವು ಕಾರಣದಿಂದ) ಈ ನಿಯಮ ಅನ್ವಯಿಸುವುದಿಲ್ಲ. ಅಲ್ಲದೆ, ಪ್ರತಿ ಪಂದ್ಯದಲ್ಲೂ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸಲೇ ಬೇಕು ಎಂಬ ಒತ್ತಾಯವಿಲ್ಲ.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಐಪಿಎಲ್​ನಲ್ಲಿ(IPL 2024) ಕಳೆದ ವರ್ಷ ಜಾರಿಗೆ ತಂದ ವಿನೂತನ ಇಂಪ್ಯಾಕ್ಟ್ ಪ್ಲೇಯರ್(Impact Player) ನಿಯಮದ ಬಗ್ಗೆ ಟೀಮ್​ ಇಂಡಿಯಾದ ನಾಯಕ, ಮುಂಬೈ ಇಂಡಿಯನ್ಸ್​ನ ಆಟಗಾರ ರೋಹಿತ್​ ಶರ್ಮ(Rohit Sharma) ಶರ್ಮ ​ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ನಿಯಮದಿಂದ ಭಾರತೀಯ ಕ್ರಿಕೆಟ್‌ಗೆ ದೊಡ್ಡ ನಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಯೂಟ್ಯೂಬ್ ಸಂದರ್ಶನವೊಂದರಲ್ಲಿ ಮಾತನಾಡಿದ ರೋಹಿತ್​, ‘ಕ್ರಿಕೆಟ್ 11 ಜನ ಆಡುವ ಆಟ, 12 ಜನರಿಂದಲ್ಲ, ಇಂಪ್ಯಾಕ್ಟ್ ಆಟಗಾರ ನಿಯಮದಿಂದಾಗಿ ನೈಜ ಕ್ರಿಕೆಟ್​ಗೆ ಹಾನಿಯಾಗಿದೆ. ಇದು ಮನರಂಜನೆ ಒದಗಿಸಬಹುದೇ ಹೊರತು ಕ್ರಿಕೆಟ್​ ಬೆಳವಣಿಗೆಗೆ ಅಪಾಯಕಾರಿ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇಂಪ್ಯಾಕ್ಟ್ ನಿಯಮದಿಂದ ಓರ್ವ ಆಟಗಾರನಿಗೆ ತನ್ನ ಸಾಮರ್ಥ್ಯವನ್ನು ತೋರ್ಪಡಿಸುವ ಅವಕಾಶ ಸಿಗುತಿಲ್ಲ. ಉದಾಹರಣೆಗೆ ಶಿವಂ ದುಬೆ, ವಾಷಿಂಗ್ಟನ್ ಸುಂದರ್ ಸೇರಿದಂತೆ ಅನೇಕ ಆಲ್ರೌಂಡರ್‌ಗಳಿಗೆ ಬ್ಯಾಟಿಂಗ್​ ಸಿಕ್ಕರೆ ಬೌಲಿಂಗ್​ ಸಿಗುತ್ತಿಲ್ಲ. ಬೌಲಿಂಗ್​ ಸಿಕ್ಕರೆ ಬ್ಯಾಟಿಂಗ್​ ಸಿಗುತ್ತಿಲ್ಲ ಎಂದು ರೋಹಿತ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

ಇಂಪ್ಯಾಕ್ಟ್ ನಿಯಮ ಎಂದರೇನು?

ಇಂಪ್ಯಾಕ್ಟ್ ಪ್ಲೇಯರ್ ನಿಯಮವು ಆಟದ ಸಮಯದಲ್ಲಿ ಯುದ್ಧತಂತ್ರದ ಬದಲಾವಣೆಯನ್ನು ಮಾಡಲು ತಂಡಕ್ಕೆ ಅವಕಾಶವನ್ನು ನೀಡುತ್ತದೆ. ಟಾಸ್ ಸಮಯದಲ್ಲಿ, ನಾಯಕನು ಆರಂಭಿಕ 11 ಆಟಗಾರರ ಜೊತೆಗೆ ನಾಲ್ಕು ಬದಲಿ ಆಟಗಾರರನ್ನು ಉಲ್ಲೇಖಿಸಬೆಕು. ಈ ಬದಲಿ ಆಟಗಾರನು (ಇಂಪ್ಯಾಕ್ಟ್ ಪ್ಲೇಯರ್) ಇನ್ನಿಂಗ್ಸ್‌ ನ 14 ನೇ ಓವರ್‌ ನ ಮುಕ್ತಾಯದ ಮೊದಲು ಯಾವುದೇ ನಿರ್ದಿಷ್ಟ ಹಂತದಲ್ಲಿ ಆರಂಭಿಕ 11 ನ ಸದಸ್ಯರನ್ನು ಬದಲಾಯಿಸಬಹುದು. ಆಟಗಾರನು ಬ್ಯಾಟಿಂಗ್ ಮಾಡಲು ಹಾಗೂ ತನ್ನ ಸಂಪೂರ್ಣ ಕೋಟಾದ (ನಾಲ್ಕು) ಓವರ್‌ಗಳನ್ನು ಪೂರ್ಣಗೊಳಿಸಲು ಅವಕಾಶವಿದೆ.

ಮತ್ತೊಂದು ವಿಶೇಷವೆಂದರೆ ಇಂಪ್ಯಾಕ್ಟ್ ಪ್ಲೇಯರ್ ಈಗಾಗಲೇ ಔಟ್ ಆಗಿರುವ ಆಟಗಾರನ ಬದಲಿಯಾಗಿ ಬಂದು ಮತ್ತೊಮ್ಮೆ ಬ್ಯಾಟಿಂಗ್ ಮಾಡಬಹುದು. ಆದರೆ ತಂಡದಲ್ಲಿ ಕೇವಲ 11 ಬ್ಯಾಟರ್‌ ಗಳಿಗೆ ಬ್ಯಾಟಿಂಗ್ ಗೆ ಅವಕಾಶವಿದೆ. ಮತ್ತೊಂದೆಡೆ, ಈಗಾಗಲೇ ಕೆಲವು ಓವರ್‌ ಗಳನ್ನು ಬೌಲ್ ಮಾಡಿದ ಬೌಲರ್ ಬದಲಿಗೆ ಬಂದು ನಾಲ್ಕು ಓವರ್‌ ಗಳ ಪೂರ್ಣ ಕೋಟಾ ಬೌಲ್ ಮಾಡಬಹುದು.

ಡಕ್​ವರ್ತ್​ ನಿಯದಲ್ಲಿ ಇದು ಅನ್ವಯವಾಗುದಿಲ್ಲ


ಇಂಪ್ಯಾಕ್ಟ್ ಪ್ಲೇಯರ್ ಸೇರ್ಪಡೆಯಿಂದ ಆಟಕ್ಕೆ ಹೊಸತನ ಬಂದಂತಾದರೂ ಈ ನಿಯಮವು ಕೆಲವು ಮಿತಿಗಳನ್ನು ಹೊಂದಿದೆ. 10 ಓವರ್‌ ಗಳಿಗಿಂತ ಕಡಿಮೆಯಿರುವ ಆಟದಲ್ಲಿ (ಮಳೆ ಸೇರಿದಂತೆ ಹಲವು ಕಾರಣದಿಂದ) ಈ ನಿಯಮ ಅನ್ವಯಿಸುವುದಿಲ್ಲ. ಅಲ್ಲದೆ, ಪ್ರತಿ ಪಂದ್ಯದಲ್ಲೂ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸಲೇ ಬೇಕು ಎಂಬ ಒತ್ತಾಯವಿಲ್ಲ. ಆದರೆ ಇಂಪ್ಯಾಕ್ಟ್ ಪ್ಲೇಯರ್ ನನ್ನು ಬಳಸುವ ಮೊದಲು ನಾಯಕ ಅಥವಾ ಮುಖ್ಯ ಕೋಚ್ ಅಥವಾ ಮ್ಯಾನೇಜರ್ ಅದನ್ನು ಆನ್-ಫೀಲ್ಡ್ ಅಂಪೈರ್‌ ಗೆ ತಿಳಿಸಬೇಕು.

ಓವರ್​ ಮುಕ್ತಾಯದ ಬಳಿಕವೇ ಜಾರಿ

ಇಂಪ್ಯಾಕ್ಟ್ ಪ್ಲೇಯರ್ ಓವರ್‌ ನಡುವಿನಲ್ಲಿ ಬರುವಂತಿಲ್ಲ. ಓವರ್ ಮುಗಿದ ಬಳಿಕವಷ್ಟೇ ಆಟಕ್ಕೆ ಬರಬಹುದು. ಆದಾಗ್ಯೂ, ಕೆಲವು ವಿನಾಯಿತಿಗಳಿದ್ದು, ಬ್ಯಾಟಿಂಗ್ ತಂಡವು ವಿಕೆಟ್ ಪತನದ ಸಮಯದಲ್ಲಿ ಅದರ ಇಂಪ್ಯಾಕ್ಟ್ ಪ್ಲೇಯರ್ ಕಾರ್ಡ್ ಅನ್ನು ಓವರ್ ನಡುವೆ ಬಳಸಿಬಹುದು, ಫೀಲ್ಡಿಂಗ್ ತಂಡದಲ್ಲಿ ಗಾಯಗೊಂಡ ಫೀಲ್ಡರ್ ಬದಲು ಓವರ್ ನ ನಡುವೆ ಇಂಪ್ಯಾಕ್ಟ್ ಪ್ಲೇಯರ್‌ ನನ್ನು ಆಟಕ್ಕೆ ಕರೆಯಬಹುದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

CSK vs PBKS: ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು

VISTARANEWS.COM


on

CSK vs PBKS
Koo

ಚೆನ್ನೈ: ಪ್ಲೇ ಆಫ್​ ಆಸೆಯನ್ನು ಜೀವಂತವಿರಿಸಲು ಗೆಲ್ಲಲೇ ಬೇಕಾದ ಮಹತ್ವದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(CSK vs PBKS)​ ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರದ್ದೇ ನೆಲದಲ್ಲಿ 7 ವಿಕೆಟ್​ಗಳಿಂದ ಮಗುಚಿ ಹಾಕಿದೆ. ಇದು ಈ ಆವೃತ್ತಿಯಲ್ಲಿ ಚೆನ್ನೈಗೆ ತವರಿನಲ್ಲಿ ಎದುರಾದ 2ನೇ ಸೋಲಾಗಿದೆ. ಇದಕ್ಕೂ ಮುನ್ನ ಲಕ್ನೋ ವಿರುದ್ಧ ಸೋಲು ಕಂಡಿತ್ತು. ಜಾನಿ ಬೇರ್​ಸ್ಟೋ(46 ರನ್​) ಮತ್ತು ರಾಹುಲ್​ ಚಹರ್​ (16ಕ್ಕೆ 2 ವಿಕೆಟ್​) ಪಂಜಾಬ್​ ಗೆಲುವಿನ ಪ್ರಮುಖ ರೂವಾರಿಗಳಾಗಿ ಮೂಡಿಬಂದರು.

ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಚೆನ್ನೈಗೆ ಗಾಯಕ್ವಾಡ್​ ಆಸರೆ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಉತ್ತಮ ಆರಂಭವೇನೊ ಪಡೆಯಿತು. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಅನುಭವಿ ಹಾಗೂ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಸೇರಿಕೊಂಡು ಮೊದಲ ವಿಕೆಟ್​ಗೆ 64 ರನ್​ ಒಟ್ಟುಗೂಡಿಸಿದರು. ರಹಾನೆ 29 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಉತ್ತಮ ಸ್ಥಿತಿಯಲ್ಲಿದ್ದ ಚೆನ್ನೈ ರಹಾನೆ ವಿಕೆಟ್​ ಪತನದ ಬಳಿಕ ದಿಢೀರ್​ ಕುಸಿತ ಕಂಡಿತು. ಸತತವಾಗಿ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ಸಹ ಆಟಗಾರರ ವಿಕೆಟ್ ಬೀಳುತ್ತಿದ್ದರೂ ಕೂಡ ಮತ್ತೊಂದು ತುದಿಯಲ್ಲಿ ಕ್ರೀಸ್​ ಕಚ್ಚಿ ನಿಂತ ಗಾಯಕ್ವಾಡ್​ ತಮ್ಮ ಶಕ್ತಿ ಮೀರಿದ ಬ್ಯಾಟಿಂಗ್​ ಪ್ರದರ್ಶನದ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮುಂದುವರಿಸಿದರು. ಒಂದು ಹಂತದಲ್ಲಿ ಸಮೀರ್ ರಿಜ್ವಿ ಅವರಿಂದ ಸಣ್ಣ ಮಟ್ಟದ ಜತೆಯಾಟದ ಬೆಂಬಲ ಸಿಕ್ಕರೂ ಕೂಡ ಇದು ಹೆಚ್ಚು ಹೊತ್ತು ಸಾಗಲಿಲ್ಲ. 21 ರನ್​ ಗಳಿಸಿದ್ದ ವೇಳೆ ರಿಜ್ವಿ ಕೂಡ ಔಟಾದರು. ಗಾಯಕ್ವಾಡ್​ 48 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ಬಾರಿಸಿ 62 ರನ್​ ಗಳಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ದುಬೆ ಬ್ಯಾಟಿಂಗ್​ ವಿಫಲ


ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು. ಹರ್​ಪ್ರೀತ್​ ಬ್ರಾರ್​ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. ಮೊಯಿನ್​ ಅಲಿ ಕ್ಯಾಚ್​ನಿಂದ ಒಂದು ಜೀವದಾನ ಪಡೆದರೂ ಕೂಡ ಇದರ ಲಾಭವೆತ್ತಲು ವಿಫಲರಾದರು. 15 ರನ್​ ಗಳಿಸಿ ರಾಹುಲ್​ ಚಹರ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದರು. ಮಹೇಂದ್ರ ಸಿಂಗ್​ ಧೋನಿ 11 ಎಸೆತಗಳಿಂದ 14 ರನ್​ ಗಳಿಸಿ ರನೌಟ್​ ಆದರು.

ಇದುವರೆಗೆ ದ್ವಿತೀಯ ಕ್ರಮಾಂಕದಲ್ಲಿ ಆಡುತ್ತಿದ್ದ ಡೇರಿಯಲ್​ ಮಿಚೆಲ್​ ಅವರನ್ನು ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಆಡಿಸಲಾಯಿತು. ಈ ಪ್ರಯೋಗ ಚೆನ್ನೈಗೆ ಭಾರೀ ಹಿನ್ನಡೆ ಉಂಟುಮಾಡಿತು. ಅವರನ್ನು ಎಂದಿನಂತೆ 2ನೇ ಕ್ರಮಾಂಕದಲ್ಲಿ ಆಡಿಸುತ್ತಿದ್ದರೆ ದೊಡ್ಡ ಮೊತ್ತವನ್ನು ಕಲೆಹಾಕಬಹುದಾಗಿತ್ತು. ಪಂಜಾಬ್​ ಪರ ರಾಹುಲ್​ ಚಹರ್​ ಮತ್ತು ಹರ್​ಪ್ರೀತ್​ ಬ್ರಾರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading

ಕ್ರೀಡೆ

T20 Rankings: ಅಗ್ರಸ್ಥಾನದಲ್ಲೇ ಮುಂದುವರಿದ ಸೂರ್ಯ; ಒಂದು ಸ್ಥಾನ ಏರಿಕೆ ಕಂಡ ಬಾಬರ್​

T20 Rankings: ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​ ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ.

VISTARANEWS.COM


on

T20 Rankings
Koo

ದುಬೈ: ಐಸಿಸಿ ನೂತನ ಟಿ20(T20 Rankings) ಬ್ಯಾಟಿಂಗ್​ ಶ್ರೇಯಾಂಕ ಪಟ್ಟಿಯನ್ನು ಬುಧವಾರ ಪ್ರಕಟಿಸಿದ್ದು, ಪಾಕಿಸ್ತಾನ ತಂಡದ ನಾಯಕ ಬಾಬರ್​ ಅಜಂ(babar azam) ಒಂದು ಸ್ಥಾನಗಳ ಪ್ರಗತಿ ಸಾಧಿಸಿದ್ದಾರೆ. ಟೀಮ್​ ಇಂಡಿಯಾದ ಸೂರ್ಯಕುಮಾರ್​ ಯಾದವ್(861 ರೇಟಿಂಗ್​ ಅಂಕ)​ ತಮ್ಮ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಮತ್ತೊಮ್ಮೆ ಯಶಸ್ವಿಯಾಗಿದ್ದಾರೆ.

ಬಾಬರ್​ ನ್ಯೂಜಿಲ್ಯಾಂಡ್​ ವಿರುದ್ಧದ ತವರಿನ ಟಿ20 ಪಂದ್ಯದಲ್ಲಿ ಆಡಿದ ನಾಲ್ಕು ಇನಿಂಗ್ಸ್​ಗಳಿಂದ ಒಂದು ಅರ್ಧಶತಕ ಮತ್ತು ಒಳಗೊಂಡಂತೆ ಒಟ್ಟು 125 ರನ್​ ಬಾರಿಸಿದ್ದರು. ಇದು ಬ್ಯಾಟರ್‌ಗಳಿಗಾಗಿ ನವೀಕರಿಸಿದ ಟಿ20 ಶ್ರೇಯಾಂಕಗಳ ಪಟ್ಟಿಯಲ್ಲಿ ಬಾಬರ್ ಒಂದು ಸ್ಥಾನವನ್ನು ಸುಧಾರಿಸಲು ನೆರವಾಯಿತು. ಬಾಬರ್​ 10 ರೇಟಿಂಗ್​ ಅಂಗಳ ಪ್ರಗತಿಯೊಂದಿಗೆ ಸದ್ಯ 763 ರೇಟಿಂಗ್​ ಅಂಕ ಗಳಿಸಿ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಸರಿ ಸುಮಾರು ಒಂದು ವರ್ಷಕ್ಕಿಂತಲೂ ಅಧಿಕವಾಗಿ ಟಿ20 ಬ್ಯಾಟಿಂಗ್​ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿರುವ ಟೀಮ್​ ಇಂಡಿಯಾದ ಹಾರ್ಡ್​ ಹಿಟ್ಟರ್​ ಸೂರ್ಯಕುಮಾರ್​ ಯಾದವ್​(suryakumar yadav) ಈ ಬಾರಿಯೂ ಅಗ್ರಸ್ಥಾನದಲ್ಲೇ ಮುಂದುವರಿಸಿದ್ದಾರೆ. ಆಸೀಸ್​ ವಿರುದ್ಧದ ಟಿ20 ಸರಣಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದ ಅವರು ತಮ್ಮ ಚೊಚ್ಚಲ ನಾಯಕತ್ವದಲ್ಲ ಭಾರತಕ್ಕೆ ಟಿ20 ಸರಣಿಯನ್ನು ಗೆದ್ದು ಕೊಟ್ಟ ಸಾಧನೆ ಮಾಡಿದ್ದರು. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಗಾಯಗೊಂಡು ಬಳಿಕ ಯಾವುದೇ ಸರಣಿ ಆಡಿಲ್ಲ. ಇದೇ ಜೂನ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ ಕಪ್​ ಮೂಲಕ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್​ ಆಡಲಿದ್ದಾರೆ.

ಇಂಗ್ಲೆಂಡ್​ ತಂಡ ವಿಕೆಟ್​ ಕೀಪರ್​ ಕಮ್​ ಬ್ಯಾಟರ್​ ಫಿಲ್​ ಸಾಲ್ಟ್​(802) ಮತ್ತು ಪಾಕಿಸ್ತಾನದ ಮೊಹಮ್ಮದ್​ ರಿಜ್ವಾನ್​(784) ರೇಟಿಂಗ್​ ಅಂಕದೊಂದಿಗೆ ಕ್ರಮವಾಗಿ 2 ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಭಾರತದ ಯುವ ಎಡಗೈ ಬ್ಯಾಟರ್​ ಯಶಸ್ವಿ ಜೈಸ್ವಾಲ್​(714) 6ನೇ ಸ್ಥಾನ ಪಡೆದಿದ್ದಾರೆ. ಒಟ್ಟಾರೆಯಾಗಿ ಟಾಪ್​ 10ನಲ್ಲಿ ಇಬ್ಬರು ಭಾರತೀಯ ಬ್ಯಾಟರ್​ಗಳು ಮಾತ್ರ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್​ ಮತ್ತು ದಕ್ಷಿಣ ಆಫ್ರಿಕಾದ ಮೂವರು ಬ್ಯಾಟರ್​ಗಳು ಅಗ್ರ 10ರೊಳಗೆ ಸ್ಥಾನ ಪಡೆದಿದ್ದಾರೆ.

ಟಾಪ್​ 5 ಬ್ಯಾಟರ್​ಗಳು


1. ಸೂರ್ಯಕುಮಾರ್​ ಯಾದವ್​ (861 ರೇಟಿಂಗ್​ ಅಂಕ)

2. ಫಿಲ್​ ಸಾಲ್ಟ್​(802 ರೇಟಿಂಗ್​ ಅಂಕ)

3. ಮೊಹಮ್ಮದ್​ ರಿಜ್ವಾನ್​ (784 ರೇಟಿಂಗ್​ ಅಂಕ)

4. ಬಾಬರ್​ ಅಜಂ(763 ರೇಟಿಂಗ್​ ಅಂಕ)

5. ಐಡೆನ್​ ಮಾರ್ಕ್ರಮ್​(755 ರೇಟಿಂಗ್​ ಅಂಕ)

Continue Reading

ಕ್ರಿಕೆಟ್

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

KL Rahul: “ದುರದೃಷ್ಟವಶಾತ್ ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದ್ದೇ ಅವರಿಗೆ ಮುಳುವಾಯಿತು. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ. ಒಂದೊಮ್ಮೆ ಏಕದಿನ ವಿಶ್ವಕಪ್​ನಂತೆ ಐಪಿಎಲ್​ನಲ್ಲಿಯೂ ಮಧ್ಯಮ ಕ್ರಮಾಂಕದಲ್ಲಿ ರಾಹುಲ್​ ಆಡುತ್ತಿದ್ದರೆ ಅವರಿಗೆ ಸ್ಥಾನ ಸಿಗುತ್ತಿತ್ತು” ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

VISTARANEWS.COM


on

KL Rahul
Koo

ಮುಂಬಯಿ: ಭಾರತದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್(Irfan Pathan) ಭಾರತದ ಟಿ20 ವಿಶ್ವಕಪ್(T20 World Cup) ತಂಡದಿಂದ ಕೆ.ಎಲ್​ ರಾಹುಲ್(KL Rahul) ಅವರನ್ನು ಕೈಬಿಡಲು ಕಾರಣ ಏನೆಂಬುದನ್ನು ವಿವರಿಸಿದ್ದಾರೆ. ಅಹಮದಾಬಾದ್‌ನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನಡೆಸಿದ ಸಭೆಯ ಬಳಿಕ 15 ಸದಸ್ಯರ ತಂಡವನ್ನು ಪ್ರಕಟಿಸಲಾಯಿತು. ರಿಷಭ್​ ಪಂತ್​(Rishabh Pant) ಮೊದಲ ಆಯ್ಕೆಯ ಕೀಪರ್​ ಆಗಿದ್ದರೂ ಕೂಡ ರಾಹುಲ್​ ಅವರಿಗೆ ಅವಕಾಶ ಸಿಗಬಹುದೆಂದು ಎಲ್ಲರು ನಿರೀಕ್ಷೆ ಮಾಡಿದ್ದರು. ಆದರೆ ತಂಡ ಪ್ರಕಟಗೊಂಡಾಗ ಅವರ ಬದಲು ಸಂಜು ಸ್ಯಾಮ್ಸನ್​ ಹೆಸರಿತ್ತು. ಇದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.

“ದುರದೃಷ್ಟವಶಾತ್ ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದ್ದೇ ಅವರಿಗೆ ಮುಳುವಾಯಿತು. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ. ಒಂದೊಮ್ಮೆ ಏಕದಿನ ವಿಶ್ವಕಪ್​ನಂತೆ ಐಪಿಎಲ್​ನಲ್ಲಿಯೂ ಮಧ್ಯಮ ಕ್ರಮಾಂಕದಲ್ಲಿ ರಾಹುಲ್​ ಆಡುತ್ತಿದ್ದರೆ ಅವರಿಗೆ ಸ್ಥಾನ ಸಿಗುತ್ತಿತ್ತು” ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

ಆರಂಭಿಕ ಸ್ಥಾನಕ್ಕೆ ರೋಹಿತ್​ ಶರ್ಮ ಜತೆ ಶುಭಮನ್​ ಗಿಲ್​ ಮತ್ತು ಜೈಸ್ವಾಲ್​ ರೇಸ್​ನಲ್ಲಿದ್ದರು. ಹೀಗಾಗಿ ರಾಹುಲ್​ಗೆ ಈ ಸ್ಥಾನ ಸಿಗುವು ಅನುಮಾನ ಎನ್ನುವುದು ಮೊದಲೇ ತಿಳಿದಿತ್ತು. ಬಿಸಿಸಿಐ ಮತ್ತು ಆಯ್ಕೆ ಸಮಿತಿ ರಿಷಭ್​ ಪಂತ್​ ಫಿಟ್​ ಆಗದಿದ್ದರೆ ಅವರ ಸ್ಥಾನದಲ್ಲಿ ಕೀಪಿಂಗ್​ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಆಟಗಾರ ಹುಡುಕಾಟದಲ್ಲಿತ್ತು. ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದರೆ, ಸಂಜು ವಿಕೆಟ್​ ಕೀಪಿಂಗ್​ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್​ ಬೀಸುತ್ತಿದ್ದಾರೆ. ಇದೇ ಕಾರಣ ಸಂಜುಗೆ(Sanju Samson) ಅವಕಾಶ ಸಿಕ್ಕಿತು ಎಂದು ಇರ್ಫಾನ್​ ವಿವರಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

Continue Reading

ಕ್ರಿಕೆಟ್

Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

Viral Video: 2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು.

VISTARANEWS.COM


on

Viral Video
Koo

ಲಕ್ನೋ: 2 ತಿಂಗಳ ಹಿಂದೆ ಲಂಡನ್​ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿದ್ದ ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami)ತಮ್ಮ ಕಾಲಿನ ಗಾಯದಿಂದ ಚೇತರಿಕೆ(Mohammed Shami injury update) ಕಾಣುತ್ತಿದ್ದಾರೆ. ಅಲ್ಲದೆ ಕ್ರಿಕೆಟ್​ಗೆ ಮರಳುವ ನಿಟ್ಟಿನಲ್ಲಿ ಪುನರ್ವಸತಿ ಆರಂಭಿಸಿದ್ದಾರೆ. ಇದೀಗ ಅವರು ತಮ್ಮ ನಿವಾಸದಲ್ಲೆ ನಿರ್ಮಾಣ ಮಾಡಿರುವ ಕ್ರಿಕೆಟ್​ ಪಿಚ್​ನಲ್ಲಿ ರೋಲರ್ ಓಡಿಸಿದ್ದಾರೆ. ಈ ವಿಡಿಯೊವನ್ನು ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ(Viral Video).

ಲಂಡನ್​ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ವಿಶ್ರಾಂತಿಯಲ್ಲಿದ್ದ ಶಮಿ ಇದೀಗ ಮತ್ತೆ ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ನಿನ್ನೆಯಷ್ಟೇ(ಮಂಗಳವಾರ) ವಾಕಿಂಗ್​ ಸ್ಟಿಕ್​ಗಳೊಂದಿಗೆ ತಮ್ಮ ನಿವಾಸದಲ್ಲಿರುವ ಕಿಕೆಟ್​ ಪಿಚ್​ನಲ್ಲಿ ನಡೆದಾಡಿ ಕೆಲ ಕಾಲ ವ್ಯಾಯಾಮ ಕೂಡ ಮಾಡಿದ್ದರು. ಇದರ ಫೋಟೊ ಕೂಡ ಹಂಚಿಕೊಂಡಿದ್ದರು. ಇದೀಗ ಬುಧವಾರ ಪಿಚ್​ ಸಿದ್ಧತೆಯಲ್ಲಿ ತೊಡಗಿದ್ದಾರೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಶಮಿ ಯಾವುದೇ ಕ್ರಿಕೆಟ್​ ಆಡಿಲ್ಲ.

2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೂ ಮುನ್ನ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್​ ಮಸಾಜ್​ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ Mohammed Shami: ಸ್ಟಿಕ್​ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ

ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading
Advertisement
karnataka SSLC result 2024
ಪ್ರಮುಖ ಸುದ್ದಿ4 mins ago

SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

Karthik Jayaram The first look of The Veer motion Poster
ಸ್ಯಾಂಡಲ್ ವುಡ್10 mins ago

Karthik Jayaram: ʻಅಶ್ವಿನಿ ನಕ್ಷತ್ರʼ ಖ್ಯಾತಿಯ ʻಜೆಕೆʼ ಹುಟ್ಟುಹಬ್ಬಕ್ಕೆ ಬಿಡುಗಡೆ ಆಯ್ತು ‘ದಿ ವೀರ್​’ ಫಸ್ಟ್​ ಲುಕ್​ ಪೋಸ್ಟರ್​!

prajawal revanna case driver karthik
ಪ್ರಮುಖ ಸುದ್ದಿ31 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಬಿಟ್ಟ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು?

Vande Bharat Metro
ದೇಶ44 mins ago

Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

Hindu Marriage
ದೇಶ52 mins ago

Hindu Marriage: ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌

pm Narendra Modi
ಪ್ರಮುಖ ಸುದ್ದಿ1 hour ago

PM Narendra Modi: ಉಗ್ರರನ್ನು ಅವರ ತಾಯ್ನೆಲದಲ್ಲೇ ಕೊಲ್ಲುತ್ತೇವೆ: ಗುಡುಗಿದ ಪಿಎಂ ನರೇಂದ್ರ ಮೋದಿ

karnataka Weather Forecast
ಮಳೆ2 hours ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್2 hours ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ2 hours ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌